ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ಅವಘಡದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

June 13th, 02:14 pm

ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ದುರ್ಘಟನೆಯಲ್ಲಿ ಅನೇಕರು ಮೃತಪಟ್ಟಿದ್ದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿಗೆ ಭೇಟಿ ನೀಡಿದರು. ಸಂತ್ರಸ್ತ ಕುಟುಂಬಗಳ ಜೊತೆಗೆ ನಿಲ್ಲುವುದಾಗಿ ಹೇಳಿರುವ ಶ್ರೀ ಮೋದಿ ಅವರು, ವಿಮಾನದಲ್ಲಿದ್ದವರ ಪೈಕಿ ಬದುಕುಳಿದ ಏಕೈಕ ವ್ಯಕ್ತಿ ಹಾಗೂ ಇತರ ಗಾಯಗೊಂಡವರನ್ನು ಭೇಟಿ ಮಾಡಿದರು ಹಾಗೂ ಈ ಸಂಕಷ್ಟದ ಸಮಯದಲ್ಲಿ ರಾಷ್ಟ್ರದ ದೃಢ ಬೆಂಬಲದ ಭರವಸೆ ನೀಡಿದರು.

ಅಹಮದಾಬಾದ್ ವಿಮಾನ ದುರಂತದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

June 13th, 10:53 am

ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಅನೇಕರು ಮೃತಪಟ್ಟಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳ ನೋವು ಮತ್ತು ನಷ್ಟದ ಅರಿವಿದೆ ಎಂದು ಅವರು ಸಂತಾಪ ಸೂಚಿಸಿದ್ದಾರೆ.

ಅಹಮದಾಬಾದ್ ದುರಂತದ ಬಗ್ಗೆ ಪ್ರಧಾನಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ, ತ್ವರಿತ ಮತ್ತು ಪರಿಣಾಮಕಾರಿ ನೆರವಿನ ಭರವಸೆ ನೀಡಿದ್ದಾರೆ

June 12th, 04:15 pm

ಅಹಮದಾಬಾದ್ ನಲ್ಲಿ ಇಂದು ಸಂಭವಿಸಿದ ದುರಂತದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ. ಈ ದುರಂತವು ಇಡೀ ರಾಷ್ಟ್ರವನ್ನು ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಕ್ಕೆ ತಳ್ಳಿದೆ ಮತ್ತು ಇದು ಪದಗಳಲ್ಲಿ ಹೇಳಲಾಗದಷ್ಟು ಹೃದಯವಿದ್ರಾವಕವಾಗಿದೆ ಎಂದು ಅವರು ಹೇಳಿದ್ದಾರೆ.