ನವದೆಹಲಿಯಲ್ಲಿ ನಡೆದ 2025ರ ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

October 31st, 06:08 pm

ನವದೆಹಲಿಯ ರೋಹಿಣಿಯಲ್ಲಿ ಇಂದು ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ, ಈಗಷ್ಟೇ ಕೇಳಿದ ಮಂತ್ರಗಳ ಶಕ್ತಿಯನ್ನು ಎಲ್ಲರೂ ಅನುಭವಿಸಬಹುದು ಎಂದು ಹೇಳಿದರು. ತಾವು ಸಭೆಗೆ ಬಂದಾಗಲೆಲ್ಲಾ ತಮಗೆ ಆಗಿರುವ ಅನುಭವವು ದೈವಿಕ ಮತ್ತು ಅಸಾಮಾನ್ಯವಾದುದು ಎಂದು ಅವರು ಒತ್ತಿ ಹೇಳಿದರು. ಈ ಭಾವನೆಗೆ ಸ್ವಾಮಿ ದಯಾನಂದ ಜೀ ಅವರ ಆಶೀರ್ವಾದ ಕಾರಣವೆಂದೂ ಅವರು ಹೇಳಿದರು. ಸ್ವಾಮಿ ದಯಾನಂದ ಜೀ ಅವರ ಆದರ್ಶಗಳ ಬಗ್ಗೆ ಪ್ರಧಾನಮಂತ್ರಿ ತಮ್ಮ ಆಳವಾದ ಗೌರವವನ್ನು ವ್ಯಕ್ತಪಡಿಸಿದರು. ಹಾಜರಿದ್ದ ಎಲ್ಲಾ ಚಿಂತಕರೊಂದಿಗಿನ ತಮ್ಮ ದಶಕಗಳಷ್ಟು ಹಳೆಯದಾದ ಬಾಂಧವ್ಯವನ್ನು ಅವರು ನೆನೆಪಿಸಿಕೊಂಡರು. ಅದು ತಮಗೆ ಪದೇ ಪದೇ ಅವರ ನಡುವೆ ಇರಲು ಅವಕಾಶವನ್ನು ನೀಡಿದೆ. ಅವರನ್ನು ಭೇಟಿಯಾದಾಗಲೆಲ್ಲಾ ಮತ್ತು ಅವರ ಜೊತೆ ಸಂವಹನ ನಡೆಸಿದಾಗಲೆಲ್ಲಾ ತಾವು ವಿಶಿಷ್ಟ ಶಕ್ತಿ ಮತ್ತು ಅನನ್ಯ ಸ್ಫೂರ್ತಿಯನ್ನು ಪಡೆಯುತ್ತಿರುವುದಾಗಿಯೂ ಅವರು ಹೇಳಿದರು.

ಅಕ್ಟೋಬರ್ 31 ರಂದು ನವದೆಹಲಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಆರ್ಯನ್ ಶೃಂಗಸಭೆ 2025ರಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

October 29th, 10:57 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 31 ರಂದು ಮಧ್ಯಾಹ್ನ 2:45ರ ಸುಮಾರಿಗೆ ನವದೆಹಲಿಯ ರೋಹಿಣಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಆರ್ಯನ್ ಶೃಂಗಸಭೆ 2025ರಲ್ಲಿ ಭಾಗವಹಿಸಲಿದ್ದಾರೆ. ಮಹರ್ಷಿ ದಯಾನಂದ ಸರಸ್ವತಿ ಅವರ 200ನೇ ಜನ್ಮ ದಿನಾಚರಣೆ ಮತ್ತು ಸಮಾಜಕ್ಕೆ ಆರ್ಯ ಸಮಾಜದ 150 ವರ್ಷಗಳ ಸೇವೆಯ ಸ್ಮರಣಾರ್ಥ ಈ ಕಾರ್ಯಕ್ರಮವು ಜ್ಯಾನ ಜ್ಯೋತಿ ಉತ್ಸವದ ಪ್ರಮುಖ ಭಾಗವಾಗಿದೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಆರ್ಯ ಸಮಾಜದ ಸ್ಮಾರಕಕ್ಕೆ ಪ್ರಧಾನಮಂತ್ರಿಯವರಿಂದ ಗೌರವ ನಮನ

November 22nd, 03:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗಯಾನಾದ ಜಾರ್ಜ್ ಟೌನ್ ನಲ್ಲಿರುವ ಆರ್ಯ ಸಮಾಜದ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಗಯಾನಾದಲ್ಲಿ ಭಾರತೀಯ ಸಂಸ್ಕೃತಿಯನ್ನು ಸಂರಕ್ಷಿಸುವಲ್ಲಿ ಗಯಾನಾ ಜನರ ಪ್ರಯತ್ನಗಳು ಮತ್ತು ಪಾತ್ರವನ್ನು ಶ್ರೀ ಮೋದಿಯವರು ಶ್ಲಾಘಿಸಿದರು. ಸ್ವಾಮಿ ದಯಾನಂದ ಸರಸ್ವತಿ ಅವರ 200ನೇ ಜಯಂತಿಯನ್ನು ನಾವು ಆಚರಿಸುತ್ತಿರುವುದರಿಂದ ಈ ವರ್ಷವು ಬಹಳ ವಿಶೇಷವಾಗಿದೆ ಎಂದು ಅವರು ಹೇಳಿದರು.