Prime Minister Narendra Modi to address Post Budget Webinar on the theme “Sabka Saath Sabka Vikas-Fulfilling Aspirations of People”

March 08th, 04:35 pm

To translate the policy vision outlined in the Budget into actionable strategies, PM Modi will address the Post Budget Webinar on the theme “Sabka Saath Sabka Vikas-Fulfilling Aspirations of People” on 9th March 2026. Under this theme, multiple breakout sessions will be organised across sectors including education and skilling, health and AYUSH, tourism and hospitality among others.

ರೋಜ್‌ಗಾರ್ ಮೇಳದ ನೇಮಕಾತಿ ಪತ್ರಗಳ ವಿತರಣೆ ಕಾರ್ಯಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 24th, 11:30 am

2026ರ ವರ್ಷದ ಆರಂಭವು ನಿಮ್ಮ ಜೀವನದಲ್ಲಿ ಹೊಸ ಸಂತೋಷಗಳ ಆರಂಭ ಸೂಚಿಸುತ್ತದೆ. ಇದರೊಂದಿಗೆ ವಸಂತ ಪಂಚಮಿ ನಿನ್ನೆಯಷ್ಟೇ ಕಳೆದಂತೆ, ನಿಮ್ಮ ಜೀವನದಲ್ಲಿ ಹೊಸ ವಸಂತವೂ ಪ್ರಾರಂಭವಾಗುತ್ತಿದೆ. ಈ ಸಮಯವು ನಿಮ್ಮನ್ನು ಸಂವಿಧಾನದ ಕಡೆಗೆ ನಿಮ್ಮ ಕರ್ತವ್ಯಗಳೊಂದಿಗೆ ಸಂಪರ್ಕಿಸುತ್ತಿದೆ. ಕಾಕತಾಳೀಯವಾಗಿ, ದೇಶದಲ್ಲಿ ಪ್ರಸ್ತುತ ಗಣರಾಜ್ಯದ ಭವ್ಯ ಹಬ್ಬ ನಡೆಯುತ್ತಿದೆ. ನಿನ್ನೆ ಜನವರಿ 23ರಂದು ನಾವು ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ ಜನ್ಮ ದಿನಾಚರಣೆಯಂದು ಪರಾಕ್ರಮ್ ದಿವಸ ಆಚರಿಸಿದ್ದೇವೆ. ಈಗ ನಾಳೆ ಜನವರಿ 25ರಂದು, ರಾಷ್ಟ್ರೀಯ ಮತದಾರರ ದಿನ, ನಂತರ ಜನವರಿ 26ರಂದು ಗಣರಾಜ್ಯೋತ್ಸವ. ಇಂದು ವಿಶೇಷ ದಿನವೂ ಆಗಿದೆ. ಈ ದಿನದಂದು ನಮ್ಮ ಸಂವಿಧಾನವು 'ಜನ ಗಣ ಮನ'ವನ್ನು ರಾಷ್ಟ್ರಗೀತೆಯಾಗಿ ಮತ್ತು 'ವಂದೇ ಮಾತರಂ' ಅನ್ನು ರಾಷ್ಟ್ರೀಯ ಗೀತೆಯಾಗಿ ಅಳವಡಿಸಿಕೊಂಡಿದೆ. ಇಂದು ಈ ಮಹತ್ವದ ದಿನದಂದು, 61 ಸಾವಿರಕ್ಕೂ ಹೆಚ್ಚು ಯುವಕರು ಜೀವನದಲ್ಲಿ ಹೊಸ ಆರಂಭ ಮಾಡುತ್ತಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 18ನೇ 'ಉದ್ಯೋಗ ಮೇಳ'ವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು

January 24th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 18ನೇ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ ಅವರು 2026ನೇ ವರ್ಷವು ಜನರ ಜೀವನದಲ್ಲಿ ಹೊಸ ಸಂತೋಷವನ್ನು ತರುವ ಮೂಲಕ ಮತ್ತು ಇದೇವೇಳೆ, ನಾಗರಿಕರನ್ನು ಅವರ ಸಾಂವಿಧಾನಿಕ ಕರ್ತವ್ಯಗಳೊಂದಿಗೆ ಸಂಪರ್ಕಿಸುವ ಮೂಲಕ ಪ್ರಾರಂಭವಾಗಿದೆ ಎಂದು ಹೇಳಿದರು. ಈ ಅವಧಿಯು ಭವ್ಯ ಗಣರಾಜ್ಯೋತ್ಸವದೊಂದಿಗೆ ಹೊಂದಿಕೆಯಾಗುತ್ತದೆ ಎಂದು ಅವರು ಒತ್ತಿ ಹೇಳಿದರು. ಜನವರಿ 23 ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ರಾಷ್ಟ್ರವು 'ಪರಾಕ್ರಮ್ ದಿವಸ್' ಅನ್ನು ಆಚರಿಸಿತು ಮತ್ತು ನಾಳೆ, ಜನವರಿ 25 ರಂದು 'ರಾಷ್ಟ್ರೀಯ ಮತದಾರರ ದಿನ' ಮತ್ತು ಮರುದಿನ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ ಎಂದು ಶ್ರೀ ಮೋದಿ ಸ್ಮರಿಸಿದರು. ಇಂದು ವಿಶೇಷವಾಗಿದೆ, ಏಕೆಂದರೆ ಇದೇ ದಿನ ಸಂವಿಧಾನವು 'ಜನ ಗಣ ಮನ'ವನ್ನು ರಾಷ್ಟ್ರಗೀತೆಯಾಗಿ ಮತ್ತು 'ವಂದೇ ಮಾತರಂ' ಅನ್ನು ರಾಷ್ಟ್ರಗೀತೆಯಾಗಿ ಅಳವಡಿಸಿಕೊಂಡಿದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಈ ಮಹತ್ವದ ದಿನದಂದು, ಅರವತ್ತೊಂದು ಸಾವಿರಕ್ಕೂ ಹೆಚ್ಚು ಯುವಕರು ಸರ್ಕಾರಿ ಸೇವೆಗಳಿಗೆ ನೇಮಕಾತಿ ಪತ್ರಗಳನ್ನು ಸ್ವೀಕರಿಸುವ ಮೂಲಕ ತಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತಿದ್ದಾರೆ ಎಂದು ಅವರು ಒತ್ತಿ ಹೇಳಿದರು. ಈ ನೇಮಕಾತಿ ಪತ್ರಗಳನ್ನು ರಾಷ್ಟ್ರ ನಿರ್ಮಾಣಕ್ಕೆ ಆಹ್ವಾನ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣವನ್ನು ವೇಗಗೊಳಿಸುವ ಸಂಕಲ್ಪ ಎಂದು ಶ್ರೀ ಮೋದಿ ಬಣ್ಣಿಸಿದರು. ಅನೇಕ ಯುವಕರು ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸುತ್ತಾರೆ, ಶಿಕ್ಷಣ ಮತ್ತು ಆರೋಗ್ಯ ಪರಿಸರ ವ್ಯವಸ್ಥೆಯನ್ನು ಸಶಕ್ತಗೊಳಿಸುತ್ತಾರೆ, ಹಣಕಾಸು ಸೇವೆಗಳು ಮತ್ತು ಇಂಧನ ಭದ್ರತೆಯನ್ನು ಬಲಪಡಿಸುತ್ತಾರೆ ಜೊತೆಗೆ, ಸಾರ್ವಜನಿಕ ವಲಯದ ಉದ್ಯಮಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿಯವರು ಎಲ್ಲಾ ಯುವಜನರಿಗೆ ತಮ್ಮ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.

ಮುಂಬೈಯ ವೇವ್ಸ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಇಂಗ್ಲೀಷ್ ಅವತರಣಿಕೆ

May 01st, 03:35 pm

ಇಂದು ಮಹಾರಾಷ್ಟ್ರದ ಸಂಸ್ಥಾಪನಾ ದಿನ. ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಗೌರವ ನಮನ ಮತ್ತು ಮಹಾರಾಷ್ಟ್ರ ದಿನದಂದು ಈ ನೆಲದ ಎಲ್ಲಾ ಸಹೋದರ ಸಹೋದರಿಯರಿಗೆ ಶುಭಾಶಯಗಳು!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೇವ್ಸ್ 2025 ಅನ್ನು ಉದ್ಘಾಟಿಸಿದರು

