Prime Minister interacts with traders and entrepreneurs in Itanagar

September 22nd, 03:43 pm

PM Modi had an interaction with the traders and entrepreneurs in Itanagar, Arunachal Pradesh. Stating that they expressed their appreciation for the GST reforms and the launch of the GST Bachat Utsav, the PM highlighted how these initiatives will benefit key sectors. He emphasised quality standards and encouraged buying Made in India products.

ಪ್ರಧಾನಮಂತ್ರಿ ಅವರಿಂದ ಇಟಾನಗರದಲ್ಲಿ ಸ್ಥಳೀಯ ವ್ಯಾಪಾರಿಗಳು ಮತ್ತು ಚಿಲ್ಲರೆ ವರ್ತಕರ ಭೇಟಿ

September 22nd, 03:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಟಾನಗರದಲ್ಲಿ ಇಂದು ವಿವಿಧ ಉತ್ಪನ್ನಗಳನ್ನು ಪ್ರದರ್ಶಿಸಿರುವ ಸ್ಥಳೀಯ ವ್ಯಾಪಾರಿಗಳು ಮತ್ತು ಚಿಲ್ಲರೆ ವರ್ತಕರನ್ನು ಭೇಟಿಯಾದರು. ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ಸುಧಾರಣೆಗಳ ಬಗ್ಗೆ ವರ್ತಕರು ಸಂತೋಷ ವ್ಯಕ್ತಪಡಿಸಿದ್ದಾರೆ. ‘ಹೆಮ್ಮೆಯಿಂದ ಸ್ವದೇಶಿ ಎಂದು ಹೇಳಿ' ಎಂಬ ಪೋಸ್ಟರ್‌ಗಳನ್ನು ಅವರಿಗೆ ನೀಡಿದೆ. ಇದನ್ನು ತಮ್ಮ ಅಂಗಡಿಗಳಲ್ಲಿ ಪ್ರದರ್ಶಿಸುವುದಾಗಿ ಅವರು ಉತ್ಸಾಹದಿಂದ ಹೇಳಿದರು ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.

ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 22nd, 11:36 am

ಅರುಣಾಚಲ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಕೆ.ಟಿ. ಪರ್ನಾಯಕ್ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಪೇಮಾ ಖಂಡು ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಕಿರಣ್ ರಿಜಿಜು, ರಾಜ್ಯ ಸರ್ಕಾರದ ಸಚಿವರು, ನನ್ನ ಸಹ ಸಂಸದರಾದ ನಬಮ್ ರೆಬಿಯಾ ಜಿ ಮತ್ತು ಟ್ಯಾಪಿರ್ ಗಾವೊ ಜಿ, ಎಲ್ಲಾ ಶಾಸಕರು, ಇತರ ಜನಪ್ರತಿನಿಧಿಗಳೆ ಮತ್ತು ಅರುಣಾಚಲ ಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಅರುಣಾಚಲಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ

September 22nd, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವಶಕ್ತ ಡೊನ್ಯಿ ಪೊಲೊಗೆ ಗೌರವ ಸಲ್ಲಿಸಿ, ಎಲ್ಲರಿಗೂ ಆಶೀರ್ವಾದ ಮಾಡಬೇಕೆಂದು ಪ್ರಾರ್ಥಿಸಿದರು.

ಸೆಪ್ಟೆಂಬರ್ 22 ರಂದು ಅರುಣಾಚಲ ಪ್ರದೇಶ ಮತ್ತು ತ್ರಿಪುರಕ್ಕೆ ಭೇಟಿ ನೀಡಲಿದ್ದಾರೆ ಪ್ರಧಾನಮಂತ್ರಿ

September 21st, 09:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 22 ರಂದು ಅರುಣಾಚಲ ಪ್ರದೇಶ ಮತ್ತು ತ್ರಿಪುರಕ್ಕೆ ಭೇಟಿ ನೀಡಲಿದ್ದಾರೆ. ಇಟಾನಗರದಲ್ಲಿ 5,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಾರ್ವಜನಿಕ ಸಮಾರಂಭದಲ್ಲಿಯೂ ಪಾಲ್ಗೊಂಡು ಭಾಷಣ ಮಾಡಲಿದ್ದಾರೆ.

