ಬಾಬಾ ವಿಶ್ವನಾಥ ದೇವಾಲಯದ ದರ್ಶನ ಪಡೆದು ಪೂಜೆ ಸಲ್ಲಿಸಿದ ಪ್ರಧಾನಮಂತ್ರಿ; ದೇಶದ ಜನರ ಸಮೃದ್ಧಿ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಕೆ
April 29th, 11:45 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಾಶಿಯ ಬಾಬಾ ವಿಶ್ವನಾಥ ದೇವಾಲಯದಲ್ಲಿ ದರ್ಶನ ಮತ್ತು ಪೂಜೆ ಸಲ್ಲಿಸಿದರು, ಅಲ್ಲಿ ಅವರು ದೇಶದ ಜನರ ಸಂತೋಷ, ಸಮೃದ್ಧಿ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸಿದರು.Ganga Expressway to become new lifeline of Uttar Pradesh’s development: PM Modi in Hardoi
April 29th, 11:35 am
PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.Prime Minister Shri Narendra Modi Inaugurates 594-km long Access-Controlled Greenfield Ganga Expressway in Hardoi, Uttar Pradesh
April 29th, 11:30 am
PM Modi inaugurated the 594-km access-controlled Ganga Expressway in Hardoi, calling it a new lifeline for Uttar Pradesh’s development that will boost connectivity, support farmers and create industrial opportunities across multiple districts. He said the expressway will also bring the possibilities of the NCR closer and strengthen the state’s role in the journey towards Viksit Bharat.ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 04th, 01:00 pm
ಉತ್ತರ ಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶದ ಸಚಿವರಾದ ಸಹೋದರ ರವೀಂದ್ರ ಜೈಸ್ವಾಲ್ ಜಿ, ದಯಾಶಂಕರ್ ಜಿ, ಗಿರೀಶ್ ಯಾದವ್ ಜಿ, ಬನಾರಸ್ ಮೇಯರ್ ಅಶೋಕ್ ತಿವಾರಿ ಜಿ, ಇತರೆ ಜನಪ್ರತಿನಿಧಿಗಳೆ, ವಾಲಿಬಾಲ್ ಸಂಘಟನೆಯ ಎಲ್ಲಾ ಪದಾಧಿಕಾರಿಗಳೆ, ದೇಶಾದ್ಯಂತ ಬಂದಿರುವ ಆಟಗಾರರೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆಲ್ಲರಿಗೂ ನಮಸ್ಕಾರ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ʻ72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿʼಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು
January 04th, 12:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ವಾರಣಾಸಿಯ ಸಂಸತ್ ಸದಸ್ಯನಾಗಿ, ಎಲ್ಲಾ ಆಟಗಾರರನ್ನು ಸ್ವಾಗತಿಸಲು ಮತ್ತು ಅಭಿನಂದಿಸಲು ಸಂತಸವಾಗುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಇಂದಿನಿಂದ ವಾರಣಾಸಿಯಲ್ಲಿ ಪ್ರಾರಂಭವಾಗುತ್ತಿದೆ. ಆಟಗಾರರು ಅಪಾರ ಕಠಿಣ ಪರಿಶ್ರಮದ ಬಳಿಕ ಈ ರಾಷ್ಟ್ರೀಯ ಪಂದ್ಯಾವಳಿಯನ್ನು ತಲುಪಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ವಾರಣಾಸಿಯ ಮೈದಾನದಲ್ಲಿ ಅವರ ಪ್ರಯತ್ನಗಳನ್ನು ಪರೀಕ್ಷಿಗೆ ಒಡ್ಡಲಾಗುವುದು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇಶದ 28 ರಾಜ್ಯಗಳ ತಂಡಗಳು ಒಟ್ಟುಗೂಡಿ ʻಏಕ ಭಾರತ, ಶ್ರೇಷ್ಠ ಭಾರತʼದ ಸುಂದರ ಚಿತ್ರಣವನ್ನು ಪ್ರಸ್ತುತಪಡಿಸಿವೆ ಎಂದು ಅವರು ಹೇಳಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಆಟಗಾರರಿಗೆ ಪ್ರಧಾನಮಂತ್ರಿಯವರು ತಮ್ಮ ಶುಭಾಶಯಗಳನ್ನು ತಿಳಿಸಿದರು.ದೇವ್ ದೀಪಾವಳಿಗೆ ಪ್ರಧಾನಮಂತ್ರಿ ಅವರಿಂದ ಶುಭಾಶಯ
November 05th, 10:44 pm
ಬಾಬಾ ವಿಶ್ವನಾಥನ ಪವಿತ್ರ ನಗರವು ಇಂದು ದೇವ್ ದೀಪಾವಳಿಯ ಅಪ್ರತಿಮ ಪ್ರಕಾಶದಿಂದ ಬೆಳಗುತ್ತಿದೆ. ಗಂಗಾ ಮಾತೆಯ ದಡದಲ್ಲಿ, ಕಾಶಿ ವಿಶ್ವನಾಥನ ಸನ್ನಿಧಿಯ ಸುತ್ತಮುತ್ತಲ ಘಾಟ್ ಗಳಲ್ಲಿ ಬೆಳಗಿದ ಲಕ್ಷಾಂತರ ದೀಪಗಳು ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯ ಶುಭಾಶಯಗಳನ್ನು ಹೊತ್ತಿವೆ ಎಂದು ಪ್ರಧಾನಿಗಳು ಸಂತಸ ಹಂಚಿಕೊಂಡಿದ್ದಾರೆ.ಕೇರಳದ ತಿರುವನಂತಪುರಂನಲ್ಲಿ ವಿಳಿಂಜಂ ಅಂತಾರಾಷ್ಟ್ರೀಯ ಬಂದರು ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 02nd, 02:06 pm
ಕೇರಳದ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಪಿ. ವಿಜಯನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ವೇದಿಕೆಯಲ್ಲಿ ಉಪಸ್ಥಿತರಿರುವ ಇತರೆ ಎಲ್ಲ ಗಣ್ಯರೆ ಮತ್ತು ಕೇರಳದ ನನ್ನ ಸಹೋದರ ಸಹೋದರಿಯರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ₹8,800 ಕೋಟಿ ರೂಪಾಯಿ ವೆಚ್ಚದ ವಿಳಿಂಜಂ ಅಂತಾರಾಷ್ಟ್ರೀಯ ಆಳಸಮುದ್ರ ಬಂದರನ್ನು ರಾಷ್ಟ್ರಕ್ಕೆ ಸಮರ್ಪಿಸಿದರು
