ಮಧ್ಯಪ್ರದೇಶದ ಆನಂದಪುರ ಧಾಮ್ ನಲ್ಲಿ ಪ್ರಧಾನಮಂತ್ರಿ ಭಾಷಣ
April 11th, 03:37 pm
ಸ್ವಾಮಿ ವಿಚಾರ ಪೂರ್ಣ ಆನಂದ ಜಿ ಮಹಾರಾಜ್ ಜಿ, ರಾಜ್ಯಪಾಲರಾದ ಮಂಗೂಭಾಯ್ ಪಟೇಲ್ ಜಿ, ಮುಖ್ಯಮಂತ್ರಿ ಮೋಹನ್ ಯಾದವ್ ಜಿ, ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ಸಂಸದ ವಿ.ಡಿ. ಶರ್ಮಾ ಜಿ, ಸಂಸದ ಜನಾರ್ದನ ಸಿಂಗ್ ಸಿಗ್ರಿವಾಲ್ ಜಿ, ವೇದಿಕೆಯ ಮೇಲೆ ಉಪಸ್ಥಿತರಿರುವ ಇತರ ಗಣ್ಯರೇ, ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ, ದೆಹಲಿ, ಹರಿಯಾಣ, ಪಂಜಾಬ್ ಮತ್ತು ದೇಶದಾದ್ಯಂತದಿಂದ ಬಹಳ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಇಲ್ಲಿಗೆ ಆಗಮಿಸಿದ್ದಾರೆ. ನಿಮ್ಮೆಲ್ಲರಿಗೂ ನನ್ನ ನಮಸ್ಕಾರಗಳು.ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
April 11th, 03:26 pm
ಭಾರತದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಮುಂದುವರಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿಗಳು ಇಂದು ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯ ಇಸಾಗರ್ಹ್ ತಹಸಿಲ್ ನ ಆನಂದಪುರ ಧಾಮಕ್ಕೆ ಭೇಟಿ ನೀಡಿದರು. ಅವರು ಗುರು ಜಿ ಮಹಾರಾಜರ ದೇವಾಲಯದಲ್ಲಿ ದರ್ಶನ ಪಡೆದು ಪೂಜೆ ಸಲ್ಲಿಸಿದರು ಮತ್ತು ಆನಂದಪುರ ಧಾಮದ ದೇವಾಲಯದ ಆವರಣವನ್ನು ವೀಕ್ಷಿಸಿದರು. ಅಲ್ಲಿ ನೆರೆದಿದ್ದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ, ಹರಿಯಾಣ, ಪಂಜಾಬ್ ಮತ್ತು ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತ ಸಮೂಹವನ್ನು ಆದರದಿಂದ ಸ್ವಾಗತಿಸಿದರು. ಶ್ರೀ ಆನಂದಪುರ ಧಾಮಕ್ಕೆ ಭೇಟಿ ನೀಡಿದ ತಮ್ಮ ಸಂತಸವನ್ನು ವ್ಯಕ್ತಪಡಿಸಿದ ಅವರು, ಗುರುಜಿ ಮಹಾರಾಜರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಅನುಭವವು ತಮ್ಮ ಮನಸ್ಸಿಗೆ ಆನಂದವನ್ನು ನೀಡಿತು ಎಂದು ಹೇಳಿದರು.ಏಪ್ರಿಲ್ 11ರಂದು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
April 09th, 09:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್ 11ರಂದು ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ವಾರಣಾಸಿಗೆ ಪ್ರಯಾಣಿಸಲಿದ್ದು, ಬೆಳಗ್ಗೆ 11 ಗಂಟೆಗೆ ಅವರು 3,880 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಇದೇ ವೇಳೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.