Prime Minister wishes speedy recovery to Begum Khaleda Zia
December 01st, 10:30 pm
The Prime Minister, Shri Narendra Modi has expressed his deep concern about the health of Begum Khaleda Zia, who has contributed to Bangladesh’s public life for many years and wished speedy recovery to her. Shri Modi stated that India stands ready to extend all possible support, in whatever way we can.ಢಾಕಾದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
July 21st, 07:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಢಾಕಾದಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಜೀವಹಾನಿ ಆದವರಿಗೆ ಸಂತಾಪ ಸೂಚಿಸಿದ್ದಾರೆ. ಭಾರತವು ಬಾಂಗ್ಲಾದೇಶದೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ ಮತ್ತು ಸಾಧ್ಯವಿರುವ ಎಲ್ಲಾ ಬೆಂಬಲ ಮತ್ತು ಸಹಾಯವನ್ನು ನೀಡಲು ಸಿದ್ಧವಾಗಿದೆ ಎಂದು ಅವರು ಭರವಸೆ ನೀಡಿದರು.ಬಿಮ್ ಸ್ಟೆಕ್ ಶೃಂಗಸಭೆಯ ಸಂದರ್ಭದಲ್ಲಿ ಬಾಂಗ್ಲಾದೇಶದ ಮುಖ್ಯ ಸಲಹೆಗಾರರನ್ನು ಭೇಟಿಯಾದ ಪ್ರಧಾನಮಂತ್ರಿ
April 04th, 03:49 pm
ಬ್ಯಾಂಕಾಕ್ ನಲ್ಲಿ ನಡೆದ ಬಿ.ಐ.ಎಂ.ಎಸ್.ಟಿ.ಇ.ಸಿ. ( ಬಿಮ್ ಸ್ಟೆಕ್) ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರನ್ನು ಭೇಟಿ ಮಾಡಿದರು.ಏಪ್ರಿಲ್ 03-06, 2025 ರಿಂದ ಪ್ರಧಾನ ಮಂತ್ರಿಯವರ ಥೈಲ್ಯಾಂಡ್ ಮತ್ತು ಶ್ರೀಲಂಕಾ ಭೇಟಿ
April 02nd, 02:00 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬ್ಯಾಂಕಾಕ್‌ನಲ್ಲಿ ನಡೆಯಲಿರುವ 6 ನೇ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಭಾಗವಹಿಸಲು ಥೈಲ್ಯಾಂಡ್‌ಗೆ (ಏಪ್ರಿಲ್ 3-4, 2025) ಭೇಟಿ ನೀಡಲಿದ್ದಾರೆ. ನಂತರ, ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಅವರ ಆಹ್ವಾನದ ಮೇರೆಗೆ ಅವರು ಶ್ರೀಲಂಕಾಕ್ಕೆ (ಏಪ್ರಿಲ್ 4-6, 2025) ರಾಜ್ಯ ಭೇಟಿ ನೀಡಲಿದ್ದಾರೆ.ಶ್ರೀ ಶ್ರೀ ಹರಿಚಂದ್ ಠಾಕೂರ್ ಅವರ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಗೌರವ ನಮನ
March 27th, 03:00 pm
ಶ್ರೀ ಶ್ರೀ ಹರಿಚಂದ್ ಠಾಕೂರ್ ಅವರ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೌರವ ನಮನ ಸಲ್ಲಿಸಿದರು. ದುರ್ಬಲ ವರ್ಗದವರ ಅಭ್ಯುದಯಕ್ಕಾಗಿ ಹಾಗೂ ಸಮಾನತೆ, ಸಹಾನುಭೂತಿ ಮತ್ತು ನ್ಯಾಯವನ್ನು ಉತ್ತೇಜಿಸಲು ಶ್ರೀ ಠಾಕೂರ್ ಅವರ ಕಾರ್ಯವನ್ನು ಶ್ಲಾಘಿಸಿರುವ ಶ್ರೀ ಮೋದಿ ಅವರು, ಮತುವ ಧರ್ಮ ಮಹಾ ಮೇಳ 2025 ಕ್ಕೆ ಶುಭ ಹಾರೈಸಿದ್ದಾರೆ.ಪ್ರಧಾನಿ ಮೋದಿ ಮತ್ತು ಟ್ರಂಪ್ ಭಾರತ-ಅಮೆರಿಕ ಮೆಗಾ ಪಾಲುದಾರಿಕೆಯನ್ನು ರೂಪಿಸಿದರು