May 02nd, 01:16 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ತಿರುವನಂತಪುರಂನಲ್ಲಿ 8,800 ಕೋಟಿ ರೂ. ವೆಚ್ಚದ ವಿಳಿಂಜಂ ಅಂತಾರಾಷ್ಟ್ರೀಯ ಬಹುಪಯೋಗಿ ಆಳಸಮುದ್ರ ಬಂದರನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಭಗವಾನ್ ಆದಿ ಶಂಕರಾಚಾರ್ಯರ ಜಯಂತಿಯ ಶುಭ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಮೂರು ವರ್ಷಗಳ ಹಿಂದೆ ಸೆಪ್ಟೆಂಬರ್ ನಲ್ಲಿ ಆದಿ ಶಂಕರಾಚಾರ್ಯರ ಪವಿತ್ರ ಜನ್ಮಸ್ಥಳಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ಸಿಕ್ಕಿತ್ತು ಎಂದು ಹೇಳಿದರು. ತಮ್ಮ ಸಂಸದೀಯ ಕ್ಷೇತ್ರವಾದ ಕಾಶಿಯಲ್ಲಿರುವ ವಿಶ್ವನಾಥ ಧಾಮ ಸಂಕೀರ್ಣದಲ್ಲಿ ಆದಿ ಶಂಕರಾಚಾರ್ಯರ ಭವ್ಯವಾದ ಪ್ರತಿಮೆಯನ್ನು ಸ್ಥಾಪಿಸಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು. ಈ ಪ್ರತಿಮೆ ಆದಿ ಶಂಕರಾಚಾರ್ಯರ ಅಪಾರ ಆಧ್ಯಾತ್ಮಿಕ ಜ್ಞಾನ ಮತ್ತು ಬೋಧನೆಗಳಿಗೆ ಸಲ್ಲಿಸಿದ ಗೌರವವಾಗಿದೆ ಎಂದು ಅವರು ಒತ್ತಿ ಹೇಳಿದರು. ಉತ್ತರಾಖಂಡದ ಪವಿತ್ರ ಕೇದಾರನಾಥ ಧಾಮದಲ್ಲಿ ಆದಿ ಶಂಕರಾಚಾರ್ಯರ ದೈವಿಕ ಪ್ರತಿಮೆಯನ್ನು ಅನಾವರಣಗೊಳಿಸುವ ಗೌರವ ತಮಗೆ ಸಿಕ್ಕಿತು ಎಂದು ಅವರು ಹೇಳಿದರು. ಕೇದಾರನಾಥ ದೇವಾಲಯದ ಬಾಗಿಲುಗಳು ಭಕ್ತರಿಗಾಗಿ ತೆರೆದಿರುವುದು ಇಂದು ಮತ್ತೊಂದು ವಿಶೇಷ ಸಂದರ್ಭವಾಗಿದೆ ಎಂದು ಪ್ರಧಾನಿ ಹೇಳಿದರು. ಕೇರಳದಿಂದ ಬಂದ ಆದಿ ಶಂಕರಾಚಾರ್ಯರು ದೇಶದ ವಿವಿಧ ಮೂಲೆಗಳಲ್ಲಿ ಮಠಗಳನ್ನು ಸ್ಥಾಪಿಸಿ ರಾಷ್ಟ್ರದ ಪ್ರಜ್ಞೆಯನ್ನು ಜಾಗೃತಗೊಳಿಸಿದರು ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಅವರ ಪ್ರಯತ್ನಗಳು ಏಕೀಕೃತ ಮತ್ತು ಆಧ್ಯಾತ್ಮಿಕವಾಗಿ ಪ್ರಬುದ್ಧವಾದ ಭಾರತಕ್ಕೆ ಅಡಿಪಾಯ ಹಾಕಿದವು ಎಂದು ಅವರು ಒತ್ತಿ ಹೇಳಿದರು.ವಾರಣಾಸಿಯಲ್ಲಿ ದೇವ್ ದೀಪಾವಳಿಯನ್ನು ಆಚರಿಸುತ್ತಿರುವುದಕ್ಕೆ ಪ್ರಧಾನಮಂತ್ರಿಯವರು ಸಂತಸ ವ್ಯಕ್ತಪಡಿಸಿದ್ದಾರೆ
November 15th, 11:13 pm
ಇಂದು ದೇವ್ ದೀಪಾವಳಿ ದಿನ ಲಕ್ಷಾಂತರ ದೀವಟಿಗೆಗಳೊಂದಿಗೆ ವಾರಣಾಸಿಯ ಕಾಶಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
October 20th, 04:54 pm
ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಕಾರ್ಯಕ್ರಮಕ್ಕೆ ತಂತ್ರಜ್ಞಾನದ ನೆರವಿನಿಂದ ವರ್ಚುವಲ್ ಆಗಿ ಪಾಲ್ಗೊಂಡಿರುವ ಗೌರವಾನ್ವಿತ ರಾಜ್ಯಪಾಲರುಗಳೇ ಮತ್ತು ನಾನಾ ರಾಜ್ಯಗಳ ಮುಖ್ಯಮಂತ್ರಿಗಳೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ನಾಯ್ಡು ಅವರೇ, ವರ್ಚ್ಯುವಲ್ ಆಗಿ ಪಾಲ್ಗೊಂಡಿರುವ ಇತರೆ ಸಂಪುಟ ಸಹೋದ್ಯೋಗಿಗಳೇ, ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಜೇಶ್ ಪಾಠಕ್, ಉತ್ತರ ಪ್ರದೇಶ ಸರ್ಕಾರದ ನಾನಾ ಸಚಿವರೇ, ಸಂಸದರೇ, ಶಾಸಕರೇ ಮತ್ತು ಬನಾರಸ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು
October 20th, 04:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಯೋಜನೆಗಳಲ್ಲಿ 6,100 ಕೋಟಿ ರೂ. ಮೊತ್ತದ ಬಹುವಿಧದ ವಿಮಾನ ನಿಲ್ದಾಣ ಯೋಜನೆಗಳು ಮತ್ತು ವಾರಾಣಸಿಯ ಬಹು ಅಭಿವೃದ್ಧಿ ಉಪಕ್ರಮಗಳು ಸೇರಿವೆ.ವಾರಣಾಸಿಯಲ್ಲಿ ಆರ್ ಜೆ ಶಂಕರ ಕಣ್ಣಿನ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
October 20th, 02:21 pm
ಶ್ರೀ ಕಂಚಿ ಕಾಮಕೋಟಿ ಪೀಠದ ಶಂಕರಾಚಾರ್ಯ, ಪೂಜ್ಯ ಜಗದ್ಗುರುಗಳಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ; ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್; ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್; ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್; ಶಂಕರ ನೇತ್ರ ಪ್ರತಿಷ್ಠಾನದ ಆರ್.ವಿ.ರಮಣಿ; ಡಾ.ಎಸ್.ವಿ. ಬಾಲಸುಬ್ರಮಣ್ಯಂ; ಶ್ರೀ ಮುರಳಿ ಕೃಷ್ಣಮೂರ್ತಿ; ರೇಖಾ ಜುಂಜುನ್‌ವಾಲಾ; ಮತ್ತು ಸಂಸ್ಥೆಯ ಎಲ್ಲಾ ಇತರ ಗೌರವಾನ್ವಿತ ಸದಸ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಉತ್ತರ ಪ್ರದೇಶದ ವಾರಣಾಸಿಯಲ್ಲಿ ಆರ್ ಜೆ ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 20th, 02:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಆರ್.ಜೆ.ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದರು. ಆಸ್ಪತ್ರೆಯು ವಿವಿಧ ಕಣ್ಣಿನ ಪರಿಸ್ಥಿತಿಗಳಿಗೆ ಸಮಗ್ರ ಸಮಾಲೋಚನೆಗಳು ಮತ್ತು ಚಿಕಿತ್ಸೆಗಳನ್ನು ನೀಡುತ್ತದೆ. ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ವಸ್ತುಪ್ರದರ್ಶನವನ್ನೂ ಶ್ರೀ ಮೋದಿ ಅವರು ವೀಕ್ಷಿಸಿದರು.ವಾರಣಾಸಿಯಲ್ಲಿ ಮತದಾರರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
May 30th, 02:32 pm
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯ ಮತದಾರರೊಂದಿಗೆ ವಿಡಿಯೋ ಸಂದೇಶದ ಮೂಲಕ ಸಂವಾದ ನಡೆಸಿದರು. ಬಾಬಾ ವಿಶ್ವನಾಥರ ಅಪಾರ ಕೃಪೆ ಹಾಗೂ ಕಾಶಿ ಜನತೆಯ ಆಶೀರ್ವಾದದಿಂದ ಮಾತ್ರ ಈ ನಗರವನ್ನು ಪ್ರತಿನಿಧಿಸಲು ಸಾಧ್ಯವಾಗಿದೆ ಎಂದು ಅವರು ವ್ಯಕ್ತಪಡಿಸಿದರು. ಹೊಸ ಕಾಶಿಯೊಂದಿಗೆ ಹೊಸ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಈ ಚುನಾವಣೆಯನ್ನು ಉಲ್ಲೇಖಿಸಿದ ಪ್ರಧಾನಿ, ಕಾಶಿಯ ನಿವಾಸಿಗಳು, ವಿಶೇಷವಾಗಿ ಯುವಕರು, ಮಹಿಳೆಯರು ಮತ್ತು ರೈತರು ಜೂನ್ 1 ರಂದು ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.