ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ

May 11th, 12:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿದರು ಮತ್ತು ಪುನರ್ ನಿರ್ಮಾಣಗೊಂಡ ದೇವಾಲಯವು ಭಕ್ತರಿಗೆ ಬಾಗಿಲು ತೆರೆದು 75 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ತಮ್ಮ ಹರ್ಷವನ್ನು ವ್ಯಕ್ತಪಡಿಸಿದರು.

ಗುಜರಾತ್‌ನ ಪ್ರಭಾಸ್ ಪಠಾಣ್‌ನಲ್ಲಿ ನಡೆದ ಸೋಮನಾಥ್ ಅಮೃತ ಮಹೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

May 11th, 10:20 am

ಗುಜರಾತ್ ಮುಖ್ಯಮಂತ್ರಿಗಳಾದ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಂಘವಿ ಜಿ, ಗುಜರಾತ್ ಸರ್ಕಾರದ ಸಚಿವರೆ, ಸಂಸತ್ ಸದಸ್ಯರೆ ಮತ್ತು ಶಾಸಕರೆ, ಇಲ್ಲಿರುವ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಗುಜರಾತ್‌ನ ಪುನಃಸ್ಥಾಪಿತ ಸೋಮನಾಥ ದೇವಾಲಯ ಉದ್ಘಾಟನೆಯಾಗಿ 75 ವರ್ಷಗಳು, ಸೋಮನಾಥ ಅಮೃತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗಿ

May 11th, 10:15 am

ಗುಜರಾತ್‌ನ ಪುನಃಸ್ಥಾಪಿತ ಸೋಮನಾಥ ದೇವಾಲಯ ಉದ್ಘಾಟನೆಗೊಂಡು 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಇಂದು ಸೋಮನಾಥ ಅಮೃತ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು.

ಗುಜರಾತ್‌ನ ಜಾಮ್‌ನಗರದಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಅವರ ವಿಶೇಷ ಭಾಷಣ

May 10th, 09:35 pm

ಗುಜರಾತ್‌ನ ಜಾಮ್‌ನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಗುಜರಾತ್‌ನ ಗಮನಾರ್ಹ ಅಭಿವೃದ್ಧಿ ಪ್ರಯಾಣವನ್ನು ಪ್ರತಿಬಿಂಬಿಸುತ್ತಾ, ರಾಜ್ಯವು ಉಪ್ಪು ಉತ್ಪಾದನೆಗೆ ಮಾತ್ರ ಹೆಸರುವಾಸಿಯಾಗಿದ್ದ ರಾಜ್ಯದಿಂದ ಸೆಮಿಕಂಡಕ್ಟರ್‌ಗಳು, ಮೆಟ್ರೋ ಕೋಚ್‌ಗಳು, ರೈಲ್ವೆ ಎಂಜಿನ್‌ಗಳು, ನವೀಕರಿಸಬಹುದಾದ ಇಂಧನ ಮತ್ತು ಉದಯೋನ್ಮುಖ ವಿಮಾನ ಉತ್ಪಾದನೆಯ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ಅವರು ಹೇಳಿದರು. ರಾಜ್ಯದ ನಿರಂತರ ಬೆಳವಣಿಗೆ ಮತ್ತು ಪ್ರಗತಿಗೆ ಗುಜರಾತ್ ಜನರು ಮತ್ತು ಬಿಜೆಪಿ ಕಾರ್ಯಕರ್ತರಿಗೆ ಅವರು ಮನ್ನಣೆ ನೀಡಿದರು.

ಕಾಂಗ್ರೆಸ್ ಅಧಿಕಾರದ ಪುಸ್ತಕದಲ್ಲಿ ಆಡಳಿತದ ಅಧ್ಯಾಯವಿಲ್ಲ: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ

May 10th, 09:46 am

ಕರ್ನಾಟಕದ ಬೆಂಗಳೂರಿನಲ್ಲಿ ಇಂದು ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಭಾರತದಾದ್ಯಂತ ಬಿಜೆಪಿಗೆ ಹೆಚ್ಚುತ್ತಿರುವ ಬೆಂಬಲವನ್ನು ಶ್ಲಾಘಿಸಿದರು, ದೇಶದ ಜನರು ಅಸ್ಥಿರತೆ ಮತ್ತು ಹಗರಣಗಳ ಬದಲಿಗೆ 'ಸ್ಥಿರತೆ, ವೇಗ ಮತ್ತು ಪರಿಹಾರಗಳನ್ನು' ಆರಿಸಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಾದಿಸಿದರು. ಇಂದು ಬೆಂಗಳೂರಿನ ಭೂಮಿಯಿಂದ ಕೇಸರಿ ಸೂರ್ಯ ಉದಯಿಸಿದ್ದಾನೆ ಎಂದು ಅವರು ಹೇಳಿದರು.

ಕರ್ನಾಟಕದ ಬೆಂಗಳೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

May 10th, 09:45 am

ಕರ್ನಾಟಕದ ಬೆಂಗಳೂರಿನಲ್ಲಿ ಇಂದು ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದಕ್ಷಿಣ ಭಾರತದಾದ್ಯಂತ ಬಿಜೆಪಿಗೆ ಹೆಚ್ಚುತ್ತಿರುವ ಬೆಂಬಲವನ್ನು ಶ್ಲಾಘಿಸಿದರು, ದೇಶದ ಜನರು ಅಸ್ಥಿರತೆ ಮತ್ತು ಹಗರಣಗಳ ಬದಲಿಗೆ 'ಸ್ಥಿರತೆ, ವೇಗ ಮತ್ತು ಪರಿಹಾರಗಳನ್ನು' ಆರಿಸಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಾದಿಸಿದರು. ಇಂದು ಬೆಂಗಳೂರಿನ ಭೂಮಿಯಿಂದ ಕೇಸರಿ ಸೂರ್ಯ ಉದಯಿಸಿದ್ದಾನೆ ಎಂದು ಅವರು ಹೇಳಿದರು.

TMC came to power by lying in the name of “Maa, Maati, Manush”: PM Modi in Dakshin Dinajpur, West Bengal

April 11th, 11:40 am

PM Modi addressed a massive rally Dakshin Dinajpur, West Bengal. In his speech, he prioritised women’s safety, justice, and empowerment, outlining measures like fast-tracking cases, increasing women police recruitment, and financial support initiatives. He remarked that while the BJP believes in Sabka Saath, Sabka Vikas, it will also ensure that ‘hisaab’ is fulfilled in West Bengal.

The BJP’s resolve is a declaration to end TMC’s jungle raj and syndicate rule: PM Modi in Jangipur, West Bengal

April 11th, 11:38 am

PM Modi addressed a massive rally in Jangipur, West Bengal. In his speech, he lauded BJP’s manifesto, outlining six key guarantees focused on ending syndicate raj, ensuring women’s empowerment, boosting education infrastructure, and delivering transparent governance. He also promised employment opportunities and benefits for government employees.

Massive public meetings in Purba Bardhaman, Jangipur & Dakshin Dinajpur, West Bengal

April 11th, 11:30 am

Tapping into the growing momentum in West Bengal, PM Modi addressed a massive public gathering in Purba Bardhaman, highlighting BJP’s vision for a fear-free, Viksit Bengal while launching a sharp attack on the TMC government over corruption, lawlessness and appeasement politics.

ಎಐ ಪ್ರಗತಿಯಿಂದ ಟಿ20 ವಿಶ್ವಕಪ್ ವರೆಗೆ, ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ ಭಾರತದ ಏರಿಕೆಯನ್ನು ಪ್ರದರ್ಶಿಸುತ್ತಾರೆ

