ಏಪ್ರಿಲ್ 14 ರಂದು ಉತ್ತರಾಖಂಡ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
April 13th, 04:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 14, 2026 ರಂದು ಉತ್ತರಾಖಂಡ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:15ರ ಸುಮಾರಿಗೆ, ಪ್ರಧಾನಮಂತ್ರಿಯವರು ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ನ ಎಲಿವೇಟೆಡ್ ವಿಭಾಗದಲ್ಲಿ ವನ್ಯಜೀವಿ ಕಾರಿಡಾರ್ ನ ಪರಿಶೀಲನೆಯನ್ನು ಕೈಗೊಳ್ಳಲು ಉತ್ತರ ಪ್ರದೇಶದ ಸಹರಾನ್ ಪುರಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11:40ರ ಸುಮಾರಿಗೆ, ಪ್ರಧಾನಮಂತ್ರಿಯವರು ಡೆಹ್ರಾಡೂನ್ ಬಳಿಯ ಜೈ ಮಾ ದಾತ್ ಕಾಳಿ ದೇವಾಲಯದಲ್ಲಿ ದರ್ಶನ ಮತ್ತು ಪೂಜೆಯನ್ನು ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 12:30 ರ ಸುಮಾರಿಗೆ, ಪ್ರಧಾನಮಂತ್ರಿಯವರು ಡೆಹ್ರಾಡೂನ್ ನಲ್ಲಿ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ದೆಹಲಿ-ಡೆಹ್ರಾಡೂನ್ ಆರ್ಥಿಕ ಕಾರಿಡಾರ್ ಅನ್ನು ಉದ್ಘಾಟಿಸಲಿದ್ದಾರೆ ಮತ್ತು ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.