Prime Minister Narendra Modi to address Post Budget Webinar on “Agriculture and Rural Transformation”

March 05th, 06:04 pm

PM Modi will address the Post Budget Webinar on the theme “Agriculture and Rural Transformation” on 6th March 2026. Under this theme, eight webinar sessions are being held covering four major sectors. Notably, the webinar will deliberate on opportunities offered by Bharat Vistaar, Amrit Sarovars for fisheries and expanding market access for products made by rural women entrepreneurs through SHE-Marts.

ನವದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 14th, 11:00 am

ಇಂದು ಪೊಂಗಲ್ ನಿಜವಾಗಿಯೂ ಜಾಗತಿಕ ಹಬ್ಬವಾಗಿ ಮಾರ್ಪಟ್ಟಿದೆ. ಪ್ರಪಂಚದಾದ್ಯಂತ, ತಮಿಳು ಸಮುದಾಯ ಮತ್ತು ತಮಿಳು ಸಂಸ್ಕೃತಿಯನ್ನು ಪ್ರೀತಿಸುವವರು ಇದನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ನಾನು ಅವರಲ್ಲಿ ಒಬ್ಬನಾಗಿದ್ದೇನೆ. ಈ ವಿಶೇಷ ಹಬ್ಬವನ್ನು ಆಚರಿಸಲು ನಿಮ್ಮೊಂದಿಗೆ ಕೈಜೋಡಿಸುವುದು ನನ್ನ ಸೌಭಾಗ್ಯವಾಗಿದೆ. ತಮಿಳು ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವವಾಗಿದೆ. ಇದು ನಮ್ಮ ರೈತರು, ಭೂಮಿ ಮತ್ತು ಸೂರ್ಯನ ಬಗ್ಗೆ ಕೃತಜ್ಞತೆಯನ್ನು ಸಾಕಾರಗೊಳಿಸುತ್ತದೆ. ಇದು ಪ್ರಕೃತಿ, ಕುಟುಂಬ ಮತ್ತು ಸಮಾಜದೊಂದಿಗೆ ಸಾಮರಸ್ಯದ ಮಹತ್ವವನ್ನು ನಮಗೆ ಕಲಿಸುತ್ತದೆ. ಈ ಸಮಯದಲ್ಲಿ, ಭಾರತದ ಇತರ ಪ್ರದೇಶಗಳು ಸಹ ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಹೆಚ್ಚಿನವುಗಳಲ್ಲಿ ಮುಳುಗಿರುತ್ತವೆ. ಪೊಂಗಲ್ ಮತ್ತು ಈ ಎಲ್ಲಾ ಹಬ್ಬಗಳಲ್ಲಿ ನಾನು ಭಾರತ ಮತ್ತು ಪ್ರಪಂಚದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ನವದೆಹಲಿಯಲ್ಲಿ ಪೊಂಗಲ್ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

January 14th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯಲ್ಲಿಂದು ನಡೆದ ಪೊಂಗಲ್ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ತಮಿಳಿನಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ ಶ್ರೀ ನರೇಂದ್ರ ಮೋದಿ, ”ಪೊಂಗಲ್ ಇಂದು ಜಾಗತಿಕ ಹಬ್ಬವಾಗಿದೆ’’ ಎಂದು ಒತ್ತಿ ಹೇಳಿದರು. ಈ ಹಬ್ಬವನ್ನು ತಮಿಳು ಸಮುದಾಯಗಳು ಮತ್ತು ಪ್ರಪಂಚದಾದ್ಯಂತ ತಮಿಳು ಸಂಸ್ಕೃತಿಯನ್ನು ಪಾಲಿಸುವವರು ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ತಾವೂ ಅವರಲ್ಲಿ ಒಬ್ಬರು ಎಂದು ಹೇಳಿದರು. ಈ ವಿಶೇಷ ಹಬ್ಬವನ್ನು ಎಲ್ಲರ ಜೊತೆ ಸೇರಿ ಆಚರಿಸುವುದು ತಮ್ಮ ಅದೃಷ್ಟ ಎಂದು ಅವರು ಹೇಳಿದರು. ತಮಿಳು ಜನರ ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವದಂತೆ, ರೈತರು, ಭೂಮಿ ಮತ್ತು ಸೂರ್ಯನ ಶ್ರಮಕ್ಕೆ ಕೃತಜ್ಞತೆ ಸಲ್ಲಿಸುವುದನ್ನು ಸಾಕಾರಗೊಳಿಸುತ್ತದೆ ಮತ್ತು ಪ್ರಕೃತಿ, ಕುಟುಂಬ ಮತ್ತು ಸಮಾಜದಲ್ಲಿ ಸಮತೋಲನದತ್ತ ನಮಗೆ ಮಾರ್ಗದರ್ಶನ ನೀಡುತ್ತದೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು. ಇದೇ ವೇಳೆ ದೇಶದ ವಿವಿಧ ಭಾಗಗಳು ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಇತರ ಹಬ್ಬಗಳ ಆಚರಣೆಯಲ್ಲಿ ಮುಳುಗಿವೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಪೊಂಗಲ್ ಹಬ್ಬದಂದು ಭಾರತ ಮತ್ತು ವಿಶ್ವದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ಅವರು ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು ಮತ್ತು ಇತರೆ ಎಲ್ಲಾ ಹಬ್ಬಗಳಿಗೆ ಶುಭ ಕೋರಿದರು.