February 22nd, 11:30 am

ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ದೆಹಲಿಯಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ತಮ್ಮ ಅನುಭವಗಳ ಬಗ್ಗೆ ಮಾತನಾಡಿದರು. ಭಾರತೀಯ ಮೂಲದ ಕ್ರಿಕೆಟಿಗರು, ಅಂಗಾಂಗ ದಾನ, ನದಿ ಉತ್ಸವಗಳು, ಡಿಜಿಟಲ್ ಸುರಕ್ಷತೆ, ಪರೀಕ್ಷಾ ಪೆ ಚರ್ಚಾ ಮತ್ತು ಇನ್ನೂ ಅನೇಕ ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ಫೆಬ್ರವರಿ 23 ರಂದು ರಾಷ್ಟ್ರಪತಿ ಭವನದಲ್ಲಿ 'ರಾಜಾಜಿ ಉತ್ಸವ' ಆಚರಿಸಲಾಗುವುದು ಎಂದು ಅವರು ಹೈಲೈಟ್ ಮಾಡಿದರು. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಿ ಅವರಿಗೆ ಪ್ರಧಾನಿ ಗೌರವ ಸಲ್ಲಿಸಿದರು, ನಾರಿ ಶಕ್ತಿಯೊಂದಿಗಿನ ಅವರ ಆಳವಾದ ಸಂಪರ್ಕವನ್ನು ಗಮನಿಸಿದರು.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಆಯೋಜಿಸಿದ್ದ ಪರಾಕ್ರಮ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 23rd, 05:15 pm

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ.ಕೆ. ಜೋಶಿ ಜಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಐಎನ್ಎ ಟ್ರಸ್ಟ್ ಅಧ್ಯಕ್ಷರಾದ ಬ್ರಿಗೇಡಿಯರ್ ಆರ್.ಎಸ್. ಛಿಕಾರಾ ಜಿ, ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಪಾಲ್ಗೊಂಡ ಹೋರಾಟಗಾರರು ಮತ್ತು ಐಎನ್ಎಯ ಚಿರಂತನ ಪುರುಷ, ಲೆಫ್ಟಿನೆಂಟ್ ಆರ್. ಮಾಧವನ್ ಜಿ,

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿಯ ಪರಾಕ್ರಮ್ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 23rd, 05:00 pm

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನಡೆದ ಪರಾಕ್ರಮ್ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ, ಜನವರಿ 23 ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವದ ಮಹಿಮಾನ್ವಿತ ದಿನಾಂಕವಾಗಿದೆ ಎಂದು ಹೇಳಿದರು. ನೇತಾಜಿ ಅವರ ಶೌರ್ಯ ಮತ್ತು ಧೈರ್ಯ ನಮಗೆ ಸ್ಫೂರ್ತಿ ನೀಡುತ್ತದೆ ಮತ್ತು ಅವರ ಬಗ್ಗೆ ನಮಗೆ ಭಕ್ತಿ ತುಂಬುತ್ತದೆ ಎಂದು ಅವರು ಹೇಳಿದರು. ಇತ್ತೀಚಿನ ವರ್ಷಗಳಲ್ಲಿ, ಪರಾಕ್ರಮ್ ದಿವಸ್ ರಾಷ್ಟ್ರದ ಚೈತನ್ಯದ ಅವಿಭಾಜ್ಯ ಉತ್ಸವವಾಗಿದೆ ಎಂಬುದನ್ನು ಅವರು ಎತ್ತಿ ತೋರಿಸಿದರು. ಜನವರಿ 23 ಪರಾಕ್ರಮ್ ದಿವಸ್, ಜನವರಿ 25 ರಾಷ್ಟ್ರೀಯ ಮತದಾರರ ದಿನ, ಜನವರಿ 26 ಗಣರಾಜ್ಯೋತ್ಸವ, ಜನವರಿ 29 ಬೀಟಿಂಗ್ ರಿಟ್ರೀಟ್ ಮತ್ತು ಜನವರಿ 30 ಪೂಜ್ಯ ಬಾಪು ಅವರ ಪುಣ್ಯತಿಥಿಯಾಗಿರುವುದು ಸಂತೋಷದ ಕಾಕತಾಳೀಯ ಸಂಗತಿ ಎಂದು ಶ್ರೀ ಮೋದಿ ಹೇಳಿದರು. ಇದು ಗಣರಾಜ್ಯದ ಭವ್ಯ ಉತ್ಸವವನ್ನು ಆಚರಿಸುವ ಹೊಸ ಸಂಪ್ರದಾಯವನ್ನು ಸೃಷ್ಟಿಸಿದೆ ಎಂದ ಅವರು ಪರಾಕ್ರಮ್ ದಿವಸ್‌ನಂದು ಎಲ್ಲಾ ನಾಗರಿಕರಿಗೆ ಶುಭಾಶಯಗಳನ್ನು ಕೋರಿದರು.

ದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 26th, 01:30 pm

ಇಂದು ದೇಶವು ವೀರ್ ಬಾಲ್ ದಿವಸ್ ಆಚರಿಸುತ್ತಿದೆ. ಇದೀಗ ವಂದೇ ಮಾತರಂನ ಸುಂದರವಾದ ಗಾಯನವನ್ನು ನಾವು ಆಲಿಸಿದ್ದೇವೆ, ನಿಮ್ಮ ಕಠಿಣ ಪರಿಶ್ರಮ ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ವೀರ ಬಾಲ ದಿವಸ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು

December 26th, 01:00 pm

ನವದೆಹಲಿಯ ಭಾರತ ಮಂಟಪದಲ್ಲಿ ಇಂದು ನಡೆದ 'ವೀರ ಬಾಲ ದಿವಸ್' ರಾಷ್ಟ್ರೀಯ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು, ದೇಶದಾದ್ಯಂತ ಆಗಮಿಸಿದ್ದ ಅತಿಥಿಗಳನ್ನು ಸ್ವಾಗತಿಸಿದರು ಮತ್ತು ಅಲ್ಲಿ ನೆರೆದಿದ್ದ ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ, ಇಂದು ದೇಶವು 'ವೀರ ಬಾಲ ದಿವಸ್' ಆಚರಿಸುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಲಾದ 'ವಂದೇ ಮಾತರಂ'ನ ಸುಂದರ ಪ್ರದರ್ಶನವನ್ನು ಅವರು ಶ್ಲಾಘಿಸಿದರು ಹಾಗೂ ಪ್ರದರ್ಶನಕಾರರ ಸಮರ್ಪಣೆ ಮತ್ತು ಶ್ರಮವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಹೇಳಿದರು.

ರಾಷ್ಟ್ರಗೀತೆ "ವಂದೇ ಮಾತರಂ"ನ 150ನೇ ವಾರ್ಷಿಕೋತ್ಸವದ ವರ್ಷಪೂರ್ತಿ ಆಚರಣೆ(ಸ್ಮರಣಾರ್ಥ)ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 07th, 10:00 am

ವಂದೇ ಮಾತರಂ, ಈ ಪದಗಳೇ ಒಂದು ಮಂತ್ರ, ಒಂದು ಶಕ್ತಿ, ಒಂದು ಕನಸು, ಒಂದು ಸಂಕಲ್ಪವಾಗಿದೆ. ವಂದೇ ಮಾತರಂ, ಈ ಒಂದು ಪದವು ಭಾರತ ಮಾತೆಯ ಆರಾಧನೆ, ಭಾರತ ಮಾತೆಯ ನಿಜವಾದ ಆರಾಧನೆಯಾಗಿದೆ. ವಂದೇ ಮಾತರಂ, ಈ ಒಂದು ಪದವು ನಮ್ಮನ್ನು ಇತಿಹಾಸಕ್ಕೆ ಕರೆದೊಯ್ಯುತ್ತದೆ. ಇದು ನಮ್ಮ ಆತ್ಮವಿಶ್ವಾಸವನ್ನು, ನಮ್ಮ ವರ್ತಮಾನವನ್ನು ಆತ್ಮವಿಶ್ವಾಸದಿಂದ ತುಂಬುತ್ತದೆ, ನಮ್ಮ ಭವಿಷ್ಯಕ್ಕೆ ಹೊಸ ಧೈರ್ಯವನ್ನು ನೀಡುತ್ತದೆ, ಅಂತಹ ಯಾವುದೇ ಬೇರೆ ಸಂಕಲ್ಪವಿಲ್ಲ, ಸಾಧಿಸಲಾಗದ ಇನ್ನಾವುದೇ ಸಂಕಲ್ಪವಿಲ್ಲ. ನಾವು ಭಾರತೀಯರು ಸಾಧಿಸಲು ಸಾಧ್ಯವಾಗದ ಬೇರೆ ಇನ್ನಾವುದೇ ಗುರಿಯಿಲ್ಲ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ವರ್ಷವಿಡೀ ನಡೆಯಲಿರುವ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

