ಅಸ್ಸಾಂನಲ್ಲಿ ಕಾಜಿರಂಗಾ ಎಲಿವೇಟೆಡ್ ಕಾರಿಡಾರ್ ಯೋಜನೆಯ ಭೂಮಿ ಪೂಜೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
January 18th, 11:30 am
ಇಂದು, ನನಗೆ ಮತ್ತೆ ಕಾಜಿರಂಗಕ್ಕೆ ಬರುವ ಸೌಭಾಗ್ಯ ಸಿಕ್ಕಿದೆ. ನನ್ನ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುವುದು ಸ್ವಾಭಾವಿಕವಾಗಿದೆ. ಎರಡು ವರ್ಷಗಳ ಹಿಂದೆ ಕಾಜಿರಂಗದಲ್ಲಿ ಕಳೆದ ಕ್ಷಣಗಳು ನನ್ನ ಜೀವನದ ವಿಶೇಷ ಅನುಭವಗಳಲ್ಲಿ ಒಂದಾಗಿದೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ತಂಗುವ ಅವಕಾಶ ನನಗೆ ಸಿಕ್ಕಿತು ಮತ್ತು ಮರುದಿನ ಬೆಳಿಗ್ಗೆ ಆನೆ ಸಫಾರಿ ಸಮಯದಲ್ಲಿ, ನಾನು ಈ ಪ್ರದೇಶದ ಸೌಂದರ್ಯವನ್ನು ಬಹಳ ಹತ್ತಿರದಿಂದ ಅನುಭವಿಸಿದೆ.ಅಸ್ಸಾಂನ ಕಲಿಯಾಬೋರ್‌ನಲ್ಲಿ ₹6,950 ಕೋಟಿಗೂ ಅಧಿಕ ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಭೂಮಿ ಪೂಜೆ
January 18th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಕಲಿಯಾಬೋರ್ ನಲ್ಲಿ ₹6,950 ಕೋಟಿಗೂ ಅಧಿಕ ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ (NH-715 ರ ಕಲಿಯಾಬೋರ್-ನುಮಾಲಿಗಢ ವಿಭಾಗದ 4-ಲೇನ್ ರಸ್ತೆ) ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಬಂದು ತಮ್ಮನ್ನು ಆಶೀರ್ವದಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದರು. ಕಾಜಿರಂಗಕ್ಕೆ ಮತ್ತೊಮ್ಮೆ ಭೇಟಿ ನೀಡಿದ್ದರಿಂದ ತಮ್ಮ ಹಳೆಯ ನೆನಪುಗಳು ಮರುಕಳಿಸಿವೆ ಎಂದು ಸ್ಮರಿಸಿದ ಅವರು, ಎರಡು ವರ್ಷಗಳ ಹಿಂದೆ ಕಾಜಿರಂಗದಲ್ಲಿ ಕಳೆದ ಕ್ಷಣಗಳು ತಮ್ಮ ಜೀವನದ ಅತ್ಯಂತ ವಿಶೇಷ ಅನುಭವಗಳಲ್ಲಿ ಒಂದಾಗಿವೆ ಎಂದು ಹೇಳಿದರು. ಪ್ರಧಾನಮಂತ್ರಿ ಶ್ರೀ ಮೋದಿಯವರು ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಕಳೆಯುವ ಅವಕಾಶ ಸಿಕ್ಕಿದ್ದನ್ನು ಮತ್ತು ಮರುದಿನ ಬೆಳಿಗ್ಗೆ ಆನೆ ಸವಾರಿಯ ಮೂಲಕ ಈ ಪ್ರದೇಶದ ಸೌಂದರ್ಯವನ್ನು ಹತ್ತಿರದಿಂದ ಅನುಭವಿಸಿದ್ದನ್ನು ವಿಶೇಷವಾಗಿ ಉಲ್ಲೇಖಿಸಿದರುಗುವಾಹತಿಯಲ್ಲಿ “ಬಾಗುರೂಂಬಾ ದೊಹೊ” ಸಾಂಪ್ರದಾಯಿಕ ಬೋಡೊ ಸಾಂಸ್ಕೃತಿಕ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
January 17th, 06:30 pm
ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರೇ, ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರೇ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಸರ್ಬಾನಂದ ಸೋನೋವಾಲ್ ಅವರೇ, ಪಬಿತ್ರ ಮಾರ್ಗರಿಟಾ ಅವರೇ, ಅಸ್ಸಾಂ ವಿಧಾನಸಭೆ ಸ್ಪೀಕರ್ ಶ್ರೀ ಬಿಸ್ವಾಜಿತ್ ಡೈಮರಿ ಅವರೇ, ಬೋಡೊಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಅವರೇ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಗೌರವಾನ್ವಿತ ನಾಗರಿಕ ಸಹೋದರ ಸಹೋದರಿಯರೆ ಮತ್ತು ಅಸ್ಸಾಂನ ನನ್ನ ಸಹೋದರ ಸಹೋದರಿಯರೆ,ಅಸ್ಸಾಂನ ಗುವಾಹಟಿಯಲ್ಲಿ ನಡೆದ "ಬಾಗುರೂಂಬಾ ದೊಹೊ," ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು
January 17th, 06:00 pm
ಗುವಾಹಟಿಯ ಸರುಸಜೈ ಕ್ರೀಡಾಂಗಣದಲ್ಲಿ ಬೋಡೋ ಸಮುದಾಯದ ಶ್ರೀಮಂತ ಪರಂಪರೆಯನ್ನು ಆಚರಿಸುವ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ ಬಾಗುರೂಂಬಾ ದೊಹೊ 2026 ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಸ್ಸಾಂನ ಸಂಸ್ಕೃತಿಯನ್ನು ವೀಕ್ಷಿಸುವುದು ಮತ್ತು ಬೋಡೋ ಸಮುದಾಯದ ಸಂಪ್ರದಾಯಗಳನ್ನು ಸೂಕ್ಷ್ಮವಾಗಿ ಗಮನಿಸುವುದು ತಮ್ಮ ಸೌಭಾಗ್ಯ ಎಂದು ಹೇಳಿದರು. ಈ ಹಿಂದಿನ ಯಾವುದೇ ಪ್ರಧಾನಮಂತ್ರಿಗಳು, ಅಸ್ಸಾಂಗೆ ತಾವು ಭೇಟಿ ನೀಡಿದಷ್ಟು ಬಾರಿ ಭೇಟಿ ನೀಡಲಿಲ್ಲ ಎಂದು ಹೇಳಿದ ಶ್ರೀ ಮೋದಿ ಅವರು, ಅಸ್ಸಾಂನ ಕಲೆ ಮತ್ತು ಸಂಸ್ಕೃತಿ ದೊಡ್ಡ ವೇದಿಕೆಯನ್ನು ಪಡೆಯಬೇಕು ಮತ್ತು ಭವ್ಯ ಆಚರಣೆಗಳ ಮೂಲಕ ರಾಷ್ಟ್ರ ಮತ್ತು ಪ್ರಪಂಚದಾದ್ಯಂತ ಮನ್ನಣೆ ಪಡೆಯಬೇಕು ಎಂಬ ತಮ್ಮ ನಿರಂತರ ಆಶಯವನ್ನು ಒತ್ತಿ ಹೇಳಿದರು. ದೊಡ್ಡ ಪ್ರಮಾಣದ ಬಿಹು ಉತ್ಸವಗಳು, ಜುಮೋಯಿರ್ ಬಿನೋಂದಿನಿಯ ಅಭಿವ್ಯಕ್ತಿ, ಒಂದೂವರೆ ವರ್ಷಗಳ ಹಿಂದೆ ನವದೆಹಲಿಯಲ್ಲಿ ನಡೆದ ಭವ್ಯ ಬೋಡೋ ಮಹೋತ್ಸವ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಈ ದಿಕ್ಕಿನಲ್ಲಿ ನಿರಂತರ ಪ್ರಯತ್ನಗಳು ನಡೆದಿವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಅಸ್ಸಾಂನ ಕಲೆ ಮತ್ತು ಸಂಸ್ಕೃತಿಯ ವಿಶಿಷ್ಟತೆ , ವೈವಿಧ್ಯತೆಗಳ ಆನಂದವನ್ನು ಅನುಭವಿಸುವ ಅವಕಾಶವನ್ನು ತಾವು ಎಂದಿಗೂ ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಮತ್ತೊಮ್ಮೆ, ಬಾಗುರುಂಬಾ ಉತ್ಸವವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು, ಇದು ಅನನ್ಯ ಬೋಡೋ ಗುರುತಿನ ವೈವಿಧ್ಯಮಯ ಆಚರಣೆ ಮತ್ತು ಅಸ್ಸಾಂನ ಪರಂಪರೆಗೆ ಗೌರವ ತುಂಬುತ್ತದೆ ಎಂದು ಅವರು ಬಣ್ಣಿಸಿದರು. ಈ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ, ವಿಶೇಷವಾಗಿ ಕಲಾವಿದರಿಗೆ ಶ್ರೀ ಮೋದಿ ಅವರು ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ವ್ಯಕ್ತಪಡಿಸಿದರು.ಜನವರಿ 17-18 ರಂದು ಅಸ್ಸಾಂಗೆ ಪ್ರಧಾನಮಂತ್ರಿ ಭೇಟಿ
January 16th, 02:51 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 17-18, ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ.