ಪ್ರಧಾನಮಂತ್ರಿ ಮೋದಿ ಅವರ ಸ್ವಾತಂತ್ರ್ಯೋತ್ಸವ ದಿನದ ಭಾಷಣ: ಸುಧಾರಣೆ, ಸ್ವಾವಲಂಬನೆ ಮತ್ತು ಪ್ರತಿಯೊಬ್ಬ ಭಾರತೀಯನ ಸಬಲೀಕರಣದ ಮುನ್ನೋಟ
August 15th, 10:23 am
79ನೇ ಸ್ವಾತಂತ್ರ್ಯ ದಿನಾಚರಣೆಯಂದು, ಪ್ರಧಾನಮಂತ್ರಿ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು, ಭಾರತದ ಸ್ವಾವಲಂಬನೆ ಮತ್ತು ಪರಿವರ್ತನೆಯ ಪ್ರಯಾಣವನ್ನು ಎತ್ತಿ ತೋರಿದರು. ಕಳೆದ ದಶಕದಲ್ಲಿ, ಭಾರತವು ಸುಧಾರಣೆ, ಕಾರ್ಯಕ್ಷಮತೆ ಮತ್ತು ಪರಿವರ್ತನೆಯನ್ನು ಕೈಗೊಂಡಿದೆ. ಆದರೆ ಈಗ ಇನ್ನೂ ಹೆಚ್ಚಿನ ಶಕ್ತಿಯೊಂದಿಗೆ ಮುಂದುವರಿಯುವ ಸಮಯ ಬಂದಿದೆ ಎಂದು ಅವರು ಹೇಳಿದರು. ಕಾನೂನುಗಳು, ನಿಬಂಧನೆಗಳು ಮತ್ತು ಪ್ರಕ್ರಿಯೆಗಳನ್ನು ಸರಳೀಕರಿಸುವ, ಉದ್ಯಮಶೀಲತೆಯನ್ನು ಉತ್ತೇಜಿಸುವ ಆಧುನಿಕ, ದಕ್ಷ ಮತ್ತು ನಾಗರಿಕ ಸ್ನೇಹಿ ಪರಿಸರ ವ್ಯವಸ್ಥೆಯನ್ನು ರಚಿಸಲು ಸರ್ಕಾರ ಬದ್ಧವಾಗಿದೆ. ಜೊತೆಗೆ, ಪ್ರತಿಯೊಬ್ಬ ಭಾರತೀಯರೂ ವಿಕಸಿತ ಭಾರತವನ್ನು ನಿರ್ಮಿಸಲು ಕೊಡುಗೆ ನೀಡಬಹುದು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.