LDF and UDF have deprived Keralam of its youth power: PM Modi in Ernakulam
March 11th, 03:00 pm
Amid a massive gathering in Ernakulam today, Prime Minister Narendra Modi said the enthusiasm and confidence of the people reflected a strong aspiration for Keralam’s development and a new political direction in the state. He emphasised that the aspirations of the people clearly indicate a desire for faster growth and new opportunities.PM Modi addresses a mega public meeting in Ernakulam, Keralam
March 11th, 02:20 pm
Amid a massive gathering in Ernakulam today, Prime Minister Narendra Modi said the enthusiasm and confidence of the people reflected a strong aspiration for Keralam’s development and a new political direction in the state. He emphasised that the aspirations of the people clearly indicate a desire for faster growth and new opportunities.ನವಿ ಮುಂಬೈನಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ಸಮಾಗಮದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾಡಿದ ಭಾಷಣ
March 01st, 06:28 pm
ಜೋ ಬೋಲೆ ಸೋ ನಿಹಾಲ್, ಸತ್ ಶ್ರೀ ಅಕಾಲ್! ಇಂದು, ನಾವು 'ಹಿಂದ್ ದಿ ಚಾದರ್' ಶ್ರೀ ಗುರು ತೇಜ್ ಬಹದ್ದೂರ್ ಸಾಹಿಬ್ ಅವರ 350ನೇ ಶಹೀದಿ ಸಮಾಗಮದಂದು ಭಕ್ತಿಪೂರ್ವಕವಾಗಿ ನೆನಪಿಸಿಕೊಳ್ಳುತ್ತಿದ್ದೇವೆ. ಈ ಹುತಾತ್ಮರ ವಾರ್ಷಿಕೋತ್ಸವದಲ್ಲಿ ಹಾಜರಿರುವ ಎಲ್ಲರಿಗೂ ನನ್ನ ನಮನಗಳು.PM Modi addresses 350th Shaheedi Samagam of Sri Guru Teg Bahadur Ji; highlights initiatives for the Sikh community and social unity
March 01st, 06:00 pm