May 01st, 11:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನ ಜಿಯೋ ವರ್ಲ್ಡ್ ಸೆಂಟರ್ ನಲ್ಲಿ ಭಾರತದ ಮೊದಲ ಜಾಗತಿಕ ಶ್ರವಣ-ದೃಶ್ಯ ಮತ್ತು ಮನರಂಜನಾ ಶೃಂಗಸಭೆ-ವೇವ್ಸ್ 2025 ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಆಚರಿಸಲಾಗುತ್ತಿರುವ ಮಹಾರಾಷ್ಟ್ರ ದಿನ ಮತ್ತು ಗುಜರಾತ್ ರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದರು. ಎಲ್ಲಾ ಅಂತರರಾಷ್ಟ್ರೀಯ ಗಣ್ಯರು, ರಾಯಭಾರಿಗಳು ಮತ್ತು ಸೃಜನಶೀಲ ಉದ್ಯಮದ ನಾಯಕರ ಉಪಸ್ಥಿತಿಯನ್ನು ಶ್ಲಾಘಿಸಿದ ಪ್ರಧಾನಿ, 100 ಕ್ಕೂ ಹೆಚ್ಚು ದೇಶಗಳ ಕಲಾವಿದರು, ನಾವೀನ್ಯಕಾರರು, ಹೂಡಿಕೆದಾರರು ಮತ್ತು ನೀತಿ ನಿರೂಪಕರು ಒಟ್ಟಾಗಿ ಪ್ರತಿಭೆ ಮತ್ತು ಸೃಜನಶೀಲತೆಯ ಜಾಗತಿಕ ಪೂರಕ ವ್ಯವಸ್ಥೆಗೆ ಅಡಿಪಾಯ ಹಾಕಿದ್ದಾರೆ ಎಂದು ಒತ್ತಿ ಹೇಳಿದರು. ವೇವ್ಸ್ ಕೇವಲ ಒಂದು ಸಂಕ್ಷಿಪ್ತ ರೂಪವಲ್ಲ, ಸಂಸ್ಕೃತಿ, ಸೃಜನಶೀಲತೆ ಮತ್ತು ಜಾಗತಿಕ ಸಂಪರ್ಕವನ್ನು ಪ್ರತಿನಿಧಿಸುವ ಅಲೆಯಾಗಿದೆ ಎಂದು ಅವರು ಹೇಳಿದರು, ಶೃಂಗಸಭೆಯು ಚಲನಚಿತ್ರಗಳು, ಸಂಗೀತ, ಗೇಮಿಂಗ್, ಅನಿಮೇಷನ್ ಮತ್ತು ಕಥೆ ಹೇಳುವಿಕೆಯ ವಿಸ್ತಾರವಾದ ಜಗತ್ತನ್ನು ಪ್ರದರ್ಶಿಸುತ್ತದೆ, ಕಲಾವಿದರು ಮತ್ತು ಕಂಟೆಂಟ್ ಸೃಷ್ಟಿಕರ್ತರು ಸಂಪರ್ಕ ಸಾಧಿಸಲು ಮತ್ತು ಸಹಕರಿಸಲು ಜಾಗತಿಕ ವೇದಿಕೆಯನ್ನು ಒದಗಿಸುತ್ತದೆ ಎಂದು ಅವರು ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ ಭಾಗವಹಿಸಿದ ಎಲ್ಲರನ್ನು ಪ್ರಧಾನಿ ಅಭಿನಂದಿಸಿದರು ಮತ್ತು ಭಾರತ ಮತ್ತು ವಿದೇಶಗಳಿಂದ ಬಂದ ಗಣ್ಯ ಅತಿಥಿಗಳಿಗೆ ಆತ್ಮೀಯ ಸ್ವಾಗತವನ್ನು ಕೋರಿದರು.

ಸಂವಿಧಾನವೇ ನಮ್ಮ ಮಾರ್ಗದರ್ಶಕ ಬೆಳಕು: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ

December 29th, 11:30 am

ಮನ್ ಕಿ ಬಾತ್‌ನ ಈ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನದ 75 ನೇ ವಾರ್ಷಿಕೋತ್ಸವ ಮತ್ತು ಪ್ರಯಾಗರಾಜ್‌ನಲ್ಲಿ ಮಹಾಕುಂಭದ ಸಿದ್ಧತೆ ಸೇರಿದಂತೆ ಭಾರತದ ಸಾಧನೆಗಳನ್ನು ಪ್ರತಿಬಿಂಬಿಸಿದರು. ಅವರು ಬಸ್ತಾರ್ ಒಲಿಂಪಿಕ್ಸ್‌ನ ಯಶಸ್ಸನ್ನು ಶ್ಲಾಘಿಸಿದರು ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಮಲೇರಿಯಾ ನಿರ್ಮೂಲನೆ ಮತ್ತು ಕ್ಯಾನ್ಸರ್ ಚಿಕಿತ್ಸೆಯ ಪ್ರಗತಿಯಂತಹ ಮಹತ್ವದ ಆರೋಗ್ಯ ಪ್ರಗತಿಗಳನ್ನು ಎತ್ತಿ ತೋರಿಸಿದರು. ಹೆಚ್ಚುವರಿಯಾಗಿ, ಅವರು ಒಡಿಶಾದ ಕಲಹಂಡಿಯಲ್ಲಿನ ಕೃಷಿ ರೂಪಾಂತರವನ್ನು ಶ್ಲಾಘಿಸಿದರು.

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

December 11th, 05:00 pm

ನಾನು ಯಾವಾಗಲೂ ಕೆಂಪು ಕೋಟೆಯಿಂದ ಒಂದು ವಿಷಯವನ್ನು ಉಲ್ಲೇಖಿಸಿದ್ದೇನೆ ಎಂದು ನೀವೆಲ್ಲರೂ ನೆನಪಿನಲ್ಲಿಡಬೇಕು. 'ಸಬ್ ಕಾ ಪ್ರಯಾಸ್ ' (ಎಲ್ಲರ ಪ್ರಯತ್ನ) ಮುಖ್ಯ ಎಂದು ನಾನು ಹೇಳಿದ್ದೇನೆ - ಇಂದಿನ ಭಾರತವು ಎಲ್ಲರ ಸಾಮೂಹಿಕ ಪ್ರಯತ್ನಗಳಿಂದ ಮಾತ್ರ ತ್ವರಿತ ಗತಿಯಲ್ಲಿ ಮುಂದುವರಿಯಬಹುದು. ಇಂದು ಇದೇ ತತ್ವಕ್ಕೆ ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ನ ಈ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ. ನಿಮ್ಮಂತಹ ಯುವ ನಾವೀನ್ಯಕಾರರ ನಡುವೆ ಇರಲು ನನಗೆ ಅವಕಾಶ ಸಿಕ್ಕಾಗಲೆಲ್ಲಾ, ಕಲಿಯಲು, ಅರ್ಥಮಾಡಿಕೊಳ್ಳಲು ಮತ್ತು ಹೊಸ ಒಳನೋಟಗಳನ್ನು ಪಡೆಯಲು ನನಗೆ ಅವಕಾಶ ಸಿಗುತ್ತದೆ. ನಿಮ್ಮೆಲ್ಲರಿಂದ ನನಗೆ ಹೆಚ್ಚಿನ ನಿರೀಕ್ಷೆಗಳಿವೆ. ನಿಮ್ಮಂತಹ ಯುವ ನಾವೀನ್ಯಕಾರರು 21ನೇ ಶತಮಾನದ ಭಾರತವನ್ನು ನೋಡುವ ವಿಶಿಷ್ಟ ದೃಷ್ಟಿಕೋನವನ್ನು ಹೊಂದಿದ್ದಾರೆ ಮತ್ತು ಅದಕ್ಕಾಗಿಯೇ ನಿಮ್ಮ ಪರಿಹಾರಗಳು ಸಹ ಅನನ್ಯವಾಗಿವೆ. ನೀವು ಹೊಸ ಸವಾಲುಗಳನ್ನು ಎದುರಿಸಿದಾಗ, ನೀವು ಹೊಸ ಮತ್ತು ಸೃಜನಶೀಲ ಪರಿಹಾರಗಳನ್ನು ಕಂಡುಕೊಳ್ಳುವ ಮೂಲಕ ಪ್ರತಿಕ್ರಿಯಿಸುತ್ತೀರಿ. ನಾನು ಈ ಹಿಂದೆ ಹಲವಾರು ಹ್ಯಾಕಥಾನ್ ಗಳ ಭಾಗವಾಗಿದ್ದೇನೆ ಮತ್ತು ನೀವು ನನ್ನನ್ನು ಎಂದಿಗೂ ನಿರಾಸೆಗೊಳಿಸಿಲ್ಲ. ನೀವು ಯಾವಾಗಲೂ ನಿಮ್ಮ ಮೇಲಿನ ನನ್ನ ನಂಬಿಕೆಯನ್ನು ಬಲಪಡಿಸಿದ್ದೀರಿ. ಈ ಹಿಂದೆ ಭಾಗವಹಿಸಿದ ತಂಡಗಳು ಪರಿಹಾರಗಳನ್ನು ಒದಗಿಸಿವೆ, ಅವುಗಳನ್ನು ಈಗ ವಿವಿಧ ಸಚಿವಾಲಯಗಳಲ್ಲಿ ಪರಿಣಾಮಕಾರಿಯಾಗಿ ಬಳಸಲಾಗುತ್ತಿದೆ. ಈಗ, ಈ ಹ್ಯಾಕಥಾನ್ ನಲ್ಲಿ, ದೇಶದ ವಿವಿಧ ಭಾಗಗಳ ತಂಡಗಳು ಏನು ಕೆಲಸ ಮಾಡುತ್ತಿವೆ ಎಂದು ತಿಳಿಯಲು ನನಗೆ ಕುತೂಹಲವಿದೆ. ನಿಮ್ಮ ಆವಿಷ್ಕಾರಗಳ ಬಗ್ಗೆ ತಿಳಿದುಕೊಳ್ಳಲು ನಾನು ತುಂಬಾ ಉತ್ಸುಕನಾಗಿದ್ದೇನೆ. ಆದ್ದರಿಂದ, ಪ್ರಾರಂಭಿಸೋಣ! ಯಾರು ಮೊದಲು ನಮ್ಮೊಂದಿಗೆ ಮಾತನಾಡಲು ಬಯಸುತ್ತಾರೆ?

