ಭಾರತ-ಜಪಾನ್ ಆರ್ಥಿಕ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

August 29th, 11:20 am

ನಿಮ್ಮಲ್ಲಿ ಅನೇಕರನ್ನು ನಾನು ವೈಯಕ್ತಿಕವಾಗಿ ಬಲ್ಲೆ. ನಾನು ಗುಜರಾತ್ನಲ್ಲಿದ್ದಾಗ ಆಗಿರಬಹುದು, ಅಥವಾ ದೆಹಲಿಗೆ ಬಂದ ನಂತರವೇ ಆಗಿರಬಹುದು, ನಿಮ್ಮಲ್ಲಿ ಅನೇಕರೊಂದಿಗೆ ನನಗೆ ನಿಕಟವಾದ ಸಂಪರ್ಕವಿದೆ. ಇಂದು ನಿಮ್ಮೆಲ್ಲರನ್ನೂ ಭೇಟಿಯಾಗುವ ಈ ಅವಕಾಶ ಸಿಕ್ಕಿದ್ದಕ್ಕೆ ನನಗೆ ನಿಜಕ್ಕೂ ಬಹಳ ಸಂತೋಷವಾಗಿದೆ.

ʻಭಾರತ-ಜಪಾನ್ ಆರ್ಥಿಕ ವೇದಿಕೆʼಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

August 29th, 11:02 am

ಈ ವೇಳೆ ಪ್ರಧಾನಮಂತ್ರಿಯವರು ತಮ್ಮ ಭಾಷಣದಲ್ಲಿ, ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಬಗ್ಗೆ, ಅದರಲ್ಲೂ ವಿಶೇಷವಾಗಿ ಹೂಡಿಕೆ, ಉತ್ಪಾದನೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗದ ಯಶಸ್ಸನ್ನು ಒತ್ತಿ ಹೇಳಿದರು. ಭಾರತದಲ್ಲಿ ತಮ್ಮ ಹೆಜ್ಜೆಗುರುತನ್ನು ಮತ್ತಷ್ಟು ಹೆಚ್ಚಿಸಲು ಜಪಾನಿನ ಕಂಪನಿಗಳನ್ನು ಆಹ್ವಾನಿಸಿದ ಅವರು, ಭಾರತದ ಬೆಳವಣಿಗೆಯ ಯಶೋಗಾಥೆಯು ಆ ಕಂಪನಿಗಳಿಗೆ ಅತ್ಯಾಕರ್ಷಕ ಅವಕಾಶಗಳನ್ನು ಒದಗಿಸುತ್ತದೆ ಎಂದರು. ಪ್ರಸ್ತುತ ಪ್ರಕ್ಷುಬ್ಧ ಜಾಗತಿಕ ಆರ್ಥಿಕ ಸನ್ನಿವೇಶದ ಹಿನ್ನೆಲೆಯಲ್ಲಿ ವಿಶ್ವಾಸಾರ್ಹ ಸ್ನೇಹಿತರ ನಡುವಿನ ಆಳವಾದ ಆರ್ಥಿಕ ಸಹಭಾಗಿತ್ವವು ಅತ್ಯಂತ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ರಾಜಕೀಯ ಸ್ಥಿರತೆ, ನೀತಿ ಮುಂಗಾಣಿಕೆ, ಸುಧಾರಣೆಗಳಿಗೆ ಬದ್ಧತೆ ಮತ್ತು ಸುಗಮ ವ್ಯಾಪಾರ ಪ್ರಯತ್ನಗಳು ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಹೊಸ ವಿಶ್ವಾಸವನ್ನು ನೀಡಿವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಜಾಗತಿಕ ಸಂಸ್ಥೆಗಳು ಇತ್ತೀಚೆಗೆ ಭಾರತದ ಕ್ರೆಡಿಟ್ ರೇಟಿಂಗ್ ಅನ್ನು ಮೇಲ್ದರ್ಜೆಗೆ ಏರಿಸಿರುವುದು ಈ ವಿಶ್ವಾಸವನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.

