'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ

November 30th, 11:30 am

ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.

ಹೈದರಾಬಾದ್‌ನಲ್ಲಿ ಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾದ ಸೌಲಭ್ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ

November 26th, 10:10 am

ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಜಿ, ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಜಿ, ಸಫ್ರಾನ್ ಗ್ರೂಪ್‌ನೊಂದಿಗೆ ಸಂಬಂಧ ಹೊಂದಿರುವ ಎಲ್ಲಾ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೈದರಾಬಾದ್‌ನಲ್ಲಿ ‘ಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು

November 26th, 10:00 am

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ʻಜಿಎಂಆರ್ ಏರೋಸ್ಪೇಸ್ ಮತ್ತು ಇಂಡಸ್ಟ್ರಿಯಲ್ ಪಾರ್ಕ್ʼ – ವಿಶೇಷ ಆರ್ಥಿಕ ವಲಯದಲ್ಲಿರುವ ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದಿನಿಂದ ಭಾರತದ ವಿಮಾನಯಾನ ಕ್ಷೇತ್ರವು ಹೊಸ ಎತ್ತರಕ್ಕೆ ತಲುಪುತ್ತಿದೆ. ʻಸಫ್ರಾನ್ʼ ಸಂಸ್ಥೆಯ ಹೊಸ ಘಟಕವು ಭಾರತವನ್ನು ಜಾಗತಿಕ ʻನಿರ್ವಹಣೆ, ದುರಸ್ತಿ ಮತ್ತು ಕೂಲಂಕಷ ಪರೀಕ್ಷೆʼ(ಎಂಆರ್‌ಒ) ಕೇಂದ್ರವಾಗಿ ನೆಲೆಗೊಳಿಸಲು ಸಹಾಯ ಮಾಡುತ್ತದೆ,ʼʼ ಎಂದು ಹೇಳಿದರು. ಈ ʻಎಂಆರ್‌ಒʼ ಘಟಕವು ಅತ್ಯಾಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ನವೆಂಬರ್ 24 ರಂದು ʻಸಫ್ರಾನ್ʼ ಆಡಳಿತ ಮಂಡಳಿಯ ಜೊತೆಗಿನ ತಮ್ಮ ಭೇಟಿಯನ್ನು ಪ್ರಧಾನಮಂತ್ರಿ ಸ್ಮರಿಸಿದರು. ಈ ಹಿಂದೆಯೂ ಆಡಳಿತ ಮಂಡಳಿ ಜೊತೆಗಿನ ಪ್ರತಿಯೊಂದು ಚರ್ಚೆಯಲ್ಲೂ ಭಾರತದ ಬಗ್ಗೆ ಸಂಸ್ಥೆಯ ವಿಶ್ವಾಸ ಮತ್ತು ಭರವಸೆಯನ್ನು ತಾವು ನೋಡಿರುವುದಾಗಿ ಮೋದಿ ಹೇಳಿದರು. ಭಾರತದಲ್ಲಿ ʻಸಫ್ರಾನ್ʼನ ಹೂಡಿಕೆಯು ಅದೇ ವೇಗದಲ್ಲಿ ಮುಂದುವರಿಯುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ಹೊಸ ಘಟಕದ ಉದ್ಘಾಟನೆಗಾಗಿ ʻಸಫ್ರಾನ್ʼ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ಮೋದಿ ಅವರು ತಮ್ಮ ಶುಭಾಶಯ ಕೋರಿದರು.

ಮುಂದಿನ ದಶಕದ ಭಾರತ - ಜಪಾನ್ ಜಂಟಿ ಮುನ್ನೋಟ: ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮುನ್ನಡೆಸಲು ಎಂಟು ಮಾರ್ಗಗಳು

August 29th, 07:11 pm

ಕಾನೂನುಬದ್ಧ ಆಳ್ವಿಕೆಯ ಆಧಾರದ ಮೇಲೆ ಮುಕ್ತ, ತೆರೆದ, ಶಾಂತಿಯುತ, ಸಮೃದ್ಧ ಮತ್ತು ಸಂಘರ್ಷ-ಮುಕ್ತ ಇಂಡೋ-ಪೆಸಿಫಿಕ್ ಪ್ರದೇಶದ ಸಾಮಾನ್ಯ ದೃಷ್ಟಿಕೋನವನ್ನು ಹೊಂದಿರುವ ಎರಡು ದೇಶಗಳಾಗಿ, ಪೂರಕ ಸಂಪನ್ಮೂಲ ದತ್ತಿ, ತಾಂತ್ರಿಕ ಸಾಮರ್ಥ್ಯಗಳು ಮತ್ತು ವೆಚ್ಚ ಸ್ಪರ್ಧಾತ್ಮಕತೆಯನ್ನು ಹೊಂದಿರುವ ಎರಡು ಆರ್ಥಿಕತೆಗಳು ಮತ್ತು ಸ್ನೇಹ ಮತ್ತು ಪರಸ್ಪರ ಸದ್ಭಾವನೆಯ ದೀರ್ಘ ಸಂಪ್ರದಾಯವನ್ನು ಹೊಂದಿರುವ ಎರಡು ರಾಷ್ಟ್ರಗಳಾಗಿ, ಮುಂದಿನ ದಶಕದಲ್ಲಿ ನಮ್ಮ ದೇಶಗಳಲ್ಲಿ ಮತ್ತು ಪ್ರಪಂಚದಲ್ಲಿ ಒಟ್ಟಾರೆಯಾಗಿ ಬದಲಾವಣೆಗಳು ಮತ್ತು ಅವಕಾಶಗಳನ್ನು ಜಂಟಿಯಾಗಿ ನಿಭಾಯಿಸುವ ಉದ್ದೇಶವನ್ನು ಭಾರತ ಮತ್ತು ಜಪಾನ್ ವ್ಯಕ್ತಪಡಿಸುತ್ತವೆ, ನಮ್ಮ ಆಯಾ ದೇಶೀಯ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತವೆ ಮತ್ತು ನಮ್ಮ ದೇಶಗಳು ಹಾಗು ಮುಂದಿನ ಪೀಳಿಗೆಯ ಜನರನ್ನು ಹಿಂದೆಂದಿಗಿಂತಲೂ ಹೆಚ್ಚು ನಿಕಟವಾಗಿಸುತ್ತವೆ.

ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವಿಶ್ವ ವಾಯು ಸಾರಿಗೆ ಶೃಂಗಸಭೆಯ ಸರ್ವಸದಸ್ಯರ(ಸಮಗ್ರ) ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 02nd, 05:34 pm

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮ್ ಮೋಹನ್ ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಐಎಟಿಎ ಆಡಳಿತ ಮಂಡಳಿಯ ಅಧ್ಯಕ್ಷ ಪೀಟರ್ ಎಲ್ಬರ್ಸ್ ಜಿ, ಐಎಟಿಎ ಮಹಾನಿರ್ದೇಶಕ ವಿಲ್ಲಿ ವಾಲ್ಷ್ ಜಿ, ಇಂಡಿಗೊ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಭಾಟಿಯಾ ಜಿ, ಇತರೆ ಎಲ್ಲ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಎಟಿಎಯ 81ನೇ ವಾರ್ಷಿಕ ಸಾಮಾನ್ಯ ಸಭೆ ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ ಪೂರ್ಣ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು

June 02nd, 05:00 pm

ವಿಶ್ವದರ್ಜೆಯ ವಾಯು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ (ಐಎಟಿಎ) 81ನೇ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ (ವ್ಯಾಟ್ಸ್) ಪೂರ್ಣ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಅತಿಥಿಗಳನ್ನು ಸ್ವಾಗತಿಸಿದರು, ನಾಲ್ಕು ದಶಕಗಳ ನಂತರ ಭಾರತಕ್ಕೆ ಮರಳುತ್ತಿರುವ ಈ ಕಾರ್ಯಕ್ರಮದ ಮಹತ್ವವನ್ನು ಒತ್ತಿ ಹೇಳಿದರು. ಈ ಅವಧಿಯಲ್ಲಿ ಭಾರತವು ಅನುಭವಿಸಿದ ಪರಿವರ್ತನಾತ್ಮಕ ಬದಲಾವಣೆಗಳನ್ನು ಒತ್ತಿ ಹೇಳಿದ ಅವರು, ಇಂದಿನ ಭಾರತವು ಹಿಂದೆಂದಿಗಿಂತಲೂ ಹೆಚ್ಚು ವಿಶ್ವಾಸ ಹೊಂದಿದೆ ಎಂದರು. ಜಾಗತಿಕ ವಾಯುಯಾನ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪಾತ್ರವನ್ನು ಅವರು ಪ್ರತಿಪಾದಿಸಿದರು. ಜತೆಗೆ ಇದು ವಿಶಾಲ ಮಾರುಕಟ್ಟೆಯಾಗಿ ಮಾತ್ರವಲ್ಲದೆ ನೀತಿ ನಾಯಕತ್ವ, ನಾವೀನ್ಯತೆ ಮತ್ತು ಅಂತರ್ಗತ ಅಭಿವೃದ್ಧಿಯ ಸಂಕೇತವಾಗಿದೆ ಎಂದರು. ಇಂದು, ಭಾರತವು ಬಾಹ್ಯಾಕಾಶ-ವಾಯುಯಾನ ಸಂಯೋಜನೆಯಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿ, ನಾಗರಿಕ ವಿಮಾನಯಾನ ಕ್ಷೇತ್ರವು ಕಳೆದ ದಶಕದಲ್ಲಿ ಐತಿಹಾಸಿಕ ಪ್ರಗತಿಗೆ ಸಾಕ್ಷಿಯಾಗಿದೆ, ಅವು ಚೆನ್ನಾಗಿ ಗುರುತಿಸಲ್ಪಟ್ಟಿವೆ ಎಂದರು.

