ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
April 18th, 08:45 pm
ನಮಗೆ ರಾಷ್ಟ್ರೀಯ ಹಿತಾಸಕ್ತಿಯೇ ಅತ್ಯುನ್ನತವಾಗಿದೆ, ಆದರೆ ಕೆಲವು ಜನರಿಗೆ ಪಕ್ಷದ ಹಿತಾಸಕ್ತಿಯೇ ಎಲ್ಲವೂ ಆದಾಗ, ಪಕ್ಷದ ಹಿತಾಸಕ್ತಿ ರಾಷ್ಟ್ರೀಯ ಹಿತಾಸಕ್ತಿಗಿಂತ ದೊಡ್ಡದಾದಾಗ, ಮಹಿಳಾ ಶಕ್ತಿ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಈ ಬಾರಿಯೂ ಅದೇ ಸಂಭವಿಸಿದೆ. ಕಾಂಗ್ರೆಸ್, ಡಿಎಂಕೆ, ಟಿಎಂಸಿ ಮತ್ತು ಸಮಾಜವಾದಿ ಪಕ್ಷಗಳ ಸ್ವಾರ್ಥ ರಾಜಕೀಯವು ದೇಶದ ಮಹಿಳಾ ಶಕ್ತಿಗೆ ದೊಡ್ಡ ಹಾನಿ ಮಾಡಿದೆ.ರಾಷ್ಟ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
April 18th, 08:30 pm
ಭಾರತದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಸಂಬಂಧಿಸಿದ ಅತ್ಯಂತ ನಿರ್ಣಾಯಕ ವಿಷಯದ ಬಗ್ಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮಹಿಳೆಯರ ಪ್ರಗತಿ ಸ್ಥಗಿತಗೊಂಡಿರುವ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದರು. ಸರ್ಕಾರದ ಅತ್ಯಂತ ಮತ್ತು ಪ್ರಾಮಾಣಿಕ ಪ್ರಯತ್ನಗಳ ಹೊರತಾಗಿಯೂ, `ನಾರಿ ಶಕ್ತಿ ವಂದನ್ ಅಧಿನಿಯಮ ತಿದ್ದುಪಡಿ’ಯು ಅಂಗೀಕಾರಗೊಳ್ಳಲು ವಿಫಲವಾಯಿತು, ಇದು ಮಹಿಳಾ ಸಮುದಾಯದ ನ್ಯಾಯಸಮ್ಮತ ಕನಸುಗಳನ್ನು ಅಕ್ಷರಶಃ ನುಚ್ಚುನೂರು ಮಾಡಿದೆ ಎಂದು ಅವರು ಹೇಳಿದರು. ಈ ದುರದೃಷ್ಟಕರ ಫಲಿತಾಂಶಕ್ಕಾಗಿ ನಾನು ರಾಷ್ಟ್ರದ ಎಲ್ಲಾ ತಾಯಂದಿರು ಮತ್ತು ಸಹೋದರಿಯರಲ್ಲಿ ಕ್ಷಮೆಯಾಚಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:30 pm
ನೀವೆಲ್ಲರೂ ರೈಸಿಂಗ್ ಭಾರತದ ಬಗ್ಗೆ ಚರ್ಚಿಸುತ್ತಿದ್ದೀರಿ. ಮತ್ತು ಇದರಲ್ಲಿ, ನಿಮ್ಮ ಒತ್ತು ಒಳಗಿನ ಶಕ್ತಿಯ ಮೇಲೆ - ಸರಳವಾಗಿ ಹೇಳುವುದಾದರೆ, ನಿಮ್ಮ ಗಮನ ದೇಶದ ಸ್ವಂತ ಶಕ್ತಿಯ ಮೇಲೆ. ಮತ್ತು ನಮ್ಮ ಧರ್ಮಗ್ರಂಥಗಳಲ್ಲಿ, ಇದನ್ನು ಹೇಳಲಾಗಿದೆ - ತತ್ ತ್ವಮ್ ಅಸಿ! ಅಂದರೆ, ನಾವು ಹುಡುಕುತ್ತಿರುವ ಬ್ರಹ್ಮ ನಾವೇ; ಅದು ನಮ್ಮೊಳಗಿದೆ. ನಮ್ಮೊಳಗಿನ ಶಕ್ತಿಯನ್ನು ನಾವು ಗುರುತಿಸಬೇಕು. ಕಳೆದ 11 ವರ್ಷಗಳಲ್ಲಿ, ಭಾರತವು ಈ ಶಕ್ತಿಯನ್ನು ಗುರುತಿಸಿದೆ, ಮತ್ತು ಇಂದು ದೇಶವು ಈ ಶಕ್ತಿಯನ್ನು ಬಲಪಡಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ.ನೆಟ್ ವರ್ಕ್ 18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದಯೋನ್ಮುಖ ಭಾರತ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಕಳೆದ 11 ವರ್ಷಗಳ ಭಾರತದ ಪ್ರಯಾಣವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ ಅವರು, ರಾಷ್ಟ್ರೀಯ ಸಾಮರ್ಥ್ಯ, ಆರ್ಥಿಕ ಸ್ವಾವಲಂಬನೆ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾರ್ಗಸೂಚಿಯನ್ನು ಪುನಃ ಪಡೆಯುವ ಬಗ್ಗೆ ವ್ಯಾಪಕವಾಗಿ ಮಾತನಾಡಿದರು.ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 13th, 08:30 pm
