ಪ್ರಧಾನಮಂತ್ರಿ ಅವರ ನ್ಯೂಜಿಲೆಂಡ್ ಅಧಿಕೃತ ಭೇಟಿಯ ಫಲಿತಾಂಶದ ಪಟ್ಟಿ
July 11th, 08:03 am
ಸಂವಾದ, ಸಮನ್ವಯ, ಮಾಹಿತಿ ವಿನಿಮಯ ಮತ್ತು ಜಂಟಿ ಚಟುವಟಿಕೆಗಳ ಮೂಲಕ ಇಂಡೋ-ಪೆಸಿಫಿಕ್‌ನಲ್ಲಿ ವರ್ಧಿತ ಕಡಲ ಸಹಕಾರಕ್ಕಾಗಿ ಒಂದು ಚೌಕಟ್ಟನ್ನು ಸ್ಥಾಪಿಸುತ್ತದೆ.16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯ ಚರ್ಚೆ ಕುರಿತು ಜಂಟಿ ಹೇಳಿಕೆ
July 02nd, 10:22 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜಪಾನ್ ಪ್ರಧಾನಮಂತ್ರಿ ಶ್ರೀಮತಿ ತಕೈಚಿ ಸಾನೆ ಅವರು 2026 ಜುಲೈ 1-3ರ ವರೆಗೆ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಪ್ರಧಾನಿ ತಕೈಚಿ ಅವರೊಂದಿಗೆ ಹಿರಿಯ ಅಧಿಕಾರಿಗಳು, ಸಿಇಒಗಳು ಮತ್ತು ಉದ್ಯಮ ವಲಯದ ದಿಗ್ಗಜರು ಸೇರಿದಂತೆ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು. ಇದು ಜಪಾನ್ ಪ್ರಧಾನಿ ತಕೈಚಿ ಅವರು ಭಾರತಕ್ಕೆ ನೀಡಿದ ಚೊಚ್ಚಲ ಅಧಿಕೃತ ಭೇಟಿಯಾಗಿತ್ತು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆದ 'ಪಶ್ಚಿಮ ಬಂಗಾ ದಿವಸ' ಆಚರಣೆಯಲ್ಲಿ ಭಾಗವಹಿಸಿದರು
June 19th, 11:54 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳ ದಿವಸ (ಪಶ್ಚಿಮ ಬಂಗಾಳ ದಿನ) ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರೊಂದಿಗೆ ನಂಟು ಹೊಂದಿರುವ ಐತಿಹಾಸಿಕ ಮಹತ್ವದ ಸ್ಥಳವಾದ ಹೂಗ್ಲಿಯ ತಾರಕೇಶ್ವರದಲ್ಲಿ ರಾಜ್ಯ ಮಟ್ಟದ ಆಚರಣೆಗಳನ್ನು ಆಯೋಜಿಸಲಾಗಿದೆ. ಈ ವರ್ಷದ ಪಶ್ಚಿಮ ಬಂಗಾಳ ದಿನಾಚರಣೆಯ ವಿಷಯವಾದ ಪಶ್ಚಿಮ ಬಂಗಾಳ: ಪರಂಪರೆ, ಸಾಮರಸ್ಯ ಮತ್ತು ಅಭಿವೃದ್ಧಿ ಎಂಬುದು ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆ, ಸಾಮಾಜಿಕ ಸಾಮರಸ್ಯ ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ.ಭಾರತ-ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ (2026-2030)
May 17th, 03:15 am