PM Modi addressed the 350th Martyrdom Year (Shaheedi Samagam) of ‘Hind di Chadar’ Sri Guru Teg Bahadur Sahib Ji. Paying his respects, the PM stated that today we all remember the great Guru on this significant anniversary and expressed that it is a matter of great fortune to be part of such a historic and sacred event.ಸೆಪ್ಟೆಂಬರ್ 25 ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ 'ವಿಶ್ವ ಆಹಾರ ಮೇಳ ಭಾರತ 2025' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ
September 24th, 06:33 pm
'ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ' (PMFME) ಯೋಜನೆಯಡಿ, ಆಹಾರ ಸಂಸ್ಕರಣಾ ವಲಯದಲ್ಲಿನ ಸೂಕ್ಷ್ಮ ಯೋಜನೆಗಳಿಗಾಗಿ ಸುಮಾರು 26,000 ಫಲಾನುಭವಿಗಳಿಗೆ ₹770 ಕೋಟಿಗೂ ಅಧಿಕ ಮೊತ್ತದ ಸಾಲ-ಸಂಯೋಜಿತ ನೆರವನ್ನು ವಿತರಿಸಲಾಗುವುದು.ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಲ್ಲಿ ಮಡಿದವರಿಗೆ ಪ್ರಧಾನಮಂತ್ರಿ ಸಂತಾಪ
September 01st, 02:16 pm
ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ವ್ಯಕ್ತಪಡಿಸಿದ್ದಾರೆ.ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
April 27th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ನಿಮ್ಮೊಂದಿಗೆ ನಾನು 'ಮನದ ಮಾತು' ಆಡುತ್ತಿರುವಾಗ, ನನ್ನ ಹೃದಯ ನೋವಿನಿಂದ ಭಾರವಾಗಿದೆ. ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ಘಟನೆ ದೇಶದ ಪ್ರತಿಯೊಬ್ಬ ನಾಗರಿಕನನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ. ಸಂತ್ರಸ್ತ ಕುಟುಂಬಗಳ ಬಗ್ಗೆ ಪ್ರತಿ ಭಾರತೀಯನಲ್ಲೂ ಅಪಾರ ಸಹಾನುಭೂತಿಯಿದೆ. ರಾಜ್ಯ, ಭಾಷೆಯನ್ನು ಮೀರಿ ಎಲ್ಲ ಜನರು ಈ ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವನ್ನು ಸ್ವತಃ ಅನುಭವಿಸುತ್ತಿದ್ದಾರೆ. ಭಯೋತ್ಪಾದಕ ದಾಳಿಯ ಚಿತ್ರಗಳನ್ನು ನೋಡಿದ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ನನಗೆ ಅನಿಸುತ್ತದೆ. ಪಹಲ್ಗಾಮ್‌ನಲ್ಲಿ ನಡೆದ ಈ ದಾಳಿಯು ಭಯೋತ್ಪಾದನೆಗೆ ಉತ್ತೇಜನ ನೀಡುವವರ ಹತಾಶೆಯನ್ನು ತೋರಿಸುತ್ತದೆ ಮತ್ತು ಅವರ ಹೇಡಿತನವನ್ನು ಪ್ರದರ್ಶಿಸುತ್ತದೆ. ಶಾಲಾ ಕಾಲೇಜುಗಳಲ್ಲಿ ಹುರುಪು ತುಂಬಿರುವಂತಹ ಕಾಲದಲ್ಲಿ, ನಿರ್ಮಾಣ ಕಾರ್ಯಗಳು ಅಭೂತಪೂರ್ವ ವೇಗವನ್ನು ಪಡೆದುಕೊಂಡಿರುವಾಗ, ಕಾಶ್ಮೀರದಲ್ಲಿ ಶಾಂತಿ ಮರುಕಳಿಸುತ್ತಿರುವ ಇಂತಹ ಸಮಯದಲ್ಲಿ, ಪ್ರಜಾಪ್ರಭುತ್ವ ಬಲಿಷ್ಠಗೊಳ್ಳುತ್ತಿರುವಾಗ, ಪ್ರವಾಸಿಗರ ಸಂಖ್ಯೆಯಲ್ಲಿ ದಾಖಲೆಯ ಏರಿಕೆ ಕಂಡುಬರುತ್ತಿರುವಾಗ, ಜನರ ಆದಾಯ ಹೆಚ್ಚುತ್ತಿರುವಾಗ, ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿದ್ದಾಗ, ದೇಶದ ಶತ್ರುಗಳು, ಜಮ್ಮು ಮತ್ತು ಕಾಶ್ಮೀರದ ವೈರಿಗಳಿಗೆ ಇದನ್ನು ಸಹಿಸಲಾಗಲಿಲ್ಲ. ಭಯೋತ್ಪಾದಕರು ಮತ್ತಷ್ಟು ಭಯೋತ್ಪಾದನೆ ಹೆಚ್ಚಿಸಲು ಬಯಸುತ್ತಿದ್ದಾರೆ. ಕಾಶ್ಮೀರವನ್ನು ಮತ್ತೆ ನಾಶಮಾಡಲು ಹುನ್ನಾರದಿಂದ ಇಷ್ಟು ದೊಡ್ಡ ಘಟನೆ ನಡೆಯುವಂತೆ ಪಿತೂರಿ ನಡೆಸಿದರು. ದೇಶದ ಏಕತೆ, 140 ಕೋಟಿ ಭಾರತೀಯರ ಒಗ್ಗಟ್ಟು, ಭಯೋತ್ಪಾದನೆಯ ವಿರುದ್ಧದ ಈ ಯುದ್ಧದಲ್ಲಿ ನಮ್ಮ ದೊಡ್ಡ ಶಕ್ತಿಯಾಗಿದೆ. ಈ ಒಗ್ಗಟ್ಟೆ ಭಯೋತ್ಪಾದನೆಯ ವಿರುದ್ಧದ ನಮ್ಮ ಹೋರಾಟದಲ್ಲಿ ನಿರ್ಣಾಯಕ ಪಾತ್ರವಾಹಿಸಲಿದೆ. ದೇಶ ಎದುರಿಸುತ್ತಿರುವ ಈ ಸವಾಲನ್ನು ಎದುರಿಸಲು ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿಕೊಳ್ಳಬೇಕು. ಒಂದು ರಾಷ್ಟ್ರ ರೂಪದಲ್ಲಿ ಬಲವಾದ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು. ಈ ಭಯೋತ್ಪಾದಕ ದಾಳಿಯ ನಂತರ ಸಂಪೂರ್ಣ ದೇಶ ಒಕ್ಕೊರಲಿನಿಂದ ಧ್ವನಿಯೆತ್ತಿರುವುದನ್ನು ಇಂದು ಜಗತ್ತೇ ನೋಡುತ್ತಿದೆ.ಸೂಫಿ ಸಂಪ್ರದಾಯವು ಭಾರತದಲ್ಲಿ ತನಗಾಗಿ ಒಂದು ವಿಶಿಷ್ಟ ಗುರುತನ್ನು ಸೃಷ್ಟಿಸಿಕೊಂಡಿದೆ: ಜಹಾನ್-ಎ-ಖುಸ್ರೌನಲ್ಲಿ ಪ್ರಧಾನಿ
February 28th, 07:31 pm
ಪ್ರಧಾನಿ ಮೋದಿ ಅವರು ಜಹಾನ್-ಎ-ಖುಸ್ರೌ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾರತದಲ್ಲಿ ಸೂಫಿ ಸಂಪ್ರದಾಯದ ವಿಶಿಷ್ಟ ಗುರುತನ್ನು ಒತ್ತಿ ಹೇಳಿದರು. ಹಜರತ್ ಖುಸ್ರೌ ಭಾರತವನ್ನು ಎಲ್ಲಾ ಪ್ರಮುಖ ರಾಷ್ಟ್ರಗಳಿಗಿಂತ ಶ್ರೇಷ್ಠವೆಂದು ಬಣ್ಣಿಸಿದರು ಮತ್ತು ಸಂಸ್ಕೃತವನ್ನು ವಿಶ್ವದ ಅತ್ಯುತ್ತಮ ಭಾಷೆ ಎಂದು ಪರಿಗಣಿಸಿದರು ಎಂದು ಪ್ರಧಾನಿ ಹೇಳಿದರು.ಜಹಾನ್-ಎ-ಖುಸ್ರೌ 2025 ರ ಸೂಫಿ ಸಂಗೀತ ಉತ್ಸವದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದರು
February 28th, 07:30 pm
