Prime Minister greets President of the United States on the 250th anniversary of the United States' independence

July 04th, 09:40 pm

The Prime Minister, Shri Narendra Modi, extended greetings to the President of the United States, Mr. Donald J. Trump, and the people of the United States on the historic occasion of the 250th anniversary of the country's independence. Shri Modi underscored the enduring strength of the India–United States partnership. He noted that the relationship between the two democracies extends beyond a strategic partnership and is anchored in shared values of democracy, the rule of law and faith in the limitless potential of their people.

ಸೆಶೆಲ್ಸ್ ಸ್ವಾತಂತ್ರ್ಯದ 50ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಭಾಗಿ

June 29th, 08:00 am

ಸೆಶೆಲ್ಸ್ ಅಧ್ಯಕ್ಷ ಘನತೆವೆತ್ತ ಡಾ. ಪ್ಯಾಟ್ರಿಕ್ ಹರ್ಮಿನಿ ಅವರ ಆಹ್ವಾನದ ಮೇರೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೆಶೆಲ್ಸ್ ಸ್ವಾತಂತ್ರ್ಯದ 50ನೇ ವಾರ್ಷಿಕೋತ್ಸವದಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಿದ್ದರು. ಸೆಶೆಲ್ಸ್ ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ ಮೊದಲ ಭಾರತೀಯ ಪ್ರಧಾನಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪ್ರಧಾನಮಂತ್ರಿ ಮೇ 10 ರಂದು ಕರ್ನಾಟಕ ಮತ್ತು ತೆಲಂಗಾಣಕ್ಕೆ ಭೇಟಿ

May 09th, 11:17 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಮೇ 10 ರಂದು ಕರ್ನಾಟಕ ಮತ್ತು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನ ಮಂತ್ರಿ ಬೆಳಿಗ್ಗೆ ಸುಮಾರು 11 ಗಂಟೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಆರ್ಟ್ ಆಫ್ ಲಿವಿಂಗ್‌ನ 45ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ, ಅಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಪ್ರಧಾನಮಂತ್ರಿ ಹೈದರಾಬಾದ್‌ಗೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 3 ಗಂಟೆಗೆ ಸುಮಾರು 9,400 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 3:45 ರ ಸುಮಾರಿಗೆ ಪ್ರಧಾನಮಂತ್ರಿ ಹೈದರಾಬಾದ್‌ನಲ್ಲಿರುವ ಸಿಂಧು ಆಸ್ಪತ್ರೆಯನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ಪ್ರಧಾನಮಂತ್ರಿ ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಗೌರವ ನಮನ ಸಲ್ಲಿಸಿದರು

January 30th, 10:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸಿದರು. ಬಾಪು ಅವರು ಯಾವಾಗಲೂ ಸ್ವದೇಶಿಯ ಮೇಲೆ ಬಲವಾದ ಒತ್ತು ನೀಡುತ್ತಿದ್ದರು, ಇದು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ಭಾರತಕ್ಕಾಗಿ ನಮ್ಮ ಸಂಕಲ್ಪದ ಮೂಲಭೂತ ಆಧಾರಸ್ತಂಭವೂ ಆಗಿದೆ. ಅವರ ವ್ಯಕ್ತಿತ್ವ ಮತ್ತು ಕಾರ್ಯಗಳು ದೇಶದ ಜನರನ್ನು ಕರ್ತವ್ಯದ ಹಾದಿಯಲ್ಲಿ ನಡೆಯಲು ಸದಾ ಪ್ರೇರೇಪಿಸುತ್ತಲೇ ಇರುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಎರಡನೇ ವಾರ್ಷಿಕೋತ್ಸವದ ನಿಮಿತ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶುಭ ಹಾರೈಕೆ

December 31st, 01:51 pm

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಎರಡನೇ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರ ಮತ್ತು ಪ್ರಪಂಚದಾದ್ಯಂತದ ಭಕ್ತರಿಗೆ ಹೃತ್ಪೂರ್ವಕ ಶುಭಾಶಯ ಕೋರಿದ್ದಾರೆ.

