ಆಪರೇಷನ್ ಸಿಂದೂರ ಕುರಿತ ವಿಶೇಷ ಚರ್ಚೆಯಲ್ಲಿ ಲೋಕಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 29th, 05:32 pm

ಈ ಅಧಿವೇಶನದ ಆರಂಭದಲ್ಲೇ ನಾನು ಮಾಧ್ಯಮ ಮಿತ್ರರೊಂದಿಗೆ ಮಾತನಾಡುವಾಗ, ಎಲ್ಲಾ ಸಂಸದರಿಗೂ ಒಂದು ಮನವಿ ಮಾಡಿದ್ದೆ. ಈ ಅಧಿವೇಶನವು ಭಾರತದ ವಿಜಯಗಳ ಆಚರಣೆಯಾಗಿದೆ ಎಂದು ನಾನು ಹೇಳಿದ್ದೆ. ಈ ಸಂಸತ್ತಿನ ಅಧಿವೇಶನವು ಭಾರತದ ಕೀರ್ತಿಯನ್ನು ಬಣ್ಣಿಸುವ ಅಧಿವೇಶನವಾಗಿದೆ.

ʻಆಪರೇಷನ್ ಸಿಂದೂರʼ ಕುರಿತ ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

July 29th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತದ ದಿಟ್ಟ, ಯಶಸ್ವಿ ಮತ್ತು ನಿರ್ಣಾಯಕ ಕಾರ್ಯಾಚರಣೆ 'ಆಪರೇಷನ್ ಸಿಂದೂರ' ಕುರಿತ ವಿಶೇಷ ಚರ್ಚೆಯ ಸಂದರ್ಭದಲ್ಲಿ ಲೋಕಸಭೆಯನ್ನುದ್ದೇಶಿಸಿ ಮಾತನಾಡಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಅಧಿವೇಶನದ ಆರಂಭದಲ್ಲಿ ಮಾಧ್ಯಮಗಳ ಜೊತೆಗಿನ ತಮ್ಮ ಸಂವಾದವನ್ನು ಸ್ಮರಿಸಿದರು, ಅಧಿವೇಶನವನ್ನು ಭಾರತದ ವಿಜಯಗಳ ಆಚರಣೆ ಮತ್ತು ಭಾರತದ ವೈಭವಕ್ಕೆ ಗೌರವ ಎಂದು ಪರಿಗಣಿಸುವಂತೆ ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರಿಗೆ ಮನವಿ ಮಾಡಿದ್ದಾಗಿ ಹೇಳಿದರು.

