ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 25th, 08:43 am
ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ವಾರ್ಷಿಕೋತ್ಸವ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಟಲ್ ಜಿಗೆ ಗೌರವ ನಮನ ಸಲ್ಲಿಸಿದ್ದಾರೆ. “ಅಟಲ್ ಜಿ ಅವರು ತಮ್ಮ ಇಡೀ ಜೀವನವನ್ನು ಉತ್ತಮ ಆಡಳಿತ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಮುಡಿಪಾಗಿಟ್ಟಿದ್ದರು’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ”ಅವರು ಕೇವಲ ನಿರರ್ಗಳ ವಾಗ್ಮಿಯಾಗಿ ಮಾತ್ರವಲ್ಲದೆ ಉತ್ಸಾಹಭರಿತ ಕವಿಯಾಗಿಯೂ ಸದಾ ಸ್ಮರಣೀಯರು. ಅವರ ವ್ಯಕ್ತಿತ್ವ, ಕೃತಿಗಳು ಮತ್ತು ನಾಯಕತ್ವವು ದೇಶದ ಸರ್ವತೋಮುಖ ಪ್ರಗತಿಗೆ ಮಾರ್ಗದರ್ಶಿ ಪಥವಾಗಿ ಕಾರ್ಯನಿರ್ವಹಿಸುತ್ತದೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.ಭಾರತ ರತ್ನ ಮಹಾಮನ ಪಂಡಿತ್ ಮದನ್ ಮೋಹನ್ ಮಾಳವೀಯ ಜಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 25th, 08:41 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತ ರತ್ನ ಮಹಾಮನ ಪಂಡಿತ್ ಮದನ್ ಮೋಹನ್ ಮಾಳವೀಯ ಜಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಅವರು ತಮ್ಮ ಜೀವನದುದ್ದಕ್ಕೂ ತಾಯ್ನಾಡಿನ ಸೇವೆಗೆ ಸಮರ್ಪಿತರಾಗಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಗುಲಾಮಗಿರಿಯ ಸರಪಳಿಗಳನ್ನು ಮುರಿಯಲು ಸಾಮಾಜಿಕ ಸುಧಾರಣೆಯ ಜೊತೆಗೆ ರಾಷ್ಟ್ರೀಯ ಪ್ರಜ್ಞೆಯನ್ನು ಜಾಗೃತಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ದೇಶದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅವರ ಅಪ್ರತಿಮ ಕೊಡುಗೆಯನ್ನು ಎಂದಿಗೂ ಮರೆಯಲಾಗುವುದಿಲ್ಲ ಎಂದು ಶ್ರೀ ಮೋದಿ ಹೇಳಿದರು.ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
December 23rd, 09:39 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಚೌಧರಿ ಚರಣ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಅವರು ಸಮಾಜದ ವಂಚಿತ ವರ್ಗಗಳ ಕಲ್ಯಾಣಕ್ಕಾಗಿ ಮತ್ತು ಕೃಷಿಯ ಪ್ರಗತಿ ಮತ್ತು ರೈತರ ಸಮೃದ್ಧಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಕೃತಜ್ಞ ರಾಷ್ಟ್ರವು ರಾಷ್ಟ್ರ ನಿರ್ಮಾಣಕ್ಕೆ ಅವರು ನೀಡಿದ ಕೊಡುಗೆಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ, ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 07:00 pm
