3ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

July 09th, 12:29 pm

ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಎಂಪಿ ಅವರ ಆತಿಥ್ಯದಲ್ಲಿ, ಜುಲೈ 9, 2026 ರಂದು ಮೆಲ್ಬೋರ್ನ್ ನಲ್ಲಿ ನಡೆದ 3ನೇ ಭಾರತ-ಆಸ್ಟ್ರೇಲಿಯಾ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಗೌರ್ನಮೆಂಟ್ ಹೌಸ್ ಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿಯವರನ್ನು ಪ್ರಧಾನಮಂತ್ರಿ ಅಲ್ಬನೀಸ್ ಅವರು ಆತ್ಮೀಯವಾಗಿ ಬರಮಾಡಿಕೊಂಡು, ಗೌರವ ವಂದನೆಗಳೊಂದಿಗೆ ಅಧಿಕೃತವಾಗಿ ಸ್ವಾಗತಿಸಿದರು.