ನವದೆಹಲಿಯಲ್ಲಿ ನಡೆದ 2025ರ ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

October 31st, 06:08 pm

ನವದೆಹಲಿಯ ರೋಹಿಣಿಯಲ್ಲಿ ಇಂದು ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ, ಈಗಷ್ಟೇ ಕೇಳಿದ ಮಂತ್ರಗಳ ಶಕ್ತಿಯನ್ನು ಎಲ್ಲರೂ ಅನುಭವಿಸಬಹುದು ಎಂದು ಹೇಳಿದರು. ತಾವು ಸಭೆಗೆ ಬಂದಾಗಲೆಲ್ಲಾ ತಮಗೆ ಆಗಿರುವ ಅನುಭವವು ದೈವಿಕ ಮತ್ತು ಅಸಾಮಾನ್ಯವಾದುದು ಎಂದು ಅವರು ಒತ್ತಿ ಹೇಳಿದರು. ಈ ಭಾವನೆಗೆ ಸ್ವಾಮಿ ದಯಾನಂದ ಜೀ ಅವರ ಆಶೀರ್ವಾದ ಕಾರಣವೆಂದೂ ಅವರು ಹೇಳಿದರು. ಸ್ವಾಮಿ ದಯಾನಂದ ಜೀ ಅವರ ಆದರ್ಶಗಳ ಬಗ್ಗೆ ಪ್ರಧಾನಮಂತ್ರಿ ತಮ್ಮ ಆಳವಾದ ಗೌರವವನ್ನು ವ್ಯಕ್ತಪಡಿಸಿದರು. ಹಾಜರಿದ್ದ ಎಲ್ಲಾ ಚಿಂತಕರೊಂದಿಗಿನ ತಮ್ಮ ದಶಕಗಳಷ್ಟು ಹಳೆಯದಾದ ಬಾಂಧವ್ಯವನ್ನು ಅವರು ನೆನೆಪಿಸಿಕೊಂಡರು. ಅದು ತಮಗೆ ಪದೇ ಪದೇ ಅವರ ನಡುವೆ ಇರಲು ಅವಕಾಶವನ್ನು ನೀಡಿದೆ. ಅವರನ್ನು ಭೇಟಿಯಾದಾಗಲೆಲ್ಲಾ ಮತ್ತು ಅವರ ಜೊತೆ ಸಂವಹನ ನಡೆಸಿದಾಗಲೆಲ್ಲಾ ತಾವು ವಿಶಿಷ್ಟ ಶಕ್ತಿ ಮತ್ತು ಅನನ್ಯ ಸ್ಫೂರ್ತಿಯನ್ನು ಪಡೆಯುತ್ತಿರುವುದಾಗಿಯೂ ಅವರು ಹೇಳಿದರು.

ಗುಜರಾತ್ ನ ನವಸಾರಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ

March 08th, 11:50 am

ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್ ಜೀ; ನವಸಾರಿಯ ಸಂಸತ್ ಸದಸ್ಯ ಮತ್ತು ನನ್ನ ಸಂಪುಟ ಸಹೋದ್ಯೋಗಿ ಕೇಂದ್ರ ಸಚಿವ ಸಿ.ಆರ್. ಪಾಟೀಲ್; ಗೌರವಾನ್ವಿತ ಪಂಚಾಯತ್ ಸದಸ್ಯರು; ವೇದಿಕೆಯಲ್ಲಿ ಉಪಸ್ಥಿತರಿರುವ ಲಕ್ಷಾಧಿಪತಿ ದೀದಿ (ಲಖ್ಪತಿ ದೀದಿ)ಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಮತ್ತು ಇಲ್ಲಿ ದೊಡ್ಡ ಸಂಖ್ಯೆಯಲ್ಲಿ ನೆರೆದಿರುವ ಎಲ್ಲರಿಗೂ, ವಿಶೇಷವಾಗಿ ನನ್ನ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳೇ - ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳು!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ನವಸಾರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು

March 08th, 11:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ನವಸಾರಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳ ಪ್ರೀತಿ, ವಾತ್ಸಲ್ಯ ಮತ್ತು ಆಶೀರ್ವಾದಕ್ಕೆ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು ಮತ್ತು ಈ ವಿಶೇಷ ದಿನದಂದು ನಾಡಿನ ಎಲ್ಲಾ ಮಹಿಳೆಯರಿಗೆ ಶುಭ ಹಾರೈಸಿದರು. ಮಹಾಕುಂಭದಲ್ಲಿ ಗಂಗಾಮಾತೆಯ ಆಶೀರ್ವಾದ ಪಡೆದಿದ್ದೆ, ಇಂದು ಮಾತೃಶಕ್ತಿಯ ಮಹಾಕುಂಭದಲ್ಲಿ ಆಶೀರ್ವಾದ ದೊರೆತಿದೆ ಎಂದು ಹೇಳಿದರು. ಪ್ರಧಾನಮಂತ್ರಿಯವರು ಇಂದು ಗುಜರಾತಿನಲ್ಲಿ ಜಿ-ಸಫಲ್ (ಜೀವನೋಪಾಯ ವೃದ್ಧಿಗಾಗಿ ಅಂತ್ಯೋದಯ ಕುಟುಂಬಗಳಿಗೆ ಗುಜರಾತ್ ಯೋಜನೆ) ಮತ್ತು ಜಿ-ಮೈತ್ರಿ (ಗ್ರಾಮೀಣ ಆದಾಯ ಪರಿವರ್ತನೆಗಾಗಿ ವ್ಯಕ್ತಿಗಳಿಗೆ ಗುಜರಾತ್ ಮಾರ್ಗದರ್ಶನ ಮತ್ತು ವೇಗವರ್ಧನೆ) ಎಂಬ ಎರಡು ಯೋಜನೆಗಳಿಗೆ ಚಾಲನೆ ನೀಡಿದರು. ವಿವಿಧ ಯೋಜನೆಗಳ ಹಣವನ್ನು ನೇರವಾಗಿ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ ಎಂದು ಉಲ್ಲೇಖಿಸಿದ ಅವರು ಈ ಸಾಧನೆಗಾಗಿ ಪ್ರತಿಯೊಬ್ಬರನ್ನು ಅಭಿನಂದಿಸಿದರು.

ಭಾರತ್ ಗ್ರಾಮೀಣ ಮಹೋತ್ಸವದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 04th, 11:15 am

ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಜೀ, ಹಣಕಾಸು ಖಾತೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಜೀ, ಇಲ್ಲಿ ಉಪಸ್ಥಿತರಿರುವ ನಬಾರ್ಡ್ನ ಹಿರಿಯ ಆಡಳಿತ ಮಂಡಳಿಯ ಗೌರವಾನ್ವಿತ ಸದಸ್ಯರು, ಸ್ವಸಹಾಯ ಗುಂಪುಗಳ ಸದಸ್ಯರು, ಸಹಕಾರಿ ಬ್ಯಾಂಕುಗಳು, ರೈತ ಉತ್ಪಾದಕ ಸಂಸ್ಥೆ (FPO) ಗಳು ಇತರ ಎಲ್ಲ ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ,

ಗ್ರಾಮೀಣ ಭಾರತ ಮಹೋತ್ಸವ 2025ಕ್ಕೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 04th, 10:59 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ ಗ್ರಾಮೀಣ ಭಾರತ ಮಹೋತ್ಸವ 2025 ಅನ್ನು ಉದ್ಘಾಟಿಸಿದರು. ವಿಕಸಿತ ಭಾರತ ಗಾಗಿ ಸ್ಥಿತಿಸ್ಥಾಪಕ ಗ್ರಾಮೀಣ ಭಾರತವನ್ನು ನಿರ್ಮಿಸುವುದು ಮಹೋತ್ಸವದ ಶೀರ್ಷಿಕಾ ವಿಷಯವಾಗಿದೆ. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೆರೆದಿದ್ದ ಎಲ್ಲ ಜನರಿಗೆ 2025ರ ಶುಭಾಶಯ ಕೋರಿದರು. ವರ್ಷದ ಆರಂಭದಲ್ಲಿ ಗ್ರಾಮೀಣ ಭಾರತ ಮಹೋತ್ಸವದ ಭವ್ಯ ಸಂಘಟನೆಯು ಭಾರತದ ಅಭಿವೃದ್ಧಿಯ ಪಯಣದ ಒಂದು ಇಣುಕುನೋಟವನ್ನು ನೀಡುತ್ತಿದೆ ಮತ್ತು ಅದರ ಗುರುತನ್ನು ಸೃಷ್ಟಿಸುತ್ತಿದೆ ಎಂದು ಅವರು ಹೇಳಿದರು. ಈ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ನಬಾರ್ಡ್ ಮತ್ತು ಅದರ ಇತರ ಅಂಗ ಸಂಸ್ಥೆ/ ಸಹವರ್ತಿಗಳನ್ನು ಅಭಿನಂದಿಸಿದರು.