ಮೊದಲಿಗೆ, ತಡವಾಗಿ ಬಂದಿದ್ದಕ್ಕಾಗಿ ನಾನುನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಇಂದು ಸರ್ದಾರ್ ಸಾಹೇಬ್ ಅವರ 150ನೇ ಜನ್ಮ ದಿನಾಚರಣೆ. ಏಕ್ತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಆ ಕಾರ್ಯಕ್ರಮದಿಂದಾಗಿ, ನಾನು ಇಲ್ಲಿಗೆ ತಲುಪಲು ವಿಳಂಬವಾಯಿತು. ಸಮಯಕ್ಕೆ ಸರಿಯಾಗಿ ಆಗಮಿಸಲು ಮತ್ತು ಅದಕ್ಕಾಗಿ ನಿಮ್ಮ ಕ್ಷಮೆ ಕೇಳಲು ಸಾಧ್ಯವಾಗದಿದ್ದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಆರಂಭದಲ್ಲಿ ನಾವು ಕೇಳಿದ ಮಂತ್ರಗಳ ಶಕ್ತಿ ಮತ್ತು ಚೈತನ್ಯವನ್ನು ಇನ್ನೂ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನಿಮ್ಮೊಂದಿಗೆ ಬರಲು ಅವಕಾಶ ಸಿಕ್ಕಾಗಲೆಲ್ಲಾ ಇದು ನನಗೆ ದೈವಿಕ ಮತ್ತು ಅಸಾಧಾರಣ ಅನುಭವವಾಗಿದೆ. ಇದು ಸ್ವಾಮಿ ದಯಾನಂದ ಜಿ ಅವರ ಆಶೀರ್ವಾದ, ಇದು ಅವರ ಆದರ್ಶಗಳಿಗೆ ನಮ್ಮ ಸಾಮೂಹಿಕ ಗೌರವ, ಮತ್ತು ನಿಮ್ಮೆಲ್ಲ ಚಿಂತಕರೊಂದಿಗಿನ ನನ್ನ ದಶಕಗಳ ವೈಯಕ್ತಿಕ ಬಾಂಧವ್ಯದ ಪರಿಣಾಮವಾಗಿ ನಾನು ನಿಮ್ಮೊಂದಿಗೆ ಇರಲು ಅವಕಾಶ ಪಡೆದಿದ್ದೇನೆ. ನಾನು ನಿಮ್ಮನ್ನು ಭೇಟಿಯಾದಾಗ ಮತ್ತು ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾನು ಒಂದು ಅನನ್ಯ ಶಕ್ತಿ ಮತ್ತು ಸ್ಫೂರ್ತಿಯಿಂದ ತುಂಬಿದ್ದೇನೆ. ಇದೇ ರೀತಿಯ 9 ಸಭಾಂಗಣಗಳನ್ನು ಸ್ಥಾಪಿಸಲಾಗಿದೆ ಎಂಬುದು ನನಗೆ ತಿಳಿದುಬಂದಿದೆ. ಅಲ್ಲಿ ನಮ್ಮ ಎಲ್ಲಾ ಆರ್ಯ ಸಮಾಜದ ಸದಸ್ಯರು ವೀಡಿಯೊ ಲಿಂಕ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ. ನಾನು ಅವರನ್ನು ನೋಡಲು ಸಾಧ್ಯವಾಗದಿದ್ದರೂ, ನಾನು ಇಲ್ಲಿಂದ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 09:00 am
ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಐತಿಹಾಸಿಕ ಸಂದರ್ಭ, ಏಕತಾನಗರದಲ್ಲಿ ಈ ಶುಭ ಬೆಳಗ್ಗೆ, ಈ ವಿಹಂಗಮ ನೋಟ, ಸರ್ದಾರ್ ಸಾಹೇಬರ ಪಾದಗಳ ಬಳಿ ನಮ್ಮ ಉಪಸ್ಥಿತಿಯ ಮೂಲಕ ಇಂದು ನಾವೆಲ್ಲರೂ ಒಂದು ಮಹಾನ್ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. ದೇಶಾದ್ಯಂತ ನಡೆಯುತ್ತಿರುವ ಏಕತಾ ಓಟ, ಕೋಟ್ಯಂತರ ಭಾರತೀಯರ ಉತ್ಸಾಹ, ನಾವು ಹೊಸ ಭಾರತದ ಸಂಕಲ್ಪವನ್ನು ನೇರವಾಗಿ ಅನುಭವಿಸುತ್ತಿದ್ದೇವೆ. ನಿನ್ನೆ ಸಂಜೆ ನಡೆದ ಅದ್ಭುತ ಪ್ರಸ್ತುತಿ ಸೇರಿದಂತೆ ಇತ್ತೀಚೆಗೆ ಇಲ್ಲಿ ನಡೆದ ಕಾರ್ಯಕ್ರಮಗಳು ಭೂತಕಾಲದ ಸಂಪ್ರದಾಯ, ವರ್ತಮಾನದ ಕಠಿಣ ಪರಿಶ್ರಮ, ಶೌರ್ಯ ಮತ್ತು ಭವಿಷ್ಯದ ಸಾಧನೆಗಳ ಒಂದು