Prime Minister lauds Commissioning of HPCL’s Residue Upgradation Facility at Visakh Refinery

January 06th, 08:50 am

Prime Minister Shri Narendra Modi today lauded the successful commissioning of Hindustan Petroleum Corporation Limited’s (HPCL) Residue Upgradation Facility (RUF) at the Visakh Refinery in Andhra Pradesh, describing it as a decisive leap in Bharat’s journey toward energy security and self-reliance.

ಒಡಿಶಾದಲ್ಲಿ ರಾಷ್ಟೀಯ ಹೆದ್ದಾರಿ-326 ರ 68.600 ಕಿಮೀ ನಿಂದ 311.700 ಕಿಮೀ ವರೆಗೆ ಇಪಿಸಿ ಮಾದರಿಯಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ದ್ವಿಪಥ(2-ರಸ್ತೆ)ವನ್ನು, 2-ಪರ್ಯಾಯ ಭುಜದ ದ್ವಿಪಥರಸ್ತೆಯೊಂದಿಗೆ ಅಗಲೀಕರಣ ಮತ್ತು ಬಲಪಡಿಸುವಿಕೆ ಮಾಡುವ ಕಾರ್ಯವನ್ನು ಸಚಿವ ಸಂಪುಟ ಅನುಮೋದಿಸಿದೆ

December 31st, 03:11 pm

1526.21 ಕೋಟಿ ರೂ. ಮೌಲ್ಯದ ವೆಚ್ಚದಲ್ಲಿ ರಾಷ್ಟೀಯ ಹೆದ್ದಾರಿ-326 ರ 68.600 ಕಿಮೀ ನಿಂದ 311.700 ಕಿಮೀ ವರೆಗೆ ಅಸ್ತಿತ್ವದಲ್ಲಿರುವ 2-ಪರ್ಯಾಯ ಭುಜದ ದ್ವಿಪಥರಸ್ತೆಯೊಂದಿಗೆ ಅಗಲೀಕರಣ ಮತ್ತು ಬಲಪಡಿಸುವಿಕೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಇಂದು ಅನುಮೋದಿಸಿದೆ.

'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ

December 28th, 11:30 am

ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

December 12th, 09:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಸಂಬಂಧಿಗಳಿಗೆ ಪಿ.ಎಂ.ಎನ್‌.ಆರ್.ಎಫ್ ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರವನ್ನು ಅವರು ಘೋಷಿಸಿದ್ದಾರೆ.

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಆತ್ಮೀಯ ಸ್ವಾಗತ ಸ್ವೀಕರಿಸಿದ ಪ್ರಧಾನಮಂತ್ರಿ

November 19th, 01:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಯಿ ರಾಮನ ದಿವ್ಯ ಮಂತ್ರ ಘೋಷಗಳ ನಡುವೆ ಆಂಧ್ರಪ್ರದೇಶದ ಪುಟ್ಟಪರ್ತಿಯನ್ನು ತಲುಪಿದರು ಮತ್ತು ಅವರಿಗೆ ಆತ್ಮೀಯ ಸ್ವಾಗತ ದೊರಕಿತು.

ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

November 18th, 11:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.

ಆಂಧ್ರಪ್ರದೇಶದ ಶ್ರೀಕಾಕುಲಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ತೀವ್ರ ಸಂತಾಪ

November 01st, 01:59 pm

ಆಂಧ್ರಪ್ರದೇಶದ ಶ್ರೀಕಾಕುಲಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ.

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಭೀಕರ ಬಸ್ ಬೆಂಕಿ ದುರಂತ: ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ

October 24th, 09:02 am

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಬಸ್ ಬೆಂಕಿ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ(PMNRF) ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ತಮ್ಮ ಆಂಧ್ರಪ್ರದೇಶ ಭೇಟಿಯ ಇಣುಕುನೋಟಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ

October 16th, 09:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಆಂಧ್ರಪ್ರದೇಶ ಭೇಟಿಯ ಇಣುಕುನೋಟಗಳನ್ನು ಹಂಚಿಕೊಂಡಿದ್ದಾರೆ. ಶ್ರೀಶೈಲಂನಲ್ಲಿ, ಶ್ರೀ ಬ್ರಹ್ಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಶ್ರೀ ನರೇಂದ್ರ ಮೋದಿ ಅವರು ಶ್ರೀ ಶಿವಾಜಿ ಧ್ಯಾನ ಮಂದಿರ ಮತ್ತು ಶ್ರೀ ಶಿವಾಜಿ ದರ್ಬಾರ್ ಸಭಾಂಗಣಕ್ಕೆ ಭೇಟಿ ನೀಡಿದರು. ನಂತರ ಅವರು ಕರ್ನೂಲ್ ನಲ್ಲಿ ಸುಮಾರು 13,430 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು.

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 16th, 03:00 pm

ಪ್ರೀತಿಯ ಸಹೋದರ ಸಹೋದರಿಯರೆ, ನಿಮ್ಮೆಲ್ಲರಿಗೂ ಶುಭಾಶಯಗಳು!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಕರ್ನೂಲ್‌ ನಲ್ಲಿ 13,430 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದರು

October 16th, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಕರ್ನೂಲ್‌ ನಲ್ಲಿ ಸುಮಾರು ₹13,430 ಕೋಟಿ ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾಪರ್ಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಅಹೋಬಿಲಂನ ಭಗವಾನ್ ನರಸಿಂಹ ಸ್ವಾಮಿ ಮತ್ತು ಮಹಾನಂದಿಯ ಶ್ರೀ ಮಹಾನಂದೀಶ್ವರ ಸ್ವಾಮಿಗೆ ನಮನ ಸಲ್ಲಿಸಿದರು. ಎಲ್ಲರ ಯೋಗಕ್ಷೇಮಕ್ಕಾಗಿ ಅವರು ಮಂತ್ರಾಲಯದ ಗುರು ಶ್ರೀ ರಾಘವೇಂದ್ರ ಸ್ವಾಮಿಗಳ ಆಶೀರ್ವಾದವನ್ನು ಕೋರಿದರು.