ಆದಂಪುರ ವಾಯುನೆಲೆಯಲ್ಲಿ ವೀರ ವಾಯುಪಡೆ ಯೋಧರು ಮತ್ತು ಸಮರ ವೀರರೊಂದಿಗೆ ಪ್ರಧಾನಮಂತ್ರಿ ಸಂವಾದ

May 13th, 03:45 pm

ಈ ಘೋಷಣೆಯ ಶಕ್ತಿಯನ್ನು ಜಗತ್ತು ಇದೀಗವಷ್ಟೇ ನೋಡಿದೆ. ಭಾರತ್ ಮಾತಾ ಕಿ ಜೈ ಎಂಬುದು ಕೇವಲ ಘೋಷಣೆಯಲ್ಲ, ಭಾರತ ಮಾತೆಯ ಗೌರವ ಮತ್ತು ಘನತೆಗಾಗಿ ತನ್ನ ಪ್ರಾಣವನ್ನೇ ಪಣಕ್ಕಿಡುವ ದೇಶದ ಪ್ರತಿಯೊಬ್ಬ ಸೈನಿಕನ ಪ್ರಮಾಣವಚನ ಇದಾಗಿದೆ. ದೇಶಕ್ಕಾಗಿ ಬದುಕಲು ಬಯಸುವ, ಏನನ್ನಾದರೂ ಸಾಧಿಸಲು ಬಯಸುವ ದೇಶದ ಪ್ರತಿಯೊಬ್ಬ ನಾಗರಿಕನ ಧ್ವನಿ ಇದಾಗಿದೆ. ಭಾರತ್ ಮಾತಾ ಕಿ ಜೈ ಎಂಬುದು ಯುದ್ಧಭೂಮಿಯಲ್ಲಿ ಮತ್ತು ಕಾರ್ಯಾಚರಣೆಯಲ್ಲಿ ಪ್ರತಿಧ್ವನಿಸುತ್ತದೆ. ಭಾರತದ ಸೈನಿಕರು ಭಾರತ್ ಮಾತಾ ಕಿ ಜೈ ಎಂದು ಜಪಿಸಿದಾಗ, ಶತ್ರುಗಳ ಹೃದಯ ನಡುಗುತ್ತದೆ. ನಮ್ಮ ಡ್ರೋನ್‌ಗಳು ಶತ್ರುಗಳ ಕೋಟೆಯ ಗೋಡೆಗಳನ್ನು ಉರುಳಿಸಿದಾಗ, ನಮ್ಮ ಕ್ಷಿಪಣಿಗಳು ಭಾರಿ ಶಬ್ದದೊಂದಿಗೆ ಗುರಿ ತಲುಪಿದಾಗ, ಶತ್ರು ಕೇಳುತ್ತಾನೆ - ಭಾರತ್ ಮಾತಾ ಕಿ ಜೈ! ಘೋಷಣೆಯನ್ನ. ರಾತ್ರಿಯ ಕಗ್ಗತ್ತಲೆಯಲ್ಲೂ ನಾವು ಸೂರ್ಯನನ್ನು ಬೆಳಗಿದಾಗ, ಶತ್ರು ನೋಡುತ್ತಾನೆ - ಭಾರತ್ ಮಾತಾ ಕಿ ಜೈ! ನಮ್ಮ ಪಡೆಗಳು ಪರಮಾಣು ಬೆದರಿಕೆಯನ್ನು ಹುಸಿಗೊಳಿಸಿದಾಗ, ಆಕಾಶದಿಂದ ಭೂಗತ ಲೋಕಕ್ಕೆ ಒಂದೇ ಒಂದು ವಿಷಯ ಪ್ರತಿಧ್ವನಿಸುತ್ತದೆ, ಅದೇ - ಭಾರತ್ ಮಾತಾ ಕಿ ಜೈ!

ಆದಂಪುರ ವಾಯುಪಡೆ ನಿಲ್ದಾಣದಲ್ಲಿ ಧೈರ್ಯಶಾಲಿ ವಾಯುಪಡೆ ಯೋಧರು ಮತ್ತು ಸೈನಿಕರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