ಈ ಜಾಗತಿಕ ವ್ಯಾಪಾರ ಶೃಂಗಸಭೆಗೆ ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ; ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳು. ಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನ ಎನ್ನುವ ವಿಷಯವನ್ನು ಚರ್ಚಿಸಲು ನಾವು ಇಲ್ಲಿದ್ದೇವೆ. ವಿನೀತ್ ಅವರ ಭಾಷಣವನ್ನು ಕೇಳಿದ ನಂತರ, ನನ್ನ ಕೆಲಸವು ಬಹಳ ಸುಲಭವಾಗಿದೆ ಎಂದು ನನಗೆ ಅನಿಸುತ್ತದೆ. ಆದರೆ ನಾನು ಒಂದು ಸಣ್ಣ ವಿನಂತಿ - ನಿಮಗೆ ಬಹಳಷ್ಟು ತಿಳಿದಿರುವುದರಿಂದ, ಅದು ಕೆಲವೊಮ್ಮೆ ಇ ಟಿ ಯಲ್ಲಿಯೂ ಕಾಣಿಸಿಕೊಳ್ಳಬೇಕು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇ ಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026 ಅನ್ನು ಉದ್ದೇಶಿಸಿ ಮಾತನಾಡಿದರು
February 13th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ʻಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026ʼ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು ಮತ್ತು ʻಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನʼ ಎನ್ನುವ ವಿಷಯದ ಕುರಿತು ಮಾತನಾಡಿದರು. 21 ನೇ ಶತಮಾನದ ಕಳೆದ ದಶಕವು ಜಾಗತಿಕ ಸಾಂಕ್ರಾಮಿಕ ರೋಗ, ಉದ್ವಿಗ್ನತೆ ಹಾಗು ವಿವಿಧ ಪ್ರದೇಶಗಳಲ್ಲಿನ ಯುದ್ಧಗಳು ಮತ್ತು ಜಾಗತಿಕ ಸಮತೋಲನವನ್ನು ಅಲುಗಾಡಿಸಿದ ಪೂರೈಕೆ ಸರಪಳಿ ಸ್ಥಗಿತಗಳು ಸೇರಿದಂತೆ ಹಿಂದೆಂದೂ ಕಾಣದಂತ ಅಡೆತಡೆಗಳನ್ನು ಕಂಡಿದೆ ಎಂದು ಅವರು ಉಲ್ಲೇಖಿಸಿದರು. ಬಿಕ್ಕಟ್ಟುಗಳು ರಾಷ್ಟ್ರದ ನಿಜವಾದ ಶಕ್ತಿಯನ್ನು ತೋರಿಸುತ್ತವೆ ಎಂದು ಅವರು ಒತ್ತಿ ಹೇಳಿದರು ಮತ್ತು ಈ ಅಡೆತಡೆಗಳ ಹೊರತಾಗಿಯೂ, ಭಾರತದ ದಶಕವು ಗಮನಾರ್ಹ ಅಭಿವೃದ್ಧಿ, ಅತ್ಯುತ್ತಮ ವಿತರಣೆ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಯಿಂದ ಗುರುತಿಸಲ್ಪಟ್ಟಿದೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು. ಕಳೆದ ದಶಕ ಪ್ರಾರಂಭವಾದಾಗ, ಭಾರತವು ಹನ್ನೊಂದನೇ ಅತಿದೊಡ್ಡ ಆರ್ಥಿಕತೆಯಾಗಿತ್ತು ಮತ್ತು ಪ್ರಕ್ಷುಬ್ಧತೆಯ ನಡುವೆ ಕುಸಿತದ ಭಯವಿತ್ತು, ಆದರೆ ಇಂದು ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲು ವೇಗವಾಗಿ ಮುನ್ನಡೆಯುತ್ತಿದೆ ಎಂದು ಶ್ರೀ ಮೋದಿ ನೆನಪಿಸಿಕೊಂಡರು. ಬದಲಾವಣೆಯ ಶತಮಾನಕ್ಕೆ ಭಾರತವು ಪ್ರಮುಖ ಅಡಿಪಾಯವಾಗಲಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿಯವರು, ಭಾರತವು ಪ್ರಸ್ತುತ ಜಾಗತಿಕ ಬೆಳವಣಿಗೆಗೆ ಶೇ. ಹದಿನಾರು ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಎಂದು ಹೇಳಿದರು ಮತ್ತು ಈ ಕೊಡುಗೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಭಾರತವು ಜಾಗತಿಕ ಬೆಳವಣಿಗೆಗೆ ಚಾಲನೆ ನೀಡುತ್ತದೆ ಮತ್ತು ವಿಶ್ವ ಆರ್ಥಿಕತೆಯ ಹೊಸ ಎಂಜಿನ್ ಆಗಿ ಹೊರಹೊಮ್ಮುತ್ತದೆ ಎಂದು ಅವರು ದೃಢಪಡಿಸಿದರು.ಲಕ್ನೋದಲ್ಲಿ ರಾಷ್ಟ್ರ ಪ್ರೇರಣಾ ಸ್ಥಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 25th, 06:16 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿ ಮತ್ತು ಲಕ್ನೋದ ಸಂಸತ್ ಸದಸ್ಯ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜಿ; ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರೆ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಪಂಕಜ್ ಚೌಧರಿ ಜಿ, ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ, ಮಹಿಳೆಯರು ಮತ್ತು ಮಹನೀಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ' ಲೋಕಾರ್ಪಣೆ
December 25th, 05:23 pm
ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನ ಮತ್ತು ಆದರ್ಶಗಳನ್ನು ಗೌರವಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ 'ರಾಷ್ಟ್ರ ಪ್ರೇರಣಾ ಸ್ಥಳ'ವನ್ನು ಉದ್ಘಾಟಿಸಿದರು. ಶ್ರೀ ವಾಜಪೇಯಿ ಅವರ 101ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು ಲಕ್ನೋ ಭೂಮಿಯು ಒಂದು ಹೊಸ ಪ್ರೇರಣೆಗೆ ಸಾಕ್ಷಿಯಾಗುತ್ತಿದೆ ಎಂದು ಬಣ್ಣಿಸಿದರು. ಇದೇ ವೇಳೆ ಅವರು ದೇಶದ ಜನತೆಗೆ ಮತ್ತು ವಿಶ್ವಕ್ಕೆ ಕ್ರಿಸ್‌ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು. ಭಾರತದಲ್ಲಿಯೂ ಲಕ್ಷಾಂತರ ಕ್ರಿಶ್ಚಿಯನ್ ಕುಟುಂಬಗಳು ಇಂದು ಸಂಭ್ರಮದಿಂದ ಹಬ್ಬವನ್ನು ಆಚರಿಸುತ್ತಿವೆ ಎಂದು ಉಲ್ಲೇಖಿಸಿದ ಶ್ರೀ ಮೋದಿ ಅವರು, ಈ ಕ್ರಿಸ್‌ಮಸ್ ಆಚರಣೆಯು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷವನ್ನು ತರಲಿ ಎಂಬುದು ಎಲ್ಲರ ಸಾಮೂಹಿಕ ಆಶಯವಾಗಿದೆ ಎಂದು ತಿಳಿಸಿದರು.ಮುಂಬೈನಲ್ಲಿ ನಡೆದ 6ನೇ ಆವೃತ್ತಿಯ ಜಾಗತಿಕ ಫಿನ್ ಟೆಕ್ ಮೇಳವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
October 09th, 02:51 pm