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್-2024ರ ಪ್ರತಿನಿಧಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

December 11th, 04:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024ರ ಗ್ರ್ಯಾಂಡ್ ಫಿನಾಲೆಯ ಯುವ ನವೋದ್ಯಮಿಗಳೊಂದಿಗೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೆಂಪುಕೋಟೆಯಿಂದ ಮಾಡಿದ ಭಾಷಣದಲ್ಲಿ ‘ಸಬ್ಕಾ ಪ್ರಯಾಸ್’ ಪುನರುಚ್ಚಾರವನ್ನು ನೆನಪಿಸಿದರು. ಇಂದಿನ ಭಾರತವು ‘ಸಬ್ಕಾ ಪ್ರಾರ್ಥನೆ’ ಅಥವಾ ಪ್ರತಿಯೊಬ್ಬರ ಪ್ರಯತ್ನದಿಂದ ತ್ವರಿತ ಗತಿಯಲ್ಲಿ ಪ್ರಗತಿ ಹೊಂದಬಹುದು ಎಂಬುದಕ್ಕೆ ಇಂದಿನ ಸಂದರ್ಭವು ಒಂದು ಉದಾಹರಣೆಯಾಗಿದೆ. ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌ನ ಗ್ರ್ಯಾಂಡ್ ಫಿನಾಲೆಗಾಗಿ ನಾನು ಕುತೂಹಲದಿಂದ ಕಾಯುತ್ತಿದ್ದೇನೆ, ಯುವ ನವೋದ್ಯಮಿಗಳ ನಡುವೆ ಇರುವಾಗ ಹೊಸದನ್ನು ಕಲಿಯಲು ಮತ್ತು ಅರ್ಥ ಮಾಡಿಕೊಳ್ಳಲು ನನಗೆ ಅವಕಾಶ ಸಿಗುತ್ತದೆ. ಯುವ ನವೋದ್ಯಮಿಗಳ ಮೇಲೆ ತಮ್ಮ ನಿರೀಕ್ಷೆಗಳು ಹೆಚ್ಚಾಗಿವೆ ಎಂದ ಪ್ರಧಾನ ಮಂತ್ರಿ, ಅವರು 21ನೇ ಶತಮಾನದ ಭಾರತವನ್ನು ವಿಭಿನ್ನವಾಗಿ ನೋಡುವ ದೃಷ್ಟಿಕೋನ ಹೊಂದಿದ್ದಾರೆ. ಆದ್ದರಿಂದ, ನಿಮ್ಮ ಪರಿಹಾರಗಳು ಸಹ ವಿಭಿನ್ನವಾಗಿವೆ ಮತ್ತು ಹೊಸ ಸವಾಲು ಬಂದಾಗ, ನೀವು ಹೊಸ ಮತ್ತು ಅನನ್ಯ ಪರಿಹಾರಗಳೊಂದಿಗೆ ಬರುತ್ತೀರಿ. ಈ ಹಿಂದೆ ಹ್ಯಾಕಥಾನ್‌ಗಳ ಭಾಗವಾಗಿದ್ದುದನ್ನು ಸ್ಮರಿಸಿದ ಪ್ರಧಾನ ಮಂತ್ರಿ, ಅದರ ಫಲಿತಾಂಶಗಳಿಂದ ಎಂದಿಗೂ ನಿರಾಶೆಗೊಂಡಿಲ್ಲ. ನೀವು ನನ್ನ ನಂಬಿಕೆಯನ್ನು ಮಾತ್ರ ಬಲಪಡಿಸಿದ್ದೀರಿ, ಹಿಂದೆ ಒದಗಿಸಿದ ಪರಿಹಾರಗಳನ್ನು ವಿವಿಧ ಸಚಿವಾಲಯಗಳಲ್ಲಿ ಬಳಸಲಾಗುತ್ತಿದೆ. ಹ್ಯಾಕಥಾನ್ ಪ್ರತಿನಿಧಿಗಳ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಉತ್ಸುಕತೆ ಹೊಂದಿರುವುದಾಗಿ ತಿಳಿಸಿದ ಅವರು, ಸಂವಾದ ಪ್ರಾರಂಭಿಸಿದರು.