ಅಕ್ಟೋಬರ್‌ 16ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

October 14th, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್‌ 16ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.15ರ ಸುಮಾರಿಗೆ ನಂದ್ಯಾಳ ಜಿಲ್ಲೆಯ ಶ್ರೀಶೈಲಂನ ಶ್ರೀ ಬ್ರಹ್ಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲಾ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 12:15 ರ ಸುಮಾರಿಗೆ ಅವರು ಶ್ರೀಶೈಲಂನ ಶ್ರೀ ಶಿವಾಜಿ ಸ್ಪೂರ್ಣಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಆಂಧ್ರಪ್ರದೇಶದ ಮುಖ್ಯಮಂತ್ರಿ

October 13th, 06:29 pm

ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ಎನ್. ಚಂದ್ರಬಾಬು ನಾಯ್ಡು ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಮುಖ್ಯಮಂತ್ರಿಯಾಗಿ 15 ವರ್ಷಗಳನ್ನು ಪೂರೈಸಿದ ಶ್ರೀ ಎನ್. ಚಂದ್ರಬಾಬು ನಾಯ್ಡು ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

October 11th, 10:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಎನ್. ಚಂದ್ರಬಾಬು ನಾಯ್ಡು ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮುಖ್ಯಮಂತ್ರಿಯಾಗಿ 15 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಅವರನ್ನು ಅಭಿನಂದಿಸಿದ್ದಾರೆ.

ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

October 08th, 05:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ಮೋದಿ ಅವರು ಹಾರೈಸಿದ್ದಾರೆ.

Cabinet approves semiconductor manufacturing units in ODISHA, PUNJAB and ANDHRA PRADESH worth Rs.4600 crore

August 12th, 03:18 pm

The Union Cabinet, chaired by PM Modi, has approved four semiconductor projects worth ₹4,600 crore under the India Semiconductor Mission (ISM). These projects will give a major boost to India’s semiconductor ecosystem, including the country’s first commercial compound fab and an advanced glass-based substrate packaging unit, and are expected to create jobs for 2,034 skilled professionals.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ

June 29th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.

ಯೋಗ ಆಂದೋಲನವನ್ನು ಬಲಪಡಿಸುವ ಆಂಧ್ರಪ್ರದೇಶದ ಯೋಗಾಂಧ್ರ ಉಪಕ್ರಮಕ್ಕೆ ಪ್ರಧಾನಮಂತ್ರಿ ಮೆಚ್ಚುಗೆ

June 22nd, 02:10 pm

ಯೋಗದ ರಾಷ್ಟ್ರವ್ಯಾಪಿ ಆಂದೋಲನವನ್ನು ಮತ್ತಷ್ಟು ಮುನ್ನಡೆಸುವ ಮೂಲಕ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವ ಆಂಧ್ರಪ್ರದೇಶದ ಜನರ ಸ್ಫೂರ್ತಿದಾಯಕ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ಲಾಘಿಸಿದ್ದಾರೆ.

ವಿಶಾಖಪಟ್ಟಣದಲ್ಲಿ ನಡೆದ ಯೋಗ ದಿನಾಚರಣೆಯ ಚಿತ್ರಗಳು

June 21st, 09:46 am

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಅವರು ಹಲವಾರು ಯೋಗ ಸಾಧಕರೊಂದಿಗೆ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ಯೋಗವು ಎಲ್ಲರನ್ನೂ ಒಂದುಗೂಡಿಸಿದೆ ಎಂದು ಹೇಳಿದ ಪ್ರಧಾನಿ, ಯೋಗವು ಎಲ್ಲರಿಗೂ, ಗಡಿಗಳನ್ನು ಮೀರಿ, ಹಿನ್ನೆಲೆಗಳನ್ನು ಮೀರಿ, ವಯಸ್ಸು ಅಥವಾ ಸಾಮರ್ಥ್ಯವನ್ನು ಮೀರಿ ಎಂದು ಹೇಳಿದರು.

ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 21st, 07:06 am

ಆಂಧ್ರ ಪ್ರದೇಶ ರಾಜ್ಯಪಾಲರಾದ ಸೈಯದ್ ಅಬ್ದುಲ್ ನಜೀರ್ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ನನ್ನ ಆತ್ಮೀಯ ಗೆಳೆಯ ಚಂದ್ರಬಾಬು ನಾಯ್ಡು ಗಾರು, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಕೆ. ರಾಮಮೋಹನ್ ನಾಯ್ಡು ಜಿ, ಪ್ರತಾಪರಾವ್ ಜಾಧವ್ ಜಿ, ಚಂದ್ರಶೇಖರ್ ಜಿ, ಭೂಪತಿ ರಾಜು ಶ್ರೀನಿವಾಸ್ ವರ್ಮಾ ಗಾರು, ರಾಜ್ಯದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗಾರು, ಇಲ್ಲಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ! ನಿಮ್ಮೆಲ್ಲರಿಗೂ ನಮಸ್ಕಾರ!