May 13th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆದಂಪುರದ ವಾಯುಪಡೆ ನಿಲ್ದಾಣದಲ್ಲಿಂದು ವೀರ ವಾಯುಪಡೆ ಯೋಧರು ಮತ್ತು ಸೈನಿಕರನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಅವರ ಜತೆ ಮಾತನಾಡಿದ ಅವರು, 'ಭಾರತ್ ಮಾತಾ ಕಿ ಜೈ' ಘೋಷಣೆಯ ಶಕ್ತಿಯನ್ನು ಜಗತ್ತು ಇದೀಗಷ್ಟೇ ಕಂಡಿದೆ. ಇದು ಕೇವಲ ಮಂತ್ರವಲ್ಲ, ಭಾರತ ಮಾತೆಯ ಘನತೆ ಎತ್ತಿಹಿಡಿಯಲು ತಮ್ಮ ಪ್ರಾಣವನ್ನೇ ಪಣಕ್ಕಿಡುವ ಪ್ರತಿಯೊಬ್ಬ ಸೈನಿಕನು ತೆಗೆದುಕೊಳ್ಳುವ ಗಂಭೀರ ಪ್ರಮಾಣವಚನ ಇದಾಗಿದೆ. ಈ ಘೋಷಣೆಯು ರಾಷ್ಟ್ರಕ್ಕಾಗಿ ಬದುಕಲು ಮತ್ತು ಅರ್ಥಪೂರ್ಣ ಕೊಡುಗೆ ನೀಡಲು ಬಯಸುವ ಪ್ರತಿಯೊಬ್ಬ ನಾಗರಿಕನ ಧ್ವನಿಯಾಗಿದೆ. 'ಭಾರತ್ ಮಾತಾ ಕಿ ಜೈ' ಯುದ್ಧಭೂಮಿಯಲ್ಲಿ ಮತ್ತು ನಿರ್ಣಾಯಕ ಕಾರ್ಯಾಚರಣೆಗಳಲ್ಲಿ ಪ್ರತಿಧ್ವನಿಸುತ್ತದೆ. ಭಾರತೀಯ ಸೈನಿಕರು 'ಭಾರತ್ ಮಾತಾ ಕಿ ಜೈ' ಎಂದು ಜಪಿಸಿದಾಗ, ಅದು ಶತ್ರುಗಳ ಬೆನ್ನುಮೂಳೆಯಲ್ಲಿ ನಡುಕ ಉಂಟುಮಾಡುತ್ತದೆ. ಅವರು ಭಾರತದ ಸೇನಾ ಶಕ್ತಿಯನ್ನು ಶ್ಲಾಘಿಸಿದ ಅವರು, ಭಾರತೀಯ ಡ್ರೋನ್‌ಗಳು ಶತ್ರುಗಳ ಕೋಟೆಗಳನ್ನು ಕೆಡವಿದಾಗ ಮತ್ತು ಕ್ಷಿಪಣಿಗಳು ನಿಖರವಾಗಿ ದಾಳಿ ಮಾಡಿದಾಗ, ಶತ್ರುವು 'ಭಾರತ್ ಮಾತಾ ಕಿ ಜೈ' ಎಂಬ ಒಂದೇ ಒಂದು ಪದ ಕೇಳುತ್ತಾನೆ. ಅತ್ಯಂತ ಕತ್ತಲೆಯ ರಾತ್ರಿಗಳಲ್ಲೂ ಭಾರತವು ಆಕಾಶವನ್ನು ಬೆಳಗಿಸುವ ಸಾಮರ್ಥ್ಯ ಹೊಂದಿದೆ, ಶತ್ರುಗಳು ರಾಷ್ಟ್ರದ ಅದಮ್ಯ ಚೈತನ್ಯವನ್ನು ವೀಕ್ಷಿಸುವಂತೆ ಮಾಡಿದೆ. ಭಾರತದ ಪಡೆಗಳು ಪರಮಾಣು ಬೆದರಿಕೆಯನ್ನು ಕಳಚಿದಾಗ, 'ಭಾರತ್ ಮಾತಾ ಕಿ ಜೈ' ಎಂಬ ಸಂದೇಶವು ಆಕಾಶ ಮತ್ತು ಆಳದಲ್ಲಿ ಪ್ರತಿಧ್ವನಿಸಿದೆ ಎಂದು ಅವರು ಘೋಷಿಸಿದರು.

ಎನ್ಎಕ್ಸ್ ಟಿ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

March 01st, 11:00 am

ನ್ಯೂಸ್ಎಕ್ಸ್ ವರ್ಲ್ಡ್‌ನ ಶುಭಾರಂಭಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳು. ಇಂದು ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ನಿಮ್ಮ ನೆಟ್‌ವರ್ಕ್‌ನ ಎಲ್ಲಾ ಪ್ರಾದೇಶಿಕ ವಾಹಿನಿಗಳು ಜಾಗತಿಕವಾಗಿ ಬೆಳೆಯುತ್ತಿವೆ, ಇಂದು ಅನೇಕ ಫೆಲೋಶಿಪ್‌ಗಳು ಮತ್ತು ವಿದ್ಯಾರ್ಥಿವೇತನಗಳನ್ನು ಸಹ ಪ್ರಾರಂಭಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗಾಗಿ ನಿಮ್ಮೆಲ್ಲರಿಗೂ ನಾನು ಶುಭ ಹಾರೈಸುತ್ತೇನೆ.