ಪ್ಯಾರೀಸ್‌ ನಲ್ಲಿ ಭಾರತ-ಫ್ರಾನ್ಸ್‌ ಸಿಇಒ ಫೋರಂ ಉದ್ದೇಶಿಸಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ

February 12th, 12:45 am

ಇಲ್ಲಿ ಉಪಸ್ಥಿತರಿರುವ ಭಾರತ ಮತ್ತು ಫ್ರಾನ್ಸ್‌ ನ ಕೈಗಾರಿಕಾ ನಾಯಕರೇ,

India's bio-economy has grown 8 times in the last 8 years: PM Modi

June 09th, 11:01 am

PM Modi inaugurated the Biotech Startup Expo - 2022. Speaking on the occasion, the PM said that India's bio-economy has grown 8 times in the last 8 years. “We have grown from $10 billion to $80 billion. India is not too far from reaching the league of top-10 countries in Biotech's global ecosystem”, he said.

ಬಯೋಟೆಕ್ ಸ್ಟಾರ್ಟಪ್ ಎಕ್ಸ್ ಪೋ-2022 ಉದ್ಘಾಟಿಸಿದ ಪ್ರಧಾನಮಂತ್ರಿ

June 09th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಬಯೋಟೆಕ್ ಸ್ಟಾರ್ಟ್ಅಪ್ ಎಕ್ಸ್ ಪೋ - 2022 ಅನ್ನು ಉದ್ಘಾಟಿಸಿದರು. ಅವರು ಜೈವಿಕ ತಂತ್ರಜ್ಞಾನ ಉತ್ಪನ್ನಗಳ ಇ-ಪೋರ್ಟಲ್ ಗೂ ಸಹ ಚಾಲನೆ ನೀಡಿದರು. ಈ ವೇಳೆ ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್, ಶ್ರೀ ಧರ್ಮೇಂದ್ರ ಪ್ರಧಾನ್, ಡಾ ಜಿತೇಂದ್ರ ಸಿಂಗ್, ಬಯೋಟೆಕ್ ವಲಯದ ಪಾಲುದಾರರು, ತಜ್ಞರು, ಎಸ್‌ಎಂಇಗಳು, ಹೂಡಿಕೆದಾರರು ಈ ಉಪಸ್ಥಿತರಿದ್ದರು.

ಭಾರತ್ ಬಯೋಟೆಕ್ ಮತ್ತು ಸೆರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಲಸಿಕೆಗಳಿಗೆ ಅನುಮೋದನೆ ದೊರೆತ ಹಿನ್ನೆಲೆಯಲ್ಲಿ ದೇಶಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ

January 03rd, 12:16 pm

ಸೆರಮ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಲಸಿಕೆಗಳಿಗೆ ಡಿಸಿಜಿಐ ಅನುಮೋದನೆ ದೊರೆತಿರುವುದು ಕೊರೊನಾ ವಿರುದ್ಧದ ಸ್ಫೂರ್ತಿದಾಯಕ ಹೋರಾಟವನ್ನು ಬಲಪಡಿಸುವಲ್ಲಿ ಮಹತ್ವದ ತಿರುವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ನಾಳೆ ಮೂರು ನಗರಗಳ ಲಸಿಕೆ ಉತ್ಪಾದನಾ ಸೌಲಭ್ಯಗಳಿಗೆ ಪ್ರಧಾನಿ ಭೇಟಿ

November 27th, 04:36 pm

ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನಾ ಪ್ರಕ್ರಿಯೆಯನ್ನು ವೈಯಕ್ತಿಕವಾಗಿ ಪರಿಶೀಲಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಮೂರು ನಗರಗಳಿಗೆ ಭೇಟಿ ನೀಡಲಿದ್ದಾರೆ. ಅವರು ಅಹಮದಾಬಾದ್‌ನ ಝೈಡಸ್ ಬಯೋಟೆಕ್ ಪಾರ್ಕ್, ಹೈದರಾಬಾದ್‌ನ ಭಾರತ್ ಬಯೋಟೆಕ್ ಮತ್ತು ಪುಣೆಯ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಕ್ಕೆ ಭೇಟಿ ನೀಡಲಿದ್ದಾರೆ.