ಮಾಲ್ಡೀವ್ಸ್‌ಗೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ: ಫಲಪ್ರದತೆಯ ಪಟ್ಟಿ
July 26th, 07:19 am
ಮಾಲ್ಡೀವ್ಸ್ ಗೆ 4,850 ಕೋಟಿ ರೂ.ಗಳ ಸಾಲ ಸೌಲಭ್ಯ (ಎಲ್‌ಒಸಿ) ವಿಸ್ತರಣೆಮಾಲ್ಡೀವ್ಸ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
July 25th, 08:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಲೆಯಲ್ಲಿರುವ ಅಧ್ಯಕ್ಷರ ಕಚೇರಿಯಲ್ಲಿ ಮಾಲ್ಡೀವ್ಸ್ ಗಣರಾಜ್ಯದ ಘನತೆವೆತ್ತ ಅಧ್ಯಕ್ಷರಾದ ಡಾ. ಮೊಹಮ್ಮದ್ ಮುಯಿಝು ಅವರನ್ನು ಭೇಟಿಯಾದರು. ಸಭೆಗೂ ಮುನ್ನ, ಅಧ್ಯಕ್ಷ ಮುಯಿಝು ಅವರು ಪ್ರಧಾನ ಮಂತ್ರಿಯವರನ್ನು ಬರಮಾಡಿಕೊಂಡು ಗಣರಾಜ್ಯ ಚೌಕದಲ್ಲಿ ಅವರಿಗೆ ಔಪಚಾರಿಕ ಸ್ವಾಗತ ನೀಡಿದರು. ಸಭೆಯು ಆತ್ಮೀಯವಾಗಿತ್ತು ಮತ್ತು ಎರಡೂ ದೇಶಗಳ ನಡುವಿನ ಆಳವಾದ ಸ್ನೇಹವನ್ನು ದೃಢೀಕರಿಸಿತು.ಪ್ರಧಾನ ಮಂತ್ರಿಯವರು ಯುಕ್ರೇನ್ ಗೆ BHISHM ಕ್ಯೂಬ್ ಗಳನ್ನು ಉಡುಗೊರೆಯಾಗಿ ನೀಡಿದರು
August 23rd, 06:33 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಯುಕ್ರೇನ್ ಸರ್ಕಾರಕ್ಕೆ ನಾಲ್ಕು BHISHM (ಸಹಯೋಗ್ ಹಿತಾ ಮತ್ತು ಮೈತ್ರಿಗಾಗಿ ಭಾರತ್ ಹೆಲ್ತ್ ಇನಿಶಿಯೇಟಿವ್) ಕ್ಯೂಬ್ ಗಳನ್ನು ಉಡುಗೊರೆಯಾಗಿ ನೀಡಿದರು. ಯುಕ್ರೇನ್ ಅಧ್ಯಕ್ಷರಾದ ಘನತೆವೆತ್ತ ಶ್ರೀ ವೊಲೊಡಿಮಿರ್ ಝೆಲೆನ್ಸ್ಕಿಯವರು ಭಾರತದ ಈ ಮಾನವೀಯ ನೆರವಿಗಾಗಿ ಪ್ರಧಾನಮಂತ್ರಿಯವರಿಗೆ ಧನ್ಯವಾದ ಅರ್ಪಿಸಿದರು. ಈ ಕ್ಯೂಬ್ ಗಳು ಗಾಯಗೊಂಡವರಿಗೆ ತ್ವರಿತ ಚಿಕಿತ್ಸೆ ನೀಡಲು ಸಹಾಯ ಮಾಡಿ, ಅಮೂಲ್ಯ ಜೀವಗಳನ್ನು ಉಳಿಸಲು ಸಹಾಯ ಮಾಡುತ್ತದೆ.