ಮಧ್ಯಪ್ರದೇಶದ ಖಜುರಾಹೊದಲ್ಲಿ ಕೆನ್- ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲೀಷ್ ಅವತರಣಿಕೆ

December 25th, 01:00 pm

ವೀರರ ನಾಡಾದ ಬುಂದೇಲ್ ಖಂಡದ ಎಲ್ಲ ಜನರಿಗೆ ನಾನು ಹಾರ್ದಿಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಮಧ್ಯಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಅವರಿಗೂ ನಾನು ಶುಭ ಕೋರುತ್ತೇನೆ. ಈ ಪ್ರದೇಶದ ಶ್ರದ್ಧಾಳು ಮುಖ್ಯಮಂತ್ರಿ ಭಾಯಿ ಮೋಹನ್ ಯಾದವ್ ಜೀ; ಕೇಂದ್ರ ಸಚಿವರಾದ ಭಾಯಿ ಶಿವರಾಜ್ ಸಿಂಗ್ ಜೀ, ವೀರೇಂದ್ರ ಕುಮಾರ್ ಜೀ ಮತ್ತು ಸಿಆರ್ ಪಾಟಿಲ್ ಜೀ; ಉಪ ಮುಖ್ಯಮಂತ್ರಿ ಜಗದೀಶ್ ದೇವ್ಡಾ ಜೀ; ರಾಜೇಂದ್ರ ಶುಕ್ಲಾ ಜೀ; ಇತರ ಸಚಿವರು, ಸಂಸದರು, ಶಾಸಕರು, ಹಾಗು ಇತರ ಗಣ್ಯರೇ, ಪೂಜ್ಯ ಸಾಧುಗಳು ಮತ್ತು ಮಧ್ಯಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿಕೆನ್‌-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು

December 25th, 12:30 pm

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್‌ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಖಜುರಾಹೊದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಭಾರತ ಮತ್ತು ವಿಶ್ವದ ಕ್ರಿಶ್ಚಿಯನ್‌ ಸಮುದಾಯದ ಜನತೆಗೆ ಕ್ರಿಸ್‌ಮಸ್‌ ಹಬ್ಬದ ಶುಭಾಶಯ ಕೋರಿದರು. ಮುಖ್ಯಮಂತ್ರಿ ಡಾ. ಮೋಹನ್‌ ಯಾದವ್‌ ಅವರ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿ ಒಂದು ವರ್ಷ ಪೂರೈಸಿದ್ದನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಇದಕ್ಕಾಗಿ ಮಧ್ಯಪ್ರದೇಶದ ಜನತೆಗೆ ಅಭಿನಂದನೆ ಸಲ್ಲಿಸಿದರು. ಕಳೆದ ಒಂದು ವರ್ಷದಲ್ಲಿಸಾವಿರಾರು ಕೋಟಿ ರೂಪಾಯಿಗಳ ಹೊಸ ಮೂಲಸೌಕರ್ಯ ಯೋಜನೆಗಳ ಅನುಷ್ಠಾನದೊಂದಿಗೆ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಂಡಿವೆ ಎಂದು ಅವರು ಹೇಳಿದರು. ಇಂದು ಐತಿಹಾಸಿಕ ಕೆನ್‌-ಬೆಟ್ವಾ ನದಿ ಜೋಡಣೆ ಯೋಜನೆ, ದೌಧನ್‌ ಅಣೆಕಟ್ಟು ಮತ್ತು ಮಧ್ಯಪ್ರದೇಶದ ಮೊದಲ ಸೌರ ವಿದ್ಯುತ್‌ ಸ್ಥಾವರವಾದ ಓಂಕಾರೇಶ್ವರ ತೇಲುವ ಸೌರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಪ್ರಧಾನಿ ಹೇಳಿದರು. ಇದಕ್ಕಾಗಿ ಅವರು ಮಧ್ಯಪ್ರದೇಶದ ಜನರನ್ನು ಅಭಿನಂದಿಸಿದರು.

ರಾಜಸ್ಥಾನದ ಜೈಪುರದಲ್ಲಿ 'ಏಕ್ ವರ್ಷ್-ಪರಿಣಾಮ್ ಉತ್ಕರ್ಷ್' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

December 17th, 12:05 pm

ಗೋವಿಂದ ನಗರದಲ್ಲಿ ನಾನು ಗೋವಿಂದ್ ದೇವ್ ಜೀ ಅವರಿಗೆ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಎಲ್ಲರಿಗೂ ನನ್ನ ನಮಸ್ಕಾರಗಳು!

ರಾಜಸ್ಥಾನ ಸರ್ಕಾರ ಒಂದು ವರ್ಷ ಅಧಿಕಾರಾವಧಿ ಪೂರೈಸಿದ ಹಿನೆಲೆಯಲ್ಲಿ ಜೈಪುರದಲ್ಲಿ ನಡೆದ ʻಏಕ್ ವರ್ಷ್-ಪರಿನಾಮ್ ಉತ್ಕರ್ಷ್ʼ (ಒಂದು ವರ್ಷ-ಪರಿಣಾಮ ಶ್ರೇಷ್ಠ) ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 17th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಜೈಪುರದಲ್ಲಿ ನಡೆದ ʻಒಂದು ವರ್ಷ-ಪರಿಣಾಮ ಶ್ರೇಷ್ಠʼ(ಏಕ್ ವರ್ಷ್-ಪರಿನಾಮ್ ಉತ್ಕರ್ಷ್) ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ರಾಜ್ಯ ಸರ್ಕಾರದ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಕ್ಕಾಗಿ ರಾಜಸ್ಥಾನ ಸರ್ಕಾರ ಮತ್ತು ರಾಜಸ್ಥಾನದ ಜನರನ್ನು ಅಭಿನಂದಿಸಿದರು. ಈ ಕಾರ್ಯಕ್ರಮದಲ್ಲಿ ನೆರೆದಿದ್ದ ಲಕ್ಷಾಂತರ ಜನರ ಆಶೀರ್ವಾದ ಪಡೆಯುವ ಅದೃಷ್ಟ ತಮ್ಮದಾಗಿದೆ ಎಂದು ಅವರು ಹೇಳಿದರು. ರಾಜಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡಲು ಕೈಗೊಂಡ ಪ್ರಯತ್ನಗಳಿಗಾಗಿ ಶ್ರೀ ಮೋದಿ ಅವರು ರಾಜಸ್ಥಾನದ ಮುಖ್ಯಮಂತ್ರಿ ಮತ್ತು ಅವರ ತಂಡವನ್ನು ಶ್ಲಾಘಿಸಿದರು. ಮೊದಲ ವರ್ಷವು ಮುಂಬರುವ ಹಲವು ವರ್ಷಗಳ ಅಭಿವೃದ್ಧಿಗೆ ಬಲವಾದ ಅಡಿಪಾಯವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ಇಂದಿನ ಕಾರ್ಯಕ್ರಮವು ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ್ದನ್ನು ಮಾತ್ರವಲ್ಲ, ರಾಜಸ್ಥಾನದ ಉಜ್ವಲತೆ ಮತ್ತು ರಾಜಸ್ಥಾನದ ಅಭಿವೃದ್ಧಿಯ ಹಬ್ಬವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದರು. ಇತ್ತೀಚೆಗೆ ನಡೆದ ʻರೈಸಿಂಗ್ ರಾಜಸ್ಥಾನ ಶೃಂಗಸಭೆ-2024ʼ ಕಾರ್ಯಕ್ರಮದಲ್ಲಿ ತಾವು ಭಾಗಿಯಾಗಿದ್ದನ್ನು ಸ್ಮರಿಸಿದ ಶ್ರೀ ಮೋದಿ, ವಿಶ್ವದ ವಿವಿಧ ಭಾಗಗಳ ಅನೇಕ ಹೂಡಿಕೆದಾರರು ಅಂದಿನ ಕಾರ್ಯಕ್ರಮದಲ್ಲಿ ಹಾಜರಿದ್ದರು ಮತ್ತು ಇಂದು 45,000 ಕೋಟಿ ರೂ.ಗೂ ಅಧಿಕ ಮೌಲ್ಯದ ಯೋಜನೆಗಳನ್ನು ರಾಜ್ಯದಲ್ಲಿ ಉದ್ಘಾಟಿಸಲಾಗಿದೆ ಎಂದರು. ಈ ಯೋಜನೆಗಳು ರಾಜಸ್ಥಾನದಲ್ಲಿ ನೀರಿಗೆ ಸಂಬಂಧಿಸಿದಂತೆ ಅಡೆತಡೆಗಳಿಗೆ ಸೂಕ್ತ ಪರಿಹಾರವನ್ನು ಒದಗಿಸುತ್ತವೆ ಮತ್ತು ರಾಜಸ್ಥಾನವನ್ನು ಭಾರತದ ಉತ್ತಮ ಸಂಪರ್ಕ ಹೊಂದಿರುವ ರಾಜ್ಯಗಳಲ್ಲಿ ಒಂದಾಗಿ ಮಾಡುತ್ತವೆ ಎಂದು ಅವರು ಹೇಳಿದರು. ಈ ಅಭಿವೃದ್ಧಿ ಕಾರ್ಯಗಳು ಹೆಚ್ಚಿನ ಹೂಡಿಕೆದಾರರನ್ನು ಆಹ್ವಾನಿಸುತ್ತವೆ, ಅಪಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ, ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸುತ್ತವೆ ಮತ್ತು ರಾಜಸ್ಥಾನದ ರೈತರು, ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತವೆ ಎಂದು ಪ್ರಧಾನಿ ಹೇಳಿದರು.

ಸ್ವಚ್ಛತಾ ಹಿ ಸೇವಾ​​​​​​​ 2024 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅನುವಾದ

October 02nd, 10:15 am

ಇಂದು ಪೂಜ್ಯ ಬಾಪೂ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜೀ ಅವರ ಜನ್ಮ ದಿನ. ಬಾಪು ಭಾರತೀಯ ಶ್ರೇಷ್ಠ ಪುತ್ರರಾಗಿದ್ದು, ಅವರಿಗಾಗಿ ಶಿರಬಾಗಿ ನಮಿಸುತ್ತೇನೆ. ಗಾಂಧೀಜಿ ಅವರ ಕನಸುಗಳನ್ನು ಸಾಕಾರಗೊಳಿಸಲು ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡಲು ಇದು ಸ್ಫೂರ್ತಿಯ ದಿನ. ದೇಶದ ಈ ಮಹಾನ್ ವ್ಯಕ್ತಿಗಳು ಭಾರತದ ಭವಿಷ್ಯವನ್ನು ಆಗಲೇ ಕಲ್ಪನೆ ಮಾಡಿಕೊಂಡಿದ್ದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ದಿವಸ್ 2024 ರಲ್ಲಿ ಭಾಗವಹಿಸಿದರು