November 07th, 09:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂದು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಸ್ಮರಣಾರ್ಥ ವರ್ಷವಿಡೀ ನಡೆಯಲಿರುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ʻವಂದೇ ಮಾತರಂʼ ಕೇವಲ ಒಂದು ಪದವಲ್ಲ, ಅದೊಂದು ಮಂತ್ರ, ಅದೊಂದು ಶಕ್ತಿ, ಅದೊಂದು ಕನಸು ಮತ್ತು ಒಕ್ಕೊರಲ ಸಂಕಲ್ಪ ಎಂದು ಹೇಳಿದರು. ʻವಂದೇ ಮಾತರಂʼ ಭಾರತ ಮಾತೆಯ ಮೇಲಿನ ಭಕ್ತಿ ಮತ್ತು ಆಧ್ಯಾತ್ಮಿಕ ಸಮರ್ಪಣೆ ಸಾಕಾರರೂಪ ಎಂದು ಅವರು ಒತ್ತಿ ಹೇಳಿದರು. ʻವಂದೇ ಮಾತರಂʼ ಎಂಬ ಒಂದೇ ಒಂದು ಪದವು ನಮ್ಮನ್ನು ನಮ್ಮ ಇತಿಹಾಸದೊಂದಿಗೆ ಬೆಸೆಯುತ್ತದೆ, ನಮ್ಮ ವರ್ತಮಾನಕ್ಕೆ ಆತ್ಮವಿಶ್ವಾಸವನ್ನು ತುಂಬುತ್ತದೆ. ಜೊತೆಗೆ, ಈಡೇರಸಿಕೊಳ್ಳಲಾಗದಂತಹ ಯಾವುದೇ ಸಂಕಲ್ಪವಿಲ್ಲ ಮತ್ತು ಸಾಧಿಸಲಾಗದಂತಹ ಗುರಿ ಯಾವುದೂ ಇಲ್ಲ ಎಂದು ನಂಬುವ ಧೈಯವನ್ನು ನಮ್ಮಲ್ಲಿ ನೆಲೆಗೊಳಿಸುವ ಮೂಲಕ ನಮ್ಮ ಭವಿಷ್ಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.

ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ

August 17th, 12:45 pm

ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು

August 17th, 12:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್‌ಪ್ರೆಸ್‌ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.

Glimpses from 79th Independence Day at Red Fort in Delhi

August 15th, 11:02 am

On the 79th Independence Day, PM Modi, in his address, paid tribute to the Constituent Assembly, freedom fighters, and Constitution makers. He highlighted key initiatives—GST reforms, Pradhan Mantri Viksit Bharat Rozgar Yojana, National Sports Policy, and Sudharshan Chakra Mission—aimed at achieving a Viksit Bharat by 2047.

ತಮಿಳುನಾಡಿನ ತೂತುಕುಡಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 26th, 08:16 pm

ತಮಿಳುನಾಡು ರಾಜ್ಯಪಾಲರಾದ ಗೌರವಾನ್ವಿತ ಆರ್.ಎನ್. ರವಿ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಕಿಂಜರಾಪು ರಾಮಮೋಹನ್ ನಾಯ್ಡು ಜಿ, ಡಾ. ಎಲ್. ಮುರುಗನ್ ಜಿ, ತಮಿಳುನಾಡು ಸಚಿವರಾದ ತಂಗಂ ತೆನ್ನರಸು ಜಿ, ಡಾ. ಟಿ.ಆರ್.ಬಿ. ರಾಜಾ ಜಿ, ಪಿ. ಗೀತಾ ಜೀವನ್ ಜಿ, ಅನಿತಾ ಆರ್. ರಾಧಾಕೃಷ್ಣನ್ ಜಿ, ಸಂಸದೆ ಕನಿಮೊಳಿ ಜಿ, ತಮಿಳುನಾಡು ಬಿಜೆಪಿ ಅಧ್ಯಕ್ಷರು ಮತ್ತು ನಮ್ಮ ಶಾಸಕರಾದ ನಾಯನಾರ್ ನಾಗೇಂದ್ರನ್ ಜಿ, ಮತ್ತು ತಮಿಳುನಾಡಿನ ನನ್ನ ಸಹೋದರ ಸಹೋದರಿಯರೆ!