ಅಸ್ಸಾಂನ ಗುವಾಹಟಿಯಲ್ಲಿ ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರ 100ನೇ ಜನ್ಮ ವಾರ್ಷಿಕೋತ್ಸವ ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 13th, 08:57 pm

ಅಸ್ಸಾಂ ರಾಜ್ಯಪಾಲರಾದ ಗೌರವಾನ್ವಿತ ಶ್ರೀ ಲಕ್ಷ್ಮಣ ಪ್ರಸಾದ್ ಆಚಾರ್ಯ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಯುವ ಮುಖ್ಯಮಂತ್ರಿ ಶ್ರೀ ಪೇಮಾ ಖಂಡು ಜಿ, ನನ್ನ ಸಂಪುಟ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಭೂಪೇನ್ ಹಜಾರಿಕಾ ಜಿ ಅವರ ಸಹೋದರ, ಶ್ರೀಮತಿ ಹಜಾರಿಕಾ ಜಿ, ಭೂಪೇನ್ ಹಜಾರಿಕಾ ಜಿ ಅವರ ಸಹೋದರಿ ಶ್ರೀಮತಿ ಕವಿತಾ ಬರುವಾ ಜಿ, ಭೂಪೇನ್ ದಾ ಅವರ ಪುತ್ರ ಶ್ರೀ ತೇಜ್ ಹಜಾರಿಕಾ ಜಿ - ತೇಜ್, ನಾನು ನಿಮ್ಮನ್ನು 'ಕೆಮ್ ಚೋ!' ಎಂದು ಸ್ವಾಗತಿಸುತ್ತೇನೆ. ಇಲ್ಲಿ ಉಪಸ್ಥಿತರಿರುವ ಇತರೆ ಗಣ್ಯರೆ ಮತ್ತು ಅಸ್ಸಾಂನ ನನ್ನ ಸಹೋದರ ಸಹೋದರಿಯರೆ!

ಅಸ್ಸಾಂನ ಗುವಾಹಟಿಯಲ್ಲಿ ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರ 100 ನೇ ಜನ್ಮ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

September 13th, 05:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರ 100 ನೇ ಜನ್ಮ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಅದ್ಭುತ ದಿನ ಮತ್ತು ಈ ಕ್ಷಣ ನಿಜಕ್ಕೂ ಅಮೂಲ್ಯವಾದುದು ಎಂದು ಹೇಳಿದರು. ತಾವು ಕಂಡ ಪ್ರದರ್ಶನಗಳು, ಉತ್ಸಾಹ ಮತ್ತು ಗಮನಿಸಿದ ಸಮನ್ವಯವು ಅತ್ಯಂತ ಹೃದಯಸ್ಪರ್ಶಿಯಾಗಿತ್ತು ಎಂದು ಅವರು ತಿಳಿಸಿದರು. ಕಾರ್ಯಕ್ರಮದ ಉದ್ದಕ್ಕೂ ಪ್ರತಿಧ್ವನಿಸಿದ ಭೂಪೇನ್ ದಾ ಅವರ ಸಂಗೀತದ ಲಯವನ್ನು ಅವರು ಎತ್ತಿ ತೋರಿಸಿದರು. ಭೂಪೇನ್ ಹಜಾರಿಕಾ ಅವರನ್ನು ಉಲ್ಲೇಖಿಸುತ್ತಾ, ಪ್ರಧಾನಿಯವರು ತಮ್ಮ ಹಾಡಿನ ಕೆಲವು ಪದಗಳು ತಮ್ಮ ಮನಸ್ಸಿನಲ್ಲಿ ಪ್ರತಿಧ್ವನಿಸುತ್ತಲೇ ಇದ್ದವು. ಭೂಪೇನ್ ಅವರ ಸಂಗೀತದ ಅಲೆಗಳು ಎಲ್ಲೆಡೆ, ಅನಂತವಾಗಿ ಹರಿಯುತ್ತಿರಬೇಕೆಂದು ತಮ್ಮ ಹೃದಯವು ಬಯಸುತ್ತದೆ ಎಂದು ಅವರು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಕಲಾವಿದರಿಗೆ ಪ್ರಧಾನಿಯವರು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು. ಅಸ್ಸಾಂನ ಉತ್ಸಾಹವು ಇಲ್ಲಿನ ಪ್ರತಿಯೊಂದು ಕಾರ್ಯಕ್ರಮವು ಹೊಸ ದಾಖಲೆಯನ್ನು ಸ್ಥಾಪಿಸುತ್ತದೆ ಎಂದು ಅವರು ಹೇಳಿದರು, ಇಂದಿನ ಪ್ರದರ್ಶನಗಳು ಅಸಾಧಾರಣ ಸಿದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಗಮನಿಸಿದರು. ಅವರು ಎಲ್ಲಾ ಪ್ರದರ್ಶಕರನ್ನು ಅಭಿನಂದಿಸಿದರು ಮತ್ತು ಶ್ಲಾಘಿಸಿದರು.