ಪ್ರಧಾನಿ ಮೋದಿ ಜಹಾನ್-ಎ-ಖುಸ್ರೌ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾರತದಲ್ಲಿ ಸೂಫಿ ಸಂಪ್ರದಾಯದ ವಿಶಿಷ್ಟ ಗುರುತನ್ನು ಒತ್ತಿ ಹೇಳಿದರು. ಹಜರತ್ ಖುಸ್ರೌ ಭಾರತವನ್ನು ಎಲ್ಲಾ ಪ್ರಮುಖ ರಾಷ್ಟ್ರಗಳಿಗಿಂತ ಶ್ರೇಷ್ಠವೆಂದು ಬಣ್ಣಿಸಿದರು ಮತ್ತು ಸಂಸ್ಕೃತವನ್ನು ವಿಶ್ವದ ಅತ್ಯುತ್ತಮ ಭಾಷೆ ಎಂದು ಪರಿಗಣಿಸಿದರು ಎಂದು ಪ್ರಧಾನಿ ಹೇಳಿದರು.ಕ್ಯಾಥೊಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್ ಮಸ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 23rd, 09:24 pm
ಕ್ರಿಸ್ ಮಸ್ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ, ನನ್ನ ಎಲ್ಲ ದೇಶವಾಸಿಗಳಿಗೆ ಮತ್ತು ವಿಶೇಷವಾಗಿ ವಿಶ್ವದಾದ್ಯಂತ ಇರುವ ಕ್ರಿಶ್ಚಿಯನ್ ಸಮುದಾಯಕ್ಕೆ ಹಾರ್ದಿಕ ಶುಭಾಶಯಗಳು. ಮೆರ್ರಿ ಕ್ರಿಸ್ ಮಸ್!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕ್ಯಾಥೊಲಿಕ್ ಬಿಷಫ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗವಹಿಸಿದರು
December 23rd, 09:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಿ.ಬಿ.ಸಿ.ಐ ಕೇಂದ್ರದ ಆವರಣದಲ್ಲಿ ಕ್ಯಾಥೊಲಿಕ್ ಬಿಷಫ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿ.ಬಿ.ಸಿ.ಐ.) ಆಯೋಜಿಸಿದ್ದ ಕ್ರಿಸ್‌ಮಸ್ ಆಚರಣೆಯಲ್ಲಿ ಭಾಗವಹಿಸಿದ್ದರು. ಭಾರತದ ಕ್ಯಾಥೊಲಿಕ್ ಚರ್ಚ್‌ನ ಪ್ರಧಾನ ಕಚೇರಿಯಲ್ಲಿ ಪ್ರಧಾನಿಯೊಬ್ಬರು ಇಂತಹ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಇದೇ ಮೊದಲು. ಕಾರ್ಡಿನಲ್‌ಗಳು, ಬಿಷಪ್‌ಗಳು ಮತ್ತು ಚರ್ಚ್‌ನ ಪ್ರಮುಖ ನಾಯಕರು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಪ್ರಮುಖ ನಾಯಕರೊಂದಿಗೆ ಪ್ರಧಾನಿ ಸಂವಾದ ನಡೆಸಿದರು.ಕಬ್ಬು ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಿಜೆಪಿ ಸರ್ಕಾರ ಶ್ರದ್ಧೆಯಿಂದ ನಿಭಾಯಿಸಿದೆ: ಪಿಲಿಭಿತ್‌ನಲ್ಲಿ ಪ್ರಧಾನಿ ಮೋದಿ
April 09th, 11:00 am
