ಕರ್ನಾಟಕದ ಬೆಂಗಳೂರಿನಲ್ಲಿ ವಿವಿಧ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

August 10th, 01:30 pm

ಕರ್ನಾಟಕ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಜೀ, ಕೇಂದ್ರದಲ್ಲಿನ ನನ್ನ ಸಹೋದ್ಯೋಗಿಗಳಾದ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಶ್ರೀ ಹೆಚ್.ಡಿ. ಕುಮಾರಸ್ವಾಮಿ ಜೀ, ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ವಿ. ಸೋಮಣ್ಣ ಜೀ, ಶ್ರೀಮತಿ ಶೋಭಾ ಜೀ, ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಜೀ, ಕರ್ನಾಟಕ ಸರ್ಕಾರದ ಸಚಿವರಾದ ಶ್ರೀ ಬಿ. ಸುರೇಶ್ ಜೀ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ ಜೀ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ ಜೀ, ಡಾ. ಮಂಜುನಾಥ್ ಜೀ, ಶಾಸಕರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಜೀ, ಮತ್ತು ಕರ್ನಾಟಕದ ನನ್ನ ಸಹೋದರ ಸಹೋದರಿಯರೇ,

ಬೆಂಗಳೂರಿನಲ್ಲಿ 22,800 ಕೋಟಿ ರೂಪಾಯಿಗಳ ಮೆಟ್ರೋ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 10th, 01:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಸುಮಾರು 7,160 ಕೋಟಿ ರೂ. ಮೌಲ್ಯದ ಬೆಂಗಳೂರು ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದರು ಮತ್ತು 15,610 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಅವರು ಬೆಂಗಳೂರಿನ ಕೆ ಎಸ್ ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದ ನೆಲಕ್ಕೆ ಕಾಲಿಟ್ಟಾಗ ತಮಗೆ ಒಂದು ರೀತಿಯ ಆತ್ಮೀಯತೆಯ ಭಾವನೆ ಮೂಡಿತು ಎಂದು ಹೇಳಿದರು. ಕರ್ನಾಟಕದ ಸಂಸ್ಕೃತಿಯ ಶ್ರೀಮಂತಿಕೆ, ಜನರ ವಾತ್ಸಲ್ಯ, ಮತ್ತು ಹೃದಯವನ್ನು ತಟ್ಟುವ ಕನ್ನಡ ಭಾಷೆಯ ಮಾಧುರ್ಯವನ್ನು ಶ್ಲಾಘಿಸಿದ ಶ್ರೀ ಮೋದಿ ಅವರು ಬೆಂಗಳೂರಿನ ಅಧಿದೇವತೆ ಅಣ್ಣಮ್ಮ ತಾಯಿಯ ಪಾದಗಳಿಗೆ ನಮಸ್ಕರಿಸುವುದರ ಮೂಲಕ ತಮ್ಮ ಭಾಷಣವನ್ನು ಆರಂಭಿಸಿದರು. ಶತಮಾನಗಳ ಹಿಂದೆ ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರಕ್ಕೆ ಅಡಿಪಾಯ ಹಾಕಿದ್ದನ್ನು ಸ್ಮರಿಸಿದ ಪ್ರಧಾನ ಮಂತ್ರಿಗಳು, ಕೆಂಪೇಗೌಡರು ಸಂಪ್ರದಾಯದಲ್ಲಿ ಬೇರೂರಿರುವ ಜೊತೆಗೆ ಪ್ರಗತಿಯ ಹೊಸ ಎತ್ತರಗಳನ್ನು ತಲುಪುವ ನಗರದ ಕನಸು ಕಂಡಿದ್ದರು ಎಂದು ಹೇಳಿದರು. “ಬೆಂಗಳೂರು ಯಾವಾಗಲೂ ಆ ಮನೋಭಾವವನ್ನು ಜೀವಂತವಾಗಿರಿಸಿದೆ ಮತ್ತು ಅದನ್ನು ಕಾಪಾಡಿಕೊಂಡಿದೆ. ಇಂದು, ಬೆಂಗಳೂರು ಅದೇ ಕನಸನ್ನು ನನಸಾಗಿಸುತ್ತಿದೆ” ಎಂದು ಪ್ರಧಾನಮಂತ್ರಿ ಹೇಳಿದರು.

ಗಾಂಧಿನಗರದಲ್ಲಿ ನಡೆದ ಗುಜರಾತ್ ನಗರಾಭಿವೃದ್ಧಿ ಇತಿಹಾಸದ 20ನೇ ವಾರ್ಷಿಕೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 27th, 11:30 am

ವೇದಿಕೆಯಲ್ಲಿ ಉಪಸ್ಥಿತರಿರುವ ಗುಜರಾತ್ ರಾಜ್ಯಪಾಲರಾದ ಗೌರವಾನ್ವಿತ ಆಚಾರ್ಯ ದೇವವ್ರತ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳೆ, ಮನೋಹರ್ ಲಾಲ್ ಜೀ, ಸಿ.ಆರ್. ಪಾಟೀಲ್ ಜೀ, ಗುಜರಾತ್ ಸರ್ಕಾರದ ಸಚಿವರೆ, ಸಂಸದರೆ, ಶಾಸಕರೆ ಮತ್ತು ಗುಜರಾತ್‌ನ ವಿವಿಧೆಡೆಯಿಂದ ಆಗಮಿಸಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,

ಗುಜರಾತ್ ನಗರ ಬೆಳವಣಿಗೆಯ 20 ವರ್ಷಗಳ ಸಂಭ್ರಮಾಚರಣೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

