ಆಧ್ಯಾತ್ಮಿಕ ನಾಯಕರ ಸಂದೇಶದಿಂದಾಗಿ ಭಾರತವು ಇತರ ದೇಶಗಳಲ್ಲಿ ಕಂಡುಬರುವಂತೆ ಲಸಿಕೆ ಹಿಂಜರಿಕೆಯನ್ನು ಎದುರಿಸಲಿಲ್ಲ: ಪ್ರಧಾನಿ
August 24th, 11:01 am
ಫರಿದಾಬಾದ್‌ನಲ್ಲಿ ಅತ್ಯಾಧುನಿಕ ಅಮೃತಾ ಆಸ್ಪತ್ರೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಆಸ್ಪತ್ರೆಯು ಆಧುನಿಕತೆ ಮತ್ತು ಆಧ್ಯಾತ್ಮಿಕತೆಯ ಮಿಶ್ರಣವಾಗಿದ್ದು, ನಿರ್ಗತಿಕ ರೋಗಿಗಳಿಗೆ ಕೈಗೆಟುಕುವ ಮತ್ತು ಕೈಗೆಟುಕುವ ಚಿಕಿತ್ಸೆಯ ಮಾಧ್ಯಮವಾಗಲಿದೆ ಎಂದು ಅವರು ಹೇಳಿದರು.ಫರಿದಾಬಾದ್ ನಲ್ಲಿ ಅತ್ಯಾಧುನಿಕ ಅಮೃತಾ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ
August 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫರಿದಾಬಾದ್‌ನಲ್ಲಿ ಅತ್ಯಾಧುನಿಕ ಅಮೃತಾ ಆಸ್ಪತ್ರೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹರಿಯಾಣದ ರಾಜ್ಯಪಾಲ ಶ್ರೀ ಬಂಡಾರು ದತ್ತಾತ್ರೇಯ, ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್, ಉಪಮುಖ್ಯಮಂತ್ರಿ ಶ್ರೀ ದುಷ್ಯಂತ್ ಚೌತಾಲಾ, ಕೇಂದ್ರ ಸಚಿವ ಶ್ರೀ ಕೃಷ್ಣ ಪಾಲ್ ಗುರ್ಜಾರ್, ಶ್ರೀ ಮಾತಾ ಅಮೃತಾನಂದಮಯಿ ಸೇರಿ ಹಲವರು ಗಣ್ಯರು ಉಪಸ್ಥಿತರಿದ್ದರು.ಪ್ರಧಾನಮಂತ್ರಿಯವರು ಆಗಸ್ಟ್ 24 ರಂದು ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ
August 22nd, 01:55 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 24, 2022 ರಂದು ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ, ಹಾಗೂ ಎರಡು ಪ್ರಮುಖ ಆರೋಗ್ಯ ಉಪಕ್ರಮಗಳನ್ನು ಪ್ರಧಾನಮಂತ್ರಿಯವರು ಉದ್ಘಾಟನೆ/ ರಾಷ್ಟ್ರಕ್ಕೆ ಸಮರ್ಪಣೆ ಮಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಪ್ರಧಾನಮಂತ್ರಿಯವರು ಹರಿಯಾಣದ ಫರಿದಾಬಾದ್ನಲ್ಲಿ ಅಮೃತ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಅದರ ನಂತರ, ಪ್ರಧಾನಮಂತ್ರಿಯವರು ಮೊಹಾಲಿಗೆ ಪ್ರಯಾಣಿಸಲಿದ್ದಾರೆ. ಅದೇ ದಿನ ಮದ್ಯಾಹ್ನ ಸುಮಾರು 02:15 ಗಂಟೆಗೆ ಸಾಹಿಬ್ಜಾದಾ ಅಜಿತ್ ಸಿಂಗ್ ನಗರ ಜಿಲ್ಲೆ (ಮೊಹಾಲಿ)ಯ ನ್ಯೂ ಚಂಡೀಗಢದ ಮುಲ್ಲನ್ ಪುರ್ ನಲ್ಲಿ 'ಹೋಮಿ ಭಾಭಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ'ವನ್ನು ಪ್ರಧಾನಮಂತ್ರಿಯವರು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.