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ನೆರೆದಿದ್ದ ಜನರ ಮೇಲೆ ತಮ್ಮ ಪ್ರೀತಿ ಮತ್ತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ನಗರಕ್ಕೆ ಆಗಮಿಸಿದ್ದನ್ನು ಸಂಭ್ರಮಿಸಲು ಜನಸಾಗರವೇ ನೆರೆದಿತ್ತು. ಪ್ರಧಾನಮಂತ್ರಿ ಮೋದಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಉತ್ತರ ಪ್ರದೇಶದ ಅವರ ದೃಷ್ಟಿಕೋನವನ್ನು ಪ್ರೇಕ್ಷಕರೊಂದಿಗೆ ಚರ್ಚಿಸಿದರು. ಈಗ ಜಗತ್ತು ಎದುರಿಸುತ್ತಿರುವ ವಿವಿಧ ತೊಂದರೆಗಳ ನಡುವೆ, ಭಾರತವು ಸಾಧಿಸಲು ಅಸಾಧ್ಯವಾದುದು ಯಾವುದೂ ಇಲ್ಲ ಎಂದು ತೋರಿಸುತ್ತಿದೆ ಎಂದು ಪ್ರಧಾನಿ ಹೇಳಿದರು.ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಉತ್ಸಾಹದಿಂದ ಮಾತನಾಡಿದರು
April 09th, 10:42 am
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ನೆರೆದಿದ್ದ ಜನರ ಮೇಲೆ ತಮ್ಮ ಪ್ರೀತಿ ಮತ್ತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ನಗರಕ್ಕೆ ಆಗಮಿಸಿದ್ದನ್ನು ಸಂಭ್ರಮಿಸಲು ಜನಸಾಗರವೇ ನೆರೆದಿತ್ತು. ಪ್ರಧಾನಮಂತ್ರಿ ಮೋದಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಉತ್ತರ ಪ್ರದೇಶದ ಅವರ ದೃಷ್ಟಿಕೋನವನ್ನು ಪ್ರೇಕ್ಷಕರೊಂದಿಗೆ ಚರ್ಚಿಸಿದರು. ಈಗ ಜಗತ್ತು ಎದುರಿಸುತ್ತಿರುವ ವಿವಿಧ ತೊಂದರೆಗಳ ನಡುವೆ, ಭಾರತವು ಸಾಧಿಸಲು ಅಸಾಧ್ಯವಾದುದು ಯಾವುದೂ ಇಲ್ಲ ಎಂದು ತೋರಿಸುತ್ತಿದೆ ಎಂದು ಪ್ರಧಾನಿ ಹೇಳಿದರು.ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಮೊದಲ ಎರಡು ಪಂದ್ಯಗಳನ್ನು ಗೆದ್ದ ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ
October 11th, 11:14 pm
ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಮೊದಲ ಎರಡು ಪಂದ್ಯಗಳನ್ನು ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ವಿರುದ್ಧ ಗೆದ್ದ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಗ್ರೀಸ್‌ನ ಅಥೆನ್ಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
August 25th, 09:30 pm
ಸಂಭ್ರಮದ ವಾತಾವರಣ, ಹಬ್ಬದ ಉತ್ಸಾಹ ಇದ್ದಾಗ, ಥಟ್ಟನೆ ಯಾರೊಬ್ಬರೂ ತಮ್ಮ ಕುಟುಂಬ ಸದಸ್ಯರ ನಡುವೆ ಇರಲು ಬಯಸುತ್ತಾರೆ. ನಾನು ಕೂಡ ಇಂದು ನನ್ನ ಕುಟುಂಬ ಸದಸ್ಯರ ನಡುವೆ ಬಂದಿದ್ದೇನೆ. ಇದು ಶ್ರಾವಣ ಮಾಸ. ಒಂದು ರೀತಿಯಲ್ಲಿ ಶಿವನ ತಿಂಗಳು ಎಂದು ಪರಿಗಣಿಸಲಾಗಿದೆ, ಮತ್ತು ನಮ್ಮ ದೇಶವು ಈ ಪವಿತ್ರ ತಿಂಗಳಲ್ಲಿ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ಚಂದ್ರನ ಕತ್ತಲ ವಲಯವಾದ ದಕ್ಷಿಣ ಧ್ರುವದಲ್ಲಿ ಇಳಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ. ಭಾರತವು ಚಂದ್ರನ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದೆ, ಭಾರತ ತನ್ನ ಸಾಮರ್ಥ್ಯವನ್ನು ಇಡೀ ಜಗತ್ತಿಗೆ ತೋರಿಸಿದೆ. ಪ್ರಪಂಚದಾದ್ಯಂತ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ಜನರು ತಮ್ಮ ಶುಭ ಹಾರೈಕೆಗಳನ್ನು ಕಳುಹಿಸುತ್ತಿದ್ದಾರೆ. ಜನರು ನಿಮ್ಮನ್ನು ಅಭಿನಂದಿಸುತ್ತಿದ್ದಾರೆ ಎಂದು ನಾನು ದೃಢವಾಗಿ ನಂಬುತ್ತೇನೆ, ಹೌದಲ್ಲವೇ? ನೀವು ಸಹ ಅನೇಕ ಅಭಿನಂದನೆಗಳನ್ನು ಸ್ವೀಕರಿಸುತ್ತಿದ್ದೀರಿ, ಅಲ್ಲವೇ? ಪ್ರತಿಯೊಬ್ಬ ಭಾರತೀಯನಿಗೂ ಅಭಿನಂದನೆಗಳು ಹರಿದುಬರುತ್ತಿವೆ. ಇಡೀ ಸಾಮಾಜಿಕ ಮಾಧ್ಯಮವು ಅಭಿನಂದನಾ ಸಂದೇಶಗಳಿಂದ ತುಂಬಿ ಹೋಗಿದೆ. ಯಶಸ್ಸು ತುಂಬಾ ಮಹತ್ವದ್ದಾಗಿದ್ದಾಗ, ಆ ಯಶಸ್ಸಿನ ಉತ್ಸಾಹವು ಎಲ್ಲೆಡೆ ಸಮಾನವಾಗಿರುತ್ತದೆ. ನೀವು ವಿಶ್ವದ ಯಾವ ಮೂಲೆಯಲ್ಲಾದರೂ ವಾಸಿಸಬಹುದು, ಆದರೆ ಭಾರತವು ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ ಎಂದು ನಿಮ್ಮ ಮುಖವೇ ನನಗೆ ಹೇಳುತ್ತಿದೆ. ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಹೃದಯದಲ್ಲಿ ಮಿಡಿಯುತ್ತದೆ, ಭಾರತ ನಿಮ್ಮ ಮನದಲ್ಲಿ ಮಿಡಿಯುತ್ತದೆ. ಇಂದು, ನಾನು ನಿಮ್ಮೆಲ್ಲರ ನಡುವೆ ಗ್ರೀಸ್‌ನಲ್ಲಿದ್ದೇನೆ, ಮತ್ತೊಮ್ಮೆ, ಚಂದ್ರಯಾನದ ಅದ್ಭುತ ಯಶಸ್ಸಿಗಾಗಿ ನಾನು ಎಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಅಥೆನ್ಸ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
August 25th, 09:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಆಗಸ್ಟ್ 25ರಂದು ಅಥೆನ್ಸ್ ನ ಅಥೆನ್ಸ್ ಕನ್ಸರ್ವೇಟರಿಯಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಭಾಷಣ ಮಾಡಿದರು.PM Modi interacts with the Indian community in Paris
July 13th, 11:05 pm
