ವೈಯಕ್ತಿಕ ಅತ್ಯುತ್ತಮ ಎಸೆತದ ಸಾಧನೆಗೆ ನೀರಜ್ ಚೋಪ್ರಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
May 17th, 09:10 am
ದೋಹಾ ಡೈಮಂಡ್ ಲೀಗ್ 2025 ರಲ್ಲಿ 90 ಮೀಟರ್ ಗೂ ದೂರದ ಎಸೆತದೊಂದಿಗೆ ವೈಯಕ್ತಿಕ ಅತ್ಯುತ್ತಮ ಸಾಧನೆ ಮಾಡಿದ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಇದು ಅವರ ಅವಿರತ ಸಮರ್ಪಣೆ, ಶಿಸ್ತು ಮತ್ತು ಒಲವಿನ ಫಲಿತಾಂಶ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.7ನೇ ಖೇಲೋ ಇಂಡಿಯಾ ಯುವ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ಭಾಷಣ
May 04th, 08:16 pm
ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನ್ಸುಖ್ ಭಾಯ್, ಸಹೋದರಿ ರಕ್ಷಾ ಖಾಡ್ಸೆ ಮತ್ತು ಶ್ರೀ ರಾಮ್ ನಾಥ್ ಠಾಕೂರ್ ಜಿ, ಬಿಹಾರದ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಜಿ ಮತ್ತು ವಿಜಯ್ ಕುಮಾರ್ ಸಿನ್ಹಾ ಜಿ, ಇಲ್ಲಿ ಹಾಜರಿರುವ ಗಣ್ಯ ಅತಿಥಿಗಳೆ, ಎಲ್ಲಾ ಆಟಗಾರರೆ, ತರಬೇತುದಾರರೆ, ಇತರೆ ಸಿಬ್ಬಂದಿ ಮತ್ತು ನನ್ನ ಪ್ರೀತಿಯ ಯುವ ಸ್ನೇಹಿತರೆ!7ನೇ ಖೇಲೋ ಇಂಡಿಯಾ ಯುವ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
May 04th, 08:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ 7ನೇ ಖೇಲೋ ಇಂಡಿಯಾ ಯುವ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಕ್ರೀಡಾಪಟುಗಳು, ತರಬೇತುದಾರರು ಮತ್ತು ಸಿಬ್ಬಂದಿ ಉದ್ದೇಶಿಸಿ ಮಾತನಾಡಿದ ಅವರು, ದೇಶಾದ್ಯಂತದ ಕ್ರೀಡಾಪಟಗಳು ಇಲ್ಲಿ ನೆರೆದಿದ್ದು, ಅಸಾಧಾರಣ ಪ್ರತಿಭೆ ಮತ್ತು ದೃಢಸಂಕಲ್ಪವನ್ನು ಪ್ರದರ್ಶಿಸಲಿದ್ದಾರೆ, ಅವರು ತಮ್ಮ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ತೋರಿಸಲಿದ್ದಾರೆ. ರಾಷ್ಟ್ರದ ಕ್ರೀಡಾ ಮನೋಭಾವಕ್ಕೆ ಅವರ ಕೊಡುಗೆ ಶ್ಲಾಘಿಸಿದ ಪ್ರಧಾನಿ, ಕ್ರೀಡಾಪಟುಗಳ ಗಮನಾರ್ಹ ಕೌಶಲ್ಯ ಮತ್ತು ಬದ್ಧತೆ ಅತ್ಯಗತ್ಯ. ಅವರ ಕ್ರೀಡೆಯ ಮೇಲಿನ ಉತ್ಸಾಹ ಮತ್ತು ಶ್ರೇಷ್ಠತೆಯ ನಿರಂತರ ಅನ್ವೇಷಣೆ ರಾಷ್ಟ್ರಕ್ಕೆ ಹೆಮ್ಮೆ ತರುತ್ತದೆ ಎಂದರಲ್ಲದೆ, ಕ್ರೀಡಾಪಟುಗಳ ಭವಿಷ್ಯದ ಎಲ್ಲ ಪ್ರಯತ್ನಗಳಿಗೆ ತಮ್ಮ ಶುಭಾಶಯಗಳನ್ನು ಕೋರಿದರು.ಒಲಿಂಪಿಕ್ ಪದಕ ವಿಜೇತೆ ಮತ್ತು ಖ್ಯಾತ ಅಥ್ಲೀಟ್ ಕರ್ಣಂ ಮಲ್ಲೇಶ್ವರಿ ಅವರಿಂದ ಪ್ರಧಾನಮಂತ್ರಿಗಳ ಭೇಟಿ
April 15th, 09:54 am
ಒಲಿಂಪಿಕ್ ಪದಕ ವಿಜೇತೆ ಹಾಗೂ ಖ್ಯಾತ ಕ್ರೀಡಾಪಟು ಕರ್ಣಂ ಮಲ್ಲೇಶ್ವರಿ ಅವರು ನಿನ್ನೆ ಯಮುನಾನಗರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಯುವ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಪ್ರಯತ್ನವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು.5ನೇ ಖೇಲೋ ಇಂಡಿಯಾ ವಿಂಟರ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದ ಪ್ರಧಾನಮಂತ್ರಿ
January 23rd, 07:10 pm
5ನೇ ಖೇಲೋ ಇಂಡಿಯಾ ವಿಂಟರ್ ಗೇಮ್ಸ್ 2025 ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶುಭ ಹಾರೈಸಿದರು.ಖೋ ಖೋ ವಿಶ್ವಕಪ್ ಗೆದ್ದ ಭಾರತೀಯ ಪುರುಷರ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
January 19th, 11:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಖೋ ಖೋ ವಿಶ್ವಕಪ್ ಜಯಿಸಿದ ಭಾರತೀಯ ಪುರುಷರ ತಂಡವನ್ನು ಇಂದು ಅಭಿನಂದಿಸಿ, ಅವರ ಸ್ಥೈರ್ಯ ಮತ್ತು ಬದ್ಧತೆಯನ್ನು ಶ್ಲಾಘಿಸಿದ್ದಾರೆ.ಖೋ ಖೋ ವಿಶ್ವಕಪ್ ಜಯಿಸಿದ ಭಾರತ ಮಹಿಳಾ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