May 27th, 11:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗುಜರಾತಿನ ಗಾಂಧಿನಗರದಲ್ಲಿ ಗುಜರಾತ್ ನಗರ ವಿಕಾಸದ 20 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, 'ನಗರ ಅಭಿವೃದ್ಧಿ ವರ್ಷ 2005'ರ 20 ವರ್ಷಗಳ ನೆನಪಿಗಾಗಿ ನಗರ ಅಭಿವೃದ್ಧಿ ವರ್ಷ 2025 ಅನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳಲ್ಲಿ ವಡೋದರ, ದಹೋದ್, ಭುಜ್, ಅಹಮದಾಬಾದ್ ಮತ್ತು ಗಾಂಧಿನಗರಕ್ಕೆ ಭೇಟಿ ನೀಡಿದಾಗ, ಆಪರೇಷನ್ ಸಿಂಧೂರ್ನ ಯಶಸ್ಸಿನ ಘೋಷಣೆಗಳು ಮತ್ತು ಹಾರಾಡುತ್ತಿದ್ದ ತ್ರಿವರ್ಣ ಧ್ವಜಗಳೊಂದಿಗೆ ದೇಶಭಕ್ತಿಯ ಉತ್ಸಾಹವನ್ನು ಅನುಭವಿಸಿದೆ. ಈ ದೃಶ್ಯ ಅದ್ಭುತವಾಗಿತ್ತು ಮತ್ತು ಈ ಭಾವನೆ ಕೇವಲ ಗುಜರಾತ್ ನಲ್ಲಿ ಮಾತ್ರವಲ್ಲ, ಭಾರತದ ಮೂಲೆಮೂಲೆಯಲ್ಲೂ ಮತ್ತು ಪ್ರತಿಯೊಬ್ಬ ಭಾರತೀಯನ ಹೃದಯದಲ್ಲೂ ಇತ್ತು. ಭಾರತವು ಭಯೋತ್ಪಾದನೆಯ ಮುಳ್ಳನ್ನು ಕಿತ್ತೊಗೆಯಲು ನಿರ್ಧರಿಸಿತ್ತು ಮತ್ತು ಅದನ್ನು ದೃಢ ಸಂಕಲ್ಪದಿಂದ ಸಾಧಿಸಿತು ಎಂದು ಪ್ರಧಾನಮಂತ್ರಿಗಳು ನುಡಿದರು.

17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿಯವರ ಭಾಷಣ

April 21st, 11:30 am

ನನ್ನ ಸಂಪುಟ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜಿ, ಶ್ರೀ ಶಕ್ತಿಕಾಂತ ದಾಸ್ ಜಿ, ಡಾ. ಸೋಮನಾಥನ್ ಜಿ, ಇತರ ಹಿರಿಯ ಅಧಿಕಾರಿಗಳು, ದೇಶಾದ್ಯಂತ ನಾಗರಿಕ ಸೇವೆಗಳ ಎಲ್ಲಾ ಸಹೋದ್ಯೋಗಿಗಳು, ಮಹಿಳೆಯರೇ ಮತ್ತು ಮಹನೀಯರೇ!

17ನೇ ನಾಗರಿಕ ಸೇವಾ ದಿನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

April 21st, 11:00 am

ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ 17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗರಿಕ ಸೇವೆಗಳ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನಮಂತ್ರಿಯವರ ಪ್ರಶಸ್ತಿಗಳನ್ನು ಸಹ ಅವರು ಪ್ರದಾನ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು ಮತ್ತು ಸಂವಿಧಾನದ 75ನೇ ವರ್ಷ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಾದ ಈ ವರ್ಷದ ಆಚರಣೆಯ ಮಹತ್ವವನ್ನು ಎತ್ತಿ ತೋರಿಸಿದರು. ಏಪ್ರಿಲ್ 21, 1947 ರಂದು ಸರ್ದಾರ್ ಪಟೇಲ್ ಅವರು 'ಭಾರತದ ಉಕ್ಕಿನ ಚೌಕಟ್ಟು' ಎಂದು ನಾಗರಿಕ ಸೇವಕರನ್ನು ಬಣ್ಣಿಸಿದ ಐತಿಹಾಸಿಕ ಹೇಳಿಕೆಯನ್ನು ಸ್ಮರಿಸಿದ ಶ್ರೀ ಮೋದಿ, ಶಿಸ್ತು, ಪ್ರಾಮಾಣಿಕತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವ, ಅತ್ಯಂತ ಸಮರ್ಪಣಾಬಾವದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ಅಧಿಕಾರಶಾಹಿಯನ್ನು ಕುರಿತ ಪಟೇಲ್‌ ಅವರ ದೃಷ್ಟಿಕೋನವನ್ನು ಒತ್ತಿ ಹೇಳಿದರು. ಭಾರತವು ವಿಕಸಿತ ಭಾರತವಾಗುವ ಸಂಕಲ್ಪದ ಸಂದರ್ಭದಲ್ಲಿ ಸರ್ದಾರ್ ಪಟೇಲ್ ಅವರ ಆದರ್ಶಗಳ ಪ್ರಸ್ತುತತೆಯನ್ನು ಅವರು ಒತ್ತಿ ಹೇಳಿದರು ಮತ್ತು ಸರ್ದಾರ್ ಪಟೇಲ್ ಅವರ ದೃಷ್ಟಿಕೋನ ಮತ್ತು ಪರಂಪರೆಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.