ಒಡಿಶಾದ ಜಾರ್ಸುಗುಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 27th, 11:45 am
ಇಲ್ಲಿ ಕೆಲವು ಯುವ ಸ್ನೇಹಿತರು ಅನೇಕ ಕಲಾಕೃತಿಗಳನ್ನು ತಂದಿದ್ದಾರೆ. ಒಡಿಶಾದ ಕಲೆಯ ಮೇಲಿನ ಪ್ರೀತಿ ವಿಶ್ವಪ್ರಸಿದ್ಧವಾಗಿದೆ. ನಾನು ನಿಮ್ಮೆಲ್ಲರಿಂದ ಈ ಉಡುಗೊರೆಗಳನ್ನು ಸ್ವೀಕರಿಸುತ್ತೇನೆ, ನನ್ನ ಎಸ್‌ಪಿಜಿ ಸಹೋದ್ಯೋಗಿಗಳನ್ನು ಈ ಎಲ್ಲಾ ವಸ್ತುಗಳನ್ನು ನಿಮ್ಮಿಂದ ಸಂಗ್ರಹಿಸಲು ವಿನಂತಿಸುತ್ತೇನೆ. ನೀವು ನಿಮ್ಮ ಹೆಸರು ಮತ್ತು ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ಖಂಡಿತವಾಗಿಯೂ ನನ್ನಿಂದ ನಿಮಗೆ ಪತ್ರ ಬರುತ್ತದೆ. ಅಲ್ಲಿ ಹಿಂಭಾಗದಲ್ಲಿ, ಆ ಮಗು ಬಹಳ ಹೊತ್ತಿನಿಂದ ಏನನ್ನೋ ಕೈಯಲ್ಲಿ ಹಿಡಿದಿರುವುದನ್ನು ನಾನು ನೋಡುತ್ತಿದ್ದೇನೆ. ಅವನ ಕೈಗಳು ನೋಯುತ್ತಿರಬೇಕು. ದಯವಿಟ್ಟು ಅವನಿಗೆ ಸಹಾಯ ಮಾಡಿ ಮತ್ತು ಅದನ್ನೂ ಪಡೆಯಿರಿ. ನೀವು ನಿಮ್ಮ ಹೆಸರನ್ನು ಹಿಂಭಾಗದಲ್ಲಿ ಬರೆದಿದ್ದರೆ, ನಾನು ಖಂಡಿತವಾಗಿಯೂ ನಿಮಗೆ ಪತ್ರ ಬರೆಯುತ್ತೇನೆ. ಈ ಕಲಾಕೃತಿಗಳನ್ನು ಸಿದ್ಧಪಡಿಸಿದ್ದಕ್ಕಾಗಿ ನಿಮ್ಮ ಈ ಪ್ರೀತಿಗಾಗಿ ಎಲ್ಲಾ ಯುವಕರು, ಯುವತಿಯರು ಮತ್ತು ಪುಟ್ಟ ಮಕ್ಕಳಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
September 27th, 11:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ಗಣ್ಯರಿಗೆ ಗೌರವಯುತ ಶುಭಾಶಯಗಳನ್ನು ಸಲ್ಲಿಸಿದರು. ಪ್ರಸ್ತುತ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿರುವುದನ್ನು ಎತ್ತಿ ತೋರಿಸಿದ ಶ್ರೀ ಮೋದಿ, ಈ ಶುಭ ದಿನಗಳಲ್ಲಿ ಮಾ ಸಮಲೈ ಮತ್ತು ಮಾ ರಾಮಚಂಡಿಯ ಪವಿತ್ರ ಭೂಮಿಗೆ ಭೇಟಿ ನೀಡಿ ಅಲ್ಲಿ ನೆರೆದಿದ್ದ ಜನರನ್ನು ಭೇಟಿ ಮಾಡುವ ಅದೃಷ್ಟ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ತಾಯಂದಿರು ಮತ್ತು ಸಹೋದರಿಯರು ಇರುವುದನ್ನು ಗಮನಿಸಿದ ಪ್ರಧಾನಮಂತ್ರಿ, ಅವರ ಆಶೀರ್ವಾದವೇ ನಿಜವಾದ ಶಕ್ತಿಯ ಮೂಲ ಎಂದು ಹೇಳಿದರು, ಜನರಿಗೆ ನಮನಗಳನ್ನು ಅರ್ಪಿಸಿದರು.2023ನೇ ಸಾಲಿನ ಕೇಂದ್ರ ಬಜೆಟ್ ಕುರಿತು ಪ್ರಧಾನ ಮಂತ್ರಿಯವರ ಪ್ರತಿಕ್ರಿಯೆ