ಗೌರವಾನ್ವಿತ ಪ್ರಧಾನಮಂತ್ರಿ ಕೀರ್ ಸ್ಟಾರ್ಮರ್, ರಿಸರ್ಬ್ ಬ್ಯಾಂಕ್ ಇಂಡಿಯಾದ ಗವರ್ನರ್, ನಾವಿನ್ಯಕಾರರೇ, ನಾಯಕರೇ ಮತ್ತು ಜಗತ್ತಿನ ಎಲ್ಲಾ ಮೂಲೆಗಳಿಂದ ಆಗಮಿಸಿರುವ ಹೂಡಿಕೆದಾರರೆ, ಮಹಿಳೆಯರೆ ಮತ್ತು ಮಹನೀಯರೆ, ನಿಮ್ಮೆಲ್ಲರಿಗೂ ಮುಂಬೈಗೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ.ಮುಂಬೈನ ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025 ಅನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
October 09th, 02:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ 'ಗ್ಲೋಬಲ್ ಫಿನ್ ಟೆಕ್ ಫೆಸ್ಟ್ 2025' ಅನ್ನುದ್ದೇಶಿಸಿ ಮಾತನಾಡಿದರು. ಮುಂಬೈಗೆ ಆಗಮಿಸಿದ ಎಲ್ಲ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಶ್ರೀ ಮೋದಿ ಅವರು, ಮುಂಬೈಯನ್ನು 'ಶಕ್ತಿಯ ನಗರ, ಉದ್ಯಮಶೀಲತೆಯ ನಗರ, ಮತ್ತು ಅನಂತ ಸಾಧ್ಯತೆಗಳ ನಗರ' ಎಂದು ಬಣ್ಣಿಸಿದರು. ಅವರು ತಮ್ಮ ಸ್ನೇಹಿತ, ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಕೀರ್ ಸ್ಟಾರ್ಮರ್ ಅವರನ್ನು ವಿಶೇಷವಾಗಿ ಸ್ವಾಗತಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ಸಮಯ ಮೀಸಲಿಟ್ಟು ಆಗಮಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ ಚಾಲನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ವಿಡಿಯೋ ಕಾನ್ಫರೆನ್ಸಿಂಗ್ ಭಾಷಣ
September 26th, 11:30 am
ಇಂದು ನವರಾತ್ರಿಯ ಈ ಪವಿತ್ರ ದಿನಗಳಲ್ಲಿ, ಬಿಹಾರದ ಮಹಿಳಾ ಶಕ್ತಿಯೊಂದಿಗೆ ಸಂತೋಷದಿಂದ ಸೇರಲು ನನಗೆ ಅವಕಾಶ ಸಿಕ್ಕಿದೆ. ನಾನು ಇಲ್ಲಿ ಪರದೆಯನ್ನು ನೋಡುತ್ತಿದ್ದೆ, ಲಕ್ಷಾಂತರ ಮಹಿಳೆಯರು ಮತ್ತು ಸಹೋದರಿಯರು ಕಾಣುತ್ತಿದ್ದಾರೆ. ಈ ಪವಿತ್ರ ನವರಾತ್ರಿ ಹಬ್ಬದ ಸಮಯದಲ್ಲಿ ನಿಮ್ಮೆಲ್ಲರ ಆಶೀರ್ವಾದಗಳು ನಮಗೆಲ್ಲರಿಗೂ ದೊಡ್ಡ ಶಕ್ತಿಯಾಗಿದೆ. ನಾನು ಇಂದು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಇಂದಿನಿಂದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ. ನನಗೆ ತಿಳಿದುಬಂದಂತೆ, ಇಲ್ಲಿಯವರೆಗೆ 75 ಲಕ್ಷ ಸಹೋದರಿಯರು ಈ ಯೋಜನೆಗೆ ಸೇರಿದ್ದಾರೆ. ಈಗ ಈ 75 ಲಕ್ಷ ಸಹೋದರಿಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ. ಹಣವನ್ನು ಏಕಕಾಲದಲ್ಲಿ ಕಳುಹಿಸಲಾಗಿದೆ.ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ ನೀಡಿದರು