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ನೆದರ್ ಲ್ಯಾಂಡ್ಸ್ ಪ್ರಧಾನ ಮಂತ್ರಿ ಶ್ರೀ ರಾಬ್ ಜೆಟ್ಟನ್ ಅವರು 2026 ಮೇ 16ರಂದು ಹೇಗ್‌ನಲ್ಲಿ ನಡೆದ ಸಭೆಯಲ್ಲಿ ಗಮನ ಕೇಂದ್ರೀಕರಿಸಿದ ಸಮಯಬದ್ಧ ಉಪಕ್ರಮಗಳು ಮತ್ತು ಜಂಟಿ ಕ್ರಿಯಾ ಯೋಜನೆಗಳನ್ನು ಅನುಸರಿಸುವ ಮೂಲಕ ಭಾರತ- ನೆದರ್ ಲ್ಯಾಂಡ್ಸ್ ದ್ವಿಪಕ್ಷೀಯ ಸಂಬಂಧವನ್ನು ಕಾರ್ಯತಂತ್ರ ಪಾಲುದಾರಿಕೆಗೆ ಹೆಚ್ಚಿಸಲು ಒಪ್ಪಿಕೊಂಡರು. ಈ ನಿಟ್ಟಿನಲ್ಲಿ, ಭಾರತ ಮತ್ತು ನೆದರ್ ಲ್ಯಾಂಡ್ಸ್ ಮುಂದಿನ 5 ವರ್ಷಗಳ(2026-2030) ಭಾರತ- ನೆದರ್ ಲ್ಯಾಂಡ್ಸ್ ಕಾರ್ಯತಂತ್ರ ಪಾಲುದಾರಿಕೆಯ ಮಾರ್ಗಸೂಚಿ ಅಳವಡಿಸಿಕೊಂಡವು.ಫಲಿತಾಂಶಗಳ ಪಟ್ಟಿ: ನೆದರ್‌ಲ್ಯಾಂಡ್ಸ್ ಗೆ ಪ್ರಧಾನಮಂತ್ರಿ ಅವರ ಭೇಟಿ
May 17th, 02:47 am
ಭಾರತ-ನೆದರ್‌ಲ್ಯಾಂಡ್ಸ್ ವ್ಯೂಹಾತ್ಮಕ ಪಾಲುದಾರಿಕೆಯ ಮಾರ್ಗಸೂಚಿ (2026-2030)ಕಾಂಗ್ರೆಸ್ = ಸುಳ್ಳಿನ ಅಂಗಡಿ, ಜನರಿಗೆ ಅವಮಾನ: ಅಸ್ಸಾಂನ ಹೋಜೈನಲ್ಲಿ ಪ್ರಧಾನಿ ಮೋದಿ
April 06th, 11:20 am
ಪ್ರಧಾನಿ ಮೋದಿ ಅಸ್ಸಾಂನ ಹೋಜೈನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದಲ್ಲಿ, ಅವರು ಕಾಂಗ್ರೆಸ್ ಆಡಳಿತದ ರಾಜ್ಯಗಳ ಉದಾಹರಣೆಗಳನ್ನು ಉಲ್ಲೇಖಿಸಿದರು ಮತ್ತು ಅವರ ಭರವಸೆಗಳು ನೆಲದ ಮೇಲೆ ವಿಫಲವಾಗಿವೆ ಎಂದು ಹೇಳಿದರು. ದಾರಿತಪ್ಪಿಸುವ ಭರವಸೆಗಳ ಬಗ್ಗೆ ಜಾಗರೂಕರಾಗಿರಲು ಅವರು ಅಸ್ಸಾಂನ ಮತದಾರರಿಗೆ ಎಚ್ಚರಿಕೆ ನೀಡಿದರು. ಅಕ್ರಮ ಒಳನುಸುಳುವಿಕೆ ಮತ್ತು ಅಸ್ಸಾಂನ ಗುರುತು, ಭೂಮಿ ಮತ್ತು ಉದ್ಯೋಗದ ಮೇಲೆ ಅದರ ಪರಿಣಾಮದ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದರು.ಬಾರ್ಪೇಟಾ, ಹೊಜೈ ಮತ್ತು ದಿಬ್ರುಗಢದಲ್ಲಿ ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ
April 06th, 11:00 am
ಅಸ್ಸಾಂನಲ್ಲಿ ಚುನಾವಣಾ ಪ್ರಚಾರವು ಬಲವಾದ ವೇಗವನ್ನು ಪಡೆದಂತೆ, ಬಾರ್ಪೇಟಾ, ಹೊಜೈ ಮತ್ತು ದಿಬ್ರುಗಢದಲ್ಲಿ ಬೃಹತ್ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಉತ್ಸಾಹಭರಿತ ಜನಸಮೂಹವನ್ನು ಉದ್ದೇಶಿಸಿ ಪ್ರಧಾನಿ ಮೋದಿ, ಸ್ವಾವಲಂಬಿ ಮತ್ತು ವಿಕಸಿತ್ ಅಸ್ಸಾಂನ ದೃಷ್ಟಿಕೋನವನ್ನು ಎತ್ತಿ ತೋರಿಸಿದರು. ಅವರು ಕಾಂಗ್ರೆಸ್ ಮೇಲೆ ಬಲವಾದ ದಾಳಿ ನಡೆಸಿದರು, ಕುಟುಂಬ-ಮೊದಲು ರಾಜಕೀಯ, ಭ್ರಷ್ಟಾಚಾರ ಮತ್ತು ಸುಳ್ಳು ಭರವಸೆಗಳನ್ನು ಉತ್ತೇಜಿಸುತ್ತಿದೆ ಎಂದು ಆರೋಪಿಸಿದರು. ನಾರಿ ಶಕ್ತಿ ವಂದನ್ ಕಾಯ್ದೆಯ ಮೂಲಕ ಮಹಿಳೆಯರಿಗೆ ಮೀಸಲಾತಿಯನ್ನು ಖಚಿತಪಡಿಸುವುದರ ಜೊತೆಗೆ ಕಲ್ಯಾಣ ಉಪಕ್ರಮಗಳನ್ನು ವಿಸ್ತರಿಸುವ ಬಗ್ಗೆಯೂ ಅವರು ಮಾತನಾಡಿದರು.“ಕೃಷಿ ಮತ್ತು ಗ್ರಾಮೀಣ ಪರಿವರ್ತನೆ” ಕುರಿತ ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 06th, 01:14 pm
ಬಜೆಟ್ ವೆಬಿನಾರ್ ಸರಣಿಯ 3ನೇ ವೆಬಿನಾರ್‌ನಲ್ಲಿ, ನಿಮ್ಮೆಲ್ಲರಿಗೂ ನನ್ನ ಆತ್ಮೀಯ ಸ್ವಾಗತ ಕೋರುತ್ತೇನೆ. ಇದಕ್ಕೂ ಮೊದಲು ತಂತ್ರಜ್ಞಾನ, ಸುಧಾರಣೆಗಳು ಮತ್ತು ಆರ್ಥಿಕ ಬೆಳವಣಿಗೆಯಂತಹ ಪ್ರಮುಖ ವಿಷಯಗಳ ಕುರಿತು 2 ವೆಬಿನಾರ್‌ಗಳನ್ನು ನಡೆಸಲಾಯಿತು. ಇಂದು ಚರ್ಚೆಯು ಗ್ರಾಮೀಣ ಆರ್ಥಿಕತೆ ಮತ್ತು ಕೃಷಿಯಂತಹ ನಿರ್ಣಾಯಕ ಕ್ಷೇತ್ರಗಳ ಮೇಲೆ ಕೇಂದ್ರೀಕೃತವಾಗಿದೆ. ನೀವೆಲ್ಲರೂ ನಿಮ್ಮ ಅಮೂಲ್ಯ ಸಲಹೆಗಳೊಂದಿಗೆ ಬಜೆಟ್ ತಯಾರಿಕೆಯ ಪ್ರಕ್ರಿಯೆಗೆ ಅಪಾರ ಕೊಡುಗೆ ನೀಡಿದ್ದೀರಿ. ನಿಮ್ಮ ಸಲಹೆ ಸೂಚನೆಗಳು ಬಜೆಟ್‌ನಲ್ಲಿ ಪ್ರತಿಫಲಿಸುತ್ತಿವೆ, ಅವು ತುಂಬಾ ಉಪಯುಕ್ತವಾಗಿವೆ ಎಂಬುದನ್ನು ನೀವು ಗಮನಿಸಿರಬೇಕು. ಆದರೆ ಈಗ ಬಜೆಟ್ ಮಂಡಿಸಲಾಗಿದೆ, ದೇಶವು ತನ್ನ ಸಂಪೂರ್ಣ ಸಾಮರ್ಥ್ಯ ಪಡೆಯುವುದನ್ನು ಖಚಿತಪಡಿಸಿಕೊಳ್ಳುವುದು ಅಷ್ಟೇ ಮುಖ್ಯವಾಗಿದೆ. ನಿಮ್ಮ ಅನುಭವ, ನಿಮ್ಮ ಸಲಹೆಗಳು ಮತ್ತು ಹೆಚ್ಚಿನ ಸಂಖ್ಯೆಯ ಜನರಿಗೆ ಬಜೆಟ್‌ನ ಪ್ರಯೋಜನಗಳನ್ನು ಗರಿಷ್ಠಗೊಳಿಸಲು ಸರಳ ಮಾರ್ಗಗಳು ಅತ್ಯಗತ್ಯ. ಬಜೆಟ್‌ನಲ್ಲಿ ನಿಗದಿಪಡಿಸಿದ ಪ್ರತಿ ಪೈಸೆಯನ್ನು ಸಂಪೂರ್ಣವಾಗಿ ಮತ್ತು ತ್ವರಿತವಾಗಿ ಹೇಗೆ ಬಳಸಿಕೊಳ್ಳಬಹುದು? ಈ ವೆಬಿನಾರ್‌ನಲ್ಲಿ ನಿಮ್ಮ ಸಲಹೆಗಳು ಸಹ ಅಷ್ಟೇ ಮುಖ್ಯವಾಗಿವೆ.ಕೃಷಿ ಮತ್ತು ಗ್ರಾಮೀಣ ಪರಿವರ್ತನೆಯ ಕುರಿತು ಬಜೆಟ್ ನಂತರದ ವೆಬಿನಾರ್ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
