ಫಿಡೆ ವಿಶ್ವ ಬ್ಲಿಟ್ಜ್ ಚೆಸ್ ಚಾಂಪಿಯನ್‌ ಶಿಪ್‌ ನಲ್ಲಿ ಕಂಚಿನ ಪದಕ ಜಯಿಸಿರುವ ಅರ್ಜುನ್ ಎರಿಗೈಸಿ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

December 31st, 09:04 am

ದೋಹಾದಲ್ಲಿ ನಡೆದ ಫಿಡೆ ವಿಶ್ವ ಬ್ಲಿಟ್ಜ್ ಚೆಸ್ ಚಾಂಪಿಯನ್‌ ಶಿಪ್‌ ನಲ್ಲಿ ಕಂಚಿನ ಪದಕ ಜಯಿಸಿರುವ ಭಾರತೀಯ ಚೆಸ್ ಗ್ರ್ಯಾಂಡ್‌ಮಾಸ್ಟರ್ ಅರ್ಜುನ್ ಎರಿಗೈಸಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ. ಫಿಡೆ ರ‍್ಯಾಪಿಡ್ ಚೆಸ್ ಚಾಂಪಿಯನ್‌ ಶಿಪ್‌ ನಲ್ಲಿ ಇತ್ತೀಚೆಗಷ್ಟೇ ಕಂಚಿನ ಪದಕ ಜಯಿಸಿದ್ದು ಈಗ ಈ ಸಾಧನೆಯು, ಜಾಗತಿಕ ಚೆಸ್ ರಂಗದಲ್ಲಿ ಭಾರತಕ್ಕೆ ಮತ್ತೊಂದು ಹೆಮ್ಮೆಯ ಕ್ಷಣವಾಗಿದೆ.

2025ರ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನಲ್ಲಿ ಕಂಚಿನ ಪದಕ ಗೆದ್ದ ಅರ್ಜುನ್ ಎರಿಗೈಸಿ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು

December 29th, 03:38 pm

ದೋಹಾದಲ್ಲಿ ನಡೆದ ಫಿಡೆ ವಿಶ್ವ ರಾಪಿಡ್ ಚೆಸ್ ಚಾಂಪಿಯನ್ ಷಿಪ್ ನ ಮುಕ್ತ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅರ್ಜುನ್ ಎರಿಗೈಸಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಅವರ ಧೈರ್ಯ ಗಮನಾರ್ಹವಾಗಿದೆ. ಅವರ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ, ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಲೈವ್ ಚೆಸ್ ರೇಟಿಂಗ್ ನಲ್ಲಿ 2800ರ ಗಡಿ ದಾಟಿದ್ದಕ್ಕಾಗಿ ಅರ್ಜುನ್ ಎರಿಗೈಸಿ ಅವರನ್ನು ಅಭಿನಂದಿಸಿದ್ದಾರೆ

October 27th, 11:08 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಲೈವ್ ಚೆಸ್ ರೇಟಿಂಗ್ ನಲ್ಲಿ 2800ರ ಗಡಿ ದಾಟಿದ ಭಾರತೀಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಅರ್ಜುನ್ ಎರಿಗೈಸಿ ಅವರನ್ನು ಅಭಿನಂದಿಸಿದ್ದಾರೆ.