ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 23rd, 06:11 pm

ಸಹೋದರ ಸಹೋದರಿಯರೆ, ನೀವೆಲ್ಲಾ ದಯಮಾಡಿ ಮಾತಂಗೇಶ್ವರನಿಗೆ ಜೈ, ಬಾಗೇಶ್ವರ ಧಾಮಕ್ಕೆ ಜೈ, ಜಟಾಶಂಕರ ಧಾಮಕ್ಕೆ ಜೈ ಎಂದು ಹೇಳಿ, ನಾನು ನನ್ನ ಎರಡೂ ಕೈಗಳನ್ನು ಎತ್ತಿ ಹಿಡಿದು ನಿಮ್ಮ ಪರವಾಗಿ ನಮಿಸುತ್ತಿದ್ದೇನೆ, ಜೋರಾಗಿ ರಾಮ್-ರಾಮ್ ಎಂದು ಹೇಳಿ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಿದರು

February 23rd, 04:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯ ಗರ್ಹಾ ಗ್ರಾಮದಲ್ಲಿ ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ನೆರವೇರಿಸಿದರು. ಅಲ್ಪಾವಧಿಯಲ್ಲಿಯೇ ಎರಡನೇ ಬಾರಿಗೆ ಬುಂದೇಲಖಂಡಕ್ಕೆ ಮತ್ತೆ ಬಂದಿರುವುದು ತಮ್ಮ ಅದೃಷ್ಟ ಎಂದು ಹೇಳಿದ ಶ್ರೀ ಮೋದಿ, ಆಧ್ಯಾತ್ಮಿಕ ಕೇಂದ್ರ ಬಾಗೇಶ್ವರ ಧಾಮ ಶೀಘ್ರದಲ್ಲೇ ಆರೋಗ್ಯ ಕೇಂದ್ರವಾಗಲಿದೆ ಎಂದು ಹೇಳಿದರು. ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯನ್ನು 10 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವುದು ಮತ್ತು ಮೊದಲ ಹಂತದಲ್ಲಿ 100 ಹಾಸಿಗೆಗಳ ಸೌಲಭ್ಯ ಸಿದ್ಧವಾಗಲಿದೆ ಎಂದು ಅವರು ಹೇಳಿದರು. ಶ್ರೀ ಧೀರೇಂದ್ರ ಶಾಸ್ತ್ರಿ ಅವರ ಉದಾತ್ತ ಕಾರ್ಯಕ್ಕಾಗಿ ಅವರು ಅವರನ್ನು ಅಭಿನಂದಿಸಿದರು ಮತ್ತು ಬುಂದೇಲಖಂಡದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಫೆಬ್ರವರಿ 23 ರಿಂದ 25 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

February 22nd, 02:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 23 ರಿಂದ 25, 2025 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 23, 2025 ರಂದು, ಅವರು ಮಧ್ಯಪ್ರದೇಶದ ಛತ್ತರ್‌ ಪುರ ಜಿಲ್ಲೆಯಲ್ಲಿ ಪ್ರಯಾಣಿಸಲಿದ್ದಾರೆ ಮತ್ತು ಅಂದು ಮಧ್ಯಾಹ್ನ 2 ಗಂಟೆಗೆ, ಪ್ರಧಾನಮಂತ್ರಿಯವರು ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಫೆಬ್ರವರಿ 24 ,2025 ರಂದು, ಸುಮಾರು 10 ಗಂಟೆಗೆ, ಪ್ರಧಾನಮಂತ್ರಿಯವರು ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಲಿದ್ದಾರೆ. ನಂತರ, ಅವರು ಬಿಹಾರದ ಭಾಗಲ್ಪುರಕ್ಕೆ ಪ್ರಯಾಣಿಸಲಿದ್ದಾರೆ ಮತ್ತು ಮಧ್ಯಾಹ್ನ 2:15 ರ ಸುಮಾರಿಗೆ, ಪ್ರಧಾನಮಂತ್ರಿಯವರು ಪಿಎಂ ಕಿಸಾನ್ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು ಬಿಹಾರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಹಾಗೂ ಆನಂತರ ಅವರು ಅಸ್ಸಾಂನ ಗುವಾಹಟಿಗೆ ಪ್ರಯಾಣಿಸಲಿದ್ದಾರೆ ಮತ್ತು ಸಂಜೆ 6 ಗಂಟೆಗೆ ಅವರು ಜುಮೋಯಿರ್ ಬಿನಂದಿನಿ (ಮೆಗಾ ಜುಮೋಯಿರ್) 2025 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 25 ರಂದು, ಬೆಳಗ್ಗೆ ಸುಮಾರು 10:45 ಗಂಟೆಗೆ, ಪ್ರಧಾನಮಂತ್ರಿಯವರು ಗುವಾಹಟಿಯಲ್ಲಿ ಅಡ್ವಾಂಟೇಜ್ ಅಸ್ಸಾಂ 2.0 ಹೂಡಿಕೆ ಮತ್ತು ಮೂಲಸೌಕರ್ಯ ಶೃಂಗಸಭೆ 2025 ಅನ್ನು ಉದ್ಘಾಟಿಸಲಿದ್ದಾರೆ.