March 06th, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೃಷಿ ಮತ್ತು ಗ್ರಾಮೀಣ ಪರಿವರ್ತನೆ ಕುರಿತಾದ ಬಜೆಟ್ ನಂತರದ ಮೂರನೇ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದರು. ತಂತ್ರಜ್ಞಾನ ಮತ್ತು ಆರ್ಥಿಕ ಬೆಳವಣಿಗೆಯ ಕುರಿತಾದ ಹಿಂದಿನ ಅಧಿವೇಶನಗಳನ್ನು ಸ್ಮರಿಸಿದ ಪ್ರಧಾನಮಂತ್ರಿಯವರು, ಬಜೆಟ್ ರೂಪಿಸುವ ಸಮಯದಲ್ಲಿ ಪಾಲುದಾರರು ಮೌಲ್ಯಯುತವಾದ ಸಹಕಾರವನ್ನು ನೀಡಿದ್ದಾರೆ ಎಂದು ಹೇಳಿದರು. ಈಗ, ಬಜೆಟ್ ನಂತರ, ದೇಶವು ತನ್ನ ಪೂರ್ಣ ಸಾಮರ್ಥ್ಯದ ಪ್ರಯೋಜನಗಳನ್ನು ಪಡೆಯುವುದು ಅಷ್ಟೇ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ನಿಮ್ಮ ಸಲಹೆಗಳು ಮತ್ತು ಈ ವೆಬಿನಾರ್ ಅತ್ಯಂತ ಮಹತ್ವದ್ದಾಗಿದೆ ಎಂದು ಶ್ರೀ ಮೋದಿ ಒತ್ತಿಹೇಳಿದರು.ಮಾರ್ಚ್ 6, 2026 ರಂದು “ಕೃಷಿ ಮತ್ತು ಗ್ರಾಮೀಣ ಪರಿವರ್ತನೆ” ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಭಾಷಣ ಮಾಡಲಿದ್ದಾರೆ
March 05th, 06:04 pm
ಮಾರ್ಚ್ 6, 2026 ರಂದು ಬೆಳಿಗ್ಗೆ 11:15ಕ್ಕೆ “ಕೃಷಿ ಮತ್ತು ಗ್ರಾಮೀಣ ಪರಿವರ್ತನೆ” ಎಂಬ ವಿಷಯದ ಕುರಿತು ಬಜೆಟ್ ನಂತರದ ಮೌಲ್ಯವರ್ಧಿತ ವಿಶ್ಲೇಷಣೆ ಸಂವಾದಗಳ ವಿಶೇಷ ವೆಬಿನಾರ್ ಸರಣಿಕೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ ಮೂಲಕ ಭಾಷಣ ಮಾಡಲಿದ್ದಾರೆ.ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
February 21st, 12:30 pm
ಭಾರತ-ಬ್ರೆಜಿಲ್ ಸಂಬಂಧಗಳು ಅಧ್ಯಕ್ಷ ಲೂಲಾ ಅವರ ದೃಷ್ಟಿಕೋನ ಮತ್ತು ಸ್ಪೂರ್ತಿದಾಯಕ ನಾಯಕತ್ವದಿಂದ ದೀರ್ಘಕಾಲದಿಂದ ಪ್ರಯೋಜನ ಪಡೆದಿವೆ. ಕಳೆದ ಕೆಲವು ವರ್ಷಗಳಿಂದ, ನಾನು ಅವರನ್ನು ಹಲವಾರು ಸಂದರ್ಭಗಳಲ್ಲಿ ಭೇಟಿಯಾಗುವ ಸೌಭಾಗ್ಯವನ್ನು ಪಡೆದಿದ್ದೇನೆ. ಅಂತಹ ಪ್ರತಿಯೊಂದು ಸಂವಾದದಲ್ಲೂ, ಭಾರತದ ಬಗ್ಗೆ ಅವರ ಆತ್ಮೀಯ ಸ್ನೇಹ ಮತ್ತು ಶಾಶ್ವತ ನಂಬಿಕೆಯನ್ನು ನಾನು ವೈಯಕ್ತಿಕವಾಗಿ ಅನುಭವಿಸಿದ್ದೇನೆ.ಕೇಂದ್ರ ಬಜೆಟ್ ಕುರಿತು ಪ್ರಧಾನಮಂತ್ರಿ ಅವರ ಭಾಷಣ
February 01st, 01:38 pm
