ನೇಪಾಳ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಬಾಲೇಂದ್ರ ಶಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
March 27th, 01:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳ ಪ್ರಧಾನಮಂತ್ರಿಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಬಾಲೇಂದ್ರ ಶಾ ಅವರನ್ನು ಅಭಿನಂದಿಸಿದ್ದಾರೆ. “ನಿಮ್ಮ ಆಯ್ಕೆಯು ನೇಪಾಳದ ಜನರು ನಿಮ್ಮ ನಾಯಕತ್ವದ ಮೇಲೆ ಇಟ್ಟಿರುವ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ. ನಮ್ಮ ಎರಡು ರಾಷ್ಟ್ರಗಳ ಜನರ ಪರಸ್ಪರ ಪ್ರಯೋಜನಕ್ಕಾಗಿ ಭಾರತ-ನೇಪಾಳ ಸ್ನೇಹ ಮತ್ತು ಸಹಕಾರವನ್ನು ಇನ್ನೂ ಹೊಸ ಎತ್ತರಕ್ಕೆ ಕೊಂಡೊಯ್ಯಲು ನಿಮ್ಮೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲು ನಾನು ಎದುರು ನೋಡುತ್ತಿದ್ದೇನೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.ನೇಪಾಳದ ಚುನಾವಣೆಯಲ್ಲಿ ಯಶಸ್ಸು ಸಾಧಿಸಿರುವ ರಾಷ್ಟ್ರೀಯ ಸ್ವತಂತ್ರ ಪಕ್ಷದ ನಾಯಕರಿಗೆ ಪ್ರಧಾನಮಂತ್ರಿ ಅಭಿನಂದನೆ
March 09th, 10:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ (ಆರ್ ಎಸ್ ಪಿ) ಅಧ್ಯಕ್ಷರಾದ ಶ್ರೀ ರಬಿ ಲಾಮಿಚಾನೆ ಮತ್ತು ಆರ್ ಎಸ್ ಪಿಯ ಹಿರಿಯ ನಾಯಕರಾದ ಶ್ರೀ ಬಾಲೇಂದ್ರ ಶಾ ಅವರೊಂದಿಗೆ ಆತ್ಮೀಯವಾದ ದೂರವಾಣಿ ಸಂಭಾಷಣೆ ನಡೆಸಿದರು.