ರಾಷ್ಟ್ರೀಯ ಹೆದ್ದಾರಿ-19 ಮತ್ತು ಉತ್ತರ ಪ್ರದೇಶದ ವಾರಣಾಸಿ ರಿಂಗ್ ರಸ್ತೆ ನಡುವೆ 6 ಪಥದ ಗ್ರೀನ್‌ಫೀಲ್ಡ್ ಎಲಿವೇಟೆಡ್ ಕಾರಿಡಾರ್ ಮತ್ತು ಇಳಿಜಾರುಗಳು/ಲೂಪ್‌ಗಳು ಮತ್ತು ಪಾದಚಾರಿ ಮೇಲ್ಸೇತುವೆಯನ್ನು ಹೈಬ್ರಿಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ; ರಾಷ್ಟ್ರೀಯ ಹೆದ್ದಾರಿ(O) ಅಡಿಯಲ್ಲಿ ಒಟ್ಟು 14447.64 ಕೋಟಿ ರೂ. ಬಂಡವಾಳ ವೆಚ್ಚ

July 15th, 04:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ ಉತ್ತರ ಪ್ರದೇಶದ ವಾರಣಾಸಿ ನಗರದ ವಾಹನ ದಟ್ಟಣೆಯನ್ನು ನಿವಾರಿಸಲು ಗಂಗಾ ನದಿಯ ಉದ್ದಕ್ಕೂ ನದಿ ದಂಡೆಯ ಸಂಪರ್ಕದೊಂದಿಗೆ ರಾಷ್ಟ್ರೀಯ ಹೆದ್ದಾರಿ-19 (NH-19) ಮತ್ತು ವಾರಣಾಸಿ ರಿಂಗ್ ರಸ್ತೆ ನಡುವೆ ಲಿಂಕ್/ಕನೆಕ್ಟರ್ ಕಾರಿಡಾರ್ ಅಭಿವೃದ್ಧಿಪಡಿಸಲು ಅನುಮೋದನೆ ನೀಡಿದೆ. ಆರು ಪಥಗಳ ಎತ್ತರದ ಮುಖ್ಯ ಕ್ಯಾರೇಜ್‌ವೇ, ಐಕಾನಿಕ್ ಕೇಬಲ್-ಸ್ಟೇಯ್ಡ್ ಸೇತುವೆ, ಎಕ್ಸ್‌ಟ್ರಾಡೋಸ್ಡ್ ಫುಟ್ ಓವರ್ ಬ್ರಿಡ್ಜ್-ಕಮ್-ಮೇಜರ್ ಬ್ರಿಡ್ಜ್, ಲೂಪ್‌ಗಳು, ಇಳಿಜಾರುಗಳು, ಲಿಂಕ್ ರಸ್ತೆಗಳು ಮತ್ತು ಸೇವಾ ರಸ್ತೆಗಳನ್ನು ಒಳಗೊಂಡಿರುವ 46.039 ಕಿ.ಮೀ ಯೋಜನೆಯನ್ನು ಹೈಬ್ರಿಡ್ ಅನ್ಯುಟಿ ಮಾದರಿ (HAM) ಅಡಿಯಲ್ಲಿ14,447.64 ಕೋಟಿ ರೂ. ಒಟ್ಟು ಬಂಡವಾಳ ವೆಚ್ಚದಲ್ಲಿ ಜಾರಿಗೊಳಿಸಲಾಗುವುದು, ಇದರಲ್ಲಿ ಸಿವಿಲ್ ಕಾಮಗಾರಿ ವೆಚ್ಚ 6,037.85 ಕೋಟಿ ರೂ. (ಯುಟಿಲಿಟಿ ಶಿಫ್ಟಿಂಗ್ ಸೇರಿದಂತೆ, ಜಿಎಸ್‌ಟಿ ಹೊರತುಪಡಿಸಿ) ಮತ್ತು 541.11 ಕೋಟಿ ರೂ. ಭೂಸ್ವಾಧೀನ ವೆಚ್ಚ ಸೇರಿವೆ.

ವರುಣಾ ನದಿ ದಂಡೆ ಮತ್ತು ಅದರ ಇಳಿಜಾರು/ಲೂಪ್‌ಗಳು ಸೇರಿ ಉತ್ತರ ಪ್ರದೇಶದಲ್ಲಿ 6/4 ಪಥದ ಎತ್ತರದ ಕಾರಿಡಾರ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ; ಒಟ್ಟು ಬಂಡವಾಳ ವೆಚ್ಚ 10,998.32 ಕೋಟಿ ರೂ.

July 15th, 04:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಆರ್ಥಿಕ ವ್ಯವಹಾರಗಳ ಕುರಿತಾದ ಸಚಿವ ಸಂಪುಟ ಸಮಿತಿಯು ಉತ್ತರ ಪ್ರದೇಶದ ವಾರಣಾಸಿ ನಗರದ ವಾಹನ ದಟ್ಟಣೆ ನಿವಾರಿಸಲು ವರುಣಾ ನದಿಯ ಉದ್ದಕ್ಕೂ ರಾಷ್ಟ್ರೀಯ ಹೆದ್ದಾರಿ-31 ಮತ್ತು ವಾರಣಾಸಿ ರಿಂಗ್ ರಸ್ತೆಯನ್ನು ಸಂಪರ್ಕಿಸುವ 43.218 ಕಿ.ಮೀ. ಲಿಂಕ್/ಕನೆಕ್ಟರ್ ಕಾರಿಡಾರ್ ಅನ್ನು ಅಭಿವೃದ್ಧಿಪಡಿಸಲು ಅನುಮೋದನೆ ನೀಡಿದೆ. ಈ ಯೋಜನೆಯು ಮುಖ್ಯ ಸರಕು ಸಾಗಾಣೆ ಮಾರ್ಗ (ಕ್ಯಾರೇಜ್‌ವೇ), ಮೇಲು ಸೇತುವೆಗಳು, ಲೂಪ್‌ಗಳು, ರ‍್ಯಾಂಪ್‌ಗಳು ಮತ್ತು ಸೇವಾ ರಸ್ತೆಗಳನ್ನು ಒಳಗೊಂಡಂತೆ 6/4 ಪಥದ ಪ್ರಧಾನವಾಗಿ ಎತ್ತರದ ಕಾರಿಡಾರ್ ಅನ್ನು ಒಳಗೊಂಡಿದೆ ಮತ್ತು ಇದನ್ನು ಹೈಬ್ರಿಡ್ ಅನ್ಯುಟಿ ಮಾದರಿ (ಎಚ್ ಎಎಂ) ಅಡಿಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ ಎಚ್ ಎಐ) ಒಟ್ಟು ಬಂಡವಾಳ ವೆಚ್ಚ 10,998.32 ಕೋಟಿ ರೂ.ಗಳಲ್ಲಿ ಅಭಿವೃದ್ಧಿಪಡಿಸುತ್ತಿದೆ. ಇದರಲ್ಲಿ ಸಿವಿಲ್ ಕಾಮಗಾರಿಗಳ ವೆಚ್ಚ 4,565.33 ಕೋಟಿ ರೂ. ಮತ್ತು ಭೂ ಸ್ವಾಧೀನ ವೆಚ್ಚ ರೂ.934.91 ಕೋಟಿ ರೂ. ಸೇರಿದೆ.

ಉತ್ತರ ಪ್ರದೇಶದ ವಾರಾಣಸಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

April 28th, 05:30 pm

ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳೆ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಿತಿನ್ ನಬಿನ್ ಜಿ, ಉತ್ತರ ಪ್ರದೇಶದ ಸಂಸದ ಮತ್ತು ಯುಪಿ ಬಿಜೆಪಿ ಅಧ್ಯಕ್ಷರಾದ ಶ್ರೀ ಪಂಕಜ್ ಚೌಧರಿ ಜಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಹೋದರಿ ಪೂನಂ ಮೌರ್ಯ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಕಾಶಿಯ ಮಹಿಳಾ ಕೌನ್ಸಿಲರ್‌ಗಳು ಮತ್ತು ಗ್ರಾಮ ಮುಖ್ಯಸ್ಥರೆ, ಇತರೆ ಜನಪ್ರತಿನಿಧಿಗಳೆ ಮತ್ತು ಇಲ್ಲಿಗೆ ಬಂದಿರುವ ನನ್ನ ತಾಯಂದಿರು, ಸಹೋದರಿಯರು ಮತ್ತು ಹೆಣ್ಣು ಮಕ್ಕಳೆ ನಿಮ್ಮೆಲ್ಲರಿಗೂ ನಮಸ್ಕಾರ.

ವಾರಣಾಸಿಯಲ್ಲಿ ಮಹಿಳಾ ಸಮ್ಮೇಳನದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಸುಮಾರು 6,350 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ

April 28th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಾರಣಾಸಿಯಲ್ಲಿ ನಡೆದ ಸಮಾವೇಶದಲ್ಲಿ ಬೃಹತ್ ಮಹಿಳಾ ಸಭೆಯನ್ನುದ್ದೇಶಿಸಿ ಮಾತನಾಡಿದರು, ಅಲ್ಲಿ ಅವರು ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಿಲಾನ್ಯಾಸ ಮಾಡಿದರು.

ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 04th, 01:00 pm

ಉತ್ತರ ಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶದ ಸಚಿವರಾದ ಸಹೋದರ ರವೀಂದ್ರ ಜೈಸ್ವಾಲ್ ಜಿ, ದಯಾಶಂಕರ್ ಜಿ, ಗಿರೀಶ್ ಯಾದವ್ ಜಿ, ಬನಾರಸ್ ಮೇಯರ್ ಅಶೋಕ್ ತಿವಾರಿ ಜಿ, ಇತರೆ ಜನಪ್ರತಿನಿಧಿಗಳೆ, ವಾಲಿಬಾಲ್ ಸಂಘಟನೆಯ ಎಲ್ಲಾ ಪದಾಧಿಕಾರಿಗಳೆ, ದೇಶಾದ್ಯಂತ ಬಂದಿರುವ ಆಟಗಾರರೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆಲ್ಲರಿಗೂ ನಮಸ್ಕಾರ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ʻ72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿʼಯನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಿದರು

January 04th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ವಾರಣಾಸಿಯ ಸಂಸತ್ ಸದಸ್ಯನಾಗಿ, ಎಲ್ಲಾ ಆಟಗಾರರನ್ನು ಸ್ವಾಗತಿಸಲು ಮತ್ತು ಅಭಿನಂದಿಸಲು ಸಂತಸವಾಗುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಇಂದಿನಿಂದ ವಾರಣಾಸಿಯಲ್ಲಿ ಪ್ರಾರಂಭವಾಗುತ್ತಿದೆ. ಆಟಗಾರರು ಅಪಾರ ಕಠಿಣ ಪರಿಶ್ರಮದ ಬಳಿಕ ಈ ರಾಷ್ಟ್ರೀಯ ಪಂದ್ಯಾವಳಿಯನ್ನು ತಲುಪಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ವಾರಣಾಸಿಯ ಮೈದಾನದಲ್ಲಿ ಅವರ ಪ್ರಯತ್ನಗಳನ್ನು ಪರೀಕ್ಷಿಗೆ ಒಡ್ಡಲಾಗುವುದು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇಶದ 28 ರಾಜ್ಯಗಳ ತಂಡಗಳು ಒಟ್ಟುಗೂಡಿ ʻಏಕ ಭಾರತ, ಶ್ರೇಷ್ಠ ಭಾರತʼದ ಸುಂದರ ಚಿತ್ರಣವನ್ನು ಪ್ರಸ್ತುತಪಡಿಸಿವೆ ಎಂದು ಅವರು ಹೇಳಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಆಟಗಾರರಿಗೆ ಪ್ರಧಾನಮಂತ್ರಿಯವರು ತಮ್ಮ ಶುಭಾಶಯಗಳನ್ನು ತಿಳಿಸಿದರು.

ವಾರಾಣಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿ ಜನವರಿ 4 ರಂದು ಪ್ರಧಾನಮಂತ್ರಿ ಉದ್ಘಾಟಿಸಲಿದ್ದಾರೆ

January 03rd, 02:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 4 ರಂದು ಮಧ್ಯಾಹ್ನ 12 ಗಂಟೆಗೆ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ವಾರಾಣಸಿಯ ಡಾ. ಸಂಪೂರ್ಣಾನಂದ ಕ್ರೀಡಾ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ.

ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ವಾರಣಾಸಿಯಿಂದ ಚಾಲನೆ ನೀಡುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 08th, 08:39 am

ಉತ್ತರ ಪ್ರದೇಶದ ಉತ್ಸಾಹಭರಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ; ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮತ್ತು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದ ಬಲವಾದ ಅಡಿಪಾಯವನ್ನು ಹಾಕುತ್ತಿರುವ ಗಮನಾರ್ಹ ತಾಂತ್ರಿಕ ಪ್ರಗತಿಗೆ ಕಾರಣರಾದ ಶ್ರೀ ಅಶ್ವಿನಿ ವೈಷ್ಣವ್ ಜಿ; ಎರ್ನಾಕುಲಂನಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರುತ್ತಿರುವ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ; ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳಾದ ಶ್ರೀ ಸುರೇಶ್ ಗೋಪಿ ಜಿ ಮತ್ತು ಶ್ರೀ ಜಾರ್ಜ್ ಕುರಿಯನ್ ಜಿ; ಕೇರಳದಲ್ಲಿ ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಇತರ ಸಚಿವರು ಮತ್ತು ಸಾರ್ವಜನಿಕ ಪ್ರತಿನಿಧಿಗಳು; ಫಿರೋಜ್‌ ಪುರದಿಂದ ಸಂಪರ್ಕ ಹೊಂದಿದ ಕೇಂದ್ರದ ನನ್ನ ಸಹೋದ್ಯೋಗಿ ಮತ್ತು ಪಂಜಾಬ್ ನಾಯಕ ಶ್ರೀ ರವನೀತ್ ಸಿಂಗ್ ಬಿಟ್ಟು ಜಿ; ಅಲ್ಲಿನ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳು; ಲಕ್ನೋದಿಂದ ಸಂಪರ್ಕ ಹೊಂದಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜಿ; ಇತರ ಗಣ್ಯ ಅತಿಥಿಗಳೇ; ಮತ್ತು ಕಾಶಿಯಲ್ಲಿರುವ ನನ್ನ ಕುಟುಂಬ ಸದಸ್ಯರುಗಳೇ!

ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

November 08th, 08:15 am

ಭಾರತದ ಆಧುನಿಕ ರೈಲ್ವೆ ಮೂಲಸೌಕರ್ಯವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ, ಉತ್ತರ ಪ್ರದೇಶದ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ, ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಬಾಬಾ ವಿಶ್ವನಾಥನ ಪವಿತ್ರ ನಗರವಾದ ವಾರಣಾಸಿಯ ಎಲ್ಲಾ ಕುಟುಂಬಗಳಿಗೆ ತಮ್ಮ ಗೌರವಯುತ ಶುಭಾಶಯಗಳನ್ನು ಕೋರಿದರು. ದೇವ ದೀಪಾವಳಿಯ ಸಮಯದ ಅದ್ಭುತ ಆಚರಣೆಗಳ ಬಗ್ಗೆ ಅವರು ಮಾತನಾಡಿದರು ಮತ್ತು ಇಂದು ಕೂಡ ಒಂದು ಶುಭ ಸಂದರ್ಭವಾಗಿದೆ ಮತ್ತು ಈ ಅಭಿವೃದ್ಧಿಯ ಹಬ್ಬಕ್ಕೆ ಎಲ್ಲರಿಗೂ ಅವರು ಶುಭಾಶಯಗಳನ್ನು ತಿಳಿಸಿದರು.

ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

September 11th, 12:30 pm

ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.