ಪ್ರಧಾನಮಂತ್ರಿ ಅವರಿಂದ ಅಕ್ಟೋಬರ್ 8ರಂದು 9ನೇ ಆವೃತ್ತಿಯ ಇಂಡಿಯನ್ ಮೊಬೈಲ್ ಕಾಂಗ್ರೆಸ್ ಉದ್ಘಾಟನೆ
October 07th, 10:27 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯ ಯಶೋಭೂಮಿಯಲ್ಲಿ 2025ರ ಅಕ್ಟೋಬರ್ 8ರಂದು ಏಷ್ಯಾದ ಅತಿದೊಡ್ಡ ದೂರಸಂಪರ್ಕ, ಮಾಧ್ಯಮ ಮತ್ತು ತಂತ್ರಜ್ಞಾನ ಕಾರ್ಯಕ್ರಮ ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ)ಯ 9ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಫಿನ್ಲೆಂಡ್ ಅಧ್ಯಕ್ಷರಾದ ಅಲೆಕ್ಸಾಂಡರ್ ಸ್ಟಬ್ ದೂರವಾಣಿ ಕರೆ
August 27th, 08:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫಿನ್ಲೆಂಡ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಅಲೆಕ್ಸಾಂಡರ್ ಸ್ಟಬ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಜಂಟಿ ಹೇಳಿಕೆ: ಭಾರತ-ಯುರೋಪಿಯನ್ ಒಕ್ಕೂಟದ ವ್ಯಾಪಾರ ಮತ್ತು ತಂತ್ರಜ್ಞಾನ ಮಂಡಳಿಯ ಎರಡನೇ ಸಭೆ, ನವದೆಹಲಿ (ಫೆಬ್ರವರಿ 28, 2025)
February 28th, 06:25 pm
ಭಾರತ-ಯುರೋಪಿಯನ್ ಒಕ್ಕೂಟದ ವ್ಯಾಪಾರ ಮತ್ತು ತಂತ್ರಜ್ಞಾನ ಮಂಡಳಿಯ (ಟಿಟಿಸಿ) ಎರಡನೇ ಸಭೆಯು ಫೆಬ್ರವರಿ 28, 2025 ರಂದು ನವದೆಹಲಿಯಲ್ಲಿ ನಡೆಯಿತು. ಭಾರತದ ಪರವಾಗಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್; ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಸಹ-ಅಧ್ಯಕ್ಷತೆ ವಹಿಸಿದ್ದರು. ಯುರೋಪಿಯನ್ ಒಕ್ಕೂಟದ ಪರವಾಗಿ ತಂತ್ರಜ್ಞಾನ ಸಾರ್ವಭೌಮತ್ವ, ಭದ್ರತೆ ಮತ್ತು ಪ್ರಜಾಪ್ರಭುತ್ವದ ಕಾರ್ಯನಿರ್ವಾಹಕ ಉಪಾಧ್ಯಕ್ಷೆ ಶ್ರೀಮತಿ ಹೆನ್ನಾ ವಿರ್ಕ್ಕುನೆನ್, ವ್ಯಾಪಾರ ಮತ್ತು ಆರ್ಥಿಕ ಭದ್ರತೆ, ಅಂತರ-ಸಾಂಸ್ಥಿಕ ಸಂಬಂಧಗಳು ಮತ್ತು ಪಾರದರ್ಶಕತೆಯ ಆಯುಕ್ತೆ ಶ್ರೀ ಮರೋಸ್ ಸೆಫ್ಕೋವಿಕ್ ಮತ್ತು ಸ್ಟಾರ್ಟ್‌ಅಪ್, ಸಂಶೋಧನೆ ಮತ್ತು ನಾವೀನ್ಯತೆ ಆಯುಕ್ತೆ ಶ್ರೀಮತಿ ಎಕಟೆರಿನಾ ಜಹರೈವಾ ಅವರು ಸಹ-ಅಧ್ಯಕ್ಷತೆ ವಹಿಸಿದ್ದರು.