ಪ್ರಧಾನಮಂತ್ರಿ ಅವರಿಂದ ರಷ್ಯಾ ಅಧ್ಯಕ್ಷರಿಗೆ ಸ್ವಾಗತ
December 05th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷರಾದ ಪುಟಿನ್ ಅವರಿಗೆ ರಷ್ಯನ್ ಭಾಷೆಯ ಭಗವದ್ಗೀತೆಯ ಪ್ರತಿಯನ್ನು ಉಡುಗೊರೆಯಾಗಿ ನೀಡಿದರು. ಗೀತೆಯ ಬೋಧನೆಗಳು ಪ್ರಪಂಚದಾದ್ಯಂತದ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.ಗೀತಾ ಜಯಂತಿಯ ಪವಿತ್ರ ದಿನದಂದು ದೇಶವಾಸಿಗಳಿಗೆ ಶುಭ ಕೋರಿದ ಪ್ರಧಾನಮಂತ್ರಿ
December 01st, 06:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀಮದ್ ಭಗವದ್ಗೀತೆಗೆ ಸಂಬಂಧಿಸಿದ 'ಗೀತಾ ಜಯಂತಿ'ಯ ಪವಿತ್ರ ದಿನದಂದು ದೇಶಾದ್ಯಂತ ಎಲ್ಲಾ ಕುಟುಂಬಗಳ ಸದಸ್ಯರಿಗೆ ಶುಭಾಶಯ ಕೋರಿದ್ದಾರೆ. ಕರ್ತವ್ಯ ನಿರ್ವಹಣೆಯ ಕುರಿತು ಅಮೂಲ್ಯವಾದ ಸಂದೇಶಗಳಿಂದ ಕೂಡಿರುವ ಈ ದೈವಿಕ ಗ್ರಂಥವು ಭಾರತೀಯ ಕುಟುಂಬ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಜೀವನದಲ್ಲಿ ಅತ್ಯಂತ ವಿಶಿಷ್ಟ ಸ್ಥಾನವನ್ನು ಹೊಂದಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. “ಇದರ ದೈವಿಕ ಸಾರ ಪ್ರತಿ ಪೀಳಿಗೆಯನ್ನು ನಿಸ್ವಾರ್ಥ ಕ್ರಿಯೆಯ ಕಡೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತವೆ’’ ಎಂದು ಶ್ರೀ ಮೋದಿ ಹೇಳಿದ್ದಾರೆ.'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ
November 30th, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.ನವೆಂಬರ್ 28 ರಂದು ಕರ್ನಾಟಕ ಮತ್ತು ಗೋವಾಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
November 27th, 12:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಕರ್ನಾಟಕ ಮತ್ತು ಗೋವಾಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30ರ ಸುಮಾರಿಗೆ ಪ್ರಧಾನಮಂತ್ರಿ ಅವರು ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಅವರು ಗೋವಾಕ್ಕೆ ಪ್ರಯಾಣಿಸಲಿದ್ದು, ಮಧ್ಯಾಹ್ನ 3:15ರ ಸುಮಾರಿಗೆ ಅಲ್ಲಿರುವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಕ್ಕೆ ಭೇಟಿ ನೀಡಲಿದ್ದಾರೆ, ಅಲ್ಲಿ ಮಠದ 550ನೇ ವರ್ಷಾಚರಣೆಯಾದ 'ಸಾರ್ಧ ಪಂಚಮ ಶತಮಾನೋತ್ಸವ' (550ನೇ ವರ್ಷಾಚರಣೆ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಪ್ರಧಾನಮಂತ್ರಿ ಅವರು ನವೆಂಬರ್ 25 ರಂದು ಕುರುಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ
November 24th, 12:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 25 ರಂದು ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.ನವದೆಹಲಿಯಲ್ಲಿ ನಡೆದ 6ನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
November 17th, 08:30 pm
ಭಾರತೀಯ ಪ್ರಜಾಪ್ರಭುತ್ವದಲ್ಲಿ ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಗೆ ಹೊಸ ಎತ್ತರ ನೀಡಿದ ವ್ಯಕ್ತಿತ್ವವನ್ನು ಗೌರವಿಸಲು ಇಂದು ನಾವೆಲ್ಲರೂ ಇಲ್ಲಿ ಒಟ್ಟುಗೂಡಿದ್ದೇವೆ. ಒಬ್ಬ ದಾರ್ಶನಿಕನಾಗಿ, ಸಂಸ್ಥೆಯ ನಿರ್ಮಾತೃವಾಗಿ, ರಾಷ್ಟ್ರೀಯವಾದಿಯಾಗಿ ಮತ್ತು ಮಾಧ್ಯಮ ನಾಯಕನಾಗಿ, ರಾಮನಾಥ್ ಜಿ ಅವರು ಇಂಡಿಯನ್ ಎಕ್ಸ್‌ಪ್ರೆಸ್ ಸಮೂಹವನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ, ಭಾರತದ ಜನರ ಒಂದು ಧ್ಯೇಯವಾಗಿ ಸ್ಥಾಪಿಸಿದರು. ಅವರ ನಾಯಕತ್ವದಲ್ಲಿ, ಈ ಸಮೂಹವು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳ ಧ್ವನಿಯಾಯಿತು. ಆದ್ದರಿಂದ 21ನೇ ಶತಮಾನದ ಈ ಯುಗದಲ್ಲಿ ಭಾರತವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ರಾಮನಾಥ್ ಜಿ ಅವರ ಬದ್ಧತೆ, ಅವರ ಪ್ರಯತ್ನಗಳು ಮತ್ತು ಅವರ ದೃಷ್ಟಿಕೋನವು ನಮಗೆ ಸ್ಫೂರ್ತಿಯ ದೊಡ್ಡ ಸೆಲೆಯಾಗಿದೆ. ಈ ಉಪನ್ಯಾಸಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ನಾನು ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ, ನಿಮ್ಮೆಲ್ಲರನ್ನು ನಾನು ಅಭಿನಂದಿಸುತ್ತೇನೆ.ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 17th, 08:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್ ಆಯೋಜಿಸಿದ್ದ ಆರನೇ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಭಾರತದಲ್ಲಿ ಪ್ರಜಾಪ್ರಭುತ್ವ, ಪತ್ರಿಕೋದ್ಯಮ, ಅಭಿವ್ಯಕ್ತಿ ಮತ್ತು ಸಾರ್ವಜನಿಕ ಚಳುವಳಿಗಳ ಶಕ್ತಿಯನ್ನು ಉನ್ನತೀಕರಿಸಿದ ವಿಶಿಷ್ಟ ವ್ಯಕ್ತಿತ್ವವನ್ನು ಗೌರವಿಸಲು ನಾವು ಇಂದು ಒಟ್ಟುಗೂಡಿದ್ದೇವೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ರಾಮನಾಥ್ ಗೋಯೆಂಕಾ ಅವರು ದಾರ್ಶನಿಕರಾಗಿ, ಸಂಸ್ಥೆ ನಿರ್ಮಾತೃರಾಗಿ, ರಾಷ್ಟ್ರೀಯತಾವಾದಿಯಾಗಿ ಮತ್ತು ಮಾಧ್ಯಮ ನಾಯಕರಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್ ಅನ್ನು ಕೇವಲ ಪತ್ರಿಕೆಯಾಗಿ ಮಾತ್ರವಲ್ಲದೆ ಭಾರತದ ಜನರಲ್ಲಿ ಒಂದು ಧ್ಯೇಯವಾಗಿ ಸ್ಥಾಪಿಸಿದರು ಎಂಬುದನ್ನು ಅವರು ಎತ್ತಿ ತೋರಿಸಿದರು. ಅವರ ನಾಯಕತ್ವದಲ್ಲಿ, ಈ ಗುಂಪು ಭಾರತದ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ರಾಷ್ಟ್ರೀಯ ಹಿತಾಸಕ್ತಿಗಳಿಗೆ ಧ್ವನಿಯಾಯಿತು ಎಂಬುದರತ್ತ ಪ್ರಧಾನಿ ಗಮನ ಸೆಳೆದರು. 21ನೇ ಶತಮಾನದ ಈ ಯುಗದಲ್ಲಿ, ಭಾರತವು ಅಭಿವೃದ್ಧಿ ಹೊಂದುವ ಸಂಕಲ್ಪದೊಂದಿಗೆ ಮುಂದುವರಿಯುತ್ತಿರುವಾಗ, ಶ್ರೀ ರಾಮನಾಥ್ ಗೋಯೆಂಕಾ ಅವರ ಬದ್ಧತೆ, ಪ್ರಯತ್ನಗಳು ಮತ್ತು ದೃಷ್ಟಿಕೋನವು ಸ್ಫೂರ್ತಿಯ ದೊಡ್ಡ ಮೂಲವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಉಪನ್ಯಾಸ ನೀಡಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಇಂಡಿಯನ್ ಎಕ್ಸ್‌ಪ್ರೆಸ್ ಗ್ರೂಪ್‌ಗೆ ಪ್ರಧಾನಿ ಕೃತಜ್ಞತೆ ಸಲ್ಲಿಸಿದರು ಮತ್ತು ಹಾಜರಿದ್ದ ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದರು.ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನ ಉದ್ಘಾಟನಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 06th, 07:00 pm
ಕೇಂದ್ರ ಸಚಿವ ಸಂಪುಟದ ನನ್ನೆಲ್ಲಾ ಸಹೋದ್ಯೋಗಿಗಳೆ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂಸತ್ ಸದಸ್ಯರೆ, ಎಲ್ಲಾ ಸರ್ಕಾರಿ ನೌಕರರೆ, ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು
August 06th, 06:30 pm
ನವದೆಹಲಿಯ ಕರ್ತವ್ಯ ಪಥದಲ್ಲಿ ಇಂದು ಕರ್ತವ್ಯ ಭವನ-3 ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರಾಂತಿಯ ಮಾಸವಾದ ಆಗಸ್ಟ್, ಆಗಸ್ಟ್ 15 ಕ್ಕೆ ಮುನ್ನವೇ ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ತಂದಿದೆ ಎಂದು ಹೇಳಿದರು. ಆಧುನಿಕ ಭಾರತ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಧನೆಗಳಿಗೆ ಭಾರತ ಸಾಕ್ಷಿಯಾಗುತ್ತಿದೆ ಎಂದು ಅವರು ಹೇಳಿದರು. ನವದೆಹಲಿಯ ಇತ್ತೀಚಿನ ಮೂಲಸೌಕರ್ಯಗಳಾದ ಕರ್ತವ್ಯ ಪಥ, ಹೊಸ ಸಂಸತ್ತು ಕಟ್ಟಡ, ಹೊಸ ರಕ್ಷಣಾ ಕಚೇರಿಗಳ ಸಂಕೀರ್ಣ, ಭಾರತ ಮಂಟಪ, ಯಶೋಭೂಮಿ, ಹುತಾತ್ಮರಿಗೆ ಸಮರ್ಪಿತವಾದ ರಾಷ್ಟ್ರೀಯ ಯುದ್ಧ ಸ್ಮಾರಕ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಮತ್ತು ಕರ್ತವ್ಯ ಭವನದ ನಿರ್ಮಾಣ ಮುಂತಾದದವುಗಳನ್ನು ಪಟ್ಟಿಮಾಡಿದರು. ಇವು ಕೇವಲ ಹೊಸ ಕಟ್ಟಡಗಳು ಅಥವಾ ಸಾಮಾನ್ಯ ಮೂಲಸೌಕರ್ಯಗಳಲ್ಲ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ , ಅಮೃತ ಕಾಲದಲ್ಲಿ, ಅಭಿವೃದ್ಧಿ ಹೊಂದಿದ ಭಾರತವನ್ನು ರೂಪಿಸುವ ನೀತಿಗಳನ್ನು ಈ ಕಟ್ಟಡಗಳಲ್ಲಿ ರೂಪಿಸಲಾಗುತ್ತಿದೆ ಮತ್ತು ಮುಂಬರುವ ದಶಕಗಳಲ್ಲಿ, ರಾಷ್ಟ್ರದ ದಿಕ್ಕನ್ನು ಈ ಸಂಸ್ಥೆಗಳು ನಿರ್ಧರಿಸುತ್ತವೆ ಎಂದು ಹೇಳಿದರು. ಕರ್ತವ್ಯ ಭವನದ ಉದ್ಘಾಟನೆಗಾಗಿ ಎಲ್ಲಾ ನಾಗರಿಕರನ್ನು ಅಭಿನಂದಿಸಿದ ಅವರು, ಅದರ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್ ಗಳು ಮತ್ತು ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿದರು.ಯುನೆಸ್ಕೋದ ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್‌ನಲ್ಲಿ ಗೀತಾ ಮತ್ತು ನಾಟ್ಯಶಾಸ್ತ್ರದ ಸೇರ್ಪಡೆಗೆ ಪ್ರಧಾನಮಂತ್ರಿ ಶ್ಲಾಘನೆ
April 18th, 10:43 am
ಯುನೆಸ್ಕೋದ ಮೆಮೋರಿ ಆಫ್ ದಿ ವರ್ಲ್ಡ್ ರಿಜಿಸ್ಟರ್ ಗೆ ಗೀತೆ ಮತ್ತು ನಾಟ್ಯಶಾಸ್ತ್ರದ ಸೇರ್ಪಡೆಯನ್ನು ನಮ್ಮ ಕಾಲಾತೀತ ಬುದ್ಧಿವಂತಿಕೆ ಮತ್ತು ಶ್ರೀಮಂತ ಸಂಸ್ಕೃತಿಯ ಜಾಗತಿಕ ಮನ್ನಣೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ನಮ್ಮ ಭಾಷೆ ನಮ್ಮ ಸಂಸ್ಕೃತಿಯ ವಾಹಕ: ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಪ್ರಧಾನಿ ಮೋದಿ
February 21st, 05:00 pm
ಪ್ರಧಾನಿ ಮೋದಿ ನವದೆಹಲಿಯಲ್ಲಿ 98 ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ರಾಷ್ಟ್ರವು ಛತ್ರಪತಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕದ 350 ನೇ ವಾರ್ಷಿಕೋತ್ಸವ, ಪುಣ್ಯಶ್ಲೋಕ್ ಅಹಲ್ಯಾಬಾಯಿ ಹೋಳ್ಕರ್ ಅವರ 300 ನೇ ಜನ್ಮ ವಾರ್ಷಿಕೋತ್ಸವ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರಯತ್ನಗಳಿಂದ ರಚಿಸಲಾದ ನಮ್ಮ ಸಂವಿಧಾನದ 75 ನೇ ವಾರ್ಷಿಕೋತ್ಸವವನ್ನು ವೀಕ್ಷಿಸುತ್ತಿರುವ ಮಹತ್ವದ ಸಮಯದಲ್ಲಿ ಸಮ್ಮೇಳನ ನಡೆಯುತ್ತಿದೆ ಎಂದು ಶ್ರೀ ಮೋದಿ ಎತ್ತಿ ತೋರಿಸಿದರು.98ನೇ ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