PM Modi interacted with the Indian diaspora in France. He highlighted the multi-faceted linkages between India and France. He appreciated the role of Indian community in bolstering the ties between both the countries.The PM also mentioned the strides being made by India in different domains and invited the diaspora members to explore opportunities of investing in India.23ನೇ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 04th, 12:30 pm
23ನೇ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗಸಭೆಗೆ ನಿಮ್ಮೆಲ್ಲರನ್ನು ಇಂದು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಕಳೆದ 2 ದಶಕಗಳಲ್ಲಿ ಎಸ್‌ಸಿಒ ಸಂಘಟನೆಯು ಇಡೀ ಏಷ್ಯಾ ವಲಯದಲ್ಲಿ ಶಾಂತಿ, ಸಮೃದ್ಧಿ ಮತ್ತು ಅಭಿವೃದ್ಧಿಗೆ ಮಹತ್ವದ ವೇದಿಕೆಯಾಗಿ ಹೊರಹೊಮ್ಮಿದೆ. ಭಾರತ ಮತ್ತು ಏಷ್ಯಾ ಭಾಗದ ನಡುವೆ ಇರುವ ಸಾವಿರಾರು ವರ್ಷಗಳ ಸಾಂಸ್ಕೃತಿಕ ಮತ್ತು ಜನರಿಂದ ಜನರ ಸಂಬಂಧಗಳು ನಮ್ಮ ಹಂಚಿಕೆಯ ಪರಂಪರೆಗೆ ಜೀವಂತ ಸಾಕ್ಷಿಯಾಗಿವೆ. ನಾವು ಈ ಪ್ರದೇಶವನ್ನು ವಿಸ್ತೃತ ನೆರೆಹೊರೆ ಎಂದು ನೋಡುವುದಿಲ್ಲ, ಆದರೆ ವಿಶಾಲ ಕುಟುಂಬ ಎಂದು ನೋಡುತ್ತೇವೆ.`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
March 22nd, 03:34 pm
ಇಂದು ಬಹಳ ವಿಶೇಷ ಮತ್ತು ಪವಿತ್ರ ದಿನ. 'ಹಿಂದೂ ಕ್ಯಾಲೆಂಡರ್' ಹೊಸ ವರ್ಷ ಇಂದಿನಿಂದ ಪ್ರಾರಂಭವಾಗಿದೆ. ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೆ ʻವಿಕ್ರಮ್ ಸಂವತ್ 2080ʼ ಶುಭಾಶಯಗಳನ್ನು ತಿಳಿಸಲು ಬಯಸುತ್ತೇನೆ. ನಮ್ಮ ವಿಶಾಲ ಮತ್ತು ವೈವಿಧ್ಯಮಯ ದೇಶದಲ್ಲಿ ಶತಮಾನಗಳಿಂದ ವಿಭಿನ್ನ ಕ್ಯಾಲೆಂಡರ್‌ಗಳು ಚಾಲ್ತಿಯಲ್ಲಿವೆ. ಕೊಲ್ಲಂ ಅವಧಿಯ ಮಲಯಾಳಂ ಕ್ಯಾಲೆಂಡರ್ ಇದೆ, ತಮಿಳು ಕ್ಯಾಲೆಂಡರ್ ಇದೆ, ಇದು ನೂರಾರು ವರ್ಷಗಳಿಂದ ಭಾರತಕ್ಕೆ ದಿನಾಂಕ ಮತ್ತು ಸಮಯವನ್ನು ತಿಳಿಸುತ್ತಿದೆ. ʻವಿಕ್ರಮ್ ಸಂವತ್ʼ ಕೂಡ 2080 ವರ್ಷಗಳ ಹಿಂದಿನಿಂದ ಇದೆ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಸ್ತುತ 2023 ಅನ್ನು ಸೂಚಿಸುತ್ತದೆ. ಆದರೆ ʻವಿಕ್ರಮ್ ಸಂವತ್ʼ ಅದಕ್ಕಿಂತಲೂ 57 ವರ್ಷಗಳ ಹಿಂದೆ ಪ್ರಾರಂಭವಾಯಿತು. ಈ ಶುಭ ದಿನದಂದು ದೂರಸಂಪರ್ಕ, ʻಐಸಿಟಿʼ ಮತ್ತು ಸಂಬಂಧಿತ ಆವಿಷ್ಕಾರಗಳಲ್ಲಿ ಹೊಸ ಆರಂಭ ಆಗುತ್ತಿರುವುದು ನನಗೆ ಸಂತೋಷ ತಂದಿದೆ. ಇಂದು ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼ(ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಲಾಯಿತು. ಇದಲ್ಲದೆ, ʻ6 ಜಿʼ ಪ್ರಯೋಗ ವೇದಿಕೆ (ಟೆಸ್ಟ್ ಬೆಡ್) ಅನ್ನು ಸಹ ಇಂದು ಪ್ರಾರಂಭಿಸಲಾಗಿದೆ. ಈ ತಂತ್ರಜ್ಞಾನಕ್ಕೆ ಸಂಬಂಧಿಸಿದ ನಮ್ಮ ʻವಿಷನ್ ಡಾಕ್ಯುಮೆಂಟ್ʼ ಅನ್ನು ಸಹ ಅನಾವರಣಗೊಳಿಸಲಾಗಿದೆ. ಇದು ಡಿಜಿಟಲ್ ಇಂಡಿಯಾದಲ್ಲಿ ಹೊಸ ಶಕ್ತಿಯನ್ನು ತರುವುದಲ್ಲದೆ, ದಕ್ಷಿಣ ಏಷ್ಯಾ ಮತ್ತು ಜಗತ್ತಿನ ದಕ್ಷಿದದ ದೇಶಗಳಿಗೆ ಪರಿಹಾರಗಳು ಮತ್ತು ನಾವೀನ್ಯತೆಗಳನ್ನು ಒದಗಿಸುತ್ತದೆ. ಇದು ಅನೇಕ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ, ವಿಶೇಷವಾಗಿ ನಮ್ಮ ಶಿಕ್ಷಣ ತಜ್ಞರು, ಆವಿಷ್ಕಾರಕರು, ನವೋದ್ಯಮಗಳು ಮತ್ತು ಉದ್ಯಮಕ್ಕೆ ಅವಕಾಶಗಳ ಮಹಾಪೂರವೇ ತೆರೆದುಕೊಳ್ಳಲಿದೆ.`ಐಟಿಯು’ ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ
March 22nd, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ನೂತನ ʻಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟʼದ (ಐಟಿಯು) ಪ್ರದೇಶ ಕಚೇರಿ ಮತ್ತು ಆವಿಷ್ಕಾರ ಕೇಂದ್ರವನ್ನು ಉದ್ಘಾಟಿಸಿದರು. ಪ್ರಧಾನಮಂತ್ರಿಯವರು ʻಭಾರತ್ 6ಜಿʼ ವಿಷನ್ ಡಾಕ್ಯುಮೆಂಟ್ ಅನ್ನು ಅನಾವರಣಗೊಳಿಸಿದರು ಜೊತೆಗೆ ʻ6ಜಿʼ ಸಂಶೋಧನೆ ಮತ್ತು ಅಭಿವೃದ್ಧಿ ಪ್ರಾಯೋಗಿಕ ವೇದಿಕೆಗೆ ಚಾಲನೆ ನೀಡಿದರು. 'ಕಾಲ್ ಬಿಫೋರ್ ಯು ಡಿಗ್' ಆ್ಯಪ್ ಅನ್ನು ಅವರು ಬಿಡುಗಡೆ ಮಾಡಿದರು. ʻಐಟಿಯುʼ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನಗಳಿಗಾಗಿ (ಐಸಿಟಿ) ವಿಶ್ವಸಂಸ್ಥೆಯ ವಿಶೇಷ ಸಂಸ್ಥೆಯಾಗಿದೆ. ಪ್ರದೇಶಿಕ ಕಚೇರಿ ಸ್ಥಾಪನೆಗಾಗಿ ಭಾರತವು ಮಾರ್ಚ್ 2022 ರಲ್ಲಿ ʻಐಟಿಯುʼನೊಂದಿಗೆ ಆತಿಥೇಯ ರಾಷ್ಟ್ರಗಳ ಒಪ್ಪಂದಕ್ಕೆ ಸಹಿ ಹಾಕಿತು. ಇದು ಭಾರತ, ನೇಪಾಳ, ಭೂತಾನ್, ಬಾಂಗ್ಲಾದೇಶ, ಶ್ರೀಲಂಕಾ, ಮಾಲ್ಡೀವ್ಸ್, ಅಫ್ಘಾನಿಸ್ತಾನ ಮತ್ತು ಇರಾನ್‌ಗೆ ಸೇವೆ ಸಲ್ಲಿಸಲಿದೆ, ರಾಷ್ಟ್ರಗಳ ನಡುವೆ ಸಮನ್ವಯವನ್ನು ಹೆಚ್ಚಿಸಲಿದೆ ಮತ್ತು ಈ ವಲಯದಲ್ಲಿ ಪರಸ್ಪರ ಲಾಭದಾಯಕ ಆರ್ಥಿಕ ಸಹಕಾರವನ್ನು ಉತ್ತೇಜಿಸುತ್ತದೆ.