ಐಐಟಿ ದೆಹಲಿಯ 57ನೇ ಘಟಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 08th, 11:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐಐಟಿ ದೆಹಲಿಯ 57ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಭಾಷಣ ಮಾಡಿದರು. ಸಮಾರಂಭದ ಆಳವಾದ ಭಾವನಾತ್ಮಕ ಪ್ರತಿಸ್ಪಂದನವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಕ್ಯಾಂಪಸ್ ನ ರೋಮಾಂಚಕ, ಕನಸು ತುಂಬಿದ ವಾತಾವರಣವನ್ನು ಪ್ರಮುಖವಾಗಿ ಉಲ್ಲೇಖಿಸಿದರು. ಕೋವಿಡ್ ಜಾಗತಿಕ ಸಾಂಕ್ರಾಮಿಕ ಸಮಯದಲ್ಲಿ ತಮ್ಮ ಹಿಂದಿನ ವರ್ಚುವಲ್ ಹಾಜರಾತಿಯನ್ನು ನೆನಪಿಸಿಕೊಂಡ ಅವರು, ಪದವಿ ಪಡೆಯುತ್ತಿರುವ ವರ್ಗದ ನಡುವೆ ಭೌತಿಕವಾಗಿ ಹಾಜರಿರುವುದಕ್ಕೆ ತಮ್ಮ ವೈಯಕ್ತಿಕ ತೃಪ್ತಿಯನ್ನು ವ್ಯಕ್ತಪಡಿಸಿದರು. ಈ ಅದ್ಭುತ ಅನುಭವವನ್ನು ಇಂದು ಈ ಕ್ಯಾಂಪಸ್ ನಲ್ಲಿ ನಿಮ್ಮೊಂದಿಗೆ ಹಂಚಿಕೊಳ್ಳುವುದು ನನಗೂ ತುಂಬಾ ವಿಶೇಷ ಸಂಗತಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು.

ಐಐಟಿ ದೆಹಲಿಯ 57ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

August 08th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐಐಟಿ ದೆಹಲಿಯ 57ನೇ ಘಟಿಕೋತ್ಸವ ಸಮಾರಂಭವನ್ನುದ್ದೇಶಿಸಿ ಭಾಷಣ ಮಾಡಿದರು. ಸಮಾರಂಭದ ಆಳವಾದ ಭಾವನಾತ್ಮಕ ಪ್ರತಿಸ್ಪಂದನವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿಯವರು, ಕ್ಯಾಂಪಸ್ ನ ರೋಮಾಂಚಕ, ಕನಸು ತುಂಬಿದ ವಾತಾವರಣವನ್ನು ಪ್ರಮುಖವಾಗಿ ಉಲ್ಲೇಖಿಸಿದರು. ಕೋವಿಡ್ ಜಾಗತಿಕ ಸಾಂಕ್ರಾಮಿಕ ಸಮಯದಲ್ಲಿ ತಮ್ಮ ಹಿಂದಿನ ವರ್ಚುವಲ್ ಹಾಜರಾತಿಯನ್ನು ನೆನಪಿಸಿಕೊಂಡ ಅವರು, ಪದವಿ ಪಡೆಯುತ್ತಿರುವ ವರ್ಗದ ನಡುವೆ ಭೌತಿಕವಾಗಿ ಹಾಜರಿರುವುದಕ್ಕೆ ತಮ್ಮ ವೈಯಕ್ತಿಕ ತೃಪ್ತಿಯನ್ನು ವ್ಯಕ್ತಪಡಿಸಿದರು. ಈ ಅದ್ಭುತ ಅನುಭವವನ್ನು ಇಂದು ಈ ಕ್ಯಾಂಪಸ್ ನಲ್ಲಿ ನಿಮ್ಮೊಂದಿಗೆ ಹಂಚಿಕೊಳ್ಳುವುದು ನನಗೂ ತುಂಬಾ ವಿಶೇಷ ಸಂಗತಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು.

ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ವೈಯುಜಿಎಂ ಸಮಾವೇಶದಲ್ಲಿ ಪ್ರಧಾನಮಂತ್ರಿ ಭಾಷಣ

April 29th, 11:01 am

ಇಂದು, ಸರ್ಕಾರ, ಶೈಕ್ಷಣಿಕ ವಲಯ, ವಿಜ್ಞಾನ ಮತ್ತು ಸಂಶೋಧನೆಗೆ ಸಂಬಂಧಿಸಿದ ವಿವಿಧ ಕ್ಷೇತ್ರಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿ ಉಪಸ್ಥಿತರಿದ್ದಾರೆ. ಈ ಏಕತೆ, ಈ ಸಂಗಮವನ್ನೇ ನಾವು ವೈಯುಜಿಎಂ ಎಂದು ಕರೆಯುತ್ತೇವೆ. ವಿಕಸಿತ ಭಾರತದ ಭವಿಷ್ಯದ ತಂತ್ರಜ್ಞಾನಕ್ಕೆ ಸಂಬಂಧಿಸಿದ ಎಲ್ಲಾ ಪಾಲುದಾರರು ಒಟ್ಟಿಗೆ ಸೇರಿ ತೊಡಗಿಸಿಕೊಂಡಿರುವ ಒಂದು ವೈಯುಜಿಎಂ. ಭಾರತದ ಇನೋವೇಶನ್ ಸಾಮರ್ಥ್ಯವನ್ನು ಮತ್ತು ಡೀಪ್-ಟೆಕ್ನಲ್ಲಿ ಅದರ ಪಾತ್ರವನ್ನು ಹೆಚ್ಚಿಸಲು ನಾವು ಮಾಡುತ್ತಿರುವ ಪ್ರಯತ್ನಗಳನ್ನು ಈ ಕಾರ್ಯಕ್ರಮವು ಮತ್ತಷ್ಟು ಬಲಪಡಿಸುತ್ತದೆ ಎಂದು ನಾನು ನಂಬುತ್ತೇನೆ. ಇಂದು ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ AI, ಇಂಟೆಲಿಜೆಂಟ್ ಸಿಸ್ಟಮ್ಸ್, ಹಾಗೂ ಬಯೋಸೈನ್ಸಸ್, ಬಯೋಟೆಕ್ನಾಲಜಿ, ಆರೋಗ್ಯ ಮತ್ತು ವೈದ್ಯಕೀಯ ವಿಭಾಗಗಳಲ್ಲಿ ಸೂಪರ್ ಹಬ್ಗಳ ಆರಂಭಕ್ಕೆ ಚಾಲನೆ ದೊರೆತಿದೆ. ಇಂದು ವಾಧ್ವಾನಿ ಇನ್ನೋವೇಶನ್ ನೆಟ್ವರ್ಕ್ ನ ಉದ್ಘಾಟನೆಯೂ ಆಗಿದೆ. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಸಹಯೋಗದೊಂದಿಗೆ ಸಂಶೋಧನೆಯನ್ನು ಮುನ್ನಡೆಸಲು ಪ್ರತಿಜ್ಞೆಯನ್ನು ಸಹ ತೆಗೆದುಕೊಳ್ಳಲಾಗಿದೆ. ಈ ಉಪಕ್ರಮಕ್ಕಾಗಿ ವಾಧ್ವಾನಿ ಫೌಂಡೇಶನ್, ನಮ್ಮ ಐಐಟಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ವಿಶೇಷವಾಗಿ, ನನ್ನ ಸ್ನೇಹಿತರಾದ ರೊಮೇಶ್ ವಾಧ್ವಾನಿ ಜಿ ಅವರನ್ನು ನಾನು ಶ್ಲಾಘಿಸುತ್ತೇನೆ. ನಿಮ್ಮ ಸಮರ್ಪಣೆ ಮತ್ತು ಪೂರ್ವಭಾವಿ ಪ್ರಯತ್ನಗಳಿಂದಾಗಿ ಖಾಸಗಿ ಮತ್ತು ಸಾರ್ವಜನಿಕ ವಲಯಗಳು ಒಟ್ಟಾಗಿ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ತಂದಿವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು

April 29th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವೈಯುಜಿಎಂ ಇನ್ನೋವೇಶನ್ ಸಮಾವೇಶವನ್ನುದ್ದೇಶಿಸಿ (YUGM Innovation Conclave) ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಸರ್ಕಾರಿ ಅಧಿಕಾರಿಗಳು, ಶೈಕ್ಷಣಿಕ ವಲಯದವರು ಹಾಗೂ ವಿಜ್ಞಾನ ಮತ್ತು ಸಂಶೋಧನಾ ವೃತ್ತಿಪರರ ಈ ಮಹತ್ವದ ಸಮಾಗಮವನ್ನು ವಿಶೇಷವಾಗಿ ಪ್ರಸ್ತಾಪಿಸಿದರು. ಎಲ್ಲಾ ಪಾಲುದಾರರ ಈ ಸಂಗಮವೇ YUGM ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, ಇದು ವಿಕಸಿತ ಭಾರತಕ್ಕಾಗಿ ಭವಿಷ್ಯದ ತಂತ್ರಜ್ಞಾನಗಳನ್ನು ಮುನ್ನಡೆಸುವ ಗುರಿ ಹೊಂದಿರುವ ಸಹಯೋಗವಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದ ಮೂಲಕ, ಭಾರತದ ನಾವೀನ್ಯತಾ ಸಾಮರ್ಥ್ಯವನ್ನು ಹೆಚ್ಚಿಸುವ ಮತ್ತು ಡೀಪ್-ಟೆಕ್ನಲ್ಲಿ (Deep-tech) ಅದರ ಪಾತ್ರವನ್ನು ಬಲಪಡಿಸುವ ಪ್ರಯತ್ನಗಳು ಇನ್ನಷ್ಟು ವೇಗವನ್ನು ಪಡೆದುಕೊಳ್ಳಲಿವೆ ಎಂದು ಪ್ರಧಾನಮಂತ್ರಿಯವರು ವಿಶ್ವಾಸ ವ್ಯಕ್ತಪಡಿಸಿದರು. ಅವರು AI, ಇಂಟೆಲಿಜೆಂಟ್‌ ಸಿಸ್ಟಮ್ ಹಾಗೂ ಜೈವಿಕ ವಿಜ್ಞಾನ (Biosciences), ಜೈವಿಕ ತಂತ್ರಜ್ಞಾನ (Biotechnology), ಆರೋಗ್ಯ (Health) ಮತ್ತು ವೈದ್ಯಕೀಯ (Medicine) ಕ್ಷೇತ್ರಗಳ ಮೇಲೆ ಗಮನ ಕೇಂದ್ರೀಕರಿಸುವ ಐಐಟಿ ಕಾನ್ಪುರ ಮತ್ತು ಐಐಟಿ ಬಾಂಬೆಯಲ್ಲಿ ಸೂಪರ್ ಹಬ್ಗಳ (Super hubs) ಉದ್ಘಾಟನೆಯನ್ನು ಪ್ರಸ್ತಾಪಿಸಿದರು. ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ (National Research Foundation) ಸಹಯೋಗದೊಂದಿಗೆ ಸಂಶೋಧನೆಯನ್ನು ಮುನ್ನಡೆಸುವ ಬದ್ಧತೆಯನ್ನು ಪುನರುಚ್ಚರಿಸುವ 'ವಾಧ್ವಾನಿ ಇನ್ನೋವೇಶನ್ ನೆಟ್ವರ್ಕ್' (Wadhwani Innovation Network) ನ ಪ್ರಾರಂಭದ ಬಗ್ಗೆಯೂ ಅವರು ಉಲ್ಲೇಖಿಸಿದರು. ಪ್ರಧಾನಿಯವರು ವಾಧ್ವಾನಿ ಫೌಂಡೇಶನ್, ಐಐಟಿಗಳು ಮತ್ತು ಈ ಉಪಕ್ರಮಗಳಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರನ್ನು ಅಭಿನಂದಿಸಿದರು. 1 ಖಾಸಗಿ ಮತ್ತು ಸಾರ್ವಜನಿಕ ವಲಯಗಳ ಸಹಯೋಗದ ಮೂಲಕ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಶ್ರೀ ರೊಮೇಶ್ ವಾಧ್ವಾನಿಯವರ ಸಮರ್ಪಣೆ ಮತ್ತು ಸಕ್ರಿಯ ಪಾತ್ರಕ್ಕಾಗಿ ಅವರು ವಿಶೇಷ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಏಪ್ರಿಲ್‌ 29ರಂದು ವೈಯುಜಿಎಂ ಸಮಾವೇಶದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

April 28th, 07:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬೆಳಗ್ಗೆ 11ಗಂಟೆಗೆ ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ ವೈಯುಜಿಎಂ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

The vision of Investment in People stands on three pillars – Education, Skill and Healthcare: PM Modi

March 05th, 01:35 pm

PM Modi participated in the Post-Budget Webinar on Employment and addressed the gathering on the theme Investing in People, Economy, and Innovation. PM remarked that India's education system is undergoing a significant transformation after several decades. He announced that over one crore manuscripts will be digitized under Gyan Bharatam Mission. He noted that India, now a $3.8 trillion economy will soon become a $5 trillion economy. PM highlighted the ‘Jan-Bhagidari’ model for better implementation of the schemes.