ಆದಂಪುರ ವಾಯುನೆಲೆಯಲ್ಲಿ ವೀರ ವಾಯುಪಡೆ ಯೋಧರು ಮತ್ತು ಸಮರ ವೀರರೊಂದಿಗೆ ಪ್ರಧಾನಮಂತ್ರಿ ಸಂವಾದ

May 13th, 03:45 pm

ಈ ಘೋಷಣೆಯ ಶಕ್ತಿಯನ್ನು ಜಗತ್ತು ಇದೀಗವಷ್ಟೇ ನೋಡಿದೆ. ಭಾರತ್ ಮಾತಾ ಕಿ ಜೈ ಎಂಬುದು ಕೇವಲ ಘೋಷಣೆಯಲ್ಲ, ಭಾರತ ಮಾತೆಯ ಗೌರವ ಮತ್ತು ಘನತೆಗಾಗಿ ತನ್ನ ಪ್ರಾಣವನ್ನೇ ಪಣಕ್ಕಿಡುವ ದೇಶದ ಪ್ರತಿಯೊಬ್ಬ ಸೈನಿಕನ ಪ್ರಮಾಣವಚನ ಇದಾಗಿದೆ. ದೇಶಕ್ಕಾಗಿ ಬದುಕಲು ಬಯಸುವ, ಏನನ್ನಾದರೂ ಸಾಧಿಸಲು ಬಯಸುವ ದೇಶದ ಪ್ರತಿಯೊಬ್ಬ ನಾಗರಿಕನ ಧ್ವನಿ ಇದಾಗಿದೆ. ಭಾರತ್ ಮಾತಾ ಕಿ ಜೈ ಎಂಬುದು ಯುದ್ಧಭೂಮಿಯಲ್ಲಿ ಮತ್ತು ಕಾರ್ಯಾಚರಣೆಯಲ್ಲಿ ಪ್ರತಿಧ್ವನಿಸುತ್ತದೆ. ಭಾರತದ ಸೈನಿಕರು ಭಾರತ್ ಮಾತಾ ಕಿ ಜೈ ಎಂದು ಜಪಿಸಿದಾಗ, ಶತ್ರುಗಳ ಹೃದಯ ನಡುಗುತ್ತದೆ. ನಮ್ಮ ಡ್ರೋನ್‌ಗಳು ಶತ್ರುಗಳ ಕೋಟೆಯ ಗೋಡೆಗಳನ್ನು ಉರುಳಿಸಿದಾಗ, ನಮ್ಮ ಕ್ಷಿಪಣಿಗಳು ಭಾರಿ ಶಬ್ದದೊಂದಿಗೆ ಗುರಿ ತಲುಪಿದಾಗ, ಶತ್ರು ಕೇಳುತ್ತಾನೆ - ಭಾರತ್ ಮಾತಾ ಕಿ ಜೈ! ಘೋಷಣೆಯನ್ನ. ರಾತ್ರಿಯ ಕಗ್ಗತ್ತಲೆಯಲ್ಲೂ ನಾವು ಸೂರ್ಯನನ್ನು ಬೆಳಗಿದಾಗ, ಶತ್ರು ನೋಡುತ್ತಾನೆ - ಭಾರತ್ ಮಾತಾ ಕಿ ಜೈ! ನಮ್ಮ ಪಡೆಗಳು ಪರಮಾಣು ಬೆದರಿಕೆಯನ್ನು ಹುಸಿಗೊಳಿಸಿದಾಗ, ಆಕಾಶದಿಂದ ಭೂಗತ ಲೋಕಕ್ಕೆ ಒಂದೇ ಒಂದು ವಿಷಯ ಪ್ರತಿಧ್ವನಿಸುತ್ತದೆ, ಅದೇ - ಭಾರತ್ ಮಾತಾ ಕಿ ಜೈ!

ಆದಂಪುರ ವಾಯುಪಡೆ ನಿಲ್ದಾಣದಲ್ಲಿ ಧೈರ್ಯಶಾಲಿ ವಾಯುಪಡೆ ಯೋಧರು ಮತ್ತು ಸೈನಿಕರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