February 21st, 04:30 pm
1878ರಲ್ಲಿ ಮೊದಲ ಆವೃತ್ತಿಯಿಂದ ಇಲ್ಲಿಯವರೆಗೆ, ಅಖಿಲ ಭಾರತೀಯ ಮರಾಠಿ ಸಾಹಿತ್ಯ ಸಮ್ಮೇಳನವು 147 ವರ್ಷಗಳ ಭಾರತದ ಪ್ರಯಾಣಕ್ಕೆ ಸಾಕ್ಷಿಯಾಗಿದೆ ಎಂದು ಶ್ರೀ ಮೋದಿ ಹೇಳಿದರು. ಶ್ರೀ ಮಹಾದೇವ್ ಗೋವಿಂದ ರಾನಡೆ, ಶ್ರೀ ಹರಿ ನಾರಾಯಣ್ ಆಪ್ಟೆ, ಶ್ರೀ ಮಾಧವ ಶ್ರೀಹರಿ ಆನೆ, ಶ್ರೀ ಶಿವರಾಮ ಪರಾಂಜಪೆ, ಶ್ರೀ ವೀರ ಸಾವರ್ಕರ್ ಅವರಂತಹ ಅನೇಕ ದಿಗ್ಗಜರು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು ಎಂದು ಅವರು ಹೇಳಿದರು. ಈ ಹೆಮ್ಮೆಯ ಸಂಪ್ರದಾಯದ ಭಾಗವಾಗಲು ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಶ್ರೀ ಶರದ್ ಪವಾರ್ ಅವರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ಈ ಕಾರ್ಯಕ್ರಮಕ್ಕಾಗಿ ದೇಶದ ಮತ್ತು ಪ್ರಪಂಚದಾದ್ಯಂತದ ಎಲ್ಲಾ ಮರಾಠಿ ಪ್ರೇಮಿಗಳನ್ನು ಅಭಿನಂದಿಸಿದರು.ತಮಿಳು ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ
December 11th, 02:00 pm
ಕೇಂದ್ರ ಸಚಿವರಾದ, ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜಿ, ರಾವ್ ಇಂದರ್‌ಜಿತ್ ಸಿಂಗ್ ಮತ್ತು ಎಲ್. ಮುರುಗನ್ ಜಿ, ಈ ಕಾರ್ಯಕ್ರಮದ ಕೇಂದ್ರ ವ್ಯಕ್ತಿ, ಸಾಹಿತ್ಯ ವಿದ್ವಾಂಸ ಶ್ರೀ ಸೀನಿ ವಿಶ್ವನಾಥನ್ ಜಿ, ಪ್ರಕಾಶಕ ವಿ. ಶ್ರೀನಿವಾಸನ್ ಜಿ, ಮತ್ತು ಉಪಸ್ಥಿತರಿರುವ ಎಲ್ಲ ಗೌರವಾನ್ವಿತ ಗಣ್ಯರೇ... ಮಹಿಳೆಯರೇ ಮತ್ತು ಮಹನೀಯರೇ,ತಮಿಳು ಶ್ರೇಷ್ಠ ಕವಿ ಸುಬ್ರಮಣ್ಯ ಭಾರತಿ ಅವರ ಸಂಪೂರ್ಣ ಕೃತಿಗಳ ಸಂಕಲನ ಬಿಡುಗಡೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 11th, 01:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗದ ನಂಬರ್ 7 ನಿವಾಸದಲ್ಲಿ ತಮಿಳು ಮಹಾನ್ ಕವಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಸುಬ್ರಮಣ್ಯ ಭಾರತಿ ಅವರ ಸಮಗ್ರ ಕೃತಿಗಳ ಸಂಕಲನ ಬಿಡುಗಡೆ ಮಾಡಿದರು. ತಮಿಳಿನ ಮಹಾನ್ ಕವಿ ಸುಬ್ರಮಣ್ಯ ಭಾರತಿ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ ಅವರು, ಭಾರತದ ಸಂಸ್ಕೃತಿ ಮತ್ತು ಸಾಹಿತ್ಯ, ಭಾರತದ ಸ್ವಾತಂತ್ರ್ಯ ಹೋರಾಟದ ನೆನಪುಗಳು ಮತ್ತು ತಮಿಳುನಾಡಿನ ಹೆಮ್ಮೆಗೆ ಇಂದು ಉತ್ತಮ ಅವಕಾಶವಾಗಿದೆ. ಮಹಾಕವಿ ಸುಬ್ರಹ್ಮಣ್ಯ ಭಾರತಿ ಅವರ ಕೃತಿಗಳ ಪ್ರಕಟಣೆಯ ಮಹಾಪೂರವೇ ಇಂದು ನೆರವೇರಿತು ಎಂದರು.ಗೀತಾ ಜಯಂತಿಗೆ ಶುಭ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 11th, 10:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೀತಾ ಜಯಂತಿ ಅಂಗವಾಗಿ ಇಂದು ದೇಶದ ಜನತೆಗೆ ಶುಭ ಕೋರಿದ್ದಾರೆ.ಪ್ರಧಾನಮಂತ್ರಿಯವರಿಂದ ಜೋನಾಸ್ ಮಾಸೆಟ್ಟಿ ಮತ್ತು ಅವರ ತಂಡದ ಭೇಟಿ; ವೇದಾಂತ ಮತ್ತು ಗೀತೆಯ ಮೇಲಿನ ಅವರ ಒಲವಿಗೆ ಮೆಚ್ಚುಗೆ
November 20th, 07:54 am
ಜೋನಾಸ್ ಮಾಸೆಟ್ಟಿ ಅವರು ವೇದಾಂತ ಮತ್ತು ಗೀತೆಯ ಬಗ್ಗೆ ಹೊಂದಿರುವ ಅಪಾರ ಆಸಕ್ತಿಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತೀಯ ಸಂಸ್ಕೃತಿಯು ಪ್ರಪಂಚದಾದ್ಯಂತ ಹೇಗೆ ಪ್ರಭಾವ ಬೀರುತ್ತಿದೆ ಎಂಬುದು ಶ್ಲಾಘನೀಯ ಎಂದು ಹೇಳಿದ್ದಾರೆ. ಸಂಸ್ಕೃತದಲ್ಲಿ ರಾಮಾಯಣದ ಪ್ರದರ್ಶನವನ್ನು ವೀಕ್ಷಿಸಿದ ನಂತರ ಜೋನಾಸ್ ಮಾಸೆಟ್ಟಿ ಮತ್ತು ತಂಡವನ್ನು ಪ್ರಧಾನಮಂತ್ರಿಯವರು ಭೇಟಿಯಾದರು.ಮುಂಬೈನಲ್ಲಿ ನಡೆದ ಅಭಿಜತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
October 05th, 07:05 pm
ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಜೀ, ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜೀ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜೀ ಮತ್ತು ಅಜಿತ್ ಪವಾರ್ ಜೀ, ಕೇಂದ್ರ ಸರ್ಕಾರದ ನನ್ನ ಎಲ್ಲಾ ಸಹೋದ್ಯೋಗಿಗಳು, ತಮ್ಮ ಗಾಯನದಿಂದ ಅನೇಕ ತಲೆಮಾರುಗಳ ಮೇಲೆ ಛಾಪು ಮೂಡಿಸಿರುವ ಆಶಾ ತಾಯಿ ಜೀ, ಪ್ರಸಿದ್ಧ ನಟರಾದ ಭಾಯಿ ಸಚಿನ್ ಜೀ, ನಾಮದೇವ್ ಕಾಂಬ್ಳೆ ಜೀ ಮತ್ತು ಸದಾನಂದ ಮೋರೆ ಜೀ, ಮಹಾರಾಷ್ಟ್ರ ಸರ್ಕಾರದ ಸಚಿವರಾದ ಭಾಯಿ ದೀಪಕ್ ಜೀ ಮತ್ತು ಮಂಗಲ್ ಪ್ರಭಾತ್ ಲೋಧಾ ಜೀ, ಬಿಜೆಪಿಯ ಮುಂಬೈ ಅಧ್ಯಕ್ಷ ಭಾಯ್ ಆಶಿಶ್ ಜೀ, ಇತರ ಗಣ್ಯರು, ಸಹೋದರ ಸಹೋದರಿಯರೇ!ಮಹಾರಾಷ್ಟ್ರದ ಮುಂಬೈಯಲ್ಲಿ ನಡೆದ ಅಭಿಜಿತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
October 05th, 07:00 pm
ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮರಾಠಿ ಭಾಷೆಗೆ ಕೇಂದ್ರ ಸರ್ಕಾರವು ಅಧಿಕೃತವಾಗಿ ಶಾಸ್ತ್ರೀಯ (ಅಭಿಜಾತ) ಭಾಷೆಯ ಸ್ಥಾನಮಾನವನ್ನು ನೀಡಿದೆ ಎಂದರು. ಶ್ರೀ ಮೋದಿ ಅವರು ಈ ಕ್ಷಣದ ಮಹತ್ವವನ್ನು ಒತ್ತಿ ಹೇಳಿದರು, ಇದು ಮರಾಠಿ ಭಾಷೆಯ ಇತಿಹಾಸದಲ್ಲಿ ಸುವರ್ಣ ಮೈಲಿಗಲ್ಲು ಎಂದು ಬಣ್ಣಿಸಿದರು, ಏಕೆಂದರೆ ಮರಾಠಿ ಮಾತನಾಡುವ ಜನರ ದೀರ್ಘಕಾಲದ ಆಕಾಂಕ್ಷೆಗಳನ್ನು ಅವರು ಉಲ್ಲೇಖಿಸಿದರು ಮತ್ತು ಮಹಾರಾಷ್ಟ್ರದ ಕನಸನ್ನು ಈಡೇರಿಸಲು ಕೊಡುಗೆ ನೀಡುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಪ್ರಧಾನಮಂತ್ರಿಯವರು ಮಹಾರಾಷ್ಟ್ರದ ಜನರನ್ನು ಅಭಿನಂದಿಸಿದರು ಮತ್ತು ಈ ಐತಿಹಾಸಿಕ ಸಾಧನೆಯ ಭಾಗವಾಗಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ಇದಲ್ಲದೆ, ಬಂಗಾಳಿ, ಪಾಲಿ, ಪ್ರಾಕೃತ ಮತ್ತು ಅಸ್ಸಾಮಿ ಭಾಷೆಗಳಿಗೂ ಶಾಸ್ತ್ರೀಯ ಭಾಷೆಗಳ ಸ್ಥಾನಮಾನವನ್ನು ನೀಡಲಾಗಿದೆ ಎಂದು ಪ್ರಧಾನಿ ಘೋಷಿಸಿದರು ಮತ್ತು ಈ ಭಾಷೆಗಳಿಗೆ ಸಂಬಂಧಿಸಿದ ಜನತೆಗೆ ಅಭಿನಂದನೆ ಸಲ್ಲಿಸಿದರು.ಬಡವರ ಹಕ್ಕುಗಳನ್ನು ಲೂಟಿ ಮಾಡಿದವರು ಬಡತನ ನಿರ್ಮೂಲನೆಯ ಘೋಷಣೆ ನೀಡಿದರು: ಪಲ್ವಾಲ್‌ನಲ್ಲಿ ಪ್ರಧಾನಿ ಮೋದಿ
October 01st, 07:42 pm
ಹರಿಯಾಣದ ಪಲ್ವಾಲ್ ರ್ಯಾಲಿಯಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಇತ್ತೀಚಿನ ದಿನಗಳಲ್ಲಿ ಹರಿಯಾಣದ ವಿವಿಧ ಭಾಗಗಳಿಗೆ ಭೇಟಿ ನೀಡುವ ಅವಕಾಶಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಭರೋಸಾ ದಿಲ್ ಸೆ...ಬಿಜೆಪಿ ಫಿರ್ ಸೆ! ಎಂಬ ಒಂದು ಪ್ರತಿಧ್ವನಿಸುವ ಪಠಣದೊಂದಿಗೆ ಬಿಜೆಪಿಗೆ ಬಲವಾದ ಬೆಂಬಲದ ಅಲೆಯು ಪ್ರತಿ ಹಳ್ಳಿಯಲ್ಲೂ ಬೀಸುತ್ತಿದೆ ಎಂದು ಪ್ರಧಾನಿ ತಮ್ಮ ಅವಲೋಕನವನ್ನು ಹಂಚಿಕೊಂಡರು.ಹರಿಯಾಣದ ಪಲ್ವಾಲ್‌ನಲ್ಲಿ ಉತ್ಸಾಹಿ ಜನರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ
October 01st, 04:00 pm
ಹರಿಯಾಣದ ಪಲ್ವಾಲ್ ರ್ಯಾಲಿಯಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಇತ್ತೀಚಿನ ದಿನಗಳಲ್ಲಿ ಹರಿಯಾಣದ ವಿವಿಧ ಭಾಗಗಳಿಗೆ ಭೇಟಿ ನೀಡುವ ಅವಕಾಶಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಭರೋಸಾ ದಿಲ್ ಸೆ...ಬಿಜೆಪಿ ಫಿರ್ ಸೆ! ಎಂಬ ಒಂದು ಪ್ರತಿಧ್ವನಿಸುವ ಪಠಣದೊಂದಿಗೆ ಬಿಜೆಪಿಗೆ ಬಲವಾದ ಬೆಂಬಲದ ಅಲೆಯು ಪ್ರತಿ ಹಳ್ಳಿಯಲ್ಲೂ ಬೀಸುತ್ತಿದೆ ಎಂದು ಪ್ರಧಾನಿ ತಮ್ಮ ಅವಲೋಕನವನ್ನು ಹಂಚಿಕೊಂಡರು.