“Maitri Parv” celebrates the friendship between India and Oman: PM Modi during community programme in Muscat
December 18th, 12:32 pm
While addressing a large gathering of members of the Indian community in Muscat, PM Modi remarked that co-existence and cooperation have been hallmarks of the Indian diaspora. He noted that over the last 11 years, India has witnessed transformational changes across perse fields. He reaffirmed India’s deep commitment to the welfare of the diaspora and invited students to participate in ISRO’s YUVIKA programme.Prime Modi addresses the Indian community in Oman
December 18th, 12:31 pm
While addressing a large gathering of members of the Indian community in Muscat, PM Modi remarked that co-existence and cooperation have been hallmarks of the Indian diaspora. He noted that over the last 11 years, India has witnessed transformational changes across perse fields. He reaffirmed India’s deep commitment to the welfare of the diaspora and invited students to participate in ISRO’s YUVIKA programme.RJD forced Congress to surrender its CM claim at gunpoint: PM Modi in Bhagalpur, Bihar
November 06th, 12:01 pm
In the Bhagalpur rally, PM Modi criticised RJD and Congress for never understanding the value of self-reliance or Swadeshi. He reminded the people that the Congress can never erase the stain of the Bhagalpur riots. Outlining NDA’s roadmap for progress, PM Modi said the government is working to make Bihar a hub for textiles, tourism and technology.No IIT, no IIM, no National Law University — a whole generation’s future was devoured by RJD’s leadership: PM Modi in Araria, Bihar
November 06th, 11:59 am
PM Modi addressed a large public gathering in Araria, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’PM Modi stirs up massive rallies with his addresses in Araria & Bhagalpur, Bihar
