ನವದೆಹಲಿಯ ಕಾರಿಯಪ್ಪ ಮೈದಾನದಲ್ಲಿ ನಡೆದ ಎನ್ ಸಿಸಿ ರ‍್ಯಾಲಿ (Rally) ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 28th, 04:00 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ, ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜಿ, ವೇದಿಕೆಯಲ್ಲಿರುವ ಇತರೆ ಎಲ್ಲ ಗಣ್ಯರೆ, ದೇಶಾದ್ಯಂತ ಬಂದಿರುವ ಎನ್ ಸಿ ಸಿ ಮತ್ತು ಎನ್ ಎಸ್ ಎಸ್ ಕೆಡೆಟ್ ಗಳೆ, ಟ್ಯಾಬ್ಲೊ ಕಲಾವಿದರೆ, ರಾಷ್ಟ್ರೀಯ ರಂಗಶಾಲೆಯ ಸಹೋದ್ಯೋಗಿಗಳೆ ಮತ್ತು ನನ್ನ ಪ್ರೀತಿಯ ಯುವ ಸ್ನೇಹಿತರೆ. ನಿಮ್ಮೆಲ್ಲರ ಕಠಿಣ ಪರಿಶ್ರಮ ಇಲ್ಲಿ ಗೋಚರಿಸುತ್ತಿದೆ. ನೀವು ಉತ್ತಮ ಸಮನ್ವಯದಿಂದ ನಿಮ್ಮ ಪ್ರದರ್ಶನವನ್ನು ತೋರಿದ್ದೀರಿ.ದೆಹಲಿಯಲ್ಲಿ ನಡೆದ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡ್ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
January 28th, 03:30 pm
ದೆಹಲಿಯಲ್ಲಿ ಕಾರಿಯಪ್ಪ ಪರೇಡ್ ಮೈದಾನದಲ್ಲಿ ಇಂದು ನಡೆದ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡನ್ನು (ರ‍್ಯಾಲಿಯನ್ನು) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಎನ್‌ಸಿಸಿ ದಿನದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎನ್‌ಸಿಸಿ, ಎನ್‌ಎಸ್‌ಎಸ್ ಕೆಡೆಟ್‌ಗಳು, ಟ್ಯಾಬ್ಲೋ ಕಲಾವಿದರು, ರಾಷ್ಟ್ರೀಯ ರಂಗಶಾಲೆಯ ಸಹಚರರು ಮತ್ತು ದೇಶಾದ್ಯಂತದ ಯುವ ಪಾಲ್ಗೊಳ್ಳುವಿಕೆಯ ಪ್ರಯತ್ನಗಳು ಅವರ ಸಂಘಟಿತ ಪ್ರದರ್ಶನಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತವೆ ಎಂದು ಹೇಳಿದರು. ಇಂದು ಬೆಳಿಗ್ಗೆ ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಿಂದಾಗಿ ಈ ದಿನವು ತೀವ್ರ ದುಃಖವನ್ನುಂಟುಮಾಡಿದೆ ಎಂದು ಶ್ರೀ ಮೋದಿ ದುಃಖದಿಂದ ನುಡಿದರು, ಇದರಲ್ಲಿ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಮತ್ತು ಕೆಲವು ಸಹೋದ್ಯೋಗಿಗಳು ಸಾವನ್ನಪ್ಪಿದ್ದಾರೆ. ಅಜಿತ್ ದಾದಾ ಅವರು ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಗ್ರಾಮೀಣ ಜೀವನವನ್ನು ಸುಧಾರಿಸಲು ಕೆಲಸ ಮಾಡುವ ಮೂಲಕ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅವರು ಎತ್ತಿ ತೋರಿಸಿದರು ಮತ್ತು ಶ್ರೀ ಅಜಿತ್ ಪವಾರ್ ಜೀ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದರು. ಈ ನೋವಿನ ಕ್ಷಣದಲ್ಲಿ, ಅಪಘಾತದಲ್ಲಿ ಮಡಿದವರ ಕುಟುಂಬಗಳೊಂದಿಗೆ ರಾಷ್ಟ್ರವು ನಿಂತಿದೆ ಎಂದು ಅವರು ಹೇಳಿದರು. ದುಃಖ ಮತ್ತು ಸಂತಾಪದ ಈ ಕ್ಷಣಗಳ ನಡುವೆ ಪ್ರಧಾನಿ, ಸ್ನೇಹಪರ ರಾಷ್ಟ್ರಗಳವರು ಸೇರಿದಂತೆ ಹಾಜರಿದ್ದ ಎಲ್ಲಾ ಕೆಡೆಟ್‌ಗಳಿಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಈ ವರ್ಷ ಬಾಲಕಿಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಗುರುತಿಸಿದರು.ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
January 28th, 11:22 am
ಮಹಾರಾಷ್ಟ್ರದ ಬಾರಾಮತಿ ಜಿಲ್ಲೆಯಲ್ಲಿ ಸಂಭವಿಸಿದ ವಿಮಾನ ಅಪಘಾತದ ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೆ ನನ್ನ ಆಲೋಚನೆಗಳು ಇವೆ. ಈ ತೀವ್ರ ದುಃಖದ ಕ್ಷಣದಲ್ಲಿ ಮೃತ ಕುಟುಂಬಗಳಿಗೆ ಶಕ್ತಿ ಮತ್ತು ಧೈರ್ಯವನ್ನು ನೀಡಲಿ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರ ಸಂತಾಪ
January 28th, 11:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಅಜಿತ್ ಪವಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಮಹಾರಾಷ್ಟ್ರದ ಜನರಿಗೆ ಸೇವೆ ಸಲ್ಲಿಸುವಲ್ಲಿ ಮುಂಚೂಣಿಯಲ್ಲಿದ್ದು, ಕಠಿಣ ಪರಿಶ್ರಮಿ ವ್ಯಕ್ತಿತ್ವದ ವ್ಯಕ್ತಿಯಾಗಿ, ಶ್ರೀ ಅಜಿತ್ ಪವಾರ್ ಅವರನ್ನು ವ್ಯಾಪಕವಾಗಿ ಗೌರವಿಸಲಾಗುತ್ತಿತ್ತು” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. “ಆಡಳಿತಾತ್ಮಕ ವಿಷಯಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಬಡವರು ಮತ್ತು ದೀನದಲಿತರ ಸಬಲೀಕರಣದ ಬಗ್ಗೆ ಅವರ ಉತ್ಸಾಹ ಕೂಡ ಗಮನಾರ್ಹವಾಗಿದೆ”. ಅವರ ಅಕಾಲಿಕ ನಿಧನವು ತುಂಬಾ ಆಘಾತಕಾರಿ ಮತ್ತು ದುಃಖಕರವಾಗಿದೆ. ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
December 05th, 08:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ದೇವೇಂದ್ರ ಫಡ್ನವೀಸ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಏಕನಾಥ್ ಶಿಂಧೆ ಮತ್ತು ಶ್ರೀ ಅಜಿತ್ ಪವಾರ್ ಅವರನ್ನು ಅವರು ಕೂಡಾ ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಶ್ರೀ ಮೋದಿಯವರು ಭರವಸೆ ನೀಡಿದ್ದಾರೆ.