ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 08th, 10:15 am
ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!ಇಂಡಿಯಾ ಮೊಬೈಲ್ ಕಾಂಗ್ರೆಸ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 08th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಯಶೋಭೂಮಿಯಲ್ಲಿ ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ಸಮಾವೇಶವಾದ 'ಇಂಡಿಯಾ ಮೊಬೈಲ್ ಕಾಂಗ್ರೆಸ್' (IMC) 2025ರ 9ನೇ ಆವೃತ್ತಿಯನ್ನು ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ನ ಈ ವಿಶೇಷ ಆವೃತ್ತಿಗೆ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿಯವರು, ಹಣಕಾಸು ವಂಚನೆ ತಡೆಗಟ್ಟುವಿಕೆ, ಕ್ವಾಂಟಮ್ ಸಂವಹನ, 6G, ಆಪ್ಟಿಕಲ್ ಸಂವಹನ ಮತ್ತು ಸೆಮಿಕಂಡಕ್ಟರ್ಗಳಂತಹ ನಿರ್ಣಾಯಕ ವಿಷಯಗಳ ಕುರಿತು ಹಲವಾರು ಸ್ಟಾರ್ಟ್ಅಪ್ಗಳು ತಮ್ಮ ಯೋಜನೆಗಳನ್ನು ಪ್ರಸ್ತುತಪಡಿಸಿವೆ ಎಂದು ತಿಳಿಸಿದರು. ಇಂತಹ ಪ್ರಮುಖ ವಿಷಯಗಳ ಕುರಿತಾದ ಪ್ರಸ್ತುತಿಗಳನ್ನು ನೋಡುವುದು, ಭಾರತದ ತಾಂತ್ರಿಕ ಭವಿಷ್ಯವು ಸಮರ್ಥ ಕೈಗಳಲ್ಲಿದೆ ಎಂಬ ನಂಬಿಕೆಯನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದರು. ಅವರು ಈ ಸಮಾವೇಶಕ್ಕೆ ಮತ್ತು ಎಲ್ಲಾ ಹೊಸ ಉಪಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ಕೋರಿದರು.