November 06th, 11:35 am
PM Modi addressed large public gatherings in Araria & Bhagalpur, Bihar, where people turned up in huge numbers to express their support for the NDA. Speaking with conviction, PM Modi said that the people of Bihar have already made up their minds – ‘Phir Ekbar, NDA Sarkar!’ನವ ರಾಯ್ ಪುರದಲ್ಲಿ ನಡೆದ ಛತ್ತೀಸ್ ಗಢ ರಾಜ್ಯ ರೂಪಿಕರಣದ ರಜತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 01st, 03:30 pm
ಛತ್ತೀಸ್ ಗಢದ ಗೌರವಾನ್ವಿತ ರಾಜ್ಯಪಾಲ ಶ್ರೀ ರಾಮೆನ್ ಡೇಕಾ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಹಿರಿಯ ಸಹೋದ್ಯೋಗಿಗಳು, ಶ್ರೀ ಜುವಾಲ್ ಓರಾಮ್ ಜಿ, ಶ್ರೀ ದುರ್ಗಾ ದಾಸ್ ಉಯಿಕೆ ಜಿ ಮತ್ತು ಶ್ರೀ ತೋಖಾನ್ ಸಾಹು ಜಿ, ರಾಜ್ಯ ವಿಧಾನಸಭೆಯ ಸ್ಪೀಕರ್ ಶ್ರೀ ರಮಣ್ ಸಿಂಗ್ ಜಿ, ಉಪಮುಖ್ಯಮಂತ್ರಿ ಶ್ರೀ ಅರುಣ್ ಸಾವೋ ಜಿ ಮತ್ತು ಶ್ರೀ ವಿಜಯ್ ಶರ್ಮಾ ಜಿ, ಸಚಿವರುಗಳೇ, ಸಾರ್ವಜನಿಕ ಪ್ರತಿನಿಧಿಗಳೇ ಮತ್ತು ಛತ್ತೀಸ್ ಗಢದ ಮೂಲೆ ಮೂಲೆಗಳಿಂದ ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೇ,ಛತ್ತೀಸ್ ಗಢ ರಜತ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
November 01st, 03:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವ ರಾಯ್ ಪುರದಲ್ಲಿ ಛತ್ತೀಸ್ ಗಢ ರಾಜ್ಯ ರಚನೆಯ 25ನೇ ವರ್ಷಾಚರಣೆಯ ಅಂಗವಾಗಿ ಛತ್ತೀಸ್ ಗಢ ರಜತ ಮಹೋತ್ಸವವನ್ನುದ್ದೇಶಿಸಿ ಭಾಷಣ ಮಾಡಿದರು. ರಸ್ತೆಗಳು, ಕೈಗಾರಿಕೆ, ಆರೋಗ್ಯ ರಕ್ಷಣೆ ಮತ್ತು ಇಂಧನದಂತಹ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡ 14,260 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಮತ್ತು ಪರಿವರ್ತಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್ ಗಢದ ಜನತೆಗೆ ಶುಭಾಶಯ ಕೋರಿದರು, ಇಂದು ಛತ್ತೀಸ್ ಗಢ ರಾಜ್ಯ ರಚನೆಯಾಗಿ 25 ವರ್ಷಗಳನ್ನು ಪೂರೈಸಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಛತ್ತೀಸ್ ಗಢದ ಎಲ್ಲಾ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.ದೇಶದಲ್ಲಿ ಸ್ನಾತಕೋತ್ತರ ಮತ್ತು ಪದವಿಪೂರ್ವ ವೈದ್ಯಕೀಯ ಶಿಕ್ಷಣ ಸಾಮರ್ಥ್ಯದ ಪ್ರಮುಖ ವಿಸ್ತರಣೆಗೆ ಸಂಪುಟ ಅನುಮೋದನೆ