ಅರುಣಾಚಲ ಪ್ರದೇಶದ ಶಿ ಯೋಮಿ ಜಿಲ್ಲೆಯಲ್ಲಿ 8146.21 ಕೋಟಿ ರೂ.ಗಳ ವೆಚ್ಚದಲ್ಲಿ 700 ಮೆಗಾವ್ಯಾಟ್ ಟಾಟೊ-2 ಜಲವಿದ್ಯುತ್ ಯೋಜನೆಯ ನಿರ್ಮಾಣ ಮತ್ತು 72 ತಿಂಗಳ ಪೂರ್ಣಗೊಳಿಸುವ ಹೂಡಿಕೆ ಪ್ರಸ್ತಾಪಕ್ಕೆ ಸಂಪುಟದ ಅನುಮೋದನೆ

August 12th, 03:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಅರುಣಾಚಲ ಪ್ರದೇಶದ ಶಿ ಯೋಮಿ ಜಿಲ್ಲೆಯಲ್ಲಿ ಟಾಟೊ-2 ಜಲವಿದ್ಯುತ್ ಯೋಜನೆ (ಎಚ್.ಇ.ಪಿ) ನಿರ್ಮಾಣಕ್ಕಾಗಿ 8146.21 ಕೋಟಿ ರೂ.ಗಳ ಹೂಡಿಕೆಗೆ ತನ್ನ ಅನುಮೋದನೆ ನೀಡಿದೆ. ಯೋಜನೆಯ ಅಂದಾಜು ಪೂರ್ಣಗೊಳ್ಳುವ ಅವಧಿ 72 ತಿಂಗಳುಗಳು.

ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 23rd, 11:00 am

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್‌ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು

May 23rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.

ರಾಜಸ್ಥಾನದ ಬಿಕಾನೇರ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 22nd, 12:00 pm

ರಾಜಸ್ಥಾನ ರಾಜ್ಯಪಾಲರಾದ ಹರಿಭಾವು ಬಾಗ್ಡೆ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀಮನ್ ಭಜನ್ ಲಾಲ್ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಅರ್ಜುನ್ ರಾಮ್ ಮೇಘವಾಲ್ ಜಿ, ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ ಜಿ, ಪ್ರೇಮ್ ಚಂದ್ ಜಿ, ರಾಜಸ್ಥಾನ ಸರ್ಕಾರದ ಸಚಿವರುಗಳೆ, ಸಂಸತ್ತಿನ ನನ್ನ ಸಹೋದ್ಯೋಗಿ ಮದನ್ ರಾಥೋಡ್ ಜಿ, ಇತರೆ ಸಂಸದರು ಮತ್ತು ಶಾಸಕರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ.

ರಾಜಸ್ಥಾನದ ಬಿಕಾನೇರ್‌ನಲ್ಲಿ 26,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

May 22nd, 11:30 am

ರಾಜಸ್ಥಾನದ ಬಿಕಾನೇರ್‌ನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ, ಕಾರ್ಯಕ್ರಮದಲ್ಲಿ ನೆರೆದಿದ್ದ ಬೃಹತ್ ಜನಸಮೂಹವನ್ನು ಸ್ವಾಗತಿಸಿ ಮಾತನಾಡಿದ ಅವರು, ಆನ್‌ಲೈನ್‌ನಲ್ಲಿ ಭಾಗವಹಿಸಿರುವ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜನರನ್ನು ಶ್ಲಾಘಿಸಿದರು. ಹಲವಾರು ರಾಜ್ಯಪಾಲರು, ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಇತರೆ ಸಾರ್ವಜನಿಕ ಪ್ರತಿನಿಧಿಗಳು ಇಲ್ಲಿ ಉಪಸ್ಥಿತರಿದ್ದು, ಜತೆಗೆ ದೇಶಾದ್ಯಂತ ಸಂಪರ್ಕ ಹೊಂದಿರುವ ಎಲ್ಲಾ ಗೌರವಾನ್ವಿತ ಗಣ್ಯರು ಮತ್ತು ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 08th, 08:30 pm