ಇಂದಿನ ಬಜೆಟ್ ಐತಿಹಾಸಿಕವಾಗಿದೆ; ಇದು ದೇಶದ ನಾರಿ ಶಕ್ತಿ (ಮಹಿಳಾ ಶಕ್ತಿ) ಯ ಪ್ರಬಲ ಪ್ರತಿಬಿಂಬವಾಗಿದೆ. ಮಹಿಳಾ ಹಣಕಾಸು ಸಚಿವೆಯಾಗಿ, ನಿರ್ಮಲಾ ಅವರು ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದೆ. ಈ ಬಜೆಟ್ ಪ್ರಸ್ತುತ ಕನಸುಗಳನ್ನು ಸಾಕಾರಗೊಳಿಸುತ್ತದೆ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುತ್ತದೆ. 2047ರ ಹೊತ್ತಿಗೆ 'ವಿಕಸಿತ ಭಾರತ'ದ (ಅಭಿವೃದ್ಧಿ ಹೊಂದಿದ ಭಾರತ) ಕಡೆಗೆ ನಮ್ಮ ಉನ್ನತ ಹಾರಾಟಕ್ಕೆ ಈ ಬಜೆಟ್ ಬಲವಾದ ಅಡಿಪಾಯವಾಗಿದೆ.ಕೇಂದ್ರ ಬಜೆಟ್ 2026ರ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
February 01st, 01:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶದ ಮೂಲಕ 2026ರ ಕೇಂದ್ರ ಬಜೆಟ್ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಇಂದಿನ ಬಜೆಟ್ ಐತಿಹಾಸಿಕವಾಗಿದ್ದು, ದೇಶದ ಮಹಿಳೆಯರ ಸಬಲೀಕರಣದ ಮನೋಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಹಿಳಾ ಹಣಕಾಸು ಸಚಿವರಾಗಿ, ಸತತ ಒಂಬತ್ತನೇ ಬಾರಿಗೆ ದೇಶದ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ ಎಂದು ಅವರು ಶ್ಲಾಘಿಸಿದರು. ಈ ಬಜೆಟ್ ಅಪಾರ ಅವಕಾಶಗಳ ಹೆದ್ದಾರಿಯಾಗಿದ್ದು, ವರ್ತಮಾನದ ಕನಸುಗಳನ್ನು ನನಸಾಗಿಸುವ ಮತ್ತು ಭಾರತದ ಉಜ್ವಲ ಭವಿಷ್ಯದ ಅಡಿಪಾಯವನ್ನು ಬಲಪಡಿಸುವ ಕೆಲಸ ಮಾಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. 2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ಉನ್ನತ ಮಟ್ಟದ ಹಾರಾಟ ನಡೆಸಲು ಈ ಬಜೆಟ್ ಅಡಿಪಾಯವಾಗಿದೆ ಎಂದು ಅವರು ಒತ್ತಿ ಹೇಳಿದರು.Ending TMC’s Maha Jungle Raj and bringing BJP’s good governance is essential: PM Modi in Singur, West Bengal
January 18th, 03:35 pm
PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”PM Modi addresses a massive public rally in Singur, Hooghly, West Bengal
January 18th, 03:32 pm
PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 11th, 02:45 pm
2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
