ಭಾರತದ ಸುಪ್ರೀಂ ಕೋರ್ಟ್‌ ನ ನ್ಯಾಯಾಧೀಶರ ಸಂಖ್ಯೆಯನ್ನು 33 ರಿಂದ 37 ಕ್ಕೆ ಹೆಚ್ಚಿಸಲು ಸಚಿವ ಸಂಪುಟದ ಅನುಮೋದನೆ

May 05th, 07:22 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಭಾರತದ ಸುಪ್ರೀಂ ಕೋರ್ಟ್‌ ನ ನ್ಯಾಯಾಧೀಶರ ಸಂಖ್ಯೆಯನ್ನು ಪ್ರಸ್ತುತ ಇರುವ 33 ರಿಂದ 37 ಕ್ಕೆ (ಭಾರತದ ಮುಖ್ಯ ನ್ಯಾಯಮೂರ್ತಿಯವರನ್ನು ಹೊರತುಪಡಿಸಿ) ಅಂದರೆ 4 ರಷ್ಟು ಹೆಚ್ಚಿಸಲು 'ಸುಪ್ರೀಂ ಕೋರ್ಟ್ (ನ್ಯಾಯಾಧೀಶರ ಸಂಖ್ಯೆ) ಕಾಯ್ದೆ, 1956' ಕ್ಕೆ ತಿದ್ದುಪಡಿ ತರಲು 'ಸುಪ್ರೀಂ ಕೋರ್ಟ್ (ನ್ಯಾಯಾಧೀಶರ ಸಂಖ್ಯೆ) ತಿದ್ದುಪಡಿ ವಿಧೇಯಕ, 2026' ಅನ್ನು ಸಂಸತ್ತಿನಲ್ಲಿ ಮಂಡಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.