ಈ ಶೃಂಗಸಭೆಯ ಮೂಲಕ ದೇಶ ಮತ್ತು ವಿಶ್ವಾದ್ಯಂತದ ಗೌರವಾನ್ವಿತ ಅತಿಥಿಗಳೊಂದಿಗೆ ಮತ್ತು ನಿಮ್ಮ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸಲು ನೀವು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು “ನೆಟ್‌ವರ್ಕ್ 18”ಗೆ ನನ್ನ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಈ ವರ್ಷದ ಶೃಂಗಸಭೆಯನ್ನು ಭಾರತದ ಯುವಕರ ಆಕಾಂಕ್ಷೆಗಳೊಂದಿಗೆ ನೀವು ಸಂಪರ್ಕಿಸಿದ್ದೀರಿ ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಈ ವರ್ಷದ ಆರಂಭದಲ್ಲಿ, ವಿವೇಕಾನಂದ ಜಯಂತಿಯಂದು, ಭಾರತ್ ಮಂಟಪದಲ್ಲಿ ವಿಕಸಿತ ಭಾರತ ಯುವ ನಾಯಕರ ಸಂವಾದ ನಡೆಸಲಾಯಿತು. ಆ ಸಮಯದಲ್ಲಿ, ಯುವಕರ ಕಣ್ಣುಗಳಲ್ಲಿ ಕನಸುಗಳ ಮಿಂಚು, ಅವರ ಸಂಕಲ್ಪ ಶಕ್ತಿ ಮತ್ತು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಅವರ ಉತ್ಸಾಹವನ್ನು ನಾನು ನೋಡಿದೆ. 2047ರ ವೇಳೆಗೆ ನಾವು ಭಾರತವನ್ನು ಕೊಂಡೊಯ್ಯಲು ಬಯಸುವ ಎತ್ತರ ಮತ್ತು ನಾವು ಅನುಸರಿಸುತ್ತಿರುವ ಮಾರ್ಗಸೂಚಿಯನ್ನು ನಾವು ಪ್ರತಿ ಹಂತದಲ್ಲೂ ಚರ್ಚಿಸುವುದನ್ನು ಮುಂದುವರಿಸಿದರೆ, 'ಅಮೃತ' (ಅಮೃತ ಕಾಲ) ಖಂಡಿತವಾಗಿಯೂ ಹೊರಹೊಮ್ಮುತ್ತದೆ. ಈ 'ಅಮೃತ'ವು 'ಅಮೃತ ಕಾಲ'ದ ಪೀಳಿಗೆಗೆ ಶಕ್ತಿ ಮತ್ತು ನಿರ್ದೇಶನ ನೀಡುವ ಜತೆಗೆ, ಭಾರತಕ್ಕೆ ಆವೇಗವನ್ನು ನೀಡುತ್ತದೆ. ಈ ಶೃಂಗಸಭೆಯಲ್ಲಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ

April 08th, 08:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಮಾವೇಶದಲ್ಲಿ ಭಾರತ ಮತ್ತು ಪ್ರಪಂಚದಾದ್ಯಂತದ ಗಣ್ಯ ಅತಿಥಿಗಳೊಂದಿಗೆ ಸಂವಹನ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಅವರು ನೆಟ್ವರ್ಕ್18 ಗೆ ಕೃತಜ್ಞತೆ ಸಲ್ಲಿಸಿದರು. ಈ ವರ್ಷದ ಶೃಂಗಸಭೆಯು ಭಾರತದ ಯುವಕರ ಆಕಾಂಕ್ಷೆಗಳ ಮೇಲೆ ಗಮನ ಕೇಂದ್ರೀಕರಿಸಿದ್ದನ್ನು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವರ್ಷದ ಆರಂಭದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯಂದು ಭಾರತ್ ಮಂಟಪದಲ್ಲಿ ನಡೆದ ‘ವಿಕಸಿತ ಭಾರತ ಯುವ ನಾಯಕರ ಸಂವಾದ’ (Viksit Bharat Young Leaders Dialogue) ಮಹತ್ವವನ್ನು ಒತ್ತಿ ಹೇಳಿದ ಅವರು, ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಯುವಕರ ಕನಸುಗಳು, ದೃಢಸಂಕಲ್ಪ ಮತ್ತು ಉತ್ಸಾಹದ ಬಗ್ಗೆ ಮಾತನಾಡಿದರು. ಭಾರತದ ಪ್ರಗತಿಗಾಗಿ 2047 ರವರೆಗಿನ ಮಾರ್ಗಸೂಚಿಯನ್ನು ಅವರು ಒತ್ತಿ ಹೇಳಿದರು, ಪ್ರತಿ ಹಂತದಲ್ಲೂ ನಿರಂತರ ಚಿಂತನೆ ಅಮೂಲ್ಯವಾದ ಒಳನೋಟಗಳನ್ನು ನೀಡುತ್ತದೆ ಎಂದು ಅವರು ಹೇಳಿದರು. ಈ ಒಳನೋಟಗಳು ಅಮೃತ ಕಾಲದ ಪೀಳಿಗೆಗೆ ಶಕ್ತಿ ತುಂಬುತ್ತವೆ, ಮಾರ್ಗದರ್ಶನ ನೀಡುತ್ತವೆ ಮತ್ತು ವೇಗವನ್ನು ಹೆಚ್ಚಿಸುತ್ತವೆ ಎಂದು ಅವರು ಹೇಳಿದರು. ಅವರು ಶೃಂಗಸಭೆಯ ಯಶಸ್ಸಿಗೆ ತಮ್ಮ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ತಿಳಿಸಿದರು.

ಅರುಣಾಚಲ ಪ್ರದೇಶ ರಾಜ್ಯೋತ್ಸವ ದಿನದ ಅಂಗವಾಗಿ ಪ್ರಧಾನಮಂತ್ರಿ ಜನತೆಗೆ ಶುಭಾಶಯ

February 20th, 04:33 pm

ಅರುಣಾಚಲ ಪ್ರದೇಶದ ಜನರಿಗೆ ಅವರ ರಾಜ್ಯೋತ್ಸವ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶುಭಾಶಯ ಕೋರಿದ್ದಾರೆ. ಅರುಣಾಚಲ ಪ್ರದೇಶವು ತನ್ನ ಶ್ರೀಮಂತ ಸಂಪ್ರದಾಯಗಳು ಮತ್ತು ಪ್ರಕೃತಿಯೊಂದಿಗಿನ ಆಳವಾದ ಸಂಬಂಧ ಬೆಸೆದುಕೊಂಡಿರುವುದಕ್ಕೆ ಹೆಸರುವಾಸಿಯಾಗಿದೆ, ಮುಂಬರುವ ವರ್ಷಗಳಲ್ಲಿ ಅರುಣಾಚಲ ಪ್ರದೇಶ ರಾಜ್ಯದ ಪ್ರಗತಿ ಮತ್ತು ಸಾಮರಸ್ಯದ ಪಯಣವು ಹೀಗೆಯೇ ಮುಂದುವರಿಯಲಿ ಎಂದು ಹಾರೈಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್ ಸುರಂಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 13th, 12:30 pm