ಗಂಗಾ ಆರತಿಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿಯವರು ನಂತರ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದರು ಮತ್ತು ಕಾಶಿಯ ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಿದರು
December 14th, 12:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ವಾರಾಣಸಿಯಲ್ಲಿ ಬಾಬಾ ವಿಶ್ವನಾಥ ಧಾಮ್ ಉದ್ಘಾಟನೆಯ ನಂತರ ತಮ್ಮ ಕಾರ್ಯಕ್ರಮಗಳನ್ನು ಮುಂದುವರಿಸಿದರು. ವಿಶೇಷ ಪೂಜೆ ನೆರವೇರಿಸಿದ ಅವರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದರು. ನಂತರ ಸೋಮವಾರ ಸಂಜೆ ಪ್ರಧಾನಮಂತ್ರಿಯವರು ಗಂಗಾ ಆರತಿಯಲ್ಲಿ ಭಾಗವಹಿಸಿದರು.ಉತ್ತರ ಪ್ರದೇಶದ ವಾರಾಣಸಿಯಲ್ಲಿ ಕಾಶಿ ವಿಶ್ವನಾಥ ಧಾಮ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
December 13th, 01:23 pm
ಹರ್ ಹರ್ ಮಹಾದೇವ್! ಹರ್ ಹರ್ ಮಹಾದೇವ್! ನಮಃ ಪಾರ್ವತಿ ಪತಯೇ!.ಹರ್ ಹರ್ ಮಹಾದೇವ್! ಮಾತಾ ಅನ್ನಪೂರ್ಣ ಕೀ ಜೈ! ಗಂಗಾ ಮಾಯೀ ಕೀ ಜೈ!.ಈ ಚಾರಿತ್ರಿಕ ಕಾರ್ಯಕ್ರಮದಲ್ಲಿ ಹಾಜರಿರುವ ಉತ್ತರ ಪ್ರದೇಶ ರಾಜ್ಯಪಾಲರಾದ ಶ್ರೀಮತಿ ಆನಂದಿ ಬೆನ್ ಪಟೇಲ್ ಜೀ, ಉತ್ತರಪ್ರದೇಶದ ಕರ್ಮಯೋಗೀ ಮುಖ್ಯಮಂತ್ರಿ ಯೋಗೀ ಆದಿತ್ಯನಾಥ ಜೀ, ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ಮತ್ತು ನಮ್ಮೆಲ್ಲರ ಮಾರ್ಗದರ್ಶಕರಾಗಿರುವ ಜೆ.ಪಿ.ನಡ್ಡಾ ಜೀ, ಉಪ ಮುಖ್ಯಮಂತ್ರಿಗಳಾದ ಕೇಶವ ಪ್ರಸಾದ್ ಮೌರ್ಯಾ ಜೀ, ಮತ್ತು ದಿನೇಶ್ ಶರ್ಮಾ ಜೀ, ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಮಹೇಂದ್ರ ನಾಥ್ ಪಾಂಡೇ ಜೀ, ಉತ್ತರ ಪ್ರದೇಶ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಜೀ, ಕಾಶಿಯನ್ನು ಪ್ರತಿನಿಧಿಸುತ್ತಿರುವ ಸಚಿವರಾದ ನೀಲಕಂಠ ತೀವಾರಿ ಜೀ, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಪೂಜ್ಯ ಸಂತರೇ, ಕಾಶಿಯ ನನ್ನ ಪ್ರೀತಿಯ ನಿವಾಸಿಗಳೇ ಮತ್ತು ಈ ಕಾರ್ಯಕ್ರಮವನ್ನು ವಿದೇಶಗಳಿಂದ ವೀಕ್ಷಿಸುತ್ತಿರುವ ಈ ದೇಶದ ನಿಷ್ಟಾವಂತರೇ!.PM inaugurates Shri Kashi Vishwanath Dham in Varanasi