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 75ನೇ ಪುಣ್ಯತಿಥಿಯಂದು ‘ಭಾರತದ ಉಕ್ಕಿನ ಮನುಷ್ಯ’ನಿಗೆ ಪ್ರಧಾನಮಂತ್ರಿ ಅವರಿಂದ ಗೌರವ ನಮನ

December 15th, 08:44 am

ಇಂದು ಭಾರತದ ‘ಉಕ್ಕಿನ ಮನುಷ್ಯ' ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 75ನೇ ವರ್ಷದ ಪುಣ್ಯತಿಥಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಗೌರವಪೂರ್ಣ ನಮನ ಸಲ್ಲಿಸಿದರು. ಸರ್ದಾರ್ ಪಟೇಲ್ ಅವರು ದೇಶವನ್ನು ಏಕೀಕರಿಸಿ, ಭಾರತವನ್ನು ಏಕತೆಯೆಂಬ ಒಂದೇ ನೂಲಿನಲ್ಲಿ ನೇಯ್ದು ಕಟ್ಟಲು ತಮ್ಮ ಸಂಪೂರ್ಣ ಜೀವನವನ್ನು ಸಮರ್ಪಿಸಿದ್ದರು ಎಂದು ಬಣ್ಣಿಸಿದರು.

ಡೆಹ್ರಾಡೂನ್‌ ನಲ್ಲಿ ನಡೆದ ಉತ್ತರಾಖಂಡ ರಾಜ್ಯ ರಚನೆಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 09th, 01:00 pm

ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜಿ; ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಜಿ; ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಜಯ್ ಟಂಟಾ ಜಿ; ವಿಧಾನಸಭೆಯ ಸ್ಪೀಕರ್ ಸೋದರಿ ಶ್ರೀಮತಿ ರಿತು ಜಿ; ಉತ್ತರಾಖಂಡ ಸರ್ಕಾರದ ಸಚಿವರು; ವೇದಿಕೆಯಲ್ಲಿ ಉಪಸ್ಥಿತರಿರುವ ಮಾಜಿ ಮುಖ್ಯಮಂತ್ರಿ ಮತ್ತು ಸಂಸತ್ ಸದಸ್ಯರು; ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪೂಜ್ಯ ಸಂತರು; ಮತ್ತು ಇತರ ಎಲ್ಲಾ ಗಣ್ಯ ಅತಿಥಿಗಳು, ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೆ!

ಡೆಹ್ರಾಡೂನ್‌ ನಲ್ಲಿ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

November 09th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಹ್ರಾಡೂನ್‌ನಲ್ಲಿ 'ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ' ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ₹8140 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ದೇವಭೂಮಿ ಉತ್ತರಾಖಂಡದ ಜನತೆಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಎಲ್ಲರಿಗೂ ತಮ್ಮ ಹೃತ್ಪೂರ್ವಕ ನಮನ, ಗೌರವ ಹಾಗೂ ಸೇವೆಯನ್ನು ಸಮರ್ಪಿಸಿದರು.

ಉತ್ತರಾಖಂಡ ರಾಜ್ಯದ 25ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ರಾಜ್ಯದ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

November 09th, 09:05 am

ಉತ್ತರಾಖಂಡ ರಾಜ್ಯ ಸ್ಥಾಪನೆಯ 25ನೇ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಾಖಂಡ ಜನತೆಗೆ ಶುಭಾಶಯ ಕೋರಿದ್ದಾರೆ. ಪ್ರಕೃತಿಯ ಮಡಿಲಲ್ಲಿ ನೆಲೆಗೊಂಡಿರುವ ನಮ್ಮ ಈ ದೇವಭೂಮಿ ಇಂದು ಪ್ರವಾಸೋದ್ಯಮದ ಜೊತೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿಯ ಹೊಸ ವೇಗವನ್ನು ಪಡೆದುಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಶ್ರೀ ರಾಮ್ ವಿಲಾಸ್ ಪಾಸ್ವಾನ್ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

October 08th, 10:20 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜನಪ್ರಿಯ ನಾಯಕ ಮತ್ತು ಕೇಂದ್ರದ ಮಾಜಿ ಸಚಿವರಾದ ಶ್ರೀ ರಾಮ್ ವಿಲಾಸ್ ಪಾಸ್ವಾನ್ ಅವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಗೌರವ ನಮನ

September 26th, 08:51 am

ಮಾಜಿ ಪ್ರಧಾನಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಮೇಕ್ ಇನ್ ಇಂಡಿಯಾ ಉಪಕ್ರಮದ 11ನೇ ವರ್ಷಾಚರಣೆ ಆಚರಿಸಿದ ಪ್ರಧಾನಮಂತ್ರಿ