February 01st, 02:01 pm
ʻಅಮೃತ ಕಾಲʼದ ಈ ಚೊಚ್ಚಲ ಬಜೆಟ್, ಅಭಿವೃದ್ಧಿ ಹೊಂದಿದ ಭಾರತದ ಭವ್ಯ ದೃಷ್ಟಿಕೋನವನ್ನು ಪೂರೈಸುವ ನಿಟ್ಟಿನಲ್ಲಿ ಸುದೃಢ ಅಡಿಪಾಯವನ್ನು ನಿರ್ಮಿಸುತ್ತದೆ. ಈ ಬಜೆಟ್ ದೀನದಲಿತರಿಗೆ ಆದ್ಯತೆ ನೀಡಿದೆ. ಇಂದಿನ ಮಹತ್ವಾಕಾಂಕ್ಷೆಯ ಸಮಾಜದ – ಹಳ್ಳಿಯ ಜನರು, ಬಡವರು, ರೈತರು, ಮಧ್ಯಮ ವರ್ಗದವರ ಕನಸುಗಳನ್ನು ಈ ಬಜೆಟ್ ಈಡೇರಿಸಲಿದೆ.ಈ ಬಜೆಟ್ ವಂಚಿತರಿಗೆ ಆದ್ಯತೆ ನೀಡುತ್ತದೆ: ಪ್ರಧಾನಮಂತ್ರಿ
February 01st, 02:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಅಮೃತ ಕಾಲದ ಮೊದಲ ಬಜೆಟ್ ವಿಕಸಿತ ಭಾರತದ ಆಕಾಂಕ್ಷೆಗಳು ಮತ್ತು ಸಂಕಲ್ಪಗಳನ್ನು ಈಡೇರಿಸಲು ಬಲವಾದ ತಳಹದಿಯನ್ನು ಹಾಕಿದೆ ಎಂದು ಹೇಳಿದ್ದಾರೆ. ಈ ಬಜೆಟ್ ವಂಚಿತರಿಗೆ ಆದ್ಯತೆ ನೀಡುತ್ತದೆ ಮತ್ತು ಮಹತ್ವಾಕಾಂಕ್ಷೆಯ ಸಮಾಜ, ಬಡವರು, ಗ್ರಾಮಗಳು ಮತ್ತು ಮಧ್ಯಮ ವರ್ಗದ ಕನಸುಗಳನ್ನು ಈಡೇರಿಸಲು ಶ್ರಮಿಸುತ್ತದೆ ಎಂದು ಅವರು ಹೇಳಿದರು.ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಯನ್ನು ಇನ್ನೂ ಮೂರು ತಿಂಗಳವರೆಗೆ (2022ರ ಅಕ್ಟೋಬರ್ -2022ರ ಡಿಸೆಂಬರ್) ವಿಸ್ತರಿಸಿದ ಕೇಂದ್ರ ಸರಕಾರ
September 28th, 04:06 pm
2021 ರಲ್ಲಿ ಗೌರವಾನ್ವಿತ ಪ್ರಧಾನಮಂತ್ರಿಯವರು ಮಾಡಿದ ಜನಪರ ಘೋಷಣೆ ಮತ್ತು ಪಿಎಂಜಿಕೆಎವೈ ಅಡಿಯಲ್ಲಿ ಹೆಚ್ಚುವರಿ ಆಹಾರ ಭದ್ರತೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಹಿನ್ನೆಲೆಯಲ್ಲಿ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ-ಹಂತ 7) ಯನ್ನು ಇನ್ನೂ 3 ತಿಂಗಳ ಅವಧಿಗೆ ಅಂದರೆ 2022ರ ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟವು ತನ್ನ ಅನುಮೋದನೆ ನೀಡಿದೆ.