January 19th, 09:21 pm
ಪ್ರಪ್ರಥಮ ಖೋ ಖೋ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.ಪ್ರಧಾನಮಂತ್ರಿಯವರನ್ನು ಭೇಟಿಯಾದ ಚೆಸ್ ಚಾಂಪಿಯನ್ ಶ್ರೀ ಗುಕೇಶ್ ಡಿ
December 28th, 06:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಚೆಸ್ ಚಾಂಪಿಯನ್ ಶ್ರೀ ಗುಕೇಶ್ ಡಿ ಅವರು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಗುಕೇಶ್ ಡಿ ಅವರ ಸಂಕಲ್ಪ ಮತ್ತು ಸಮರ್ಪಣೆಯನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು ಮತ್ತು ಅವರ ಆತ್ಮವಿಶ್ವಾಸವು ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ ಎಂದು ಹೇಳಿದರು. ಆನಂತರ ನಮ್ಮ ಸಂಭಾಷಣೆ ಯೋಗ ಮತ್ತು ಧ್ಯಾನದ ಪರಿವರ್ತಕ ಸಾಮರ್ಥ್ಯದ ವಿಷಯಗಳ ಕಡೆಗೆ ಸಾಗಿತು ಎಂದು ಪ್ರಧಾನಮಂತ್ರಿಯವರು ತಿಳಿಸಿದ್ದಾರೆ.ಪುರುಷರ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕದ ಗೆಲುವಿಗೆ ಕ್ರೀಡಾಪಟು ನವ್ ದೀಪ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
September 08th, 08:33 am
ಪ್ರಸ್ತುತ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ ಜಾವೆಲಿನ್ ಎಸೆತ ಎಫ್ 41 ನಲ್ಲಿ ಬೆಳ್ಳಿ ಪದಕ ಜಯಿಸಿರುವ ಕ್ರೀಡಾಪಟು ನವ್ ದೀಪ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.ಮಹಿಳೆಯರ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸಿಮ್ರನ್ ಶರ್ಮಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
September 08th, 08:31 am
ಪ್ರಸ್ತುತ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 200 ಮೀಟರ್ ಟಿ12 ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕದ ಗೆಲುವಿಗೆ ಕ್ರೀಡಾಪಟುಗಲ ಸಿಮ್ರನ್ ಶರ್ಮಾ ಅವರನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಪುರುಷರ ಶಾಟ್‌ಪುಟ್‌ನಲ್ಲಿ ಕಂಚು ಗೆದ್ದ ಅಥ್ಲೀಟ್ ಹೊಕಾಟೊ ಹೊಟೊಜೆ ಸೆಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ
September 07th, 09:04 am
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ ಪುರುಷರ ಶಾಟ್‌ಪುಟ್ ಎಫ್57 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಅಥ್ಲೀಟ್ ಹೊಕಾಟೊ ಹೊಟೊಜೆ ಸೆಮಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹೈಜಂಪ್ ನಲ್ಲಿ ಚಿನ್ನ ಗೆದ್ದ ಅಥ್ಲೀಟ್ ಪ್ರವೀಣ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ
September 06th, 05:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಹೈ ಜಂಪ್ ಟಿ64ರಲ್ಲಿ ಚಿನ್ನದ ಪದಕವನ್ನು ಗೆದ್ದ ಅಥ್ಲೀಟ್ ಪ್ರವೀಣ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ.ಭಾರತದ ಅಥ್ಲೀಟ್ ಕಪಿಲ್ ಪರ್ಮಾರ್ ಗೆ ಜೂಡೋದಲ್ಲಿ ಕಂಚಿನ ಪದಕ: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
September 05th, 10:26 pm
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ 60 ಕೆಜಿ ಜೂಡೋ1 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಅಥ್ಲೀಟ್ ಕಪಿಲ್ ಪರ್ಮಾರ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಪುರುಷರ ಕ್ಲಬ್ ಥ್ರೋ ಸ್ಪರ್ಧೆ: ಬೆಳ್ಳಿ ಪದಕ ಗೆದ್ದ ಪ್ರಣವ್ ಸೂರ್ಮಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
September 05th, 08:05 am
ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಪುರುಷರ ಕ್ಲಬ್ ಥ್ರೋ ಎಫ್ 51 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಅಥ್ಲೀಟ್ ಪ್ರಣವ್ ಸೂರ್ಮ ಅವರ ಪರಿಶ್ರಮ ಮತ್ತು ದೃಢತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ.ಪುರುಷರ ಹೈಜಂಪ್ ನಲ್ಲಿ ಕಂಚಿನ ಪದಕ ವಿಜೇತ ಕ್ರೀಡಾಪಟು ಮರಿಯಪ್ಪನ್ ತಂಗವೇಲು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
September 04th, 10:31 am
ಪ್ರಸ್ತುತ ನಡೆಯುತ್ತಿರುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಹೈ ಜಂಪ್ ಟಿ63 ಸ್ಪರ್ಧೆಯಲ್ಲಿ ಕಂಚಿನ ಪದಕದ ಗೆಲುವಿಗಾಗಿ ಕ್ರೀಡಾಪಟು ಮರಿಯಪ್ಪನ್ ತಂಗವೇಲು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಮಹಿಳೆಯರ 400ಮೀ ಟಿ20 ಸ್ಪರ್ಧೆಯಲ್ಲಿ ಕಂಚು ಗೆದ್ದ ದೀಪ್ತಿ ಜೀವಂಜಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ
September 04th, 06:40 am
ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಮಹಿಳೆಯರ 400 ಮೀಟರ್ ಟಿ20 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಅಥ್ಲೀಟ್ ದೀಪ್ತಿ ಜೀವಂಜಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.2024 ಪ್ಯಾರೀಸ್ ಒಲಿಂಪಿಕ್ಸ್: ಎರಡನೇ ಪದಕ ಗೆದ್ದ ಅಥ್ಲೀಟ್ ಪ್ರೀತಿ ಪಾಲ್ ಅವರನ್ನು ಅಭಿನಂದಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
September 02nd, 10:50 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸದ್ಯ ನಡೆಯುತ್ತಿರುವ 2024ರ ಪ್ಯಾರೀಸ್ ಒಲಿಂಪಿಕ್ಸ್ ನಲ್ಲಿ ಎರಡನೇ ಪದಕ ಗೆದ್ದ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪ್ರೀತಿ ಪಾಲ್ ಅವರನ್ನು ಅಭಿನಂದಿಸಿದ್ದಾರೆ.ಪ್ಯಾರಾಲಿಂಪಿಕ್ಸ್ 2024 ರಲ್ಲಿ ಪುರುಷರ ಹೈ ಜಂಪ್ T47 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನಿಶಾದ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಅಭಿನಂದಿಸಿದರು
September 02nd, 10:50 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ಯಾರಾಲಿಂಪಿಕ್ಸ್ 2024ನ ಪುರುಷರ ಎತ್ತರ ಜಿಗಿತ ಟಿ47 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನಿಶಾದ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ.100 ಮೀಟರ್ ಟಿ35 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಥ್ಲೀಟ್ ಪ್ರೀತಿ ಪಾಲ್: ಪ್ರಧಾನಮಂತ್ರಿ ಅಭಿನಂದನೆ
August 30th, 06:42 pm
ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024 ರ 100 ಮೀಟರ್ ಟಿ35 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಭಾರತದ ಅಥ್ಲೀಟ್ ಪ್ರೀತಿ ಪಾಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.ಪ್ಯಾರಿಸ್ ಪ್ಯಾರಾಲಿಂಪಿಕ್ಸ್-2024ರ ತಂಡಕ್ಕೆ ಶುಭ ಹಾರೈಸಿರುವ 140 ಕೋಟಿ ಭಾರತೀಯರು: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ
August 28th, 09:47 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ 2024ರಲ್ಲಿ ಭಾಗವಹಿಸುತ್ತಿರುವ ಭಾರತೀಯ ತಂಡಕ್ಕೆ ಶುಭ ಕೋರಿದ್ದಾರೆ. ಕ್ರೀಡಾಪಟುಗಳ ಧೈರ್ಯ ಮತ್ತು ದೃಢನಿಶ್ಚಯವನ್ನು ಶ್ಲಾಘಿಸಿದ ಅವರು, 140 ಕೋಟಿ ಭಾರತೀಯರು ಅವರ ಯಶಸ್ಸಿಗೆ ಶುಭ ಹಾರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.