December 13th, 01:19 pm
Prime Minister Narendra Modi inaugurated Shri Kashi Vishwanath Dham in Varanasi. He said that that earlier the temple area was only 3000 square feet which has now enlarged to about 5 lakh square feet. Now 50000-75000 devotees can visit the temple and temple premises. Describing the grace of Kashi, PM Modi said it cannot be expressed merely in words as it is an emotion in itself. Kashi is that place - where awakening is life, he remarked.ಪ್ರಧಾನಮಂತ್ರಿ ಅವರಿಂದ ಕೇದಾರನಾಥದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆ
November 05th, 10:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇದಾರನಾಥದಲ್ಲಿಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು ಮತ್ತು ಪೂರ್ಣಗೊಂಡಿರುವ ಹಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಿದರು ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಲ್ಲದೆ, ಅವರು ಹಾಲಿ ನಡೆಯುತ್ತಿರುವ ಹಾಗೂ ಪೂರ್ಣಗೊಂಡಿರುವ ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಿದರು.ಉತ್ತರ ಪ್ರದೇಶದ ವಾರಣಾಸಿಯಲ್ಲಿ ದೇವ್ ದೀಪಾವಳಿ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಭಾಷಣ
November 30th, 06:12 pm
ಕಾಶಿಯ ಎಲ್ಲಾ ಜನತೆಗೆ ಮತ್ತು ದೇಶದ ಜನತೆಗೆ ಕಾರ್ತಿಕ ಪೂರ್ಣಿಮಾ ದೇವ ದೀಪಾವಳಿಯ ಅಂಗವಾಗಿ ಹೃದಯಪೂರ್ವಕ ಶುಭಾಶಯಗಳು. ಗುರು ನಾನಕ್ ದೇವ್ ಜೀ ಅವರ ಪ್ರಕಾಶ ಪರ್ವಕ್ಕಾಗಿ ನಿಮಗೆಲ್ಲಾ ಅಭಿನಂದನೆಗಳು.ವಾರಣಾಸಿಯ ದೇವ್ ದೀಪಾವಳಿ ಮಹೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಿ
November 30th, 06:11 pm
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ಇದು ಕಾಶಿಗೆ ಮತ್ತೊಂದು ವಿಶೇಷ ಸಂದರ್ಭವಾಗಿದೆ ಎಂದರು. 100 ವರ್ಷಗಳ ಹಿಂದೆ ಕಳವಾಗಿದ್ದ ಅನ್ನಪೂರ್ಣ ಮಾತೆಯ ವಿಗ್ರಹವು ಈಗ ಮತ್ತೆ ಕಾಶಿಗೆ ಮರಳುತ್ತಿದೆ. ಇದು ಕಾಶಿಗೆ ದೊಡ್ಡ ಭಾಗ್ಯವಾಗಿದೆ. ನಮ್ಮ ದೇವರು ಮತ್ತು ದೇವತೆಗಳ ಈ ಪ್ರಾಚೀನ ವಿಗ್ರಹಗಳು ನಮ್ಮ ನಂಬಿಕೆಯ ಸಂಕೇತ ಮತ್ತು ನಮ್ಮ ಅಮೂಲ್ಯವಾದ ಪರಂಪರೆಯಾಗಿವೆ ಎಂದು ಅವರು ಹೇಳಿದರು.