January 11th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್‌ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್‌ಕೋಟ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.ಅಸ್ಸಾಂನ ನಮ್ರಪ್‌ನಲ್ಲಿ ಯೂರಿಯಾ ಉತ್ಪಾದನಾ ಸ್ಥಾವರದ ಭೂಮಿಪೂಜೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 21st, 04:25 pm
ಸೌಲುಂಗ್ ಸುಕಫಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ವೀರರ ಈ ಭೂಮಿ, ಭಿಂಬರ್ ದೇವೂರಿ, ಹುತಾತ್ಮ ಕುಸಲ್ ಕುವರ್, ಮೋರನ್ ರಾಜಾ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಯೋಧ ಮಹಿಳೆ ಸತಿ ಸಾಧ್ನಿ ಅವರ ಈ ತಪೋಭೂಮಿ, ಉಜಾನಿ ಅಸ್ಸಾಂನ ಈ ಪುಣ್ಯ ಭೂಮಿಗೆ ನಾನು ಭಕ್ತಿಯಿಂದ ನಮಸ್ಕರಿಸುತ್ತೇನೆ.ಅಸ್ಸಾಂನ ನಮ್ರೂಪ್‌ನಲ್ಲಿ ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 21st, 12:00 pm
ಅಸ್ಸಾಂನ ದಿಬ್ರುಗಢದ ನಮ್ರೂಪ್‌ನಲ್ಲಿ ಇಂದು ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚೌಲುಂಗ್ ಸುಖಪಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ಮಹಾನ್ ವೀರರ ಭೂಮಿ ಎಂದು ಹೇಳಿದರು. ಭಿಂಬರ್ ದೇವೂರಿ, ಶಹೀದ್ ಕುಶಾಲ್ ಕುನ್ವರ್, ಮೋರನ್ ರಾಜ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಧೀರ ಸತಿ ಸಾಧನಿ ಅವರ ಕೊಡುಗೆಗಳನ್ನು ಅವರು ಎತ್ತಿ ತೋರಿಸಿದರು. ಶೌರ್ಯ ಮತ್ತು ತ್ಯಾಗದ ಈ ಮಹಾನ್ ಭೂಮಿಯಾದ ಉಜಾನಿ ಅಸ್ಸಾಂನ ಪವಿತ್ರ ಮಣ್ಣಿಗೆ ನಾನು ಶಿರಬಾಗಿ ನಮಸ್ಕರಿಸುತ್ತೇನೆ ಎಂದು ಪ್ರಧಾನಮಂತ್ರಿ ಹೇಳಿದರು.ಪ್ರಧಾನಮಂತ್ರಿ ಅವರು ಓಮನ್ ನ ದೊರೆ ಸುಲ್ತಾನ್ ಅವರನ್ನು ಭೇಟಿ ಮಾಡಿದರು
December 18th, 05:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಸ್ಕತ್ ನಲ್ಲಿ ಮಹಾರಾಜ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ರಾಜಭವನಕ್ಕೆ ಆಗಮಿಸಿದ ಪ್ರಧಾನಮಂತ್ರಿ ಅವರನ್ನು ದೊರೆ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಔಪಚಾರಿಕ ಸ್ವಾಗತ ನೀಡಿದರು.