ನ್ಯೂಜಿಲೆಂಡ್‌ನಲ್ಲಿರುವ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 11th, 01:15 pm

ನ್ಯೂಜಿಲೆಂಡ್‌ ಭೇಟಿ ಅಂತಿಮಗೊಳಿಸಿದಾಗ, ಹವಾಮಾನವು ತುಂಬಾ ಚಳಿ ಇರುತ್ತದೆ ಎಂದು ನನಗೆ ಹೇಳಿದ್ದರಿಂದ, ನಾನು ಅದನ್ನು ನನ್ನೊಂದಿಗೆ ತರುವ ನಿರ್ಧಾರ ತೆಗೆದುಕೊಂಡೆ.

ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರಿಂದ ಭಾಷಣ

July 11th, 12:35 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಕ್ ಲ್ಯಾಂಡ್ ನಲ್ಲಿ ನಡೆದ 'ಕಿಯಾ ಔರಾ ಮೋದಿ' ಕಾರ್ಯಕ್ರಮದಲ್ಲಿ ನ್ಯೂಜಿಲೆಂಡ್ ನಲ್ಲಿರುವ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ವಿಶೇಷ ಸನ್ನಿವೇಶದಲ್ಲಿ, ನ್ಯೂಜಿಲೆಂಡ್ ನ ಪ್ರಧಾನಮಂತ್ರಿ ಯವರಾದ ಗೌರವಾನ್ವಿತ ಆರ್. ಕ್ರಿಸ್ಟೋಫರ್ ಲಕ್ಸನ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಭಾರತೀಯ ವಲಸಿಗರ 10,000ಕ್ಕೂ ಹೆಚ್ಚು ಸದಸ್ಯರ ಶಕ್ತಿ, ಉತ್ಸಾಹ ಮತ್ತು ಉಲ್ಲಾಸದಿಂದ ಈ ಸಭೆ ತುಂಬಿತ್ತು.

ಭಾರತ-ನ್ಯೂಜಿಲೆಂಡ್ ಉದ್ಯಮ ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 11th, 08:20 am

ಆಕ್ಲೆಂಡ್‌ನಲ್ಲಿ ನಿಮ್ಮೆಲ್ಲರೊಂದಿಗೆ ಇಲ್ಲಿರುವುದು ನನಗೆ ಸಂತೋಷ ತಂದಿದೆ. ಪ್ರಧಾನ ಮಂತ್ರಿ ಲಕ್ಸನ್ ಅವರ ಸಕಾರಾತ್ಮಕ ದೃಷ್ಟಿಕೋನ ಮತ್ತು ಭಾರತದ ಬಗ್ಗೆ ಅವರು ಹೊಂದಿರುವ ಆಳವಾದ ಬದ್ಧತೆಗಾಗಿ ನಾನು ಅವರಿಗೆ ನನ್ನ ವಿಶೇಷ ಕೃತಜ್ಞತೆ ವ್ಯಕ್ತಪಡಿಸಲು ಬಯಸುತ್ತೇನೆ.

Prime Minister addresses business leaders in New Zealand

July 11th, 08:16 am

PM Modi interacted with leading CEOs and business leaders from India and New Zealand, highlighting the vast opportunities for trade, investment and innovation. He invited New Zealand businesses to partner India's growth story and help achieve the shared goal of doubling bilateral trade to NZD 7 billion by 2030.

ನ್ಯೂಜಿಲೆಂಡ್ ಪ್ರಧಾನಮಂತ್ರಿಯೊಂದಿಗೆ ಅಧಿಕೃತ ಮಾತುಕತೆ ನಡೆಸಿದ ಪ್ರಧಾನಮಂತ್ರಿ

July 11th, 08:09 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಕ್ಲೆಂಡ್‌ನ ಸರ್ಕಾರಿ ಭವನದಲ್ಲಿಂದು ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಸರ್ಕಾರಿ ಭವನಕ್ಕೆ ಆಗಮಿಸಿದಾಗ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸಾಂಪ್ರದಾಯಿಕ ಮಾವೊರಿ ಸ್ವಾಗತ ನೀಡಲಾಯಿತು. ಸಮಾರಂಭದಲ್ಲಿ ಶಾಂತಿ, ಗೌರವ ಮತ್ತು ಸ್ವಾಗತವನ್ನು ಸಂಕೇತಿಸುವ ಸಾಂಪ್ರದಾಯಿಕ ಮಾವೊರಿ ಆಚರಣೆಗಳು ಒಳಗೊಂಡಿದ್ದವು. ಸಾಂಪ್ರದಾಯಿಕ ಸ್ವಾಗತದ ನಂತರ, ಪ್ರಧಾನಮಂತ್ರಿಯವರು ಗೌರವ ರಕ್ಷೆ (ಗಾರ್ಡ್ ಆಫ್ ಆನರ್ ) ಸ್ವೀಕರಿಸಿದರು.