October 02nd, 10:10 am

ಸ್ವಚ್ಛತೆಗಾಗಿ ಅತ್ಯಂತ ಮಹತ್ವದ ಜನಾಂದೋಲನಗಳಲ್ಲಿ ಒಂದಾದ ಸ್ವಚ್ಛ ಭಾರತ ಅಭಿಯಾನ ಪ್ರಾರಂಭವಾಗಿ 10 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಕ್ಟೋಬರ್ 2 ರಂದು 155 ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಸ್ವಚ್ಛ ಭಾರತ ದಿವಸ್ 2024 ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ. ಅಮೃತ್ ಮತ್ತು ಅಮೃತ್ 2.0, ಸ್ವಚ್ಛ ಗಂಗಾ ರಾಷ್ಟ್ರೀಯ ಮಿಷನ್ ಮತ್ತು ಗೋಬರ್ಧನ್ ಯೋಜನೆ ಸೇರಿದಂತೆ 9600 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹಲವಾರು ನೈರ್ಮಲ್ಯ ಮತ್ತು ಸ್ವಚ್ಛತೆ ಯೋಜನೆಗಳಿಗೆ ಶ್ರೀ ಮೋದಿ ಅವರು ಚಾಲನೆ ನೀಡಿದರು ಮತ್ತು ಅಡಿಪಾಯ ಹಾಕಿದರು. ಸ್ವಚ್ಛತಾ ಹಿ ಸೇವಾ 2024 ರ ಧ್ಯೇಯ 'ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ' ಆಗಿದೆ.

'ಮನ್ ಕಿ ಬಾತ್' ಕೇಳುಗರು ಈ ಕಾರ್ಯಕ್ರಮದ ನಿಜವಾದ ನಿರೂಪಕರು: ಪ್ರಧಾನಿ ಮೋದಿ

September 29th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ ನಾವೆಲ್ಲರೂ 'ಮನದ ಮಾತಿನ' ಮೂಲಕ ಒಗ್ಗೂಡುವ ಅವಕಾಶ ಲಭಿಸಿದೆ. ಇಂದಿನ ಈ ಕಂತು ನನ್ನನ್ನು ಬಹಳ ಭಾವುಕನನ್ನಾಗಿಸಲಿದೆ, ಅನೇಕ ಹಳೆಯ ನೆನಪುಗಳು ನನ್ನನ್ನು ಮುತ್ತಿವೆ - ಕಾರಣ ಏನೆಂದರೆ 'ಮನದ ಮಾತಿನ' ನಮ್ಮ ಈ ಪಯಣಕ್ಕೆ 10 ವರ್ಷಗಳು ತುಂಬುತ್ತಿದೆ. 10 ವರ್ಷಗಳ ಹಿಂದೆ ಅಕ್ಟೋಬರ್ 3 ರಂದು ವಿಜಯದಶಮಿಯ ದಿನದಂದು 'ಮನದ ಮಾತು’ ಪ್ರಾರಂಭವಾಗಿತ್ತು ಮತ್ತು ಈ ವರ್ಷ ಅಕ್ಟೋಬರ್ 3 ರಂದು 'ಮನದ ಮಾತಿಗೆ ' 10 ವರ್ಷತುಂಬುವ ಸಂದರ್ಭ ನವರಾತ್ರಿಯ ಮೊದಲ ದಿನವಾಗಿದೆ. 'ಮನದ ಮಾತಿನ’ ಈ ಸುದೀರ್ಘ ಪಯಣದಲ್ಲಿ ನಾನು ಎಂದೂ ಮರೆಯಲಾಗದ ಇಂತಹ ಹಲವಾರು ಮೈಲಿಗಲ್ಲುಗಳಿವೆ, ನಮ್ಮ ಈ ಪಯಣದಲ್ಲಿ ನಿರಂತರ ಸಹಯೋಗವನ್ನು ನೀಡಿದಂತಹ ' ಮನದ ಮಾತಿನ' ಕೋಟ್ಯಂತರ ಶ್ರೋತೃ ಬಾಂಧವರಿದ್ದಾರೆ. ದೇಶದ ಮೂಲೆ ಮೂಲೆಗಳಿಂದ ಅವರು ಮಾಹಿತಿಯನ್ನು ಒದಗಿಸಿದರು. ಮನದ ಮಾತಿನ ಶ್ರೋತೃಗಳೇ ಈ ಕಾರ್ಯಕ್ರಮದ ನಿಜವಾದ ರೂವಾರಿಗಳು. ಸಾಮಾನ್ಯವಾಗಿ ಎಲ್ಲಿಯವರೆಗೆ ರೋಚಕ ವಿಷಯಗಳನ್ನು ಮಾತನಾಡುವುದಿಲ್ಲವೋ, ನಕಾರಾತ್ಮಕ ವಿಷಯಗಳನ್ನು ಮಾತನಾಡುವುದಿಲ್ಲವೋ ಅಲ್ಲಿವರೆಗೆ ಅದು ಹೆಚ್ಚಿನ ಗಮನ ಸೆಳೆಯುವುದಿಲ್ಲ ಎನ್ನಲಾಗುತ್ತದೆ. ಆದರೆ ಮನದ ಮಾತು ದೇಶದ ಜನರು ಸಕಾರಾತ್ಮಕ ಮಾಹಿತಿಗಾಗಿ , ಎಷ್ಟು ಉತ್ಸುಕರಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಿದೆ. ಸಕಾರಾತ್ಮಕ ಮಾತು, ಪ್ರೇರಣಾತ್ಮಕ ಉದಾಹರಣೆಗಳು, ಸ್ಫೂರ್ತಿದಾಯಕ ಕಥೆಗಳು ಜನರಿಗೆ ಬಹಳ ಇಷ್ಟವಾಗುತ್ತವೆ. ಕೇವಲ ಮಳೆಹನಿಗಳನ್ನು ಮಾತ್ರ ಕುಡಿಯುವಂತಹ ಚಾತಕ ಪಕ್ಷಿಯಂತೆ ಜನರು ದೇಶದ ಸೌಲಭ್ಯಗಳ ಬಗ್ಗೆ, ಜನರ ಸಾಮೂಹಿಕ ಸಾಧನೆಗಳ ಬಗ್ಗೆ ಮನದ ಮಾತಿನ ಮೂಲಕ ಎಷ್ಟು ಹೆಮ್ಮೆಯಿಂದ ಕೇಳುತ್ತಾರೆ. ಮನದ ಮಾತಿನ 10 ವರ್ಷಗಳ ಪಯಣ ಎಷ್ಟು ಅದ್ಭುತವಾದ ಹಾರವನ್ನು ಸಿದ್ಧಗೊಳಿಸಿದೆ ಎಂದರೆ ಪ್ರತಿ ಸಂಚಿಕೆಯೊಂದಿಗೆ ಹೊಸ ಯಶೋಗಾಥೆಗಳು, ಹೊಸ ಕೀರ್ತಿವಂತರು ಮತ್ತು ಹೊಸ ವ್ಯಕ್ತಿತ್ವಗಳನ್ನು ಸೇರಿಸುತ್ತಾ ಸಾಗಿದೆ. ನಮ್ಮ ಸಮಾಜದಲ್ಲಿ ಸಾಮಾಜಿಕ ಹಿತದೃಷ್ಟಿಯ ಭಾವನೆಯಿಂದ ಯಾವುದೇ ಕೆಲಸ ಮಾಡಿದರೂ ಅವರಿಗೆ 'ಮನದ ಮಾತಿನ' ಮೂಲಕ ಗೌರವ ಲಭಿಸುತ್ತದೆ. 'ಮನದ ಮಾತಿ'ಗೆ ಬಂದ ಪತ್ರಗಳನ್ನು ನಾನು ಓದಿದಾಗ ನನ್ನ ಮನವೂ ಹೆಮ್ಮೆಯಿಂದ ಬೀಗುತ್ತದೆ. ನಮ್ಮ ದೇಶದಲ್ಲಿ ಅದೆಷ್ಟೋ ಪ್ರತಿಭಾವಂತರಿದ್ದಾರೆ, ಅವರು ತಮ್ಮ ಇಡೀ ಜೀವನವನ್ನು ಜನರ ನಿಸ್ವಾರ್ಥ ಸೇವೆಗಾಗಿ ಮುಡಿಪಾಗಿಟ್ಟಿದ್ದಾರೆ. ಅವರ ಬಗ್ಗೆ ತಿಳಿಯುವುದು ನನ್ನಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. 'ಮನದ ಮಾತಿನ' ಈ ಸಂಪೂರ್ಣ ಪ್ರಕ್ರಿಯೆಯು ನನಗೆ ದೇವಾಲಯಕ್ಕೆ ತೆರಳಿ ದೇವರ ದರ್ಶನ ಪಡೆಯುವಂತಿದೆ. ಮನದ ಮಾತಿನ ಪ್ರತಿ ವಿಷಯ, ಪ್ರತಿ ಘಟನೆ, ಪ್ರತಿ ಪತ್ರವನ್ನು ನೆನಪಿಸಿಕೊಂಡಾಗ, ನನಗೆ ಭಗವಂತನ ರೂಪದಲ್ಲಿರುವ ಜನತಾ ಜನಾರ್ದನನ ದರ್ಶನ ಪಡೆದಂತೆ ಭಾಸವಾಗುತ್ತದೆ.