ಎನ್ ಎಕ್ಸ್ ಟಿ ಕಾನ್‌ಕ್ಲೇವ್‌ನಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

March 01st, 10:34 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ NXT ಕಾನ್ಕ್ಲೇವ್‌ನಲ್ಲಿ ಭಾಗವಹಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನ್ಯೂಸ್ ಎಕ್ಸ್ ವರ್ಲ್ಡ್ ಶುಭಾರಂಭಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು. ನೆಟ್‌ವರ್ಕ್ ಹಿಂದಿ, ಇಂಗ್ಲಿಷ್ ಮತ್ತು ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಚಾನೆಲ್‌ಗಳನ್ನು ಒಳಗೊಂಡಿದೆ ಮತ್ತು ಇಂದು ಅದು ಜಾಗತಿಕ ಮಟ್ಟದಲ್ಲಿದೆ ಎಂದು ಅವರು ಗಮನ ಸೆಳೆದರು. ಅವರು ಹಲವಾರು ಫೆಲೋಶಿಪ್‌ಗಳು ಮತ್ತು ಸ್ಕಾಲರ್‌ಶಿಪ್‌ಗಳ ಪ್ರಾರಂಭದ ಬಗ್ಗೆಯೂ ಹೇಳಿದರು, ಈ ಕಾರ್ಯಕ್ರಮಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್ ಕಾರ್ಯಾರಂಭ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಇಂಗ್ಲಿಷ್ ಭಾಷಣ

January 15th, 11:08 am

ಮಹಾರಾಷ್ಟ್ರದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಸಿಪಿ ರಾಧಾಕೃಷ್ಣನ್ ಅವರು, ಮಹಾರಾಷ್ಟ್ರದ ಜನಪ್ರಿಯ ಮುಖ್ಯಮಂತ್ರಿ, ಶ್ರೀ ದೇವೇಂದ್ರ ಫಡ್ನವೀಸ್ ಅವರು, ಮಂತ್ರಿ ಪರಿಷತ್ತಿನಲ್ಲಿ ನನ್ನ ಹಿರಿಯ ಸಹೋದ್ಯೋಗಿಗಳಾದ ಶ್ರೀ ರಾಜನಾಥ್ ಸಿಂಗ್ಅವರು, ಸಂಜಯ್ ಸೇಠ್ ಜಿ, ಮಹಾರಾಷ್ಟ್ರದ ಮುಖ್ಯಮಂತ್ರಿ ಅವರೊಂದಿಗೆ ಇಂದು ನಮ್ಮ ಇಬ್ಬರು ಉಪಮುಖ್ಯಮಂತ್ರಿಗಳಾದ. ಉಪಮುಖ್ಯಮಂತ್ರಿ ಶ್ರೀ.ಏಕನಾಥ ಶಿಂಧೆಯವರು, ಶ್ರೀ ಅಜಿತ್ ಪವಾರ್ ಅವರು, CDS, CNS, ಎಲ್ಲ ನೌಕಾ ಸಿಬ್ಬಂದಿ, ಮಡಗಾಂವ್ ನೌಕಾನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಹೋದ್ಯೋಗಿಗಳೇ, ಇತರ ಆಹ್ವಾನಿತರೆ, ಮಹಿಳೆಯರೇ ಮತ್ತು ಮಹನೀಯರೇ,

ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 15th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು.

ಅಕ್ಟೋಬರ್ 28ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

October 26th, 03:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 28ರಂದು ಗುಜರಾತ್ ಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಅವರು, ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಅವರೊಂದಿಗೆ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕ್ಯಾಂಪಸ್ ನಲ್ಲಿ ಸಿ -295 ವಿಮಾನಗಳನ್ನು ತಯಾರಿಸುವ ಟಾಟಾ ಏರ್ ಕ್ರಾಫ್ಟ್ ಕಾಂಪ್ಲೆಕ್ಸ್ ಅನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ವಡೋದರಾದ ಲಕ್ಷ್ಮಿ ವಿಲಾಸ್ ಅರಮನೆಗೆ ಭೇಟಿ ನೀಡಲಿದ್ದಾರೆ. ವಡೋದರಾದಿಂದ ಪ್ರಧಾನಮಂತ್ರಿ ಅವರು ಅಮ್ರೇಲಿಗೆ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 2:45 ರ ಸುಮಾರಿಗೆ ಅಮ್ರೇಲಿಯ ದುಧಲಾದಲ್ಲಿ ಭಾರತ್ ಮಾತಾ ಸರೋವರವನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅವರು ಅಮ್ರೇಲಿಯ ಲಾಥಿಯಲ್ಲಿ 4,800 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಜಂಟಿ ವಸ್ತುಸ್ಥಿತಿ ಪತ್ರ: ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ವಿಸ್ತರಿಸುವುದನ್ನು ಅಮೆರಿಕ ಮತ್ತು ಭಾರತ ಮುಂದುವರಿಸುತ್ತವೆ

