ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀಲಂಕಾದ ಅಧ್ಯಕ್ಷರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು
December 01st, 08:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀಲಂಕಾ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಅನುರ ಕುಮಾರ ದಿಸಾನಾಯಕೆ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.ಶ್ರೀಲಂಕಾದಲ್ಲಿ ದಿತ್ವಾ ಚಂಡಮಾರುತದಿಂದ ಉಂಟಾದ ಹಾನಿಗೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ
November 28th, 03:37 pm
ದಿತ್ವಾ ಚಂಡಮಾರುತದಿಂದ ಉಂಟಾದ ವಿನಾಶದಿಂದ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಶ್ರೀಲಂಕಾದ ಜನರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಹೃತ್ಪೂರ್ವಕ ಸಂತಾಪ ಸೂಚಿಸಿದ್ದಾರೆ. ಎಲ್ಲಾ ದಿತ್ವಾ ಚಂಡಮಾರುತದಿಂದ ಪೀಡಿತ ಕುಟುಂಬಗಳ ಸುರಕ್ಷತೆ, ಸಾಂತ್ವನ ಮತ್ತು ತ್ವರಿತ ಚೇತರಿಕೆಗಾಗಿ ಅವರು ಪ್ರಾರ್ಥಿಸಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಜಗತ್ತು ತೀವ್ರವಾಗಿ ಖಂಡಿಸುತ್ತದೆ
April 24th, 03:29 pm
ಏಪ್ರಿಲ್ 22, 2025 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯು ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿತು, ಇದು ವಿಶ್ವ ನಾಯಕರಿಂದ ಬಲವಾದ ಒಗ್ಗಟ್ಟಿನ ಅಲೆಯನ್ನು ಹುಟ್ಟುಹಾಕಿದೆ. ಜಾಗತಿಕ ಬೆಂಬಲಕ್ಕಾಗಿ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದರು, ಭಾರತವು ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಭೂಮಿಯ ಕೊನೆಯವರೆಗೂ ಹಿಂಬಾಲಿಸುತ್ತದೆ ಎಂದು ಪ್ರತಿಜ್ಞೆ ಮಾಡಿದರು.ಭಾರತ ನೆರವಿನ ರೈಲು ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಮಂತ್ರಿ
April 06th, 12:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀಲಂಕಾದ ಅಧ್ಯಕ್ಷರಾದ ಘನತೆವೆತ್ತ ಅನುರಾ ಕುಮಾರ ದಿಸ್ಸಾನಾಯಕೆ ಅವರೊಂದಿಗೆ ಇಂದು ಅನುರಾಧಪುರದಲ್ಲಿ ಭಾರತದ ನೆರವಿನೊಂದಿಗೆ ನಿರ್ಮಿಸಲಾದ ಎರಡು ರೈಲ್ವೆ ಯೋಜನೆಗಳನ್ನು ಉದ್ಘಾಟಿಸುವ ಮತ್ತು ಪ್ರಾರಂಭಿಸುವ ಸಮಾರಂಭದಲ್ಲಿ ಭಾಗವಹಿಸಿದ್ದರು.ಜಯ ಶ್ರೀ ಮಹಾ ಬೋಧಿ ದೇವಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ
April 06th, 11:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀಲಂಕಾದ ಅಧ್ಯಕ್ಷ ಘನತೆವೆತ್ತ ಅನುರಾ ಕುಮಾರ ದಿಸ್ಸನಾಯಕೆ ಅವರೊಂದಿಗೆ ಅನುರಾಧಪುರದ ಪವಿತ್ರ ಜಯ ಶ್ರೀ ಮಹಾ ಬೋಧಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜ್ಯ ಮಹಾಬೋಧಿ ಮರಕ್ಕೆ ಪೂಜೆ ಸಲ್ಲಿಸಿದರು.ಶ್ರೀಲಂಕಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾನಮಂತ್ರಿ
April 05th, 05:54 pm
ಪ್ರಧಾನಮಂತ್ರಿ ಅವರು ಇಂದು ಕೊಲಂಬೋದ ಅಧ್ಯಕ್ಷರ ಕಾರ್ಯಾಲಯದಲ್ಲಿ ಶ್ರೀಲಂಕಾದ ಅಧ್ಯಕ್ಷ ಘನತೆವೆತ್ತ ಅನುರ ಕುಮಾರ ದಿಸ್ಸನಾಯಕೆ ಅವರೊಂದಿಗೆ ಫಲಪ್ರದ ಸಭೆ ನಡೆಸಿದರು. ಮಾತುಕತೆಗೂ ಮುನ್ನ ಪ್ರಧಾನಿಯವರಿಗೆ ಸ್ವಾತಂತ್ರ್ಯ ಚೌಕದಲ್ಲಿ ಔಪಚಾರಿಕ ಸ್ವಾಗತ ನೀಡಲಾಯಿತು. 2024ರ ಸೆಪ್ಟೆಂಬರ್ ನಲ್ಲಿ ಅಧ್ಯಕ್ಷ ದಿಸ್ಸನಾಯಕೆ ಅಧಿಕಾರ ವಹಿಸಿಕೊಂಡ ನಂತರ ಶ್ರೀಲಂಕಾಕ್ಕೆ ಅಧಿಕೃತ ಭೇಟಿ ನೀಡಿದ ಮೊದಲ ವಿದೇಶಿ ನಾಯಕ ಪ್ರಧಾನಿ ನರೇಂದ್ರ ಮೋದಿ.ಪ್ರಧಾನಮಂತ್ರಿಗಳ ಶ್ರೀಲಂಕಾ ಭೇಟಿ: ಸಭಾ ಒಪ್ಪಂದಗಳ ಪಟ್ಟಿ
April 05th, 01:45 pm
ವಿದ್ಯುತ್ ಆಮದು/ರಫ್ತುಗಾಗಿ ಹೆಚ್ ವಿ ಡಿ ಸಿ ಅಂತರ್ ಸಂಪರ್ಕ ಅನುಷ್ಠಾನಕ್ಕಾಗಿ ಭಾರತ ಗಣರಾಜ್ಯ ಸರ್ಕಾರ ಮತ್ತು ಶ್ರೀಲಂಕಾದ ಪ್ರಜಾಸತ್ತಾತ್ಮಕ ಸಮಾಜವಾದಿ ಗಣರಾಜ್ಯ ಸರ್ಕಾರದ ನಡುವಿನ ತಿಳುವಳಿಕಾ ಒಪ್ಪಂದಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ
April 05th, 11:30 am
ಇಂದು ಅಧ್ಯಕ್ಷರಾದ ದಿಸ್ಸೆನಾಯಕೆ ಅವರಿಂದ 'ಶ್ರೀಲಂಕಾ ಮಿತ್ರ ವಿಭೂಷಣ' ಪ್ರಶಸ್ತಿ ಪಡೆದಿರುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಈ ಪ್ರಶಸ್ತಿ ನನ್ನನ್ನು ಗೌರವಿಸುವುದಷ್ಟೇ ಅಲ್ಲ, 140 ಕೋಟಿ ಭಾರತೀಯರನ್ನು ಗೌರವಿಸುತ್ತದೆ. ಇದು ಭಾರತ ಮತ್ತು ಶ್ರೀಲಂಕಾದ ಜನರ ನಡುವಿನ ಐತಿಹಾಸಿಕ ಸಂಬಂಧಗಳು ಮತ್ತು ಆಳವಾದ ಸ್ನೇಹಕ್ಕೆ ಗೌರವವಾಗಿದೆ.PM Modi arrives in Sri Lanka
April 04th, 10:06 pm
Prime Minister Narendra Modi arrived in Colombo, Sri Lanka. During his visit, the PM will take part in various programmes. He will meet President Anura Kumara Dissanayake.ಭಾರತ-ಶ್ರೀಲಂಕಾ ಜಂಟಿ ಹೇಳಿಕೆ: ಪರಸ್ಪರ ಸಾಮಾನ್ಯ ಭವಿಷ್ಯಕ್ಕಾಗಿ ಪಾಲುದಾರಿಕೆಯ ಉತ್ತೇಜನ
December 16th, 03:26 pm
ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಮತ್ತು ಭಾರತಕ್ಕೆ ಅಧಿಕೃತ ಭೇಟಿಯ ಕೈಗೊಂಡಿರುವ ಶ್ರೀಲಂಕಾದ ಅಧ್ಯಕ್ಷರಾದ ಗೌರವಾನ್ವಿತ ಅನುರಾ ಕುಮಾರ ದಿಸ್ಸನಾಯಕೆ ಅವರು 2024ರ ಡಿಸೆಂಬರ್ 16 ರಂದು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಸಮಗ್ರ ಮತ್ತು ಫಲಪ್ರದ ಚರ್ಚೆ ನಡೆಸಿದರು.ಶ್ರೀಲಂಕಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅನುವಾದ
December 16th, 01:00 pm
ನಾನು ಅಧ್ಯಕ್ಷ ದಿಸನಾಯಕ ಅವರನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಅಧ್ಯಕ್ಷರಾದ ನಂತರ ನೀವು ನಿಮ್ಮ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನು ಆಯ್ಕೆ ಮಾಡಿರುವುದಕ್ಕೆ ನನಗೆ ಸಂತೋಷವಾಗಿದೆ. ಅಧ್ಯಕ್ಷ ದಿಸನಾಯಕ ಅವರ ಭೇಟಿ ನಮ್ಮ ಸಂಬಂಧದಲ್ಲಿ ಹೊಸ ಚೈತನ್ಯ ಮತ್ತು ಶಕ್ತಿಯನ್ನು ತುಂಬಿದೆ. ನಮ್ಮ ಪಾಲುದಾರಿಕೆಗಾಗಿ ನಾವು ಭವಿಷ್ಯದ ದೃಷ್ಟಿಕೋನವನ್ನು ಅಳವಡಿಸಿಕೊಂಡಿದ್ದೇವೆ. ನಾವು ನಮ್ಮ ಆರ್ಥಿಕ ಪಾಲುದಾರಿಕೆಯಲ್ಲಿ ಹೂಡಿಕೆ ಆಧಾರಿತ ಬೆಳವಣಿಗೆ ಮತ್ತು ಸಂಪರ್ಕಕ್ಕೆ ಒತ್ತು ನೀಡಿದ್ದೇವೆ. ಮತ್ತು ಭೌತಿಕ, ಡಿಜಿಟಲ್ ಹಾಗು ಇಂಧನ ಸಂಪರ್ಕವು ನಮ್ಮ ಪಾಲುದಾರಿಕೆಯ ಪ್ರಮುಖ ಆಧಾರಸ್ತಂಭಗಳಾಗಿರಬೇಕು ಎಂದು ನಿರ್ಧರಿಸಿದ್ದೇವೆ. ಎರಡೂ ರಾಷ್ಟ್ರಗಳ ನಡುವೆ ವಿದ್ಯುತ್-ಗ್ರಿಡ್ ಸಂಪರ್ಕ ಮತ್ತು ಬಹು ಉತ್ಪನ್ನ ಪೆಟ್ರೋಲಿಯಂ ಪೈಪ್ ಲೈನ್ ಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ. ಸಂಪೂರ್ ಸೌರ ವಿದ್ಯುತ್ ಯೋಜನೆಯನ್ನು ತ್ವರಿತಗೊಳಿಸಲಾಗುವುದು. ಹೆಚ್ಚುವರಿಯಾಗಿ, ಶ್ರೀಲಂಕಾದ ವಿದ್ಯುತ್ ಸ್ಥಾವರಗಳಿಗೆ ಎಲ್ ಎನ್ ಜಿ ಪೂರೈಸಲಾಗುವುದು. ದ್ವಿಪಕ್ಷೀಯ ವ್ಯಾಪಾರವನ್ನು ಉತ್ತೇಜಿಸಲು ಇಟಿಸಿಎ ಅನ್ನು ಶೀಘ್ರದಲ್ಲೇ ಸಾಧಿಸಲು ಎರಡೂ ಕಡೆಯವರು ಪ್ರಯತ್ನಿಸುತ್ತಾರೆ.ಶ್ರೀಲಂಕಾ ಅಧ್ಯಕ್ಷರಾಗಿ ಚುನಾಯಿತರಾದ ಅನುರಾ ಕುಮಾರ ದಿಸ್ಸನಾಯಕೆ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದ್ದಾರೆ
September 23rd, 12:11 am
ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ ಅನುರ ಕುಮಾರ ದಿಸ್ಸನಾಯಕೆ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಶ್ರೀಲಂಕಾ ಜೊತೆಗೆ ಬಹುಮುಖಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ನಿಕಟವಾಗಿ ಕೆಲಸ ಮಾಡುವ ಭರವಸೆಯನ್ನು ಪ್ರಧಾನ ಮಂತ್ರಿಗಳು ವ್ಯಕ್ತಪಡಿಸಿದ್ದಾರೆ.