ಮೊದಲನೆಯದಾಗಿ, ದೇಶದ ಮತ್ತು ಜಮ್ಮು ಮತ್ತು ಕಾಶ್ಮೀರದ ಪ್ರಗತಿಗಾಗಿ ಅತ್ಯಂತ ಕಷ್ಟಕರ ಪರಿಸ್ಥಿತಿಗಳಲ್ಲಿ ಕೆಲಸ ಮಾಡಿದ, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಕಾರ್ಮಿಕರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಏಳು ಕಾರ್ಮಿಕ ಸ್ನೇಹಿತರು ಪ್ರಾಣ ಕಳೆದುಕೊಂಡರು, ಆದರೆ ಇದು ನಮ್ಮ ಸಂಕಲ್ಪದಿಂದ ನಮ್ಮನ್ನು ವಿಮುಖಗೊಳಿಸಲಿಲ್ಲ, ನನ್ನ ಕಾರ್ಮಿಕ ಸ್ನೇಹಿತರು ಧೃತಿಗೆಡಲಿಲ್ಲ. ಯಾವ ಕಾರ್ಮಿಕರೂ ಮನೆಗೆ ಹಿಂತಿರುಗಲಿಲ್ಲ, ಈ ನನ್ನ ಕಾರ್ಮಿಕ ಸಹೋದರರು ಎಲ್ಲಾ ಸವಾಲುಗಳನ್ನು ಮೆಟ್ಟಿನಿಂತು ಈ ಕೆಲಸವನ್ನು ಪೂರ್ಣಗೊಳಿಸಿದ್ದಾರೆ. ಮತ್ತು ಇಂದು, ಮೊದಲನೆಯದಾಗಿ, ನಾವು ಕಳೆದುಕೊಂಡಿರುವ ನಮ್ಮ ಏಳು ಕಾರ್ಮಿಕರಿಗೆ ನಾನು ಶ್ರದ್ಧಾಂಜಲಿ ಅರ್ಪಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ ಸುರಂಗವನ್ನು ಉದ್ಘಾಟಿಸಿದರು

January 13th, 12:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ ಸುರಂಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಅಭಿವೃದ್ಧಿಗಾಗಿ ಶ್ರಮಿಸಿದ ಮತ್ತು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಕಾರ್ಮಿಕರಿಗೆ ಧನ್ಯವಾದ ಅರ್ಪಿಸಿದರು. ಸವಾಲುಗಳ ಹೊರತಾಗಿಯೂ, ನಮ್ಮ ಸಂಕಲ್ಪವು ಚಂಚಲವಾಗಲಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಾರ್ಮಿಕರ ಸಂಕಲ್ಪ ಮತ್ತು ಬದ್ಧತೆಗಾಗಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು ನಿವಾರಿಸಿದ್ದಕ್ಕಾಗಿ ಅವರು ಶ್ಲಾಘಿಸಿದರು. 7 ಕಾರ್ಮಿಕರ ನಿಧನಕ್ಕೆ ಅವರು ಸಂತಾಪ ಸೂಚಿಸಿದ್ದಾರೆ.

ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 15th, 11:20 am

ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್‌ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.

ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ

November 15th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.

ಕಾಂಗ್ರೆಸ್ ತನ್ನ ಜನರ ನಡುವೆ ವೈಷಮ್ಯವನ್ನು ಬಿತ್ತುವ ಮೂಲಕ ಭಾರತವನ್ನು ದುರ್ಬಲಗೊಳಿಸುವ ಗುರಿ ಹೊಂದಿದೆ: ಪ್ರಧಾನಿ ಮೋದಿ

October 08th, 08:15 pm

ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ ಗೆಲುವಿನ ನಂತರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ತಮ್ಮ ಭಾಷಣವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ ಹೆಮ್ಮೆಯಿಂದ ಹೇಳಿದರು, “ಹಾಲು ಮತ್ತು ಜೇನಿನ ನಾಡು ಹರಿಯಾಣ ಮತ್ತೊಮ್ಮೆ ತನ್ನ ಮ್ಯಾಜಿಕ್ ಕೆಲಸ ಮಾಡಿದೆ, ರಾಜ್ಯವನ್ನು ‘ಕಮಲ-ಕಮಲ’ ನಿರ್ಣಾಯಕ ಗೆಲುವಿನೊಂದಿಗೆ ತಿರುಗಿಸಿದೆ. ಭಾರತೀಯ ಜನತಾ ಪಕ್ಷಕ್ಕೆ. ಗೀತೆಯ ಪವಿತ್ರ ಭೂಮಿಯಿಂದ, ಈ ಗೆಲುವು ಸತ್ಯ, ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ವಿಜಯವನ್ನು ಸಂಕೇತಿಸುತ್ತದೆ. ಎಲ್ಲಾ ಸಮುದಾಯಗಳು ಮತ್ತು ವಿಭಾಗಗಳ ಜನರು ತಮ್ಮ ಮತಗಳನ್ನು ನಮಗೆ ಒಪ್ಪಿಸಿದ್ದಾರೆ.