February 14th, 06:46 pm
ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಅಮೆರಿಕ ಭೇಟಿಯು ಒಂದು ಸ್ಮರಣೀಯ ಸಂದರ್ಭವಾಗಿದ್ದು, ಎರಡೂ ರಾಷ್ಟ್ರಗಳ ನಡುವಿನ ಆಳವಾದ ಕಾರ್ಯತಂತ್ರ, ಆರ್ಥಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಪ್ರತಿಬಿಂಬಿಸುತ್ತದೆ. ತಮ್ಮ ವಾಸ್ತವ್ಯದ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಅಮೆರಿಕದ ನಾಯಕರು, ವ್ಯಾಪಾರ ಉದ್ಯಮಿಗಳು ಮತ್ತು ಭಾರತೀಯ ವಲಸೆಗಾರರೊಂದಿಗೆ ಉನ್ನತ ಮಟ್ಟದ ಸಭೆಗಳು ಮತ್ತು ಚರ್ಚೆಗಳಲ್ಲಿ ತೊಡಗಿಸಿಕೊಂಡರು, ಇದು ರಕ್ಷಣೆ, ವ್ಯಾಪಾರ, ಹೂಡಿಕೆ, ತಂತ್ರಜ್ಞಾನ ಮತ್ತು ರಾಜತಾಂತ್ರಿಕತೆಯಂತಹ ನಿರ್ಣಾಯಕ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಭೇಟಿಯು ಭಾರತ ಮತ್ತು ಅಮೆರಿಕ ನಡುವಿನ ಬಲವಾದ ಸಂಬಂಧವನ್ನು ಪುನರುಚ್ಚರಿಸಿತು, ಹೊಸ ವಿಶ್ವ ಕ್ರಮವನ್ನು ರೂಪಿಸುವಲ್ಲಿ ಎರಡೂ ರಾಷ್ಟ್ರಗಳನ್ನು ಜಾಗತಿಕ ಪಾಲುದಾರರನ್ನಾಗಿ ಇರಿಸಿತು.ಭಾರತದ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನದಂದು ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅನುವಾದ
January 14th, 10:45 am
ಇಂದು ನಾವು ಭಾರತೀಯ ಹವಾಮಾನ ಇಲಾಖೆಯ, (IMD) 150ನೇ ವಾರ್ಷಿಕೋತ್ಸವ ಆಚರಿಸುತ್ತಿದ್ದೇವೆ. ದಿ 150 ವರ್ಷಗಳು ಭಾರತೀಯ ಹವಾಮಾನ ಇಲಾಖೆಯ ಪ್ರಯಾಣ ಮಾತ್ರವಲ್ಲ. ಇದು ನಮ್ಮ ದೇಶದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಅದ್ಭುತ ಪ್ರಯಾಣವಾಗಿದೆ. IMD ಈ 150 ವರ್ಷಗಳಲ್ಲಿ ಕೋಟ್ಯಂತರ ಭಾರತೀಯರಿಗೆ ಸೇವೆ ಸಲ್ಲಿಸಿದೆ ಮಾತ್ರವಲ್ಲದೇ, ಭಾರತದ ವೈಜ್ಞಾನಿಕ ಪಯಣದ ಸಂಕೇತವೂ ಆಗಿದೆ. ಇಂದು, ಈ ಸಾಧನೆಗಳ ಮೇಲೆ ಅಂಚೆ ಚೀಟಿ ಮತ್ತು ವಿಶೇಷ ನಾಣ್ಯವನ್ನು ಸಹ ಬಿಡುಗಡೆ ಮಾಡಲಾಗಿದೆ. ದೇಶವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುವ 2047 ರಲ್ಲಿ ಭಾರತೀಯ ಹವಾಮಾನ ಇಲಾಖೆಯ ಸ್ವರೂಪ ಹೇಗಿರುತ್ತದೆ ಎಂಬುದಕ್ಕೆ ವಿಷನ್ ಡಾಕ್ಯುಮೆಂಟ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ವೈಭವದ ಸಂದರ್ಭಕ್ಕಾಗಿ ನಿಮ್ಮೆಲ್ಲರಿಗೂ ಮತ್ತು ಎಲ್ಲಾ ದೇಶವಾಸಿಗಳಿಗೂ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. 