Today, India has embarked on the Reform Express, aimed at making both life and business easier: PM Modi at the 18th Rozgar Mela
January 24th, 11:30 am
While addressing the 18th Rozgar Mela, PM Modi expressed his happiness that over 61,000 young people are receiving appointment letters for government services. He noted that India is entering into trade and mobility agreements with several countries, opening up vast new opportunities for young Indians. Highlighting the nation’s progress across sectors over the past decade, he urged the youth to work with the spirit of “Nagrik Devo Bhava.”Prime Minister Shri Narendra Modi addresses the 18th Rozgar Mela via video conferencing
January 24th, 11:00 am
While addressing the 18th Rozgar Mela, PM Modi expressed his happiness that over 61,000 young people are receiving appointment letters for government services. He noted that India is entering into trade and mobility agreements with several countries, opening up vast new opportunities for young Indians. Highlighting the nation’s progress across sectors over the past decade, he urged the youth to work with the spirit of “Nagrik Devo Bhava.”ಅಹಮದಾಬಾದ್ ನಲ್ಲಿ ನಡೆದ ಭಾರತ-ಜರ್ಮನಿ ಸಿಇಒಗಳ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
January 12th, 01:35 pm
ಭಾರತ-ಜರ್ಮನಿ ಸಿಇಒಗಳ ವೇದಿಕೆಗೆ ಸೇರಲು ನನಗೆ ತುಂಬಾ ಸಂತೋಷವಾಗಿದೆ. ಭಾರತ-ಜರ್ಮನಿ ಸಂಬಂಧಗಳ ಅಮೃತ ಮಹೋತ್ಸವ ಮತ್ತು ಭಾರತ-ಜರ್ಮನಿ ವ್ಯೂಹಾತ್ಮಕ ಪಾಲುದಾರಿಕೆಯ ರಜತ ಮಹೋತ್ಸವವನ್ನು ನಾವು ಆಚರಿಸುತ್ತಿರುವ ಅತ್ಯಂತ ಮಹತ್ವದ ಸಮಯದಲ್ಲಿ ಈ ಸಭೆ ನಡೆಯುತ್ತಿದೆ. ಇದರರ್ಥ ನಮ್ಮ ಸಂಬಂಧವು ಪ್ಲಾಟಿನಂನ ಶಾಶ್ವತತೆ ಮತ್ತು ಬೆಳ್ಳಿಯ ಹೊಳಪನ್ನು ಹೊಂದಿದೆ.ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 11th, 02:45 pm
2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
January 11th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್‌ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್‌ಕೋಟ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆದ ಭಾರತ-ರಷ್ಯಾ ಬಿಸಿನೆಸ್ ಫೋರಂನಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 05th, 03:45 pm
ಇಂದು ಇಷ್ಟು ದೊಡ್ಡ ನಿಯೋಗದೊಂದಿಗೆ ಈ ಕಾರ್ಯಕ್ರಮದ ಭಾಗವಾಗಿರುವುದು ಅಧ್ಯಕ್ಷರಾದ ಪುಟಿನ್ ಅವರ ಅತ್ಯಂತ ಪ್ರಮುಖ ನಿರ್ಧಾರ ಹಾಗೂ ಹೆಜ್ಜೆ ಎಂದು ನಾನು ಭಾವಿಸುತ್ತೇನೆ. 'ಇಂಡಿಯಾ ರಷ್ಯಾ ಬಿಸಿನೆಸ್ ಫೋರಂ'ನಲ್ಲಿ ಭಾಗವಹಿಸಿರುವ ನಿಮ್ಮೆಲ್ಲರನ್ನೂ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ನಿಮ್ಮೆಲ್ಲರ ನಡುವೆ ಇರುವುದು ನನಗೆ ಅತ್ಯಂತ ಸಂತಸದ ವಿಷಯವಾಗಿದೆ. ಈ ವೇದಿಕೆಗೆ ಆಗಮಿಸಿ ತಮ್ಮ ಅಮೂಲ್ಯವಾದ ಅನಿಸಿಕೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನನ್ನ ಸ್ನೇಹಿತರಾದ ಅಧ್ಯಕ್ಷ ಪುಟಿನ್ ಅವರಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ವ್ಯಾಪಾರ-ವಹಿವಾಟಿಗೆ ಸರಳ ಮತ್ತು ಸುಗಮವಾದ ವ್ಯವಸ್ಥೆಗಳನ್ನು ರೂಪಿಸಲಾಗುತ್ತಿದೆ. ಭಾರತ ಮತ್ತು ಯುರೇಷಿಯನ್ ಎಕನಾಮಿಕ್ ಯೂನಿಯನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (FTA) ಕುರಿತು ಚರ್ಚೆಗಳು ಪ್ರಾರಂಭವಾಗಿವೆ.ರಷ್ಯಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ – ರಷ್ಯಾ ವಾಣಿಜ್ಯ ವೇದಿಕೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 05th, 03:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ-ರಷ್ಯಾ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಇಂದು ಮಾತನಾಡಿದರು. ತಮ್ಮ ಭಾಷಣದ ಆರಂಭದಲ್ಲಿ ಪ್ರಧಾನಮಂತ್ರಿ ಅವರು, ಘನತೆವೆತ್ತ ಅಧ್ಯಕ್ಷ ಪುಟಿನ್, ಭಾರತ ಮತ್ತು ವಿದೇಶಗಳ ನಾಯಕರು ಮತ್ತು ಎಲ್ಲಾ ಗೌರವಾನ್ವಿತ ಅತಿಥಿಗಳಿಗೆ ಶುಭಾಶಯ ಕೋರಿದರು. ಭಾರತ ರಷ್ಯಾ ವ್ಯಾಪಾರ ವೇದಿಕೆಯು ಅಧ್ಯಕ್ಷ ಪುಟಿನ್ ಅವರ ಮಹತ್ವದ ಉಪಕ್ರಮವನ್ನು ಪ್ರತಿಬಿಂಬಿಸುತ್ತದೆ, ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದೊಡ್ಡ ನಿಯೋಗವನ್ನು ಕರೆತಂದಿದ್ದಾರೆ ಎಂದು ಹೇಳಿದರು. ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ತಮ್ಮ ಹೃತ್ಪೂರ್ವಕ ಸ್ವಾಗತವನ್ನು ಕೋರಿದ ಪ್ರಧಾನಮಂತ್ರಿ ಮೋದಿ, ಇಂದು ಗಣ್ಯರ ಜೊತೆ ಇರುವುದು ಬಹಳ ಸಂತೋಷ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ತಮ್ಮ ಅಮೂಲ್ಯವಾದ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಶ್ರೀ ಮೋದಿ ಅವರು ತಮ್ಮ ಸ್ನೇಹಿತ ಅಧ್ಯಕ್ಷ ಪುಟಿನ್ ಅವರಿಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದರು. ವ್ಯಾಪಾರಕ್ಕಾಗಿ ಸರಳೀಕರಣಕೃತ ಮತ್ತು ಪೂರ್ವ ಅಂದಾಜಿನ ಕಾರ್ಯವಿಧಾನಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಭಾರತ ಮತ್ತು ಯುರೇಷಿಯನ್ ಆರ್ಥಿಕ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆಗಳು ಪ್ರಾರಂಭವಾಗಿವೆ ಎಂದು ಮಾಹಿತಿ ನೀಡಿದರು.ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025ರಲ್ಲಿ ಪ್ರಧಾನಮಂತ್ರಿ ಅವರ ಭಾಷಣ
October 17th, 11:09 pm
ಶ್ರೀಲಂಕಾದ ಗೌರವಾನ್ವಿತ ಪ್ರಧಾನಮಂತ್ರಿ ಹರಿಣಿ ಅಮರಸೂರ್ಯ ಜೀ, ಆಸ್ಟ್ರೇಲಿಯಾದ ಗೌರವಾನ್ವಿತ ಮಾಜಿ ಪ್ರಧಾನ ಮಂತ್ರಿ, ನನ್ನ ಸ್ನೇಹಿತ ಟೋನಿ ಅಬಾಟ್ ಜೀ, ಯುಕೆಯ ಮಾಜಿ ಪ್ರಧಾನಿ ರಿಷಿ ಸುನಕ್ ಜೀ, ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ, ನಮಸ್ಕಾರ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2025 ಉದ್ದೇಶಿಸಿ ಭಾಷಣ ಮಾಡಿದರು
October 17th, 08:00 pm
ವೈವಿಧ್ಯಮಯ ರಸ್ತೆ ಅಡೆತಡೆಗಳು ಮತ್ತು ವೇಗ ಅಡೆತಡೆಗಳನ್ನು ಎದುರಿಸುತ್ತಿರುವ ಜಗತ್ತಿನಲ್ಲಿ, ತಡೆಯಲಾಗದ ಭಾರತ ದ ಸುತ್ತಲಿನ ಚರ್ಚೆಯು ಸ್ವಾಭಾವಿಕ ಮತ್ತು ಸಮಯೋಚಿತವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಹನ್ನೊಂದು ವರ್ಷಗಳ ಹಿಂದಿನ ಮತ್ತು ಇಂದಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವಿಷಯವನ್ನು ಇರಿಸಲು ಅವರು ಪ್ರಯತ್ನಿಸಿದರು. 2014ರ ಹಿಂದಿನ ಯುಗವನ್ನು ಸ್ಮರಿಸಿದ ಶ್ರೀ ನರೇಂದ್ರ ಮೋದಿ ಅವರು, ಆ ಸಮಯದಲ್ಲಿ ಅಂತಹ ಶೃಂಗಸಭೆಗಳಲ್ಲಿ ಪ್ರಾಬಲ್ಯ ಹೊಂದಿದ್ದ ಚರ್ಚೆಗಳ ಸ್ವರೂಪವನ್ನು ಬಿಂಬಿಸಿದರು. ಭಾರತವು ಜಾಗತಿಕ ಪ್ರತಿಕೂಲ ಪರಿಸ್ಥಿತಿಯನ್ನು ಹೇಗೆ ತಡೆದುಕೊಳ್ಳುತ್ತದೆ, ಅದು ದುರ್ಬಲ ಐದು ಗುಂಪಿನಿಂದ ಹೇಗೆ ನಿರ್ಗಮಿಸುತ್ತದೆ, ರಾಷ್ಟ್ರವು ಎಷ್ಟು ಕಾಲ ನೀತಿ ಪಾರ್ಶ್ವವಾಯುವಿನಲ್ಲಿ ಸಿಕ್ಕಿಹಾಕಿಕೊಳ್ಳುತ್ತದೆ ಮತ್ತು ದೊಡ್ಡ ಪ್ರಮಾಣದ ಹಗರಣಗಳ ಯುಗವು ಯಾವಾಗ ಕೊನೆಗೊಳ್ಳುತ್ತದೆ ಎಂಬ ಕಳವಳಗಳನ್ನು ಅವರು ಗಮನಸೆಳೆದರು.ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಸಮ್ಮೇಳನ(ಕಾಂಗ್ರೆಸ್) 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 04th, 10:45 am