ಉದ್ಯೋಗ ಸೃಷ್ಟಿಗೆ ಉತ್ತೇಜನ - ಜನರು, ಆರ್ಥಿಕತೆ ಮತ್ತು ನಾವೀನ್ಯತೆಯಲ್ಲಿ ಹೂಡಿಕೆ ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು

March 05th, 01:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಕುರಿತ ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ವಿಕಸಿತ ಭಾರತದ ಮಾರ್ಗಸೂಚಿಯನ್ನು ವ್ಯಾಖ್ಯಾನಿಸುವ ಜನರು, ಆರ್ಥಿಕತೆ ಮತ್ತು ನಾವೀನ್ಯತೆಯಲ್ಲಿ ಹೂಡಿಕೆ ಎಂಬ ವೆಬಿನಾರ್‌ ನ ವಿಷಯದ ಮಹತ್ವವನ್ನು ಎತ್ತಿ ತೋರಿಸಿದರು. ಈ ವರ್ಷದ ಬಜೆಟ್ ಈ ವಿಷಯವನ್ನು ದೊಡ್ಡ ಪ್ರಮಾಣದಲ್ಲಿ ಪ್ರತಿಬಿಂಬಿಸುತ್ತದೆ ಮತ್ತು ಭಾರತದ ಭವಿಷ್ಯದ ನೀಲನಕ್ಷೆಯಾಗಿದೆ ಎಂದು ಅವರು ಹೇಳಿದರು. ಮೂಲಸೌಕರ್ಯ, ಕೈಗಾರಿಕೆಗಳು, ಜನರು, ಆರ್ಥಿಕತೆ ಮತ್ತು ನಾವೀನ್ಯತೆಗಳಲ್ಲಿ ಹೂಡಿಕೆಗಳಿಗೆ ಸಮಾನ ಆದ್ಯತೆ ನೀಡಲಾಗಿದೆ ಎಂದು ಅವರು ಒತ್ತಿ ಹೇಳಿದರು. ಸಾಮರ್ಥ್ಯ ವೃದ್ಧಿ ಮತ್ತು ಪ್ರತಿಭೆಗಳ ಪೋಷಣೆ ರಾಷ್ಟ್ರದ ಪ್ರಗತಿಗೆ ಅಡಿಪಾಯವಾಗಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿ, ಮುಂದಿನ ಹಂತದ ಅಭಿವೃದ್ಧಿಗೆ ಅಗತ್ಯವಿರುವುದರಿಂದ ಎಲ್ಲಾ ಪಾಲುದಾರರು ಮುಂದೆ ಬಂದು ಈ ಕ್ಷೇತ್ರಗಳಲ್ಲಿ ಹೆಚ್ಚು ಹೂಡಿಕೆ ಮಾಡಬೇಕೆಂದು ಒತ್ತಾಯಿಸಿದರು. ದೇಶದ ಆರ್ಥಿಕ ಯಶಸ್ಸಿಗೆ ಇದು ಅತ್ಯಗತ್ಯ ಮತ್ತು ಪ್ರತಿಯೊಂದು ಸಂಸ್ಥೆಯ ಯಶಸ್ಸಿಗೆ ಆಧಾರವಾಗಿದೆ ಎಂದು ಅವರು ಒತ್ತಿ ಹೇಳಿದರು.