150 ವರ್ಷಗಳ ಈ ಪ್ರಯಾಣದೊಂದಿಗೆ ಯುವಕರನ್ನು ಸಂಪರ್ಕಿಸಲು IMD ರಾಷ್ಟ್ರೀಯ ಹವಾಮಾನ ಒಲಂಪಿಯಾಡ್ ಅನ್ನು ಸಹ ಆಯೋಜಿಸಿದೆ. ಇದರಲ್ಲಿ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದು ಹವಾಮಾನಶಾಸ್ತ್ರದಲ್ಲಿ ಅವರ ಆಸಕ್ತಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಕೆಲವು ಯುವ ಸ್ನೇಹಿತರನ್ನು ಮಾತನಾಡಿಸಲು ನನಗೆ ಅವಕಾಶ ಸಿಕ್ಕಿತು, ಮತ್ತು ಇಂದಿಗೂ ದೇಶದ ಎಲ್ಲಾ ರಾಜ್ಯಗಳ ನಮ್ಮ ಯುವಕರು ಇಲ್ಲಿ ಇದ್ದಾರೆ. ಈ ಕಾರ್ಯಕ್ರಮದಲ್ಲಿ ಆಸಕ್ತಿ ವಹಿಸಿದ್ದಕ್ಕಾಗಿ ನಾನು ಅವರನ್ನು ವಿಶೇಷವಾಗಿ ಅಭಿನಂದಿಸುತ್ತೇನೆ. ಭಾಗವಹಿಸಿದ ಈ ಎಲ್ಲಾ ಯುವಕರಿಗೆ ಮತ್ತು ವಿಜೇತ ವಿದ್ಯಾರ್ಥಿಗಳಿಗೆ ನನ್ನ ಅಭಿನಂದನೆಗಳು.PM Modi addresses the 150th Foundation Day celebrations of India Meteorological Department
January 14th, 10:30 am
PM Modi addressed the 150th Foundation Day of IMD, highlighting India's rich meteorological heritage and IMD's advancements in disaster management, weather forecasting, and climate resilience. He launched ‘Mission Mausam’ to make India a weather-ready, climate-smart nation and released the IMD Vision-2047 document.ಅಧ್ಯಕ್ಷರಾದ ಬೈಡನ್ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ
August 26th, 10:03 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕದ ಅಧ್ಯಕ್ಷ ಘನತೆವೆತ್ತ ಶ್ರೀ ಜೋಸೆಫ್ ಆರ್. ಬೈಡನ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.ಪ್ರಧಾನಿ ಮೋದಿಯವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಿಂದ ದೂರವಾಣಿ ಕರೆ ಸ್ವೀಕರಿಸಿದರು
August 16th, 04:30 pm
ಪ್ರಧಾನಿ ಮೋದಿ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಪ್ರೊ. ಮೊಹಮ್ಮದ್ ಯೂನಸ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು, ಅಲ್ಲಿ ಅವರು ಪ್ರಜಾಪ್ರಭುತ್ವ ಮತ್ತು ಶಾಂತಿಯುತ ಬಾಂಗ್ಲಾದೇಶವನ್ನು ಬೆಂಬಲಿಸುವ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು. ಅಲ್ಪಸಂಖ್ಯಾತ ಸಮುದಾಯಗಳನ್ನು, ವಿಶೇಷವಾಗಿ ಹಿಂದೂಗಳನ್ನು ರಕ್ಷಿಸುವ ಮಹತ್ವವನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು.ಬಾಂಗ್ಲಾದೇಶದಲ್ಲಿ ಹೊಸ ಜವಾಬ್ದಾರಿ ವಹಿಸಿಕೊಂಡಿರುವ ನೊಬೆಲ್ ಪುರಸ್ಕೃತ ಪ್ರೊಫೆಸರ್ ಮೊಹಮದ್ ಯೂನಸ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