ನೋಟವನ್ನು ಹೊಂದಿದ್ದವು. ಸರ್ದಾರ್ ಸಾಹೇಬರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥವಾಗಿ, ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಸರ್ದಾರ್ ಸಾಹೇಬರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿವಸ್(ರಾಷ್ಟ್ರೀಯ ಏಕತಾ ದಿನ)ದಂದು ಎಲ್ಲಾ 140 ಕೋಟಿ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ.ಗುಜರಾತ್ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು
October 31st, 08:44 am
ಗುಜರಾತ್ ನ ಕೆವಾಡಿಯಾದಲ್ಲಿ ಇಂದು ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಸರ್ದಾರ್ ಪಟೇಲ್ ಅವರ 150ನೇ ಜಯಂತಿಯು ಒಂದು ಐತಿಹಾಸಿಕ ಸಂದರ್ಭವಾಗಿದೆ ಎಂದು ಅವರು ಹೇಳಿದರು. ಏಕತಾ ನಗರದ ಮುಂಜಾವು ದೈವಿಕ ಮತ್ತು ಸುಂದರ ಎಂದು ಬಣ್ಣಿಸಿದ ಶ್ರೀ ಮೋದಿ, ಸರ್ದಾರ್ ಪಟೇಲ್ ಅವರ ಪಾದಗಳ ಬಳಿ ನೆರೆದ ಜನಸಮೂಹವನ್ನು ಉಲ್ಲೇಖಿಸಿದರು ಮತ್ತು ದೇಶವು ಬಹಳ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ದೇಶಾದ್ಯಂತ ನಡೆದ ಏಕತಾ ಓಟ ಮತ್ತು ಲಕ್ಷಾಂತರ ಭಾರತೀಯರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಅವರು ಎತ್ತಿ ತೋರಿಸಿದರು, ನವ ಭಾರತಕ್ಕಾಗಿ ಸಂಕಲ್ಪವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಒತ್ತಿ ಹೇಳಿದರು. ಹಿಂದೆ ನಡೆದ ಕಾರ್ಯಕ್ರಮಗಳು ಮತ್ತು ನಿನ್ನೆ ಸಂಜೆ ನಡೆದ ಗಮನಾರ್ಹ ಪ್ರಸ್ತುತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಹಿಂದಿನ ಸಂಪ್ರದಾಯಗಳು, ಇಂದಿನ ಕಠಿಣ ಪರಿಶ್ರಮ ಮತ್ತು ಶೌರ್ಯ ಮತ್ತು ಭವಿಷ್ಯದ ಸಾಧನೆಗಳನ್ನು ಇವುಗಳು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ಸರ್ದಾರ್ ಪಟೇಲ್ ಅವರ 150 ನೇ ಜಯಂತಿಯ ಸ್ಮರಣಾರ್ಥ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ ದೇಶದ 140 ಕೋಟಿ ನಾಗರಿಕರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.NDA freed Bihar from Naxalism and Maoist terror — now you can live and vote fearlessly: PM Modi in Begusarai
October 24th, 12:09 pm