September 22nd, 12:00 pm

21 ನೇ ಶತಮಾನದ ನಿರ್ಣಾಯಕ ಪಾಲುದಾರಿಕೆಯನ್ನು ವ್ಯಾಖ್ಯಾನಿಸುವ ಯುಎಸ್-ಭಾರತ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಸಹಭಾಗಿತ್ವವು ಜಾಗತಿಕ ಒಳಿತಿಗಾಗಿ ಸೇವೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾರ್ಯಸೂಚಿಯನ್ನು ನಿರ್ಣಾಯಕವಾಗಿ ತಲುಪಿಸುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ದೃಢಪಡಿಸಿದರು. ಅಮೆರಿಕ ಮತ್ತು ಭಾರತ ನಡುವೆ ಅಭೂತಪೂರ್ವ ಮಟ್ಟದ ವಿಶ್ವಾಸ ಮತ್ತು ಸಹಯೋಗ ಬೆಳೆದ ಐತಿಹಾಸಿಕ ಅವಧಿಯ ಬಗ್ಗೆ ನಾಯಕರು ಉಲ್ಲೇಖಿಸಿದರು. ನಮ್ಮ ದೇಶಗಳು ಹೆಚ್ಚು ಪರಿಪೂರ್ಣ ಒಕ್ಕೂಟಗಳಾಗಲು ಮತ್ತು ನಮ್ಮ ಹಂಚಿಕೆಯ ಭವಿಷ್ಯವನ್ನು ತಲುಪಲು ಪ್ರಯತ್ನಿಸುತ್ತಿರುವುದರಿಂದ ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಕಾನೂನಿನ ನಿಯಮ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ಎತ್ತಿಹಿಡಿಯುವಲ್ಲಿ ಯುಎಸ್-ಭಾರತ ಪಾಲುದಾರಿಕೆಯು ಆಧಾರವಾಗಿರಬೇಕು ಎಂದು ನಾಯಕರು ದೃಢಪಡಿಸಿದರು. ಯುಎಸ್-ಭಾರತ ಪ್ರಮುಖ ರಕ್ಷಣಾ ಪಾಲುದಾರಿಕೆಯನ್ನು ಜಾಗತಿಕ ಭದ್ರತೆ ಮತ್ತು ಶಾಂತಿಯ ಆಧಾರಸ್ತಂಭವನ್ನಾಗಿ ಮಾಡಿದ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು, ಕಾರ್ಯಾಚರಣೆಯಲ್ಲಿ ಸಮನ್ವಯದ ಹೆಚ್ಚಳ, ಮಾಹಿತಿ ಹಂಚಿಕೆ ಮತ್ತು ರಕ್ಷಣಾ ಕೈಗಾರಿಕಾ ನಾವೀನ್ಯತೆಯ ಪ್ರಯೋಜನಗಳನ್ನು ಎತ್ತಿ ತೋರಿಸಿದರು. ಅಧ್ಯಕ್ಷ ಬೈಡೆನ್ ಮತ್ತು ಪ್ರಧಾನಿ ಮೋದಿ ಅವರು ನಮ್ಮ ಜನರು, ನಮ್ಮ ನಾಗರಿಕ ಮತ್ತು ಖಾಸಗಿ ವಲಯಗಳು ಮತ್ತು ಆಳವಾದ ಬಂಧಗಳನ್ನು ರೂಪಿಸಲು ತಮ್ಮ ಸರ್ಕಾರಗಳ ದಣಿವರಿಯದ ಪ್ರಯತ್ನಗಳು ಮುಂಬರುವ ದಶಕಗಳಲ್ಲಿ ಯುಎಸ್-ಭಾರತ ಪಾಲುದಾರಿಕೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿವೆ ಎಂಬ ಬಗ್ಗೆ ನಿರಂತರ ಆಶಾವಾದ ಮತ್ತು ಅತ್ಯಂತ ವಿಶ್ವಾಸವನ್ನು ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ ನಡೆದ 2ನೇ ಏಷ್ಯಾ ಪೆಸಿಫಿಕ್ ನಾಗರಿಕ ವಿಮಾನಯಾನ ಸಚಿವರ ಸಮ್ಮೇಳನ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 12th, 04:00 pm

ವಿವಿಧ ದೇಶಗಳಿಂದ ಆಗಮಿಸಿರುವ ಎಲ್ಲ ಗಣ್ಯರಿಗೆ ನಾನು ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಕಳೆದ 2 ದಿನಗಳಿಂದ ನಾಗರೀಕ ವಿಮಾನಯಾನ ವಲಯಕ್ಕೆ ಸಂಬಂಧಿಸಿದ ಹಲವಾರು ಪ್ರಮುಖ ವಿಷಯಗಳನ್ನು ಚರ್ಚಿಸಿದ್ದೀರಿ. ನಮ್ಮ ಸಾಮೂಹಿಕ ಅಥವಾ ಸಂಘಟಿತ ಬದ್ಧತೆ ಮತ್ತು ಏಷ್ಯಾ ಪೆಸಿಫಿಕ್ ವಲಯದ ಸಾಮರ್ಥ್ಯವನ್ನು ಪ್ರತಿಬಿಂಬಿಸುವ ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ನಾವು ಕೆಲವು ಪ್ರಕಾಶಮಾನವಾದ ಮನಸ್ಸುಗಳನ್ನು ಹೊಂದಿದ್ದೇವೆ ಎಂದು ನಾನು ನಂಬುತ್ತೇನೆ. ಈ ಸಂಸ್ಥೆಯು 80 ವರ್ಷಗಳನ್ನು ಪೂರೈಸಿದೆ. ನಮ್ಮ ಸಚಿವರಾದ ಶ್ರೀ ನಾಯ್ಡು ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ, 80,000 ಮರಗಳನ್ನು ನೆಡುವ ಪ್ರಮುಖ ಉಪಕ್ರಮವನ್ನು 'ಏಕ್ ಪೆಡ್ ಮಾ ಕೆ ನಾಮ್'(ಭೂತಾಯಿಗಾಗಿ ಒಂದು ಮರ) ಕೈಗೊಳ್ಳಲಾಗಿದೆ. ಆದಾಗ್ಯೂ, ನಾನು ಇನ್ನೊಂದು ವಿಷಯದತ್ತ ನಿಮ್ಮ ಗಮನ ಸೆಳೆಯಲು ಬಯಸುತ್ತೇನೆ. ನಮ್ಮ ದೇಶದಲ್ಲಿ, ಒಬ್ಬ ವ್ಯಕ್ತಿ 80 ವರ್ಷ ತಲುಪಿದಾಗ, ಅದನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತದೆ. ನಮ್ಮ ಪೂರ್ವಜರ ಪ್ರಕಾರ, 80ನೇ ವಯಸ್ಸು ತಲುಪುವುದು ಎಂದರೆ ಒಂದು ಸಾವಿರ ಹುಣ್ಣಿಮೆಗಳನ್ನು ನೋಡುವ ಅವಕಾಶ ಹೊಂದಿರುವುದು ಎಂಬರ್ಥ. ಒಂದರ್ಥದಲ್ಲಿ ನಮ್ಮ ಈ ವಲಯದ ಸಂಸ್ಥೆಯೂ ಒಂದು ಸಾವಿರ ಹುಣ್ಣಿಮೆಗಳನ್ನು ಕಣ್ತುಂಬಿಕೊಂಡು ಹತ್ತಿರದಿಂದ ನೋಡಿದ ಅನುಭವ ಪಡೆದಿದೆ. ಹೀಗಾಗಿ, ಭೂಮಿಯ ಮೇಲಿನ ಈ 80 ವರ್ಷಗಳ ಪ್ರಯಾಣವು ಸ್ಮರಣೀಯ, ಯಶಸ್ವಿ ಮತ್ತು ಶ್ಲಾಘನೀಯ ಪ್ರಯಾಣವಾಗಿದೆ.

ದಲಿತರು ಮತ್ತು ಒಬಿಸಿಯ ನಿಜವಾದ ಸಾಮಾಜಿಕ ಸಬಲೀಕರಣಕ್ಕೆ ಬಿಜೆಪಿ ಒತ್ತು ನೀಡುತ್ತಿದೆ: ಪಂಜಾಬ್‌ನ ಪಟಿಯಾಲದಲ್ಲಿ ಪ್ರಧಾನಿ ಮೋದಿ

May 23rd, 05:00 pm

2024 ರಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪಂಜಾಬ್‌ನ ಪಟಿಯಾಲ ಜನತೆಯ ಭಾವೋದ್ರಿಕ್ತ ಸ್ವಾಗತದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಬಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. 'ಗುರು ತೇಜ್ ಬಹದ್ದೂರ್' ಅವರ ಭೂಮಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಐದು ಹಂತದ ಮತದಾನದ ನಂತರ, ಭಾರತದ ಜನರ ಸಂದೇಶವು 'ಫಿರ್ ಏಕ್ ಬಾರ್, ಮೋದಿ ಸರ್ಕಾರ್' ಎಂದು ಪ್ರತಿಧ್ವನಿಸುತ್ತದೆ ಎಂದು ಹೇಳಿದರು. ‘ವಿಕಸಿತ್ ಭಾರತ’ವನ್ನು ಖಚಿತಪಡಿಸಿಕೊಳ್ಳಲು ಬಿಜೆಪಿಗೆ ಮತ ನೀಡುವಂತೆ ಅವರು ಪಂಜಾಬ್‌ಗೆ ಒತ್ತಾಯಿಸಿದರು.

ಪಂಜಾಬ್‌ನಲ್ಲಿ ಪ್ರಬಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿರುವ ಪ್ರಧಾನಿ ಮೋದಿಯವರಿಗೆ ಪಟಿಯಾಲದಲ್ಲಿ ಭಾವಪೂರ್ಣ ಸ್ವಾಗತ

May 23rd, 04:30 pm

2024 ರಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಪಂಜಾಬ್‌ನ ಪಟಿಯಾಲ ಜನತೆಯ ಭಾವೋದ್ರಿಕ್ತ ಸ್ವಾಗತದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಬಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. 'ಗುರು ತೇಜ್ ಬಹದ್ದೂರ್' ಅವರ ಭೂಮಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಐದು ಹಂತದ ಮತದಾನದ ನಂತರ, ಭಾರತದ ಜನರ ಸಂದೇಶವು 'ಫಿರ್ ಏಕ್ ಬಾರ್, ಮೋದಿ ಸರ್ಕಾರ್' ಎಂದು ಪ್ರತಿಧ್ವನಿಸುತ್ತದೆ ಎಂದು ಹೇಳಿದರು. ‘ವಿಕಸಿತ್ ಭಾರತ’ವನ್ನು ಖಚಿತಪಡಿಸಿಕೊಳ್ಳಲು ಬಿಜೆಪಿಗೆ ಮತ ನೀಡುವಂತೆ ಅವರು ಪಂಜಾಬ್‌ಗೆ ಒತ್ತಾಯಿಸಿದರು.