May 13th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆದಂಪುರದ ವಾಯುಪಡೆ ನಿಲ್ದಾಣದಲ್ಲಿಂದು ವೀರ ವಾಯುಪಡೆ ಯೋಧರು ಮತ್ತು ಸೈನಿಕರನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಅವರ ಜತೆ ಮಾತನಾಡಿದ ಅವರು, 'ಭಾರತ್ ಮಾತಾ ಕಿ ಜೈ' ಘೋಷಣೆಯ ಶಕ್ತಿಯನ್ನು ಜಗತ್ತು ಇದೀಗಷ್ಟೇ ಕಂಡಿದೆ. ಇದು ಕೇವಲ ಮಂತ್ರವಲ್ಲ, ಭಾರತ ಮಾತೆಯ ಘನತೆ ಎತ್ತಿಹಿಡಿಯಲು ತಮ್ಮ ಪ್ರಾಣವನ್ನೇ ಪಣಕ್ಕಿಡುವ ಪ್ರತಿಯೊಬ್ಬ ಸೈನಿಕನು ತೆಗೆದುಕೊಳ್ಳುವ ಗಂಭೀರ ಪ್ರಮಾಣವಚನ ಇದಾಗಿದೆ. ಈ ಘೋಷಣೆಯು ರಾಷ್ಟ್ರಕ್ಕಾಗಿ ಬದುಕಲು ಮತ್ತು ಅರ್ಥಪೂರ್ಣ ಕೊಡುಗೆ ನೀಡಲು ಬಯಸುವ ಪ್ರತಿಯೊಬ್ಬ ನಾಗರಿಕನ ಧ್ವನಿಯಾಗಿದೆ. 'ಭಾರತ್ ಮಾತಾ ಕಿ ಜೈ' ಯುದ್ಧಭೂಮಿಯಲ್ಲಿ ಮತ್ತು ನಿರ್ಣಾಯಕ ಕಾರ್ಯಾಚರಣೆಗಳಲ್ಲಿ ಪ್ರತಿಧ್ವನಿಸುತ್ತದೆ. ಭಾರತೀಯ ಸೈನಿಕರು 'ಭಾರತ್ ಮಾತಾ ಕಿ ಜೈ' ಎಂದು ಜಪಿಸಿದಾಗ, ಅದು ಶತ್ರುಗಳ ಬೆನ್ನುಮೂಳೆಯಲ್ಲಿ ನಡುಕ ಉಂಟುಮಾಡುತ್ತದೆ. ಅವರು ಭಾರತದ ಸೇನಾ ಶಕ್ತಿಯನ್ನು ಶ್ಲಾಘಿಸಿದ ಅವರು, ಭಾರತೀಯ ಡ್ರೋನ್‌ಗಳು ಶತ್ರುಗಳ ಕೋಟೆಗಳನ್ನು ಕೆಡವಿದಾಗ ಮತ್ತು ಕ್ಷಿಪಣಿಗಳು ನಿಖರವಾಗಿ ದಾಳಿ ಮಾಡಿದಾಗ, ಶತ್ರುವು 'ಭಾರತ್ ಮಾತಾ ಕಿ ಜೈ' ಎಂಬ ಒಂದೇ ಒಂದು ಪದ ಕೇಳುತ್ತಾನೆ. ಅತ್ಯಂತ ಕತ್ತಲೆಯ ರಾತ್ರಿಗಳಲ್ಲೂ ಭಾರತವು ಆಕಾಶವನ್ನು ಬೆಳಗಿಸುವ ಸಾಮರ್ಥ್ಯ ಹೊಂದಿದೆ, ಶತ್ರುಗಳು ರಾಷ್ಟ್ರದ ಅದಮ್ಯ ಚೈತನ್ಯವನ್ನು ವೀಕ್ಷಿಸುವಂತೆ ಮಾಡಿದೆ. ಭಾರತದ ಪಡೆಗಳು ಪರಮಾಣು ಬೆದರಿಕೆಯನ್ನು ಕಳಚಿದಾಗ, 'ಭಾರತ್ ಮಾತಾ ಕಿ ಜೈ' ಎಂಬ ಸಂದೇಶವು ಆಕಾಶ ಮತ್ತು ಆಳದಲ್ಲಿ ಪ್ರತಿಧ್ವನಿಸಿದೆ ಎಂದು ಅವರು ಘೋಷಿಸಿದರು.

ಪ್ರಧಾನಮಂತ್ರಿಯವರು ಎ ಎಫ್ ಎಸ್ ಆದಂಪುರಕ್ಕೆ ಭೇಟಿ ನೀಡಿ ವೀರ ವಾಯು ಯೋಧರು ಮತ್ತು ಸೈನಿಕರನ್ನು ಭೇಟಿಯಾದರು

May 13th, 01:04 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎ ಎಫ್ ಎಸ್ ಆದಂಪುರಕ್ಕೆ ಭೇಟಿ ನೀಡಿ ನಮ್ಮ ವೀರ ವಾಯು ಯೋಧರು ಮತ್ತು ಸೈನಿಕರನ್ನು ಭೇಟಿಯಾದರು. ಧೈರ್ಯ, ದೃಢತೆ ಮತ್ತು ನಿರ್ಭೀತಿಯನ್ನು ಸಾರುವ ಜನರೊಂದಿಗೆ ಇರುವುದು ಬಹಳ ವಿಶೇಷ ಅನುಭವವಾಗಿತ್ತು ಎಂದು ಶ್ರೀ ಮೋದಿ ಹೇಳಿದರು.