ನನ್ನ ಸಂಪುಟ ಸಹೋದ್ಯೋಗಿ ಜ್ಯೋತಿರಾದಿತ್ಯ ಸಿಂಧಿಯಾ ಜಿ, ರಾಜ್ಯ ಸಚಿವ ಚಂದ್ರ ಶೇಖರ್ ಪೆಮ್ಮಸಾನಿ ಜಿ, ಇಲ್ಲಿರುವ ವಿವಿಧ ರಾಜ್ಯಗಳ ಪ್ರತಿನಿಧಿಗಳೆ, ವಿದೇಶಗಳಿಂದ ಬಂದಿರುವ ನಮ್ಮ ಅತಿಥಿಗಳೆ, ದೂರಸಂಪರ್ಕ ವಲಯಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೆ, ಇಲ್ಲಿ ಉಪಸ್ಥಿತರಿರುವ ವಿವಿಧ ಕಾಲೇಜುಗಳ ನನ್ನ ಯುವ ಸ್ನೇಹಿತರೆ, ಮಹಿಳೆಯರೆ ಮತ್ತು ಮಹನೀಯರೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಉದ್ದೇಶಿಸಿ ಭಾಷಣ; ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ
October 04th, 10:29 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 'ಕೌಶಲ್ ದೀಕ್ಷಾಂತ್ ಸಮಾರೋಹ್' ಕಾರ್ಯಕ್ರಮದಲ್ಲಿ ರೂ. 62,000 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಯುವಕೇಂದ್ರಿತ ಯೋಜನೆಗಳಿಗೆ ಚಾಲನೆ ನೀಡಿದರು. ದೇಶಾದ್ಯಂತ ಐ.ಟಿ.ಐಗಳಿಗೆ ಸಂಬಂಧಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಹಾಗೂ ಬಿಹಾರದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ ಅವರು, ಕೆಲವು ವರ್ಷಗಳ ಹಿಂದೆ ಸರ್ಕಾರವು ಐ.ಟಿ.ಐ ವಿದ್ಯಾರ್ಥಿಗಳಿಗಾಗಿ ಬೃಹತ್ ಪ್ರಮಾಣದಲ್ಲಿ ಘಟಿಕೋತ್ಸವ ಸಮಾರಂಭಗಳನ್ನು ಆಯೋಜಿಸುವ ಹೊಸ ಸಂಪ್ರದಾಯವನ್ನು ಆರಂಭಿಸಿದ್ದನ್ನು ಸ್ಮರಿಸಿದರು. ಇಂದಿನ ದಿನವು ಆ ಸಂಪ್ರದಾಯದಲ್ಲಿ ಮತ್ತೊಂದು ಮೈಲಿಗಲ್ಲು ಎಂದು ಅವರು ಬಣ್ಣಿಸಿದರು.ಜಪಾನಿನ ಪ್ರಾಂತ್ಯಗಳ ರಾಜ್ಯಪಾಲರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಷಣ
August 30th, 08:00 am
ನಾನು ಈ ಸಭಾಂಗಣದಲ್ಲಿ ಸೈತಾಮಾದ ವೇಗ, ಮಿಯಾಗಿಯ ಚೇತರಿಕೆ, ಫುಕುವೋಕಾದ ಚೈತನ್ಯ ಮತ್ತು ನಾರಾದ ಪರಂಪರೆಯನ್ನು ಅನುಭವಿಸಬಲ್ಲೆ. ನಿಮ್ಮೆಲ್ಲರಲ್ಲೂ ಕುಮಾಮೊಟೊದ ಉಷ್ಣತೆ, ನಾಗಾನೊದ ತಾಜಾತನ, ಶಿಜುವೋಕಾದ ಸೌಂದರ್ಯ ಮತ್ತು ನಾಗಸಾಕಿಯ ನಾಡಿಮಿಡಿತವಿದೆ. ನೀವೆಲ್ಲರೂ ಫ್ಯೂಜಿ ಪರ್ವತದ ಶಕ್ತಿ ಮತ್ತು ಸಕುರಾದ ಚೈತನ್ಯವನ್ನು ಸಾಕಾರಗೊಳಿಸುತ್ತೀರಿ. ಒಟ್ಟಾಗಿ, ನೀವು ಜಪಾನ್ ದೇಶವನ್ನು ಕಾಲಾತೀತವಾಗಿಸುತ್ತೀರಿ.ಮುಂದಿನ ದಶಕದ ಭಾರತ - ಜಪಾನ್ ಜಂಟಿ ಮುನ್ನೋಟ: ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮುನ್ನಡೆಸಲು ಎಂಟು ಮಾರ್ಗಗಳು