August 08th, 10:26 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಾಗಿ ರಚನೆಯಾದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ನೊಬೆಲ್ ಪ್ರಶಸ್ತಿ ವಿಜೇತ ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರನ್ನು ಅಭಿನಂದಿಸಿದರು.ಬಾಂಗ್ಲಾದೇಶದ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಇಂಗ್ಲಿಷ್ ಪತ್ರಿಕಾ ಹೇಳಿಕೆಯ ಅನುವಾದ
June 22nd, 01:00 pm
ಪ್ರಧಾನ ಮಂತ್ರಿ ಶೇಖ್ ಹಸೀನಾ ಮತ್ತು ಅವರ ನಿಯೋಗಕ್ಕೆ ನಾನು ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಕಳೆದ ಒಂದು ವರ್ಷದಲ್ಲಿ ನಾವು ಸುಮಾರು ಹತ್ತು ಬಾರಿ ಭೇಟಿಯಾಗಿದ್ದರೂ, ಇಂದಿನ ಭೇಟಿ ಬಹು ವಿಶೇಷವಾಗಿದೆ. ಏಕೆಂದರೆ ಪ್ರಧಾನಿ ಶೇಖ್ ಹಸೀನಾ ಅವರು ನಮ್ಮ ಸರ್ಕಾರದ ಮೂರನೇ ಅವಧಿಯ ಮೊದಲ ರಾಜ್ಯ ಅತಿಥಿಯಾಗಿದ್ದಾರೆ.ಪ್ರಧಾನಮಂತ್ರಿ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ
June 05th, 08:04 pm
ಬಾಂಗ್ಲಾದೇಶದ ಪ್ರಧಾನಮಂತ್ರಿಯವರಾದ ಗೌರವಾನ್ವಿತ ಶೇಖ್ ಹಸೀನಾ ಅವರು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ 18ನೇ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ ಡಿ ಎ) ವಿಜಯಕ್ಕೆ ದೂರವಾಣಿ ಕರೆಯ ಮೂಲಕ ಅಭಿನಂದನೆ ಸಲ್ಲಿಸಿದರು.ಸತತ ನಾಲ್ಕನೇ ಅವಧಿಗೆ ಗೆಲುವಿಗಾಗಿ ಪ್ರಧಾನಮಂತ್ರಿ ಶ್ರೀಮತಿ ಶೇಖ್ ಹಸೀನಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
January 08th, 07:54 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಾಂಗ್ಲಾದೇಶದ ಪ್ರಧಾನಮಂತ್ರಿ ಶ್ರೀಮತಿ ಶೇಖ್ ಹಸೀನಾ ಅವರೊಂದಿಗೆ ಮಾತನಾಡಿದರು ಮತ್ತು ಬಾಂಗ್ಲಾದೇಶದ ಸಂಸತ್ತಿನ ಚುನಾವಣೆಯಲ್ಲಿ ಸತತ ನಾಲ್ಕನೇ ಬಾರಿಗೆ ಐತಿಹಾಸಿಕ ಗೆಲುವಿಗಾಗಿ ಅವರನ್ನು ಅಭಿನಂದಿಸಿದರು.ತ್ರಿಪುರಾದ ಖೋವಾಯಿ-ಹರಿನಾ ರಸ್ತೆಯ 135 ಕಿ.ಮೀ. ವಿಸ್ತರಣೆ ಮತ್ತು ಸುಧಾರಣೆಗೆ ಸಂಪುಟದ ಅನುಮೋದನೆ
December 27th, 08:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಭೆ, ತ್ರಿಪುರಾ ರಾಜ್ಯದಲ್ಲಿ ಒಟ್ಟು 134.913 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ-208ರ ಕಿ.ಮೀ 101.300 (ಖೋವಾಯಿ) ರಿಂದ ಕಿ.ಮೀ 236.213 (ಹರಿನಾ) ವರೆಗಿನ ರಸ್ತೆಯನ್ನು ಎರಡು ಪಥಗಳಾಗಿ ಅಭಿವೃದ್ಧಿಪಡಿಸಲು ಮತ್ತು ಅಗಲೀಕರಣ ಮಾಡಲು ತನ್ನ ಅನುಮೋದನೆ ನೀಡಿದೆ.ಭಾರತ ಮತ್ತು ಬಾಂಗ್ಲಾದೇಶದ ಪ್ರಧಾನ ಮಂತ್ರಿಗಳು ನವೆಂಬರ್ ಒಂದರಂದು ಮೂರು ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ
October 31st, 05:02 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರು ಮೂರು ಭಾರತೀಯ ನೆರವಿನ ಅಭಿವೃದ್ಧಿ ಯೋಜನೆಗಳನ್ನು 1 ನವೆಂಬರ್ 2023 ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ಈ ಮೂರು ಯೋಜನೆಗಳು ಅಖೌರಾ - ಅಗರ್ತಲಾ ಗಡಿಯಾಚೆಗಿನ ರೈಲು ಸಂಪರ್ಕ ; ಖುಲ್ನಾ - ಮೊಂಗ್ಲಾ ಬಂದರು ರೈಲು ಮಾರ್ಗ; ಮತ್ತು ಮೈತ್ರೀ ಸೂಪರ್ ಥರ್ಮಲ್ ಪವರ್ ಪ್ಲಾಂಟ್ನ ಘಟಕ – II ಅನ್ನು ಒಳಗೊಂಡಿವೆ.ಪುರುಷರ ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತೀಯ ಕ್ರಿಕೆಟ್ ತಂಡವು ಬಾಂಗ್ಲಾದೇಶ ವಿರುದ್ಧ ಗಳಿಸಿದ ಅಭೂತಪೂರ್ವ ವಿಜಯವನ್ನು ಶ್ಲಾಘಿಸಿದ ಪ್ರಧಾನಮಂತ್ರಿಯವರು
October 19th, 10:25 pm
ವಿಶ್ವಕಪ್ ಪುರುಷರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಾಂಗ್ಲಾದೇಶದ ವಿರುದ್ಧದ ಅಭೂತಪೂರ್ವ ಗೆಲುವಿಗಾಗಿ ಭಾರತೀಯ ಕ್ರಿಕೆಟ್ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.ಜಾಗತಿಕ ಜೈವಿಕ ಇಂಧನ ಒಕ್ಕೂಟ (ಜಿಬಿಎ) ಆರಂಭ
September 09th, 10:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಿಂಗಾಪುರ, ಬಾಂಗ್ಲಾದೇಶ, ಇಟಲಿ, ಯುಎಸ್ಎ, ಬ್ರೆಜಿಲ್, ಅರ್ಜೆಂಟೀನಾ, ಮಾರಿಷಸ್ ಮತ್ತು ಯುಎಇ ನಾಯಕರೊಂದಿಗೆ 2023ರ ಸೆಪ್ಟೆಂಬರ್ 9ರಂದು ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಜಾಗತಿಕ ಜೈವಿಕ ಇಂಧನ ಒಕ್ಕೂಟಕ್ಕೆ ಚಾಲನೆ ನೀಡಿದರು.ಪ್ರಧಾನಮಂತ್ರಿಅವರು ಬಾಂಗ್ಲಾದೇಶದ ಪ್ರಧಾನಮಂತ್ರಿ ಘನತೆವೆತ್ತ ಶೇಖ್ ಹಸೀನಾ ಅವರನ್ನು ಭೇಟಿ ಮಾಡಿದರು
September 08th, 07:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ಪ್ರಧಾನಮಂತ್ರಿ ಘನತೆವೆತ್ತ ಶೇಖ್ ಹಸೀನಾ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. 2023 ರ ಸೆಪ್ಟೆಂಬರ್ 9-10 ರಂದು ಜಿ -20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಹಸೀನಾ ಭಾರತಕ್ಕೆ ಅತಿಥಿ ರಾಷ್ಟ್ರವಾಗಿ ಭೇಟಿ ನೀಡುತ್ತಿದ್ದಾರೆ.ನವದೆಹಲಿಯ ತಮ್ಮ ನಿವಾಸದಲ್ಲಿಂದು ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಅಮೆರಿಕ ಅಧ್ಯಕ್ಷರೊಂದಿಗೆ ಮೂರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿರುವ ಪ್ರಧಾನಮಂತ್ರಿ
September 08th, 01:40 pm
ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ನವದೆಹಲಿಯ ತಮ್ಮ ನಿವಾಸದಲ್ಲಿಂದು ಸಂಜೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೂರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.