September 26th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ನವರಾತ್ರಿಯ ಶುಭಾಶಯ ಕೋರಿದರು. ಬಿಹಾರದ ಮಹಿಳೆಯರೊಂದಿಗೆ ಈ ಆಚರಣೆಯಲ್ಲಿ ಭಾಗವಹಿಸುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ ಅವರು, ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯನ್ನು ಇಂದು ಪ್ರಾರಂಭಿಸಲಾಗುತ್ತಿದೆ. 75 ಲಕ್ಷ ಮಹಿಳೆಯರು ಈಗಾಗಲೇ ಈ ಉಪಕ್ರಮಕ್ಕೆ ಸೇರಿದ್ದಾರೆ . ಈ 75 ಲಕ್ಷ ಮಹಿಳೆಯರಲ್ಲಿ ಪ್ರತಿಯೊಬ್ಬರ ಬ್ಯಾಂಕ್ ಖಾತೆಗಳಿಗೆ ಏಕಕಾಲದಲ್ಲಿ 10,000 ರೂ. ವರ್ಗಾಯಿಸಲಾಗಿದೆ ಎಂದು ಘೋಷಿಸಿದರು.ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶದ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ”ದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 25th, 10:22 am
ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ಉತ್ತರ ಪ್ರದೇಶದ ಸರ್ಕಾರದ ಸಚಿವರುಗಳೆ, ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರಾದ ಭೂಪೇಂದ್ರ ಚೌಧರಿ ಜಿ, ಉದ್ಯಮದ ಎಲ್ಲಾ ಸ್ನೇಹಿತರೆ, ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ,ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿದರು
September 25th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಆಯೋಜಿಸಲಾದ 'ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ 2025'ಕ್ಕೆ ಚಾಲನೆ ನೀಡಿ, ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಸಮಸ್ತ ವ್ಯಾಪಾರಿಗಳು, ಹೂಡಿಕೆದಾರರು, ಉದ್ಯಮಿಗಳು ಹಾಗೂ ಯುವ ಪ್ರತಿನಿಧಿಗಳನ್ನು ಪ್ರಧಾನಮಂತ್ರಿಯವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಪ್ರದರ್ಶನದಲ್ಲಿ 2,200ಕ್ಕೂ ಅಧಿಕ ಪ್ರದರ್ಶಕರು ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಅನಾವರಣಗೊಳಿಸುತ್ತಿರುವುದು ಅತ್ಯಂತ ಸಂತಸದ ವಿಷಯ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಈ ಬಾರಿಯ ವ್ಯಾಪಾರ ಪ್ರದರ್ಶನಕ್ಕೆ 'ರಷ್ಯಾ' ಪಾಲುದಾರ ರಾಷ್ಟ್ರವಾಗಿರುವುದು, ಉಭಯ ದೇಶಗಳ ನಡುವಿನ ಕಾಲಪರೀಕ್ಷಿತ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದರ ದ್ಯೋತಕವಾಗಿದೆ ಎಂದು ಶ್ರೀ ಮೋದಿಯವರು ವಿಶೇಷವಾಗಿ ಪ್ರಸ್ತಾಪಿಸಿದರು. ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅವರ ಸರ್ಕಾರದ ಸಹೋದ್ಯೋಗಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ಅಭಿನಂದನೆ ಸಲ್ಲಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಯಾದ 'ಅಂತ್ಯೋದಯ'ದ ಪಥವನ್ನು ದೇಶಕ್ಕೆ ತೋರಿದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿಯಂದೇ ಈ ಶುಭ ಸಂದರ್ಭ ಒದಗಿ ಬಂದಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿದರು. ಅಂತ್ಯೋದಯದ ನಿಜವಾದ ಅರ್ಥವೇ, ಅಭಿವೃದ್ಧಿಯ ಫಲಗಳು ಸಮಾಜದ ಅತ್ಯಂತ ಬಡವರನ್ನೂ ತಲುಪುವಂತೆ ಮಾಡುವುದು ಮತ್ತು ಎಲ್ಲ ಬಗೆಯ ತಾರತಮ್ಯವನ್ನು ನಿರ್ಮೂಲನೆ ಮಾಡುವುದಾಗಿದೆ ಎಂದು ಅವರು ಪ್ರತಿಪಾದಿಸಿದರು. ಭಾರತವು ಇದೀಗ ಇದೇ ಸಮಗ್ರ ಅಭಿವೃದ್ಧಿ ಮಾದರಿಯನ್ನು ಇಡೀ ವಿಶ್ವಕ್ಕೆ ಅರ್ಪಿಸುತ್ತಿದೆ ಎಂದು ಅವರು ಹೆಮ್ಮೆಯಿಂದ ನುಡಿದರು.ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನ ಉದ್ಘಾಟನಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 06th, 07:00 pm
ಕೇಂದ್ರ ಸಚಿವ ಸಂಪುಟದ ನನ್ನೆಲ್ಲಾ ಸಹೋದ್ಯೋಗಿಗಳೆ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂಸತ್ ಸದಸ್ಯರೆ, ಎಲ್ಲಾ ಸರ್ಕಾರಿ ನೌಕರರೆ, ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
August 06th, 06:30 pm
ನವದೆಹಲಿಯ ಕರ್ತವ್ಯ ಪಥದಲ್ಲಿ ಇಂದು ಕರ್ತವ್ಯ ಭವನ-3 ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರಾಂತಿಯ ಮಾಸವಾದ ಆಗಸ್ಟ್, ಆಗಸ್ಟ್ 15 ಕ್ಕೆ ಮುನ್ನವೇ ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ತಂದಿದೆ ಎಂದು ಹೇಳಿದರು. ಆಧುನಿಕ ಭಾರತ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಧನೆಗಳಿಗೆ ಭಾರತ ಸಾಕ್ಷಿಯಾಗುತ್ತಿದೆ ಎಂದು ಅವರು ಹೇಳಿದರು. ನವದೆಹಲಿಯ ಇತ್ತೀಚಿನ ಮೂಲಸೌಕರ್ಯಗಳಾದ ಕರ್ತವ್ಯ ಪಥ, ಹೊಸ ಸಂಸತ್ತು ಕಟ್ಟಡ, ಹೊಸ ರಕ್ಷಣಾ ಕಚೇರಿಗಳ ಸಂಕೀರ್ಣ, ಭಾರತ ಮಂಟಪ, ಯಶೋಭೂಮಿ, ಹುತಾತ್ಮರಿಗೆ ಸಮರ್ಪಿತವಾದ ರಾಷ್ಟ್ರೀಯ ಯುದ್ಧ ಸ್ಮಾರಕ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಮತ್ತು ಕರ್ತವ್ಯ ಭವನದ ನಿರ್ಮಾಣ ಮುಂತಾದದವುಗಳನ್ನು ಪಟ್ಟಿಮಾಡಿದರು. ಇವು ಕೇವಲ ಹೊಸ ಕಟ್ಟಡಗಳು ಅಥವಾ ಸಾಮಾನ್ಯ ಮೂಲಸೌಕರ್ಯಗಳಲ್ಲ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ , ಅಮೃತ ಕಾಲದಲ್ಲಿ, ಅಭಿವೃದ್ಧಿ ಹೊಂದಿದ ಭಾರತವನ್ನು ರೂಪಿಸುವ ನೀತಿಗಳನ್ನು ಈ ಕಟ್ಟಡಗಳಲ್ಲಿ ರೂಪಿಸಲಾಗುತ್ತಿದೆ ಮತ್ತು ಮುಂಬರುವ ದಶಕಗಳಲ್ಲಿ, ರಾಷ್ಟ್ರದ ದಿಕ್ಕನ್ನು ಈ ಸಂಸ್ಥೆಗಳು ನಿರ್ಧರಿಸುತ್ತವೆ ಎಂದು ಹೇಳಿದರು. ಕರ್ತವ್ಯ ಭವನದ ಉದ್ಘಾಟನೆಗಾಗಿ ಎಲ್ಲಾ ನಾಗರಿಕರನ್ನು ಅಭಿನಂದಿಸಿದ ಅವರು, ಅದರ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್ ಗಳು ಮತ್ತು ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿದರು.ಪ್ರಧಾನಮಂತ್ರಿ ಅಧ್ಯಕ್ಷತೆಯಲ್ಲಿ 46ನೇ ಪ್ರಗತಿ ಸಂವಾದ ಸಭೆ
April 30th, 08:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಐಸಿಟಿ ಆಧಾರಿತ ಬಹು-ಮಾದರಿ ವೇದಿಕೆ “ಪ್ರಗತಿ”ಯ 46ನೇ ಆವೃತ್ತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಗುಜರಾತ್ ನ ಸೂರತ್ ನಲ್ಲಿ ಸೂರತ್ ಆಹಾರ ಭದ್ರತಾ ಸ್ಯಾಚುರೇಶನ್ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ
March 07th, 05:34 pm
ನೀವೆಲ್ಲರೂ ಹೇಗಿದ್ದೀರಿ? ಕ್ಷೇಮವಾಗಿದ್ದೀರಾ? ದೇಶದ ಮತ್ತು ಗುಜರಾತಿನ ಜನರು ನನಗೆ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ನೀಡಿರುವುದು ನನ್ನ ಸೌಭಾಗ್ಯ. ಅದಾದ ನಂತರ ಇದು ಸೂರತ್ ಗೆ ನನ್ನ ಮೊದಲ ಭೇಟಿ. ಗುಜರಾತ್ ಪೋಷಿಸಿದ ವ್ಯಕ್ತಿಯನ್ನು ರಾಷ್ಟ್ರವು ಪ್ರೀತಿಯಿಂದ ಸ್ವೀಕರಿಸಿದೆ. ನಾನು ನಿಮಗೆ ಸದಾ ಋಣಿಯಾಗಿರುತ್ತೇನೆ; ನನ್ನ ಜೀವನವನ್ನು ರೂಪಿಸುವಲ್ಲಿ ನೀವು ಮಹತ್ವದ ಪಾತ್ರವನ್ನು ವಹಿಸಿದ್ದೀರಿ. ಇಂದು ನಾನು ಸೂರತ್ ಗೆ ಬಂದಿರುವಾಗ, ಸೂರತ್ ನ ಉತ್ಸಾಹವನ್ನು ನೆನಪಿಸದೆ ಮತ್ತು ನೋಡದೆ ಇರಲು ಹೇಗೆ ಸಾಧ್ಯ? ಕೆಲಸ ಮತ್ತು ದಾನ - ಈ ಎರಡು ವಿಷಯಗಳು ಸೂರತ್ ಅನ್ನು ನಿಜವಾಗಿಯೂ ವಿಶೇಷವಾಗಿಸುತ್ತವೆ. ಪರಸ್ಪರ ಬೆಂಬಲಿಸುವುದು ಮತ್ತು ಎಲ್ಲರ ಪ್ರಗತಿಯನ್ನು ಆಚರಿಸುವುದು ಸೂರತ್ ನ ಪ್ರತಿಯೊಂದು ಮೂಲೆಯಲ್ಲೂ ಗೋಚರಿಸುತ್ತದೆ. ಇಂದಿನ ಕಾರ್ಯಕ್ರಮವು ಸೂರತ್ ನ ಈ ಉತ್ಸಾಹ ಮತ್ತು ಭಾವನೆಯನ್ನು ಉತ್ತೇಜಿಸುವಲ್ಲಿ ಒಂದು ಹೆಜ್ಜೆಯಾಗಿದೆ.ಸೂರತ್ ಆಹಾರ ಭದ್ರತೆ ಸಂತೃಪ್ತ (ಸ್ಯಾಚುರೇಶನ್) ಅಭಿಯಾನ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
March 07th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೂರತ್ ನ ಲಿಂಬಾಯತ್ ನಲ್ಲಿ ಸೂರತ್ ಆಹಾರ ಭದ್ರತೆ ಸ್ಯಾಚುರೇಶನ್ (ಸಂತೃಪ್ತ) ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಧಾನಮಂತ್ರಿಯವರು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 2.3 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಪ್ರಯೋಜನಗಳನ್ನು ವಿತರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಸೂರತ್ ನಗರದ ವಿಶಿಷ್ಟ ಮನೋಭಾವವನ್ನು ಒತ್ತಿ ಹೇಳಿದರು, ಕೆಲಸ ಮತ್ತು ದಾನದ ಬಲವಾದ ಅಡಿಪಾಯವನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು. ಸಾಮೂಹಿಕ ಬೆಂಬಲ ಮತ್ತು ಎಲ್ಲರ ಬೆಳವಣಿಗೆಯನ್ನು ಸಂಭ್ರಮಿಸುವ ಮೂಲಕ ನಗರದ ಸಾರವನ್ನು ಹೇಗೆ ಮರೆಯಲು ಸಾಧ್ಯವಾಗುವುದಿಲ್ಲ ಎಂಬುದನ್ನು ಅವರು ವ್ಯಕ್ತಪಡಿಸಿದರು.ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.