ಒಂದು ರಾಷ್ಟ್ರ ಒಂದು ಚಂದಾದಾರಿಕೆ (ಒ ಎನ್ ಒ ಎಸ್)ಗೆ ಸಂಪುಟದ ಅನುಮೋದನೆ

November 25th, 08:42 pm

ಒಂದು ರಾಷ್ಟ್ರ ಒಂದು ಚಂದಾದಾರಿಕೆಯು ಸರ್ಕಾರಿ ಸಂಸ್ಥೆಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಂಶೋಧಕರಿಗೆ ಸಂಶೋಧನೆಯನ್ನು ಸುಲಭಗೊಳಿಸುವ ಮೂಲಕ ಜಾಗತಿಕ ಸಂಶೋಧನಾ ಪರಿಸರ ವ್ಯವಸ್ಥೆಯಲ್ಲಿ ಭಾರತವನ್ನು ಸ್ಥಾಪಿಸುವ ನಿಟ್ಟಿನಲ್ಲಿ ಒಂದು ಸಕಾಲಿಕ ಹೆಜ್ಜೆಯಾಗಿದೆ

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದ ʻಸೆಮಿಕಾನ್ ಇಂಡಿಯಾ-2024ʼ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡದ ಅನುವಾದ

September 11th, 12:00 pm

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಮತ್ತು ಜಿತಿನ್ ಪ್ರಸಾದ ಅವರೇ, ಜಾಗತಿಕ ಸೆಮಿ ಕಂಡಕ್ಟರ್‌ (ಸೆಮಿ ಕಂಡಕ್ಟರ್‌) ಉದ್ಯಮಕ್ಕೆ ಸಂಬಂಧಿಸಿದ ಎಲ್ಲಾ ಪ್ರಮುಖರೇ, ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆ ಪ್ರಪಂಚದ ಎಲ್ಲಾ ಪಾಲುದಾರರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ! ಎಲ್ಲರಿಗೂ ನಮಸ್ಕಾರ!

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಸೆಮಿಕಾನ್ ಇಂಡಿಯಾ-2024 ಸಮ್ಮೇಳನ ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

September 11th, 11:30 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿರುವ ಇಂಡಿಯಾ ಎಕ್ಸ್‌ಪೋ ಮಾರ್ಟ್‌ನಲ್ಲಿ ಆಯೋಜಿಸಿರುವ ಸೆಮಿಕಾನ್ ಇಂಡಿಯಾ-2024 ಸಮ್ಮೇಳನ ಉದ್ಘಾಟಿಸಿದರು. ಶ್ರೀ ಮೋದಿ ಅವರು ಈ ಸಂದರ್ಭದಲ್ಲಿ ವಸ್ತುಪ್ರದರ್ಶನ ವೀಕ್ಷಿಸಿದರು. ಸೆಪ್ಟೆಂಬರ್ 11ರಿಂದ 13ರ ವರೆಗೆ 3 ದಿನಗಳ ಕಾಲ ನಡೆಯುವ ಸಮ್ಮೇಳನವು ಭಾರತದ ಸೆಮಿಕಂಡಕ್ಟರ್ ಕಾರ್ಯತಂತ್ರ ಮತ್ತು ನೀತಿಗಳನ್ನು ಪ್ರದರ್ಶಿಸಲಿತ್ತದೆ, ಇದು ಸೆಮಿಕಂಡಕ್ಟರ್ ವಲಯದಲ್ಲಿ ಭಾರತವನ್ನು ಜಾಗತಿಕ ಗಮ್ಯತಾಣವಾಗಿ ರೂಪಿಸಲಿದೆ.

ದೇಶದ ವೈಜ್ಞಾನಿಕ ಸಮುದಾಯವು ಅವರ ಪ್ರಯತ್ನಗಳಿಗೆ ಸಂಪನ್ಮೂಲಗಳ ಕೊರತೆಯಾಗುವುದಿಲ್ಲ ಎಂಬ ನಂಬಿಕೆಯನ್ನು ಹೊಂದಿರಬೇಕು: ಪ್ರಧಾನಮಂತ್ರಿ

September 10th, 04:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಲೋಕ ಕಲ್ಯಾಣ ಮಾರ್ಗದ, 7ರಲ್ಲಿರುವ ತಮ್ಮ ನಿವಾಸದಲ್ಲಿ ಅನುಸಂಧಾನ್ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಆಡಳಿತ ಮಂಡಳಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಭಾರತದ ವಿಜ್ಞಾನ ಮತ್ತು ತಂತ್ರಜ್ಞಾನ ಭೂದೃಶ್ಯ ಮತ್ತು ಸಂಶೋಧನೆ ಹಾಗು ಅಭಿವೃದ್ಧಿ ಕಾರ್ಯಕ್ರಮಗಳ ಮರುವಿನ್ಯಾಸದ ಬಗ್ಗೆ ಚರ್ಚೆ ನಡೆಯಿತು.