Addressing a massive public rally in Begusarai, PM Modi stated, On one side, there is the NDA, an alliance with mature leadership, and on the other, there is the 'Maha Lathbandhan'. He highlighted that nearly 90% of purchases in the country are of Swadeshi products, benefiting small businesses. The PM remarked that the NDA has freed Bihar from Naxalism and Maoist terror, and that every vote of the people of Bihar will help build a peaceful, prosperous state.We’re connecting Bihar’s heritage with employment, creating new opportunities for youth: PM Modi in Samastipur
October 24th, 12:04 pm
Ahead of the Bihar Assembly elections, PM Modi kickstarted the NDA’s campaign by addressing a grand public meeting in Samastipur, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM said, “It is only due to his blessings that people like us, who come from humble and backward families, are able to stand on this stage today.”PM Modi addresses enthusiastic crowds in Bihar’s Samastipur and Begusarai
October 24th, 12:00 pm
Ahead of the Bihar Assembly elections, PM Modi kickstarted the NDA’s campaign by addressing massive gatherings in Samastipur and Begusarai, Bihar. He said, “The trumpet of the grand festival of democracy has sounded. The entire Bihar is saying, ‘Phir Ek Baar NDA Sarkar!’” Remembering Bharat Ratna Jan Nayak Karpoori Thakur ji, the PM remarked, “It is only due to his blessings that people like us, who come from humble and backward families, are able to stand on this stage today.”ಅಸ್ಸಾಂನ ದರ್ರಾಂಗ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 14th, 11:30 am
ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ಅಸ್ಸಾಂ ಸರ್ಕಾರದ ಎಲ್ಲಾ ಸಚಿವರು, ಸಂಸತ್ ಸದಸ್ಯರು ಮತ್ತು ಶಾಸಕರು, ಇಲ್ಲಿರುವ ಸಾರ್ವಜನಿಕ ಪ್ರತಿನಿಧಿಗಳೆ, ನಿರಂತರ ಮಳೆಯ ನಡುವೆಯೂ ನಮ್ಮನ್ನು ಆಶೀರ್ವದಿಸಲು ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ – ನಿಮ್ಮೆಲ್ಲರಿಗೂ ಹೃತ್ಪೂರ್ವಕ ನಮಸ್ಕಾರ.ಅಸ್ಸಾಂನ ದರ್ರಾಂಗ್‌ನಲ್ಲಿ ಸುಮಾರು 6,500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ
September 14th, 11:00 am
ಆಪರೇಷನ್ ಸಿಂದೂರ್ ಯಶಸ್ಸಿನ ನಂತರ, ನಿನ್ನೆ ಮೊದಲ ಬಾರಿಗೆ ಅಸ್ಸಾಂಗೆ ಭೇಟಿ ನೀಡಿದ್ದಾಗಿ ಪ್ರಧಾನಮಂತ್ರಿ ಅವರು ಹೇಳಿದರು. ಕಾರ್ಯಾಚರಣೆಯ ಅದ್ಭುತ ಯಶಸ್ಸಿಗೆ ಮಾತೆ ಕಾಮಾಕ್ಯಳ ಆಶೀರ್ವಾದ ಕಾರಣ. ಆಕೆಯ ಪವಿತ್ರ ಭೂಮಿಯಲ್ಲಿ ಕಾಲಿಟ್ಟಾಗ ಆಳವಾದ ಆಧ್ಯಾತ್ಮಿಕ ತೃಪ್ತಿ ತಂದಿತು. ಅಸ್ಸಾಂನಲ್ಲಿ ಆಚರಿಸಲಾಗುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಶುಭಾಶಯಗಳನ್ನು ಸಲ್ಲಿಸಿದರು. ಕೆಂಪುಕೋಟೆಯ ಮೇಲೆ ಮಾಡಿದ ಭಾಷಣವನ್ನು ಪುನರುಚ್ಚರಿಸಿದ ಶ್ರೀ ಮೋದಿ, ಭಾರತದ ಭದ್ರತಾ ಕಾರ್ಯತಂತ್ರದಲ್ಲಿ 'ಸುದರ್ಶನ-ಚಕ್ರ'ದ ಕಲ್ಪನೆಯನ್ನು ತಾವು ಪ್ರಸ್ತುತಪಡಿಸಿದೆವು. ಮಂಗಲ್ಡೋಯ್ ತಾಣವು ಸಂಸ್ಕೃತಿ, ಐತಿಹಾಸಿಕ ಹೆಮ್ಮೆ ಮತ್ತು ಭವಿಷ್ಯದ ಭರವಸೆಯ ಸಂಗಮ ಸ್ಥಳ. ಈ ಪ್ರದೇಶವು ಅಸ್ಸಾಂನ ಗುರುತಿನ ಕೇಂದ್ರದ ಸಂಕೇತವಾಗಿದೆ. ಸ್ಫೂರ್ತಿ ಮತ್ತು ಶೌರ್ಯದಿಂದ ತುಂಬಿರುವ ಈ ಭೂಮಿಯಲ್ಲಿ, ಜನರನ್ನು ಭೇಟಿ ಮಾಡಲು ಮತ್ತು ಅವರೊಂದಿಗೆ ಮಾತುಕತೆ ನಡೆಸಲು ಅವಕಾಶ ಸಿಕ್ಕಿದ್ದು ತಮ್ಮ ಅದೃಷ್ಟ ಎಂದು ಪ್ರಧಾನಮಂತ್ರಿ ಹೇಳಿದರು.ಸೆಪ್ಟೆಂಬರ್ 13 ರಿಂದ 15 ರವರೆಗೆ ಪ್ರಧಾನಮಂತ್ರಿ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರ ಭೇಟಿ
September 12th, 02:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇದೇ ಸೆಪ್ಟಂಬರ್ 13ರಿಂದ 15ರವರೆಗೆ ಮಿಜೋರಾಂ, ಮಣಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
August 07th, 09:20 am
ನನ್ನ ಸಂಪುಟ ಸಹೋದ್ಯೋಗಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಎಂ.ಎಸ್. ಸ್ವಾಮಿನಾಥನ್ ಸಂಶೋಧನಾ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸೌಮ್ಯ ಸ್ವಾಮಿನಾಥನ್, ನೀತಿ ಆಯೋಗದ ಸದಸ್ಯ ಡಾ. ರಮೇಶ್ ಚಂದ್, ಸ್ವಾಮಿನಾಥನ್ ಕುಟುಂಬದ ಅನೇಕ ಸದಸ್ಯರು ಇಲ್ಲಿ ಉಪಸ್ಥಿತರಿರುವುದನ್ನು ನಾನು ನೋಡಿದ್ದೇನೆ - ನಾನು ಅವರಿಗೂ ನನ್ನ ಗೌರವಯುತ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಲ್ಲಿ ನೆರೆದಿರುವ ಎಲ್ಲಾ ವಿಜ್ಞಾನಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
August 07th, 09:00 am
ನಿತ್ಯಹರಿದ್ವರ್ಣ ಕ್ರಾಂತಿ, ಜೈವಿಕ ಸಂತೋಷಕ್ಕೆ ಹಾದಿ ಎಂಬ ಸಮ್ಮೇಳನದ ವಿಷಯವು ಸರ್ವರಿಗೂ ಆಹಾರವನ್ನು ಖಾತ್ರಿಪಡಿಸುವಲ್ಲಿ ಪ್ರೊ. ಸ್ವಾಮಿನಾಥನ್ ಅವರ ಜೀವಮಾನದ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಈ ಸಮ್ಮೇಳನವು ವಿಜ್ಞಾನಿಗಳು, ನೀತಿ ನಿರೂಪಕರು, ಅಭಿವೃದ್ಧಿ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರಿಗೆ 'ನಿತ್ಯಹರಿದ್ವರ್ಣ ಕ್ರಾಂತಿ'ಯ ತತ್ವಗಳನ್ನು ಮುಂದುವರಿಸುವ ಬಗ್ಗೆ ಚರ್ಚಿಸಲು ಮತ್ತು ಸಮಾಲೋಚಿಸಲು ಅವಕಾಶ ಒದಗಿಸುತ್ತದೆ. ಸಮ್ಮೇಳನದ ಪ್ರಮುಖ ವಿಷಯಗಳಲ್ಲಿ - ಜೀವವೈವಿಧ್ಯತೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ; ಆಹಾರ ಮತ್ತು ಪೌಷ್ಠಿಕಾಂಶದ ಭದ್ರತೆಗಾಗಿ ಸುಸ್ಥಿರ ಕೃಷಿ; ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವ ಮೂಲಕ ಹವಾಮಾನ ಸ್ಥಿತಿಸ್ಥಾಪಕತ್ವವನ್ನು ಬಲಪಡಿಸುವುದು; ಸುಸ್ಥಿರ ಮತ್ತು ಸಮಾನ ಜೀವನೋಪಾಯಕ್ಕಾಗಿ ಸೂಕ್ತ ತಂತ್ರಜ್ಞಾನಗಳನ್ನು ಬಳಸುವುದು; ಮತ್ತು ಅಭಿವೃದ್ಧಿಯ ಚರ್ಚೆಗಳಲ್ಲಿ ಯುವಕರು, ಮಹಿಳೆಯರು ಮತ್ತು ಸಮಾಜದ ಅಂಚಿನಲ್ಲಿರುವ ಸಮುದಾಯಗಳನ್ನು ತೊಡಗಿಸಿಕೊಳ್ಳುವುದು ಮುಂತಾದವು ಸೇರಿವೆ.ಹರಿಯಾಣದ ಹಿಸಾರ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 14th, 11:00 am
ನಾನು ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಹೇಳುತ್ತೇನೆ, ನೀವೆಲ್ಲರೂ 2 ಬಾರಿ ಹೇಳಿ, ಅಮರ್ ರಹೇ! ಅಮರ್ ರಹೇ! (ಲಾಂಗ್ ಲಿವ್! ಲಾಂಗ್ ಲಿವ್!)ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಸಾರ್ ವಿಮಾನ ನಿಲ್ದಾಣದ 410 ಕೋಟಿ ರೂಪಾಯಿ ಮೌಲ್ಯದ ಹೊಸ ಟರ್ಮಿನಲ್ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದರು
April 14th, 10:16 am
ವಿಮಾನ ಪ್ರಯಾಣವನ್ನು ಸುರಕ್ಷಿತ, ಕೈಗೆಟುಕುವ ಮತ್ತು ಎಲ್ಲರಿಗೂ ಲಭ್ಯವಾಗುವಂತೆ ಮಾಡುವ ಬದ್ಧತೆಗೆ ಅನುಗುಣವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಹಿಸಾರ್ ನಲ್ಲಿ ಮಹಾರಾಜ ಅಗ್ರಸೇನ್ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡಕ್ಕೆ 410 ಕೋಟಿ ರೂಪಾಯಿ ಮೌಲ್ಯದ ಶಂಕುಸ್ಥಾಪನೆ ನೆರವೇರಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಹರಿಯಾಣದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು, ಅವರ ಶಕ್ತಿ, ಕ್ರೀಡಾ ಮನೋಭಾವ ಮತ್ತು ಸಹೋದರತ್ವವನ್ನು ರಾಜ್ಯದ ವ್ಯಾಖ್ಯಾನಿಸುವ ಗುಣಲಕ್ಷಣಗಳಾಗಿ ಒಪ್ಪಿಕೊಂಡರು. ಈ ಬಿಡುವಿಲ್ಲದ ಸುಗ್ಗಿಯ ಋತುವಿನಲ್ಲಿ ತಮ್ಮ ಆಶೀರ್ವಾದಕ್ಕಾಗಿ ಅವರು ದೊಡ್ಡ ಸಭಿಕರಿಗೆ ಕೃತಜ್ಞತೆ ಸಲ್ಲಿಸಿದರು.ಭಾರತ ರತ್ನ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದು ಅವರಿಗೆ ಪ್ರಧಾನಮಂತ್ರಿ ಗೌರವ ನಮನ
April 14th, 09:16 am
ಭಾರತ ರತ್ನ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗೌರವ ನಮನ ಸಲ್ಲಿಸಿದರು. ಬಾಬಾಸಾಹೇಬ್ ಅವರ ತತ್ವಗಳು ಮತ್ತು ಆದರ್ಶಗಳು ಸ್ವಾವಲಂಬಿ ಮತ್ತು ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ದೃಢತೆ ಮತ್ತು ವೇಗವನ್ನು ನೀಡಲಿವೆ ಎಂದು ಅವರು ಹೇಳಿದರು.ಭಾರತ ರತ್ನ ಕರ್ಪುರಿ ಠಾಕೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
January 24th, 08:51 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಿಹಾರದ ಮಾಜಿ ಮುಖ್ಯಮಂತ್ರಿಯವರಾದ, ಭಾರತ ರತ್ನ ಕರ್ಪುರಿ ಠಾಕೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಕುರಿತು ಪ್ರಧಾನಮಂತ್ರಿಯವರ ಸಂತಾಪ ಸಂದೇಶದ ಇಂಗ್ಲಿಷ್ ಅನುವಾದ
December 27th, 11:41 am
ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನವು ನಮ್ಮ ಹೃದಯವನ್ನು ಆಳವಾದ ಗಾಯ ಮಾಡಿದೆ. ಅವರ ಅಗಲಿಕೆಯಿಂದ ನಮಗೆ ಅಪಾರ ನಷ್ಟವಾಗಿದೆ. ವಿಭಜನೆಯ ಸಮಯದಲ್ಲಿ ಭಾರತಕ್ಕೆ ಬಂದ ನಂತರ ತುಂಬಾ ಕಳೆದುಕೊಂಡಿದ್ದ ಅವರು ನಂತರ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಗಮನಾರ್ಹ ಯಶಸ್ಸನ್ನು ಸಾಧಿಸಿದ್ದು ಸಾಮಾನ್ಯ ಸಾಧನೆಯಲ್ಲ. ಅವರ ಜೀವನವು ಭವಿಷ್ಯದ ಪೀಳಿಗೆಗೆ ಕಷ್ಟಗಳು ಮತ್ತು ಸವಾಲುಗಳನ್ನು ಮೀರಿ ಎತ್ತರಕ್ಕೆ ಏರುವುದು ಹೇಗೆ ಎಂಬ ಪಾಠವಾಗಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ
December 27th, 11:37 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಿಂದ ವಿಡಿಯೊ ಸಂದೇಶದ ಮೂಲಕ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಡಾ. ಮನಮೋಹನ್ ಸಿಂಗ್ ಅವರ ನಿಧನವು ರಾಷ್ಟ್ರಕ್ಕೆ ಮಹತ್ವದ ನಷ್ಟವಾಗಿದೆ ಎಂದು ಅವರು ಹೇಳಿದರು. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸನ್ನು ಸಾಧಿಸುವುದು ಸಾಮಾನ್ಯ ಸಾಧನೆಯಲ್ಲ ಮತ್ತು ಡಾ. ಮನಮೋಹನ್ ಸಿಂಗ್ ಅವರು ವಿಭಜನೆಯ ಸಮಯದಲ್ಲಿ ಭಾರತಕ್ಕೆ ಬಂದ ನಂತರ ಬಹಳಷ್ಟು ಕಳೆದುಕೊಂಡಿದ್ದರೂ ಅವರು ಸಾಧಕರಾಗಿದ್ದರು ಎಂದು ಪ್ರಧಾನಿ ಹೇಳಿದರು. ಡಾ. ಮನಮೋಹನ್ ಸಿಂಗ್ ಅವರ ಜೀವನವು ಭವಿಷ್ಯದ ಪೀಳಿಗೆಗೆ ಪ್ರತಿಕೂಲತೆಯಿಂದ ಹೇಗೆ ಮೇಲೇರಬೇಕು ಮತ್ತು ದೊಡ್ಡ ಎತ್ತರವನ್ನು ಹೇಗೆ ಸಾಧಿಸಬೇಕು ಎಂಬುದನ್ನು ಕಲಿಸುತ್ತದೆ ಎಂದು ಅವರು ಹೇಳಿದರು.