ಜಮ್ಮು-ಕಾಶ್ಮೀರದ ಕತ್ರಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

ಜಮ್ಮು-ಕಾಶ್ಮೀರದ ಕತ್ರಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 06th, 12:50 pm

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜಿ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಜಿತೇಂದ್ರ ಸಿಂಗ್ ಜಿ, ವಿ. ಸೋಮಣ್ಣ ಜಿ, ಉಪಮುಖ್ಯಮಂತ್ರಿ ಸುರೇಂದ್ರ ಕುಮಾರ್ ಜಿ, ಜಮ್ಮು-ಕಾಶ್ಮೀರ ವಿಧಾನಸಭೆಯ ವಿಪಕ್ಷ ನಾಯಕ ಸುನಿಲ್ ಜಿ, ಸಂಸತ್ತಿನ ನನ್ನ ಸಹೋದ್ಯೋಗಿ ಜುಗಲ್ ಕಿಶೋರ್ ಜಿ, ಇಲ್ಲಿರುವ ಜನಪ್ರತಿನಿಧಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ. ಇದು ವೀರ್ ಜೋರಾವರ್ ಸಿಂಗ್ ಜಿ ಅವರ ಭೂಮಿ, ನಾನು ಈ ಭೂಮಿಗೆ ನಮಸ್ಕರಿಸುತ್ತೇನೆ.

ಜಮ್ಮು ಮತ್ತು ಕಾಶ್ಮೀರದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಜಮ್ಮು ಮತ್ತು ಕಾಶ್ಮೀರದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

June 06th, 12:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು ಮತ್ತು ದೇಶಕ್ಕೆ ಸಮರ್ಪಿಸಿದರು. ವೀರ ಜೋರಾವರ್ ಸಿಂಗ್ ಅವರ ಭೂಮಿಗೆ ನಮನ ಸಲ್ಲಿಸುತ್ತಾ, ಇಂದಿನ ಕಾರ್ಯಕ್ರಮವು ಭಾರತದ ಏಕತೆ ಮತ್ತು ದೃಢಸಂಕಲ್ಪದ ಭವ್ಯ ಆಚರಣೆಯಾಗಿದೆ ಎಂದು ಹೇಳಿದರು. ಮಾತಾ ವೈಷ್ಣೋದೇವಿಯ ಆಶೀರ್ವಾದದಿಂದ ಕಾಶ್ಮೀರ ಕಣಿವೆ ಈಗ ಭಾರತದ ವಿಶಾಲ ರೈಲ್ವೆ ಜಾಲಕ್ಕೆ ಸಂಪರ್ಕ ಹೊಂದಿದೆ ಎಂದು ಶ್ರೀ ಮೋದಿ ಹೇಳಿದರು. ನಾವು ಯಾವಾಗಲೂ ಮಾತೆ ಭಾರತಿಯನ್ನು ಆಳವಾದ ಭಕ್ತಿಯಿಂದ ಪ್ರಾರ್ಥಿಸುತ್ತೇವೆ, 'ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ' ಎಂದು ಹೇಳುತ್ತೇವೆ, ಇಂದು, ಇದು ನಮ್ಮ ರೈಲ್ವೆ ಜಾಲದಲ್ಲಿಯೂ ಸಹ ವಾಸ್ತವವಾಗಿದೆ ಎಂದು ಪ್ರಧಾನಿ ಉದ್ಗರಿಸಿದರು, ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಮಾರ್ಗ ಯೋಜನೆಯು ಕೇವಲ ಹೆಸರಲ್ಲ, ಜಮ್ಮು ಮತ್ತು ಕಾಶ್ಮೀರದ ಹೊಸ ಶಕ್ತಿಯ ಸಂಕೇತ ಮತ್ತು ಭಾರತದ ಬೆಳೆಯುತ್ತಿರುವ ಸಾಮರ್ಥ್ಯಗಳಿಗೆ ಸಾಕ್ಷಿಯಾಗಿದೆ ಎಂದು ಒತ್ತಿ ಹೇಳಿದರು. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ, ಅವರು ಚೆನಾಬ್ ಮತ್ತು ಅಂಜಿ ರೈಲು ಸೇತುವೆಗಳನ್ನು ಉದ್ಘಾಟಿಸಿದರು ಮತ್ತು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು, ಇದು ಜಮ್ಮು ಮತ್ತು ಕಾಶ್ಮೀರದೊಳಗೆ ಸಂಪರ್ಕವನ್ನು ಹೆಚ್ಚಿಸುತ್ತದೆ. ಇದರ ಜೊತೆಗೆ, ಶ್ರೀ ಮೋದಿ ಅವರು ಜಮ್ಮುವಿನಲ್ಲಿ ಹೊಸ ವೈದ್ಯಕೀಯ ಕಾಲೇಜಿಗೆ ಶಂಕುಸ್ಥಾಪನೆ ನೆರವೇರಿಸಿದರು, ಈ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸಿದರು, ₹46,000 ಕೋಟಿ ಮೌಲ್ಯದ ಯೋಜನೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ವೇಗಗೊಳಿಸುತ್ತವೆ, ಪ್ರಗತಿ ಮತ್ತು ಸಮೃದ್ಧಿಗೆ ಚಾಲನೆ ನೀಡುತ್ತವೆ ಎಂದು ಹೇಳಿದರು. ಪ್ರಧಾನಿಯವರು ತಮ್ಮ ಶುಭಾಶಯಗಳನ್ನು ವ್ಯಕ್ತಪಡಿಸಿದರು ಮತ್ತು ಬೆಳವಣಿಗೆ ಹಾಗು ಪರಿವರ್ತನೆಯ ಈ ಹೊಸ ಯುಗಕ್ಕಾಗಿ ಜನರನ್ನು ಅಭಿನಂದಿಸಿದರು.

ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಮಂತ್ರಿ ಭೇಟಿ

ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಮಂತ್ರಿ ಭೇಟಿ

June 04th, 12:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನ ಮಂತ್ರಿಗಳು ಬೆಳಿಗ್ಗೆ 11 ಗಂಟೆಗೆ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ ಮತ್ತು ಸೇತುವೆಯ ಡೆಕ್‌ಗೆ ಭೇಟಿ ನೀಡಲಿದ್ದಾರೆ. ನಂತರ, ಅವರು ಅಂಜಿ ಸೇತುವೆಗೆ ಭೇಟಿ ನೀಡಿ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅವರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ, ಅವರು ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.