August 29th, 07:11 pm
ಕಾನೂನುಬದ್ಧ ಆಳ್ವಿಕೆಯ ಆಧಾರದ ಮೇಲೆ ಮುಕ್ತ, ತೆರೆದ, ಶಾಂತಿಯುತ, ಸಮೃದ್ಧ ಮತ್ತು ಸಂಘರ್ಷ-ಮುಕ್ತ ಇಂಡೋ-ಪೆಸಿಫಿಕ್ ಪ್ರದೇಶದ ಸಾಮಾನ್ಯ ದೃಷ್ಟಿಕೋನವನ್ನು ಹೊಂದಿರುವ ಎರಡು ದೇಶಗಳಾಗಿ, ಪೂರಕ ಸಂಪನ್ಮೂಲ ದತ್ತಿ, ತಾಂತ್ರಿಕ ಸಾಮರ್ಥ್ಯಗಳು ಮತ್ತು ವೆಚ್ಚ ಸ್ಪರ್ಧಾತ್ಮಕತೆಯನ್ನು ಹೊಂದಿರುವ ಎರಡು ಆರ್ಥಿಕತೆಗಳು ಮತ್ತು ಸ್ನೇಹ ಮತ್ತು ಪರಸ್ಪರ ಸದ್ಭಾವನೆಯ ದೀರ್ಘ ಸಂಪ್ರದಾಯವನ್ನು ಹೊಂದಿರುವ ಎರಡು ರಾಷ್ಟ್ರಗಳಾಗಿ, ಮುಂದಿನ ದಶಕದಲ್ಲಿ ನಮ್ಮ ದೇಶಗಳಲ್ಲಿ ಮತ್ತು ಪ್ರಪಂಚದಲ್ಲಿ ಒಟ್ಟಾರೆಯಾಗಿ ಬದಲಾವಣೆಗಳು ಮತ್ತು ಅವಕಾಶಗಳನ್ನು ಜಂಟಿಯಾಗಿ ನಿಭಾಯಿಸುವ ಉದ್ದೇಶವನ್ನು ಭಾರತ ಮತ್ತು ಜಪಾನ್ ವ್ಯಕ್ತಪಡಿಸುತ್ತವೆ, ನಮ್ಮ ಆಯಾ ದೇಶೀಯ ಗುರಿಗಳನ್ನು ಸಾಧಿಸಲು ಸಹಾಯ ಮಾಡುತ್ತವೆ ಮತ್ತು ನಮ್ಮ ದೇಶಗಳು ಹಾಗು ಮುಂದಿನ ಪೀಳಿಗೆಯ ಜನರನ್ನು ಹಿಂದೆಂದಿಗಿಂತಲೂ ಹೆಚ್ಚು ನಿಕಟವಾಗಿಸುತ್ತವೆ.ಭಾರತ-ಜಪಾನ್ ಆರ್ಥಿಕ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
August 29th, 11:20 am
ನಿಮ್ಮಲ್ಲಿ ಅನೇಕರನ್ನು ನಾನು ವೈಯಕ್ತಿಕವಾಗಿ ಬಲ್ಲೆ. ನಾನು ಗುಜರಾತ್ನಲ್ಲಿದ್ದಾಗ ಆಗಿರಬಹುದು, ಅಥವಾ ದೆಹಲಿಗೆ ಬಂದ ನಂತರವೇ ಆಗಿರಬಹುದು, ನಿಮ್ಮಲ್ಲಿ ಅನೇಕರೊಂದಿಗೆ ನನಗೆ ನಿಕಟವಾದ ಸಂಪರ್ಕವಿದೆ. ಇಂದು ನಿಮ್ಮೆಲ್ಲರನ್ನೂ ಭೇಟಿಯಾಗುವ ಈ ಅವಕಾಶ ಸಿಕ್ಕಿದ್ದಕ್ಕೆ ನನಗೆ ನಿಜಕ್ಕೂ ಬಹಳ ಸಂತೋಷವಾಗಿದೆ.ʻಭಾರತ-ಜಪಾನ್ ಆರ್ಥಿಕ ವೇದಿಕೆʼಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
August 29th, 11:02 am
ಈ ವೇಳೆ ಪ್ರಧಾನಮಂತ್ರಿಯವರು ತಮ್ಮ ಭಾಷಣದಲ್ಲಿ, ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಬಗ್ಗೆ, ಅದರಲ್ಲೂ ವಿಶೇಷವಾಗಿ ಹೂಡಿಕೆ, ಉತ್ಪಾದನೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗದ ಯಶಸ್ಸನ್ನು ಒತ್ತಿ ಹೇಳಿದರು. ಭಾರತದಲ್ಲಿ ತಮ್ಮ ಹೆಜ್ಜೆಗುರುತನ್ನು ಮತ್ತಷ್ಟು ಹೆಚ್ಚಿಸಲು ಜಪಾನಿನ ಕಂಪನಿಗಳನ್ನು ಆಹ್ವಾನಿಸಿದ ಅವರು, ಭಾರತದ ಬೆಳವಣಿಗೆಯ ಯಶೋಗಾಥೆಯು ಆ ಕಂಪನಿಗಳಿಗೆ ಅತ್ಯಾಕರ್ಷಕ ಅವಕಾಶಗಳನ್ನು ಒದಗಿಸುತ್ತದೆ ಎಂದರು. ಪ್ರಸ್ತುತ ಪ್ರಕ್ಷುಬ್ಧ ಜಾಗತಿಕ ಆರ್ಥಿಕ ಸನ್ನಿವೇಶದ ಹಿನ್ನೆಲೆಯಲ್ಲಿ ವಿಶ್ವಾಸಾರ್ಹ ಸ್ನೇಹಿತರ ನಡುವಿನ ಆಳವಾದ ಆರ್ಥಿಕ ಸಹಭಾಗಿತ್ವವು ಅತ್ಯಂತ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ರಾಜಕೀಯ ಸ್ಥಿರತೆ, ನೀತಿ ಮುಂಗಾಣಿಕೆ, ಸುಧಾರಣೆಗಳಿಗೆ ಬದ್ಧತೆ ಮತ್ತು ಸುಗಮ ವ್ಯಾಪಾರ ಪ್ರಯತ್ನಗಳು ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಹೊಸ ವಿಶ್ವಾಸವನ್ನು ನೀಡಿವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಜಾಗತಿಕ ಸಂಸ್ಥೆಗಳು ಇತ್ತೀಚೆಗೆ ಭಾರತದ ಕ್ರೆಡಿಟ್ ರೇಟಿಂಗ್ ಅನ್ನು ಮೇಲ್ದರ್ಜೆಗೆ ಏರಿಸಿರುವುದು ಈ ವಿಶ್ವಾಸವನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.ಕರ್ನಾಟಕ, ತೆಲಂಗಾಣ, ಬಿಹಾರ ಮತ್ತು ಅಸ್ಸಾಂಗಳಿಗೆ ಪ್ರಯೋಜನಕಾರಿಯಾದ 3 ಯೋಜನೆಗಳ ಮಲ್ಟಿ-ಟ್ರ್ಯಾಕಿಂಗ್ ವ್ಯವಸ್ಥೆಗೆ ಮತ್ತು ಗುಜರಾತ್ ರಾಜ್ಯದ ಕಚ್ ನ ದೂರದ ಪ್ರದೇಶಗಳನ್ನು ಸಂಪರ್ಕಿಸಲು ಒಂದು ಹೊಸ ರೈಲು ಮಾರ್ಗಕ್ಕೆ ಕೇಂದ್ರ ಸಂಪುಟ ಸಭೆಯು ಅನುಮೋದನೆ ನೀಡಿದೆ
August 27th, 04:50 pm
ಮೇಲಿನ ಯೋಜನೆಗಳು ಪ್ರಯಾಣಿಕರು ಮತ್ತು ಸರಕುಗಳ ಸುಗಮ ಮತ್ತು ವೇಗದ ಸಾಗಣೆಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿವೆ. ಈ ಉಪಕ್ರಮಗಳು ಸಂಪರ್ಕವನ್ನು ಒದಗಿಸುತ್ತವೆ ಮತ್ತು ಪ್ರಯಾಣದ ಅನುಕೂಲತೆಯನ್ನು ಸುಧಾರಿಸುತ್ತವೆ, ಜೊತೆಗೆ ಲಾಜಿಸ್ಟಿಕ್ (ಸರಕುಗಳ ಸಾಗಣೆ) ವೆಚ್ಚವನ್ನು ಕಡಿಮೆ ಮಾಡುತ್ತವೆ ಮತ್ತು ತೈಲ ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತವೆ. ಹೆಚ್ಚುವರಿಯಾಗಿ, ಯೋಜನೆಗಳು ಕಡಿಮೆ CO2 (ಇಂಗಾಲದ ಡೈಆಕ್ಸೈಡ್) ಹೊರಸೂಸುವಿಕೆಗೆ ಸಹಾಯಕವಾಗಿವೆ, ಇದರಿಂದಾಗಿ ಸುಸ್ಥಿರ ಮತ್ತು ಪರಿಣಾಮಕಾರಿ ರೈಲು ಕಾರ್ಯಾಚರಣೆಗಳನ್ನು ಬೆಂಬಲಿಸುತ್ತವೆ. ಯೋಜನೆಗಳು ಅದರ ನಿರ್ಮಾಣದ ಸಮಯದಲ್ಲಿ ಸುಮಾರು 251 (ಎರಡು ನೂರ ಐವತ್ತೊಂದು) ಲಕ್ಷ ಮಾನವ-ದಿನಗಳ ನೇರ ಉದ್ಯೋಗವನ್ನು ಸೃಷ್ಟಿಸುತ್ತವೆ.ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 23rd, 10:10 pm
ಜಾಗತಿಕ(ವಿಶ್ವ) ನಾಯಕರ ವೇದಿಕೆಗೆ ಆಗಮಿಸಿರುವ ಎಲ್ಲ ಗೌರವಾನ್ವಿತ ಅತಿಥಿಗಳನ್ನು ನಾನು ಸ್ವಾಗತಿಸುತ್ತೇನೆ. ಈ ವೇದಿಕೆಯ ಸಮಯವು ತುಂಬಾ ಪರಿಪೂರ್ಣವಾಗಿದೆ, ಆದ್ದರಿಂದ ನಾನು ಅದನ್ನು ಪ್ರಶಂಸಿಸುತ್ತೇನೆ. ಕಳೆದ ವಾರವಷ್ಟೇ ನಾನು ಕೆಂಪು ಕೋಟೆಯಿಂದ ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಮಾತನಾಡಿದ್ದೆ, ಈಗ ಈ ವೇದಿಕೆ ಆ ಉತ್ಸಾಹದಲ್ಲಿ ಶಕ್ತಿ ಗುಣಕವಾಗಿ ಕಾರ್ಯ ನಿರ್ವಹಿಸುತ್ತಿದೆ.ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 23rd, 05:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಅವರು ವರ್ಲ್ಡ್ ಲೀಡರ್ ಫೋರಂನಲ್ಲಿ ಭಾಗವಹಿಸಿದ್ದ ಎಲ್ಲಾ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಈ ವೇದಿಕೆಯ ಸಮಯ ಅತ್ಯಂತ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟ ಶ್ರೀ ಮೋದಿ ಅವರು, ಈ ಸಕಾಲಿಕ ಉಪಕ್ರಮಕ್ಕಾಗಿ ಆಯೋಜಕರನ್ನು ಶ್ಲಾಘಿಸಿದರು.ಕಳೆದ ವಾರವಷ್ಟೇ, ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಕೆಂಪು ಕೋಟೆಯಿಂದ ಮಾತನಾಡಿದ ಅವರು, ಈ ವೇದಿಕೆ ಈಗ ಆ ಚೈತನ್ಯಕ್ಕೆ ಶಕ್ತಿ ವರ್ಧಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.Cabinet approves semiconductor manufacturing units in ODISHA, PUNJAB and ANDHRA PRADESH worth Rs.4600 crore
August 12th, 03:18 pm
The Union Cabinet, chaired by PM Modi, has approved four semiconductor projects worth ₹4,600 crore under the India Semiconductor Mission (ISM). These projects will give a major boost to India’s semiconductor ecosystem, including the country’s first commercial compound fab and an advanced glass-based substrate packaging unit, and are expected to create jobs for 2,034 skilled professionals.ಫಿಲಿಪ್ಪೀನ್ಸ್ ಅಧ್ಯಕ್ಷರೊಂದಿಗೆ ಜಂಟಿ ಮಾಧ್ಯಮ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಮಾಧ್ಯಮ ಹೇಳಿಕೆಯ ಕನ್ನಡ ಅನುವಾದ
August 05th, 11:06 am
ಮೊದಲನೆಯದಾಗಿ, ನಾನು ಅಧ್ಯಕ್ಷರನ್ನು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಈ ವರ್ಷ, ಭಾರತ ಮತ್ತು ಫಿಲಿಪ್ಪೀನ್ಸ್ ರಾಜತಾಂತ್ರಿಕ ಸಂಬಂಧಗಳ 75ನೇ ವರ್ಷವನ್ನು ಆಚರಿಸುತ್ತಿವೆ. ಮತ್ತು ಈ ಸಂದರ್ಭದಲ್ಲಿ, ಈ ಭೇಟಿಯು ವಿಶೇಷ ಮಹತ್ವವನ್ನು ಪಡೆದಿದೆ. ನಮ್ಮ ರಾಜತಾಂತ್ರಿಕ ಸಂಬಂಧಗಳು ಇತ್ತೀಚಿನವಾದರೂ, ನಮ್ಮ ನಾಗರಿಕ ಸಂಪರ್ಕವು ಪ್ರಾಚೀನ ಕಾಲದಿಂದಲೂ ಇದೆ. ರಾಮಾಯಣದ ಫಿಲಿಪ್ಪೀನ್ಸ್ ಆವೃತ್ತಿ - ಮಹಾರಾಡಿಯಾ ಲಾವಾನಾ ನಮ್ಮ ಆಳವಾಗಿ ಬೇರೂರಿರುವ ಸಾಂಸ್ಕೃತಿಕ ಬಂಧಕ್ಕೆ ಜೀವಂತ ಪುರಾವೆಯಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಅಂಚೆ ಚೀಟಿಗಳು, ಎರಡೂ ದೇಶಗಳ ರಾಷ್ಟ್ರೀಯ ಹೂವುಗಳನ್ನು ಒಳಗೊಂಡಿದ್ದು, ನಮ್ಮ ಸ್ನೇಹದ ಪರಿಮಳವನ್ನು ಸುಂದರವಾಗಿ ಸಂಕೇತಿಸುತ್ತವೆ.