September 24th, 05:52 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಪ್ರಸ್ತುತ ಅಸ್ತಿತ್ವದಲ್ಲಿರುವ ರಾಜ್ಯ ಸರ್ಕಾರ/ಕೇಂದ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳು/ಸ್ವತಂತ್ರ ಸ್ನಾತಕೋತ್ತರ ಸಂಸ್ಥೆಗಳು/ಸರ್ಕಾರಿ ಆಸ್ಪತ್ರೆಗಳ ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಕೇಂದ್ರೀಯ ಪ್ರಾಯೋಜಿತ ಯೋಜನೆಯ (ಸಿಎಸ್ಎಸ್) ಹಂತ-ಹಂತದ ಅನುಷ್ಠಾನಕ್ಕೆ ಅನುಮೋದನೆ ನೀಡಿದೆ. 5,000 ಸ್ನಾತಕೋತ್ತರ ಸೀಟುಗಳನ್ನು ಹೆಚ್ಚಿಸಲು ಮತ್ತು ಅಸ್ತಿತ್ವದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೇಲ್ದರ್ಜೆಗೇರಿಸುವ ಸಿಎಸ್ಎಸ್ ವಿಸ್ತರಣೆಗೆ ಅನುಮೋದನೆ ನೀಡಿದೆ. 5,023 ಎಂಬಿಬಿಎಸ್ ಸೀಟುಗಳನ್ನು ಹೆಚ್ಚಿಸಲು ಪ್ರತಿ ಸೀಟಿಗೆ ರೂ. 1.50 ಕೋಟಿಗಳ ಹೆಚ್ಚಿನ ವೆಚ್ಚದ ಮಿತಿಯನ್ನು ಹೊಂದಿಸಬೇಕಾಗುತ್ತದೆ. ಈ ಉಪಕ್ರಮವು ಗಮನಾರ್ಹವಾಗಿ: ಪದವಿಪೂರ್ವ ವೈದ್ಯಕೀಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ; ಹೆಚ್ಚುವರಿ ಸ್ನಾತಕೋತ್ತರ ಸೀಟುಗಳನ್ನು ರಚಿಸುವ ಮೂಲಕ ತಜ್ಞ ವೈದ್ಯರ ಲಭ್ಯತೆ; ಮತ್ತು ಸರ್ಕಾರಿ ವೈದ್ಯಕೀಯ ಸಂಸ್ಥೆಗಳಲ್ಲಿ ಹೊಸ ವಿಶೇಷತೆಗಳನ್ನು ಪರಿಚಯಿಸಲು ಅನುವು ಮಾಡಿಕೊಡುತ್ತದೆ. ಇದು ದೇಶದಲ್ಲಿ ವೈದ್ಯರ ಒಟ್ಟಾರೆ ಲಭ್ಯತೆಯನ್ನು ಬಲಪಡಿಸುತ್ತದೆ.ಅಸ್ಸಾಂನ ದರ್ರಾಂಗ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 14th, 11:30 am
ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ಅಸ್ಸಾಂ ಸರ್ಕಾರದ ಎಲ್ಲಾ ಸಚಿವರು, ಸಂಸತ್ ಸದಸ್ಯರು ಮತ್ತು ಶಾಸಕರು, ಇಲ್ಲಿರುವ ಸಾರ್ವಜನಿಕ ಪ್ರತಿನಿಧಿಗಳೆ, ನಿರಂತರ ಮಳೆಯ ನಡುವೆಯೂ ನಮ್ಮನ್ನು ಆಶೀರ್ವದಿಸಲು ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ – ನಿಮ್ಮೆಲ್ಲರಿಗೂ ಹೃತ್ಪೂರ್ವಕ ನಮಸ್ಕಾರ.ಅಸ್ಸಾಂನ ದರ್ರಾಂಗ್‌ನಲ್ಲಿ ಸುಮಾರು 6,500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ
September 14th, 11:00 am
ಆಪರೇಷನ್ ಸಿಂದೂರ್ ಯಶಸ್ಸಿನ ನಂತರ, ನಿನ್ನೆ ಮೊದಲ ಬಾರಿಗೆ ಅಸ್ಸಾಂಗೆ ಭೇಟಿ ನೀಡಿದ್ದಾಗಿ ಪ್ರಧಾನಮಂತ್ರಿ ಅವರು ಹೇಳಿದರು. ಕಾರ್ಯಾಚರಣೆಯ ಅದ್ಭುತ ಯಶಸ್ಸಿಗೆ ಮಾತೆ ಕಾಮಾಕ್ಯಳ ಆಶೀರ್ವಾದ ಕಾರಣ. ಆಕೆಯ ಪವಿತ್ರ ಭೂಮಿಯಲ್ಲಿ ಕಾಲಿಟ್ಟಾಗ ಆಳವಾದ ಆಧ್ಯಾತ್ಮಿಕ ತೃಪ್ತಿ ತಂದಿತು. ಅಸ್ಸಾಂನಲ್ಲಿ ಆಚರಿಸಲಾಗುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಶುಭಾಶಯಗಳನ್ನು ಸಲ್ಲಿಸಿದರು. ಕೆಂಪುಕೋಟೆಯ ಮೇಲೆ ಮಾಡಿದ ಭಾಷಣವನ್ನು ಪುನರುಚ್ಚರಿಸಿದ ಶ್ರೀ ಮೋದಿ, ಭಾರತದ ಭದ್ರತಾ ಕಾರ್ಯತಂತ್ರದಲ್ಲಿ 'ಸುದರ್ಶನ-ಚಕ್ರ'ದ ಕಲ್ಪನೆಯನ್ನು ತಾವು ಪ್ರಸ್ತುತಪಡಿಸಿದೆವು. ಮಂಗಲ್ಡೋಯ್ ತಾಣವು ಸಂಸ್ಕೃತಿ, ಐತಿಹಾಸಿಕ ಹೆಮ್ಮೆ ಮತ್ತು ಭವಿಷ್ಯದ ಭರವಸೆಯ ಸಂಗಮ ಸ್ಥಳ. ಈ ಪ್ರದೇಶವು ಅಸ್ಸಾಂನ ಗುರುತಿನ ಕೇಂದ್ರದ ಸಂಕೇತವಾಗಿದೆ. ಸ್ಫೂರ್ತಿ ಮತ್ತು ಶೌರ್ಯದಿಂದ ತುಂಬಿರುವ ಈ ಭೂಮಿಯಲ್ಲಿ, ಜನರನ್ನು ಭೇಟಿ ಮಾಡಲು ಮತ್ತು ಅವರೊಂದಿಗೆ ಮಾತುಕತೆ ನಡೆಸಲು ಅವಕಾಶ ಸಿಕ್ಕಿದ್ದು ತಮ್ಮ ಅದೃಷ್ಟ ಎಂದು ಪ್ರಧಾನಮಂತ್ರಿ ಹೇಳಿದರು.ಕರ್ನಾಟಕದ ಬೆಂಗಳೂರಿನಲ್ಲಿ ವಿವಿಧ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
August 10th, 01:30 pm
ಕರ್ನಾಟಕ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಜೀ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಶ್ರೀ ಹೆಚ್.ಡಿ. ಕುಮಾರಸ್ವಾಮಿ ಜೀ, ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ವಿ. ಸೋಮಣ್ಣ ಜೀ, ಶ್ರೀಮತಿ ಶೋಭಾ ಜೀ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಜೀ, ಕರ್ನಾಟಕ ಸರ್ಕಾರದ ಸಚಿವರಾದ ಶ್ರೀ ಬಿ. ಸುರೇಶ್ ಜೀ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಜೀ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಜೀ, ಡಾ. ಮಂಜುನಾಥ್ ಜೀ, ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಜೀ, ಮತ್ತು ಕರ್ನಾಟಕದ ನನ್ನ ಸಹೋದರ ಸಹೋದರಿಯರೇ,ಬೆಂಗಳೂರಿನಲ್ಲಿ 22,800 ಕೋಟಿ ರೂಪಾಯಿಗಳ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
August 10th, 01:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಸುಮಾರು 7,160 ಕೋಟಿ ರೂ. ಮೌಲ್ಯದ ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು ಮತ್ತು 15,610 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಬೆಂಗಳೂರಿನ ಕೆ ಎಸ್ ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ನೆಲಕ್ಕೆ ಕಾಲಿಟ್ಟಾಗ ತಮಗೆ ಒಂದು ರೀತಿಯ ಆತ್ಮೀಯತೆಯ ಭಾವನೆ ಮೂಡಿತು ಎಂದು ಹೇಳಿದರು. ಕರ್ನಾಟಕದ ಸಂಸ್ಕೃತಿಯ ಶ್ರೀಮಂತಿಕೆ, ಜನರ ವಾತ್ಸಲ್ಯ, ಮತ್ತು ಹೃದಯವನ್ನು ತಟ್ಟುವ ಕನ್ನಡ ಭಾಷೆಯ ಮಾಧುರ್ಯವನ್ನು ಶ್ಲಾಘಿಸಿದ ಶ್ರೀ ಮೋದಿ ಅವರು ಬೆಂಗಳೂರಿನ ಅಧಿದೇವತೆ ಅಣ್ಣಮ್ಮ ತಾಯಿಯ ಪಾದಗಳಿಗೆ ನಮಸ್ಕರಿಸುವುದರ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ಶತಮಾನಗಳ ಹಿಂದೆ ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರಕ್ಕೆ ಅಡಿಪಾಯ ಹಾಕಿದ್ದನ್ನು ಸ್ಮರಿಸಿದ ಪ್ರಧಾನ ಮಂತ್ರಿಗಳು, ಕೆಂಪೇಗೌಡರು ಸಂಪ್ರದಾಯದಲ್ಲಿ ಬೇರೂರಿರುವ ಜೊತೆಗೆ ಪ್ರಗತಿಯ ಹೊಸ ಎತ್ತರಗಳನ್ನು ತಲುಪುವ ನಗರದ ಕನಸು ಕಂಡಿದ್ದರು ಎಂದು ಹೇಳಿದರು. “ಬೆಂಗಳೂರು ಯಾವಾಗಲೂ ಆ ಮನೋಭಾವವನ್ನು ಜೀವಂತವಾಗಿರಿಸಿದೆ ಮತ್ತು ಅದನ್ನು ಕಾಪಾಡಿಕೊಂಡಿದೆ. ಇಂದು, ಬೆಂಗಳೂರು ಅದೇ ಕನಸನ್ನು ನನಸಾಗಿಸುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು.ಶ್ರೀ ನಾರಾಯಣ ಗುರು ಮತ್ತು ಗಾಂಧೀಜಿ ನಡುವಿನ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 24th, 11:30 am
ಬ್ರಹ್ಮಋಷಿ ಸ್ವಾಮಿ ಸಚ್ಚಿದಾನಂದ ಜೀ, ಶ್ರೀಮಠ ಸ್ವಾಮಿ ಶುಭಾಂಗ-ನಂದಾ ಜೀ, ಸ್ವಾಮಿ ಶಾರದಾನಂದ ಜೀ, ಎಲ್ಲಾ ಪೂಜ್ಯ ಸಾಧು ಸಂತರೆ, ಸರ್ಕಾರದ ನನ್ನ ಸಹೋದ್ಯೋಗಿ ಶ್ರೀ ಜಾರ್ಜ್ ಕುರಿಯನ್ ಜೀ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಅಡೂರ್ ಪ್ರಕಾಶ್ ಜೀ, ಇಲ್ಲಿರುವ ಇತರೆ ಎಲ್ಲ ಹಿರಿಯ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ.ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಅವರ ನಡುವಿನ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ನೈತಿಕ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಈ ಸ್ಥಳವು ರಾಷ್ಟ್ರದ ಇತಿಹಾಸದಲ್ಲಿ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇದು ನಮ್ಮ ಸ್ವಾತಂತ್ರ್ಯ ಚಳವಳಿಗೆ ಹೊಸ ದಿಕ್ಕನ್ನು ನೀಡಿದ, ಸ್ವಾತಂತ್ರ್ಯದ ಉದ್ದೇಶಗಳು ಮತ್ತು ಸ್ವತಂತ್ರ ಭಾರತದ ಕನಸಿಗೆ ನಿರ್ದಿಷ್ಟ ಅರ್ಥವನ್ನು ನೀಡಿದ ಐತಿಹಾಸಿಕ ಘಟನೆಯಾಗಿದೆ ಎಂದು ಅವರು ಒತ್ತಿ ಹೇಳಿದರು. 100 ವರ್ಷಗಳ ಹಿಂದೆ ನಡೆದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಭೇಟಿಯು ಇಂದಿಗೂ ಸ್ಪೂರ್ತಿದಾಯಕ ಮತ್ತು ಪ್ರಸ್ತುತವಾಗಿದೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಸಾಮೂಹಿಕ ಗುರಿಗಳಿಗೆ ಶಕ್ತಿಶಾಲಿ ಮೂಲವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ, ಅವರು ಶ್ರೀ ನಾರಾಯಣ ಗುರುಗಳ ಪಾದಗಳಿಗೆ ನಮನ ಸಲ್ಲಿಸಿದರು ಮತ್ತು ಮಹಾತ್ಮ ಗಾಂಧಿ ಅವರಿಗೆ ಗೌರವನಮನ ಸಲ್ಲಿಸಿದರು.ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 21st, 07:06 am
ಆಂಧ್ರ ಪ್ರದೇಶ ರಾಜ್ಯಪಾಲರಾದ ಸೈಯದ್ ಅಬ್ದುಲ್ ನಜೀರ್ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ನನ್ನ ಆತ್ಮೀಯ ಗೆಳೆಯ ಚಂದ್ರಬಾಬು ನಾಯ್ಡು ಗಾರು, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಕೆ. ರಾಮಮೋಹನ್ ನಾಯ್ಡು ಜಿ, ಪ್ರತಾಪರಾವ್ ಜಾಧವ್ ಜಿ, ಚಂದ್ರಶೇಖರ್ ಜಿ, ಭೂಪತಿ ರಾಜು ಶ್ರೀನಿವಾಸ್ ವರ್ಮಾ ಗಾರು, ರಾಜ್ಯದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗಾರು, ಇಲ್ಲಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ! ನಿಮ್ಮೆಲ್ಲರಿಗೂ ನಮಸ್ಕಾರ!ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
