22ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಭಾಗವಹಿಸುವಿಕೆ
October 25th, 09:48 am
ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಪ್ರಧಾನಿ ಮೋದಿ ಅವರು ಅಕ್ಟೋಬರ್ 26, 2025 ರಂದು ನಡೆಯಲಿರುವ 22ನೇ ಆಸಿಯಾನ್ - ಭಾರತ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸಲಿದ್ದಾರೆ. ನಮ್ಮ ಆಕ್ಟ್ ಈಸ್ಟ್ ನೀತಿ ಮತ್ತು ಇಂಡೋ-ಪೆಸಿಫಿಕ್ ದೃಷ್ಟಿಕೋನಕ್ಕೆ ಅನುಗುಣವಾಗಿ ಪ್ರಧಾನಿ ಮೋದಿ ಅವರು ಆಸಿಯಾನ್-ಭಾರತ ಸಂಬಂಧಗಳಲ್ಲಿನ ಪ್ರಗತಿಯನ್ನು ಆಸಿಯಾನ್ ನಾಯಕರೊಂದಿಗೆ ಜಂಟಿಯಾಗಿ ಪರಿಶೀಲಿಸಲಿದ್ದಾರೆ.