September 25th, 01:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮೇಕ್ ಇನ್ ಇಂಡಿಯಾ ಉಪಕ್ರಮದ 11ನೇ ವಾರ್ಷಿಕೋತ್ಸವವನ್ನು ಆಚರಿಸಿದರು. ಈ ಉಪಕ್ರಮವು ಭಾರತದ ಆರ್ಥಿಕತೆ ಮತ್ತು ಉದ್ಯಮಶೀಲ ಪರಿಸರ ವ್ಯವಸ್ಥೆಯ ಮೇಲೆ ತನ್ನ ಪರಿವರ್ತನಾತ್ಮಕ ಪರಿಣಾಮವನ್ನು ಬೀರಿದೆ. ಮೇಕ್ ಇನ್ ಇಂಡಿಯಾ ಭಾರತದ ಉದ್ಯಮಿಗಳಿಗೆ ನೀಡಿದ ಪ್ರೋತ್ಸಾಹವನ್ನು ಮತ್ತು ಇದರಿಂದಾಗಿ ಉಂಟಾದ ಜಾಗತಿಕ ಪರಿಣಾಮವನ್ನು ಶ್ರೀ ಮೋದಿಯವರು ಶ್ಲಾಘಿಸಿದರು.

1893 ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧಾರ್ಮಿಕ ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರ ಐತಿಹಾಸಿಕ ಭಾಷಣವನ್ನು ಹಂಚಿಕೊಂಡ ಪ್ರಧಾನಮಂತ್ರಿ

September 11th, 08:49 am

ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನದಲ್ಲಿ ಮಾಡಿದ ಐತಿಹಾಸಿಕ ಭಾಷಣದ 132ನೇ ವಾರ್ಷಿಕೋತ್ಸವದ ಶುಭ ಸಂದರ್ಭವನ್ನು ಮೆಲುಕುಹಾಕಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇದು ಸಾಮರಸ್ಯ ಮತ್ತು ಸಾರ್ವತ್ರಿಕ ಸಹೋದರತ್ವವನ್ನು ಒತ್ತಿಹೇಳುವ ಅವಿಸ್ಮರಣೀಯ ಕ್ಷಣವಾಗಿದೆ ಎಂದು ಹೇಳಿದ್ದಾರೆ. ಈ ಭಾಷಣವು ನಿಜವಾಗಿಯೂ ನಮ್ಮ ಇತಿಹಾಸದಲ್ಲಿ ಅತ್ಯಂತ ಅವಿಸ್ಮರಣೀಯ ಮತ್ತು ಸ್ಪೂರ್ತಿದಾಯಕ ಕ್ಷಣಗಳಲ್ಲಿ ಒಂದಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಮಾಲ್ಡೀವ್ಸ್‌ ದೇಶದ ಸ್ವಾತಂತ್ರ್ಯದ 60ನೇ ವಾರ್ಷಿಕೋತ್ಸವದಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಿದ ಪ್ರಧಾನಮಂತ್ರಿ

July 26th, 06:47 pm

ರಾಜಧಾನಿ ಮಾಲೆ ಭೇಟಿಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಲ್ಡೀವ್ಸ್‌ ನ ಸ್ವಾತಂತ್ರ್ಯದ 60 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ 'ಗೌರವ ಅತಿಥಿ'ಯಾಗಿ ಭಾಗವಹಿಸಿದರು. ಮಾಲ್ಡೀವ್ಸ್‌ ನಲ್ಲಿ ಈತನಕದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾರತದ ಪ್ರಧಾನಮಂತ್ರಿಯೊಬ್ಬರು ಭಾಗವಹಿಸುತ್ತಿರುವುದು ಇದೇ ಮೊದಲು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಾಲ್ಡೀವ್ಸ್‌ ಅಧ್ಯಕ್ಷರಾದ ಶ್ರೀ ಮುಯಿಝು ಅವರು ಆತಿಥ್ಯ ವಹಿಸಿದ ರಾಷ್ಟ್ರ ಅಥವಾ ಸರ್ಕಾರದ ಮುಖ್ಯಸ್ಥರ ಮಟ್ಟದ ವಿಶೇಷ ಸಭೆಯಲ್ಲಿ ಭಾಗವಹಿಸಿದ ಮೊದಲ ವಿದೇಶಿ ನಾಯಕರಾಗಿದ್ದಾರೆ.

ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿ ಗೌರವ ನಮನ

May 21st, 08:34 am

ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಸಿಕ್ಕಿಂ ರಾಜ್ಯದ 50ನೇ ರಾಜ್ಯೋತ್ಸವದ ಪ್ರಯುಕ್ತ‌ ಸಿಕ್ಕಿಂ ಜನತೆಗೆ ಪ್ರಧಾನಮಂತ್ರಿ ಶುಭಾಶಯ

May 16th, 10:13 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಕ್ಕಿಂ ರಾಜ್ಯತ್ವ ದಿನದಂದು ಜನತೆಗೆ ಶುಭಾಶಯ ಕೋರಿದ್ದಾರೆ. ಈ ವರ್ಷ, ಸಿಕ್ಕಿಂ ರಾಜ್ಯತ್ವದ 50ನೇ ವಾರ್ಷಿಕೋತ್ಸವವನ್ನು ನಾವು ಆಚರಿಸುತ್ತಿರುವುದರಿಂದ ಈ ಸಂದರ್ಭವು ಇನ್ನಷ್ಟು ವಿಶೇಷವಾಗಿದೆ! ಸಿಕ್ಕಿಂ ರಾಜ್ಯ ಪ್ರಶಾಂತ ಸೌಂದರ್ಯ, ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳು ಮತ್ತು ಶ್ರಮಶೀಲ ಜನರಿಂದ ಕೂಡಿದೆ ಎಂದು ಪ್ರಧಾನಮಂತ್ರಿ ಮೋದಿ ಹೇಳಿದ್ದಾರೆ.

ಮುದ್ರಾ ಯೋಜನೆಯ 10ನೇ ವಾರ್ಷಿಕೋತ್ಸವದಂದು ಅದರ ಪರಿವರ್ತನಾತ್ಮಕ ಪರಿಣಾಮವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

April 08th, 09:08 am

ದೇಶವು ಇಂದು #10YearsOfMUDRA ಆಚರಿಸುತ್ತಿದ್ದು, ಪ್ರಧಾನಮಂತ್ರಿ ಮುದ್ರಾ ಯೋಜನೆಯ (ಪಿಎಂಎಂವೈ) ಫಲಾನುಭವಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿಗಳಿಂದ ಗೌರವ ನಮನ

March 30th, 11:42 am

ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ಯಾಮ್‌ಜಿ ಕೃಷ್ಣ ವರ್ಮಾ ಅವರ ಪುಣ್ಯತಿಥಿಯ ನಿಮಿತ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಫೆಬ್ರವರಿ 28 ರಂದು ನವದೆಹಲಿಯಲ್ಲಿ ನಡೆಯಲಿರುವ ಜಹಾನ್-ಎ-ಖುಸ್ರೌ 2025 ರಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ

February 27th, 06:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 28 ರಂದು ಸಂಜೆ 7:30ರ ಸುಮಾರಿಗೆ ನವದೆಹಲಿಯ ಸುಂದರ್ ನರ್ಸರಿಯಲ್ಲಿ ನಡೆಯಲಿರುವ ಭವ್ಯ ಸೂಫಿ ಸಂಗೀತ ಉತ್ಸವ ಜಹಾನ್-ಎ-ಖುಸ್ರೌ 2025ರಲ್ಲಿ ಭಾಗವಹಿಸಲಿದ್ದಾರೆ.

ಮಹಾತ್ಮಾ ಗಾಂಧಿ ಅವರ ಪುಣ್ಯತಿಥಿ ನಿಮಿತ್ತ ಪ್ರಧಾನಮಂತ್ರಿ ಗೌರವ ನಮನ

January 30th, 09:06 am

ಮಹಾತ್ಮ ಗಾಂಧಿಯವರ ಪುಣ್ಯತಿಥಿಯ ನಿಮಿತ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರದ್ಧಾಂಜಲಿ ಸಲ್ಲಿಸಿದರು. ನಮ್ಮ ರಾಷ್ಟ್ರಕ್ಕಾಗಿ ಹುತಾತ್ಮರಾದ ಎಲ್ಲರಿಗೂ ಶ್ರೀ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದರು ಹಾಗೂ ಅವರ ಸೇವೆ ಮತ್ತು ತ್ಯಾಗವನ್ನು ಸ್ಮರಿಸಿದರು.