ಭಾರತ-ನ್ಯೂಜಿಲೆಂಡ್ ಜಂಟಿ ಹೇಳಿಕೆ

July 11th, 07:59 am

ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜುಲೈ 10 ಮತ್ತು 11 ರಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಅಧಿಕೃತ ಭೇಟಿ ನೀಡಿದ್ದರು. 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಇದು ಐತಿಹಾಸಿಕ ಮೈಲಿಗಲ್ಲೆಂದು ಗುರುತಿಸಲಾಗಿದೆ ಮತ್ತು ಎರಡೂ ರಾಷ್ಟ್ರಗಳ ನಡುವಿನ ಕಾಯಂ ಸ್ನೇಹ ಮತ್ತು ಪಾಲುದಾರಿಕೆಯಲ್ಲಿ ಹೊಸ ಹಾದಿಯನ್ನು ರೂಪಿಸುತ್ತದೆ.

ಭಾರತ-ನ್ಯೂಜಿಲೆಂಡ್ ನಿಯೋಗ ಮಟ್ಟದ ಮಾತುಕತೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ

July 11th, 07:00 am

ನಿಮ್ಮ ಸಚಿವರು ರಾತ್ರಿಯಿಡೀ ನನ್ನೊಂದಿಗೆ ಇದ್ದರು, ಅದಕ್ಕೂ ನಾನು ಕೃತಜ್ಞನಾಗಿದ್ದೇನೆ. 40 ವರ್ಷಗಳ ನಂತರ ಭಾರತದ ಪ್ರಧಾನ ಮಂತ್ರಿಯೊಬ್ಬರು ನ್ಯೂಜಿಲೆಂಡ್‌ಗೆ ಚೊಚ್ಚಲ ಭೇಟಿ ನೀಡುತ್ತಿರುವುದು ನನಗೆ ತುಂಬಾ ಸಂತೋಷದ ವಿಷಯ. ನಿಮ್ಮ ಆರ್ಥಿಕ ರಾಜಧಾನಿಯಲ್ಲಿ ಈ ಕಾರ್ಯಕ್ರಮ ಆಯೋಜಿಸುವ ಮೂಲಕ, ನೀವು ಭಾರತ-ನ್ಯೂಜಿಲೆಂಡ್ ಸಂಬಂಧಗಳಿಗೆ ಹೊಸ ಉತ್ತೇಜನ ನೀಡುವ ಅವಕಾಶ ಸೃಷ್ಟಿಸಿದ್ದೀರಿ. ಇದಕ್ಕಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ.

ಪ್ರಧಾನಿ ಮೋದಿ ಆಕ್ಲೆಂಡ್‌ಗೆ ಆಗಮಿಸಿದರು

July 10th, 02:56 pm

ಪ್ರಧಾನಿ ಮೋದಿ ಅವರನ್ನು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಆಗಮಿಸಿದರು, ಅಲ್ಲಿ ಅವರನ್ನು ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ ಪ್ರಧಾನಮಂತ್ರಿ ಭೇಟಿ

July 03rd, 08:42 pm

ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಪ್ರಬೋವೊ ಸುಬಿಯಾಂಟೊ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 6-8, 2026 ರವರೆಗೆ ಇಂಡೋನೇಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ಇದು ಇಂಡೋನೇಷ್ಯಾಕ್ಕೆ ಪ್ರಧಾನಮಂತ್ರಿಯವರ ನಾಲ್ಕನೇ ಭೇಟಿ ಮತ್ತು ಮೇ 2018ರಲ್ಲಿ ಭಾರತ-ಇಂಡೋನೇಷ್ಯಾ ಸಂಬಂಧಗಳು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಮಟ್ಟಕ್ಕೆ ಏರಿದ ನಂತರ ಅವರ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಭೇಟಿಯ ಸಮಯದಲ್ಲಿ, ಪ್ರಧಾನಿಯವರು ಅಧ್ಯಕ್ಷ ಪ್ರಬೋವೊ ಅವರೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಲಿದ್ದಾರೆ ಮತ್ತು ಪಾಲುದಾರಿಕೆಯಲ್ಲಿ ಆಗಿರುವ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ.