ಆಪರೇಷನ್ ಸಿಂದೂರ ಕುರಿತ ವಿಶೇಷ ಚರ್ಚೆಯಲ್ಲಿ ಲೋಕಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 29th, 05:32 pm
ಈ ಅಧಿವೇಶನದ ಆರಂಭದಲ್ಲೇ ನಾನು ಮಾಧ್ಯಮ ಮಿತ್ರರೊಂದಿಗೆ ಮಾತನಾಡುವಾಗ, ಎಲ್ಲಾ ಸಂಸದರಿಗೂ ಒಂದು ಮನವಿ ಮಾಡಿದ್ದೆ. ಈ ಅಧಿವೇಶನವು ಭಾರತದ ವಿಜಯಗಳ ಆಚರಣೆಯಾಗಿದೆ ಎಂದು ನಾನು ಹೇಳಿದ್ದೆ. ಈ ಸಂಸತ್ತಿನ ಅಧಿವೇಶನವು ಭಾರತದ ಕೀರ್ತಿಯನ್ನು ಬಣ್ಣಿಸುವ ಅಧಿವೇಶನವಾಗಿದೆ.ʻಆಪರೇಷನ್ ಸಿಂದೂರʼ ಕುರಿತ ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
July 29th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತದ ದಿಟ್ಟ, ಯಶಸ್ವಿ ಮತ್ತು ನಿರ್ಣಾಯಕ ಕಾರ್ಯಾಚರಣೆ 'ಆಪರೇಷನ್ ಸಿಂದೂರ' ಕುರಿತ ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಮಾತನಾಡಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಅಧಿವೇಶನದ ಆರಂಭದಲ್ಲಿ ಮಾಧ್ಯಮಗಳ ಜೊತೆಗಿನ ತಮ್ಮ ಸಂವಾದವನ್ನು ಸ್ಮರಿಸಿದರು, ಅಧಿವೇಶನವನ್ನು ಭಾರತದ ವಿಜಯಗಳ ಆಚರಣೆ ಮತ್ತು ಭಾರತದ ವೈಭವಕ್ಕೆ ಗೌರವ ಎಂದು ಪರಿಗಣಿಸುವಂತೆ ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರಿಗೆ ಮನವಿ ಮಾಡಿದ್ದಾಗಿ ಹೇಳಿದರು.