ಸ್ಕೇಟಿಂಗ್‌ನಲ್ಲಿ ಭಾರತದ ಮೊದಲ ವಿಶ್ವ ಚಾಂಪಿಯನ್ ಆಗಿ 2025ರ ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಆನಂದಕುಮಾರ್ ವೇಲ್‌ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

September 16th, 08:47 am

2025ರ ಸ್ಪೀಡ್ ಸ್ಕೇಟಿಂಗ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಹಿರಿಯ ಪುರುಷರ 1000 ಮೀಟರ್ ಸ್ಪ್ರಿಂಟ್‌ನಲ್ಲಿ ಚಿನ್ನ ಗೆದ್ದ ಆನಂದಕುಮಾರ್ ವೇಲ್‌ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಅವರ ಧೈರ್ಯ, ವೇಗ ಮತ್ತು ಉತ್ಸಾಹ ಅವರನ್ನು ಸ್ಕೇಟಿಂಗ್‌ನಲ್ಲಿ ಭಾರತದ ಮೊದಲ ವಿಶ್ವ ಚಾಂಪಿಯನ್ ಆಗಿ ಮಾಡಿದೆ. ಅವರ ಸಾಧನೆ ಅಸಂಖ್ಯಾತ ಯುವಕರಿಗೆ ಸ್ಫೂರ್ತಿದಾಯಕವಾಗಿದೆ ಎಂದು ಶ್ರೀ ಮೋದಿ ಅವರು ಆನಂದಕುಮಾರ್ ವೇಲ್‌ಕುಮಾರ್ ಅವರನ್ನು ಪ್ರಶಂಸಿಸಿದ್ದಾರೆ.

ಏಷ್ಯನ್ ಗೇಮ್ಸ್ 2022 ರಲ್ಲಿ ಪುರುಷರ ಸ್ಪೀಡ್ ಸ್ಕೇಟಿಂಗ್ 3000 ಮೀಟರ್ ರಿಲೇಯಲ್ಲಿ ಕಂಚಿನ ಪದಕದ ಸಂಭ್ರಮಾಚರಣೆ ಮಾಡಿದ ಪ್ರಧಾನಿ

October 02nd, 12:25 pm

ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2022ರಲ್ಲಿ ಪುರುಷರ ಸ್ಪೀಡ್ ಸ್ಕೇಟಿಂಗ್ 3000 ಮೀಟರ್ ರಿಲೇಯಲ್ಲಿ ಕಂಚಿನ ಪದಕ ಗೆದ್ದ ಆನಂದಕುಮಾರ್ ವೇಲ್ ಕುಮಾರ್, ಸಿದ್ಧಾಂತ್ ರಾಹುಲ್ ಕಾಂಬ್ಳೆ ಮತ್ತು ವಿಕ್ರಮ್ ರಾಜೇಂದ್ರ ಇಂಗಳೆ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.