ಗುಜರಾತ್‌ನ ಗಾಂಧಿನಗರದಲ್ಲಿ ರಿ-ಇನ್ವೆಸ್ಟ್ 2024 ಸಮ್ಮೇಳನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 16th, 11:30 am

ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ, ಶ್ರೀ ಭೂಪೇಂದ್ರಭಾಯಿ ಪಟೇಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶ್ರೀ ಮೋಹನ್ ಯಾದವ್ ಜಿ, ಛತ್ತೀಸ್‌ಗಢ ಮುಖ್ಯಮಂತ್ರಿ ಮತ್ತು ಗೋವಾ ಮುಖ್ಯಮಂತ್ರಿಗಳೆ, ಸಂಪು ಸಹೋದ್ಯೋಗಿಗಳಾದ ಪ್ರಲ್ಹಾದ್ ಜೋಶಿ ಮತ್ತು ಶ್ರೀಪಾದ್ ನಾಯ್ಕ್ ಜಿ, ಜರ್ಮನಿಯ ಆರ್ಥಿಕ ಸಹಕಾರ ಸಚಿವರು ಮತ್ತು ಡೆನ್ಮಾರ್ಕ್‌ನ ಕೈಗಾರಿಕಾ ವ್ಯವಹಾರ ಸಚಿವರು ಸೇರಿದಂತೆ ವಿದೇಶಿ ಗಣ್ಯ ಅತಿಥಿಗಳೆ, ವಿವಿಧ ರಾಜ್ಯಗಳ ಇಂಧನ ಸಚಿವರೆ, ಹಲವಾರು ದೇಶಗಳ ಪ್ರತಿನಿಧಿಗಳೆ, ಇಲ್ಲಿ ನೆರೆದಿರುವ ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ಗಾಂಧಿನಗರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು

September 16th, 11:11 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ 4ನೇ ಜಾಗತಿಕ ನವೀಕರಿಸಬಹುದಾದ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್ ಪೋ (ಮರು ಹೂಡಿಕೆ) ಉದ್ಘಾಟಿಸಿದರು. 3 ದಿನಗಳ ಶೃಂಗಸಭೆಯು 200 ಗಿಗಾವ್ಯಾಟ್ ಗಿಂತ ಹೆಚ್ಚು ಸ್ಥಾಪಿತ ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯದ ಭಾರತದ ಗಮನಾರ್ಹ ಸಾಧನೆಗೆ ಪ್ರಮುಖ ಕೊಡುಗೆ ನೀಡಿದವರನ್ನು ಗೌರವಿಸುತ್ತದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಕಂಪನಿಗಳು, ನವೋದ್ಯಮಗಳು ಮತ್ತು ಪ್ರಮುಖ ಉದ್ಯಮದ ಉದ್ದಿಮಿಗಳ ಅತ್ಯಾಧುನಿಕ ಆವಿಷ್ಕಾರಗಳನ್ನು ಪ್ರದರ್ಶಿಸುವ ಪ್ರದರ್ಶನವನ್ನು ಶ್ರೀ ನರೇಂದ್ರ ಮೋದಿ ವೀಕ್ಷಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು

September 06th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್‌ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು

September 06th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್‌ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.

ವಿಭಜಕ ರಾಜಕೀಯವನ್ನು ಸಕ್ರಿಯಗೊಳಿಸಲು 370 ನೇ ವಿಧಿ ಮತ್ತು ಸಿಎಎ ರದ್ದತಿಯನ್ನು ಕಾಂಗ್ರೆಸ್ ವಿರೋಧಿಸುತ್ತದೆ: ಜುನಾಗಢದಲ್ಲಿ ಪ್ರಧಾನಿ ಮೋದಿ

May 02nd, 11:30 am

ಜುನಾಗಢ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ ಮತ್ತು ವಿಭಜಕ ರಾಜಕೀಯದ ಕಾಂಗ್ರೆಸ್‌ನ ಉದ್ದೇಶವನ್ನು ಟೀಕಿಸಿದ ಪ್ರಧಾನಿ ಮೋದಿ, ವಿಭಜಕ ರಾಜಕೀಯವನ್ನು ಸಕ್ರಿಯಗೊಳಿಸಲು 370 ನೇ ವಿಧಿ ಮತ್ತು ಸಿಎಎ ರದ್ದತಿಯನ್ನು ಕಾಂಗ್ರೆಸ್ ವಿರೋಧಿಸುತ್ತದೆ ಎಂದು ಹೇಳಿದರು. ಭಾರತವನ್ನು ಉತ್ತರ ಮತ್ತು ದಕ್ಷಿಣ ಎಂದು ವಿಭಜಿಸುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ತನ್ನ ಅಧಿಕಾರ ರಾಜಕಾರಣಕ್ಕಾಗಿ ಭಾರತವನ್ನು ಅಸುರಕ್ಷಿತವಾಗಿಡುವ ಗುರಿ ಹೊಂದಿದೆ ಎಂದು ಅವರು ಹೇಳಿದರು.