ಇಂದು, ಪ್ರಪಂಚದಾದ್ಯಂತದ ಜನರು ಭಾರತದ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಬಯಸುತ್ತಾರೆ: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

October 27th, 11:30 am

ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ' ಮನದ ಮಾತಿಗೆ' ಎಲ್ಲರಿಗೂ ಸ್ವಾಗತ. ನನ್ನ ಜೀವನದ ಅವಿಸ್ಮರಣೀಯ ಕ್ಷಣಗಳು ಯಾವುವು ಎಂದು ನನ್ನನ್ನು ನೀವು ಕೇಳಿದರೆ, ಬಹಳಷ್ಟು ಘಟನೆಗಳು ನೆನಪಿಗೆ ಬರುತ್ತವೆ, ಅದರಲ್ಲೂ ಒಂದು ವಿಶೇಷವಾದ ಕ್ಷಣವಿದೆ, ಅದೇ ಕಳೆದ ವರ್ಷ ನವೆಂಬರ್ 15 ರಂದು ನಾನು ಭಗವಾನ್ ಬಿರ್ಸಾ ಮುಂಡಾ ಅವರ ಜನ್ಮ ಜಯಂತಿಯಂದು ಜಾರ್ಖಂಡ್‌ನ ಅವರ ಜನ್ಮಸ್ಥಳ ಉಲಿಹಾತು ಗ್ರಾಮಕ್ಕೆ ಹೋಗಿದ್ದು. ನನ್ನ ಮೇಲೆ ಈ ಪ್ರವಾಸದ ಪ್ರಭಾವ ಆಗಾಧವಾಗಿತ್ತು. ಈ ಪುಣ್ಯಭೂಮಿಯ ಮಣ್ಣಿನ ಆಶೀರ್ವಾದ ಪಡೆಯುವ ಭಾಗ್ಯವನ್ನು ಪಡೆದ ದೇಶದ ಮೊದಲ ಪ್ರಧಾನಿ ನಾನಾಗಿದ್ದೇನೆ. ಆ ಕ್ಷಣದಲ್ಲಿ ನನಗೆ ಸ್ವಾತಂತ್ರ್ಯ ಹೋರಾಟದ ಶಕ್ತಿಯ ಅನುಭವವಾದುದಲ್ಲದೆ, ಈ ಭೂಮಿಯ ಶಕ್ತಿಯೊಂದಿಗೆ ಬೆರೆಯುವ ಅವಕಾಶವೂ ಲಭಿಸಿತು. ಒಂದು ನಿರ್ಧಾರವನ್ನು ಪೂರೈಸುವ ಧೈರ್ಯ ಹೇಗೆ ದೇಶದ ಕೋಟ್ಯಾಂತರ ಜನರ ಭವಿಷ್ಯವನ್ನು ಬದಲಾಯಿಸುತ್ತದೆ ಎಂಬುದರ ಅನುಭವವೂ ನನಗಾಯಿತು.