ರಾಜಸ್ಥಾನದ ಪೋಖ್ರಾನ್ ನಲ್ಲಿ ನಡೆದ 'ವ್ಯಾಯಾಮ ಭಾರತ್ ಶಕ್ತಿ' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ

March 12th, 02:15 pm

ಇಂದು ನಾವು ಇಲ್ಲಿ ನೋಡಿದ್ದನ್ನು, ನಮ್ಮ ಮೂರು ಪಡೆಗಳ ಶೌರ್ಯವು ಗಮನಾರ್ಹವಾಗಿದೆ. ಆಕಾಶದಲ್ಲಿ ಗುಡುಗು... ನೆಲದ ಮೇಲಿನ ಶೌರ್ಯ... ವಿಜಯದ ಮಂತ್ರ ಎಲ್ಲ ದಿಕ್ಕುಗಳಲ್ಲೂ ಪ್ರತಿಧ್ವನಿಸಿತು... ಇದು ನವ ಭಾರತದ ಕರೆ. ಇಂದು, ನಮ್ಮ ಪೋಖ್ರಾನ್ ಮತ್ತೊಮ್ಮೆ ಭಾರತದ ಸ್ವಾವಲಂಬನೆ, ಆತ್ಮವಿಶ್ವಾಸ ಮತ್ತು ಸ್ವಾಭಿಮಾನಕ್ಕೆ ಸಾಕ್ಷಿಯಾಗಿದೆ. ಇದು ಭಾರತದ ಪರಮಾಣು ಶಕ್ತಿಗೆ ಸಾಕ್ಷಿಯಾದ ಪೋಖ್ರಾನ್, ಮತ್ತು ಇಲ್ಲಿಯೇ ನಾವು ಸ್ವದೇಶೀಕರಣದ ಮೂಲಕ ಸಬಲೀಕರಣಕ್ಕೆ ಸಾಕ್ಷಿಯಾಗಿದ್ದೇವೆ. ಇಂದು, ಇಡೀ ರಾಷ್ಟ್ರವು ರಾಜಸ್ಥಾನದ ಶೌರ್ಯದ ಭೂಮಿಯಿಂದ ಭಾರತದ ಶಕ್ತಿಯ ಹಬ್ಬವನ್ನು ಆಚರಿಸುತ್ತದೆ, ಆದರೆ ಅದರ ಪ್ರತಿಧ್ವನಿಗಳು ಭಾರತದಲ್ಲಿ ಮಾತ್ರ ಕೇಳುವುದಿಲ್ಲ, ಅವು ಪ್ರಪಂಚದಾದ್ಯಂತ ಪ್ರತಿಧ್ವನಿಸುತ್ತವೆ.

ರಾಜಸ್ಥಾನದ ಪೋಖ್ರಾನ್ ನಲ್ಲಿ ತ್ರಿಪಕ್ಷೀಯ ಗುಂಡಿನ ದಾಳಿ ಮತ್ತು ಕುಶಲತೆ ಸಮರಾಭ್ಯಾಸ 'ಭಾರತ್ ಶಕ್ತಿ'ಗೆ ಸಾಕ್ಷಿಯಾದ ಪ್ರಧಾನಿ

March 12th, 01:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಪೋಖ್ರಾನ್ ನಲ್ಲಿ ತ್ರಿ-ಸೇವೆಗಳ ಲೈವ್ ಫೈರ್ ಮತ್ತು ಕುಶಲತೆ ವ್ಯಾಯಾಮದ ರೂಪದಲ್ಲಿ ದೇಶೀಯ ರಕ್ಷಣಾ ಸಾಮರ್ಥ್ಯಗಳ ಸಂಯೋಜಿತ ಪ್ರದರ್ಶನಕ್ಕೆ ಸಾಕ್ಷಿಯಾದರು. 'ಭಾರತ್ ಶಕ್ತಿ' ದೇಶದ ಆತ್ಮನಿರ್ಭರ ಉಪಕ್ರಮದ ಆಧಾರದ ಮೇಲೆ ದೇಶದ ಪರಾಕ್ರಮದ ಪ್ರದರ್ಶನವಾಗಿ ದೇಶೀಯ ಶಸ್ತ್ರಾಸ್ತ್ರ ವ್ಯವಸ್ಥೆಗಳು ಮತ್ತು ವೇದಿಕೆಗಳ ಶ್ರೇಣಿಯನ್ನು ಪ್ರದರ್ಶಿಸಲಿದೆ.