June 21st, 06:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಜಮ್ಮು-ಕಾಶ್ಮೀರದ ಕತ್ರಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 06th, 12:50 pm
ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜಿ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಜಿತೇಂದ್ರ ಸಿಂಗ್ ಜಿ, ವಿ. ಸೋಮಣ್ಣ ಜಿ, ಉಪಮುಖ್ಯಮಂತ್ರಿ ಸುರೇಂದ್ರ ಕುಮಾರ್ ಜಿ, ಜಮ್ಮು-ಕಾಶ್ಮೀರ ವಿಧಾನಸಭೆಯ ವಿಪಕ್ಷ ನಾಯಕ ಸುನಿಲ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿ ಜುಗಲ್ ಕಿಶೋರ್ ಜಿ, ಇಲ್ಲಿರುವ ಜನಪ್ರತಿನಿಧಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ. ಇದು ವೀರ್ ಜೋರಾವರ್ ಸಿಂಗ್ ಜಿ ಅವರ ಭೂಮಿ, ನಾನು ಈ ಭೂಮಿಗೆ ನಮಸ್ಕರಿಸುತ್ತೇನೆ.ಜಮ್ಮು ಮತ್ತು ಕಾಶ್ಮೀರದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 06th, 12:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ವೀರ ಜೋರಾವರ್ ಸಿಂಗ್ ಅವರ ಭೂಮಿಗೆ ನಮನ ಸಲ್ಲಿಸುತ್ತಾ, ಇಂದಿನ ಕಾರ್ಯಕ್ರಮವು ಭಾರತದ ಏಕತೆ ಮತ್ತು ದೃಢಸಂಕಲ್ಪದ ಭವ್ಯ ಆಚರಣೆಯಾಗಿದೆ ಎಂದು ಹೇಳಿದರು. ಮಾತಾ ವೈಷ್ಣೋದೇವಿಯ ಆಶೀರ್ವಾದದಿಂದ ಕಾಶ್ಮೀರ ಕಣಿವೆ ಈಗ ಭಾರತದ ವಿಶಾಲ ರೈಲ್ವೆ ಜಾಲಕ್ಕೆ ಸಂಪರ್ಕ ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು. ನಾವು ಯಾವಾಗಲೂ ಮಾತೆ ಭಾರತಿಯನ್ನು ಆಳವಾದ ಭಕ್ತಿಯಿಂದ ಪ್ರಾರ್ಥಿಸುತ್ತೇವೆ, 'ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ' ಎಂದು ಹೇಳುತ್ತೇವೆ, ಇಂದು, ಇದು ನಮ್ಮ ರೈಲ್ವೆ ಜಾಲದಲ್ಲಿಯೂ ಸಹ ವಾಸ್ತವವಾಗಿದೆ ಎಂದು ಪ್ರಧಾನಿ ಉದ್ಗರಿಸಿದರು, ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಮಾರ್ಗ ಯೋಜನೆಯು ಕೇವಲ ಹೆಸರಲ್ಲ, ಜಮ್ಮು ಮತ್ತು ಕಾಶ್ಮೀರದ ಹೊಸ ಶಕ್ತಿಯ ಸಂಕೇತ ಮತ್ತು ಭಾರತದ ಬೆಳೆಯುತ್ತಿರುವ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿದೆ ಎಂದು ಒತ್ತಿ ಹೇಳಿದರು. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ, ಅವರು ಚೆನಾಬ್ ಮತ್ತು ಅಂಜಿ ರೈಲು ಸೇತುವೆಗಳನ್ನು ಉದ್ಘಾಟಿಸಿದರು ಮತ್ತು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು, ಇದು ಜಮ್ಮು ಮತ್ತು ಕಾಶ್ಮೀರದೊಳಗೆ ಸಂಪರ್ಕವನ್ನು ಹೆಚ್ಚಿಸುತ್ತದೆ. ಇದರ ಜೊತೆಗೆ, ಶ್ರೀ ಮೋದಿ ಅವರು ಜಮ್ಮುವಿನಲ್ಲಿ ಹೊಸ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಿದರು, ಈ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸಿದರು, ₹46,000 ಕೋಟಿ ಮೌಲ್ಯದ ಯೋಜನೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ವೇಗಗೊಳಿಸುತ್ತವೆ, ಪ್ರಗತಿ ಮತ್ತು ಸಮೃದ್ಧಿಗೆ ಚಾಲನೆ ನೀಡುತ್ತವೆ ಎಂದು ಹೇಳಿದರು. ಪ್ರಧಾನಿಯವರು ತಮ್ಮ ಶುಭಾಶಯಗಳನ್ನು ವ್ಯಕ್ತಪಡಿಸಿದರು ಮತ್ತು ಬೆಳವಣಿಗೆ ಹಾಗು ಪರಿವರ್ತನೆಯ ಈ ಹೊಸ ಯುಗಕ್ಕಾಗಿ ಜನರನ್ನು ಅಭಿನಂದಿಸಿದರು.ಸಿಕ್ಕಿಂ@50 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 29th, 10:00 am
ಸಿಕ್ಕಿಂ ರಾಜ್ಯಪಾಲರಾದ ಶ್ರೀ ಒ.ಪಿ. ಪ್ರಕಾಶ್ ಮಾಥುರ್ ಜಿ, ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ಪ್ರೇಮ್ ಸಿಂಗ್ ತಮಾಂಗ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿಗಳಾದ ದೋರ್ಜಿ ತ್ಸೆರಿಂಗ್ ಲೆಪ್ಚಾ ಜಿ ಮತ್ತು ಡಾ. ಇಂದ್ರಾ ಹ್ಯಾಂಗ್ ಸುಬ್ಬಾ ಜಿ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಜನಪ್ರತಿನಿಧಿಗಳೆ, ಮಹಿಳೆಯರೆ ಮತ್ತು ಮಹನೀಯರೆ!‘ಸಿಕ್ಕಿಂ@50’ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
May 29th, 09:45 am
ಗ್ಯಾಂಗ್ಟಾಕ್ ನಲ್ಲಿ ಇಂದು ನಡೆದ 'ಸಿಕ್ಕಿಂ@50' ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. 'ಪ್ರಗತಿಯು ಉದ್ದೇಶವನ್ನು ಸಂಧಿಸುವ ಮತ್ತು ಪ್ರಕೃತಿಯು ಬೆಳವಣಿಗೆಯನ್ನು ಪೋಷಿಸುವ ಸ್ಥಳ' ಎಂಬುದು ಈ ಕಾರ್ಯಕ್ರಮದ ವಿಷಯವಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿಯವರು, ಸಿಕ್ಕಿಂ ರಾಜ್ಯ ಸ್ಥಾಪನೆಯ 50 ನೇ ವಾರ್ಷಿಕೋತ್ಸವದ ಈ ವಿಶೇಷ ದಿನದಂದು ಸಿಕ್ಕಿಂ ಜನತೆಗೆ ಶುಭಾಶಯ ಕೋರಿದರು. ಜನರ ಉತ್ಸಾಹ, ಶಕ್ತಿ ಮತ್ತು ಉತ್ಸಾಹವನ್ನು ಖುದ್ದಾಗಿ ವೀಕ್ಷಿಸಲು ಬಯಸಿದ್ದೆ, ಆದರೆ ಪ್ರತಿಕೂಲ ಹವಾಮಾನದಿಂದಾಗಿ ತಾವು ಹಾಜರಿರಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದರು. ಮುಂದಿನ ದಿನಗಳಲ್ಲಿ ಸಿಕ್ಕಿಂಗೆ ಭೇಟಿ ನೀಡಿ ಅವರ ಸಾಧನೆಗಳು ಮತ್ತು ಆಚರಣೆಗಳಲ್ಲಿ ಭಾಗಿಯಾಗುವುದಾಗಿ ಭರವಸೆ ನೀಡಿದರು. ಕಳೆದ 50 ವರ್ಷಗಳ ಅವರ ಸಾಧನೆಗಳನ್ನು ಆಚರಿಸುವ ದಿನ ಇದು ಎಂದು ಪ್ರಧಾನಿ ಹೇಳಿದರು, ಈ ಭವ್ಯ ಕಾರ್ಯಕ್ರಮವನ್ನು ಸ್ಮರಣೀಯವಾಗಿಸುವಲ್ಲಿ ಶ್ರಮಿಸಿದ ಸಿಕ್ಕಿಂ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಸಿಕ್ಕಿಂ ರಾಜ್ಯದ ಸುವರ್ಣ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ ಅವರು ಮತ್ತೊಮ್ಮೆ ಸಿಕ್ಕಿಂ ಜನತೆಗೆ ಶುಭಾಶಯ ಕೋರಿದರು.