ನವದೆಹಲಿಯಲ್ಲಿ ಜ್ಞಾನ ಭಾರತಂ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 12th, 04:54 pm

ಇಂದು ವಿಜ್ಞಾನ ಭವನವು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗಿದೆ. ಕೆಲವು ದಿನಗಳ ಹಿಂದೆ, ನಾನು ಜ್ಞಾನ ಭಾರತಂ ಮಿಷನ್ ಅನ್ನು ಘೋಷಿಸಿದೆ. ಇಂದು ಇಷ್ಟು ಕಡಿಮೆ ಸಮಯದಲ್ಲಿ ನಾವು ಜ್ಞಾನ ಭಾರತಂ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಪೋರ್ಟಲ್ ಅನ್ನು ಸಹ ಇತ್ತೀಚೆಗೆ ಪ್ರಾರಂಭಿಸಲಾಗಿದೆ. ಇದು ಸರ್ಕಾರಿ ಅಥವಾ ಶೈಕ್ಷಣಿಕ ಘಟನೆಯಲ್ಲ; ಜ್ಞಾನ ಭಾರತಂ ಆಂದೋಲನ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ. ಸಾವಿರಾರು ತಲೆಮಾರುಗಳ ಆಲೋಚನೆಗಳು ಮತ್ತು ಚಿಂತನೆಗಳು, ಭಾರತದ ಮಹಾನ್ ಸಂತರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆ, ನಮ್ಮ ಜ್ಞಾನ ಸಂಪ್ರದಾಯಗಳು, ನಮ್ಮ ವೈಜ್ಞಾನಿಕ ಪರಂಪರೆ, ನಾವು ಜ್ಞಾನ ಭಾರತಂ ಮಿಷನ್ ಮೂಲಕ ಅವುಗಳನ್ನು ಡಿಜಿಟಲೀಕರಣಗೊಳಿಸಲಿದ್ದೇವೆ. ಈ ಆಂದೋಲನಕ್ಕಾಗಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ. ಜ್ಞಾನ ಭಾರತಂನ ಇಡೀ ತಂಡಕ್ಕೆ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ನಾನು ಶುಭ ಹಾರೈಸುತ್ತೇನೆ.

ನವದೆಹಲಿಯಲ್ಲಿ ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

September 12th, 04:45 pm

ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ವಿಜ್ಞಾನ ಭವನ ಇಂದು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಕೆಲವೇ ದಿನಗಳ ಹಿಂದೆ ತಾವು ಜ್ಞಾನ ಭಾರತಂ ಮಿಷನ್ ಘೋಷಿಸಿದ್ದನ್ನು ಮತ್ತು ಇಷ್ಟು ಕಡಿಮೆ ಅವಧಿಯಲ್ಲಿ ಜ್ಞಾನ ಭಾರತಂ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿರುವುದನ್ನು ಅವರು ಒತ್ತಿ ಹೇಳಿದರು. ಈ ಮಿಷನ್‌ಗೆ ಸಂಬಂಧಿಸಿದ ಪೋರ್ಟಲ್ ಸಹ ಪ್ರಾರಂಭಿಸಲಾಗಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ಇದು ಸರ್ಕಾರಿ ಅಥವಾ ಶೈಕ್ಷಣಿಕ ಕಾರ್ಯಕ್ರಮವಲ್ಲ ಎಂದು ಹೇಳಿದ ಪ್ರಧಾನಮಂತ್ರಿ, ಜ್ಞಾನ ಭಾರತಂ ಮಿಷನ್ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ ಎಂದೂ ಹೇಳಿದರು. ಸಾವಿರಾರು ತಲೆಮಾರುಗಳ ಚಿಂತನಶೀಲ ಪರಂಪರೆಯನ್ನು ಅವರು ಉಲ್ಲೇಖಿಸಿದರು. ಭಾರತದ ಮಹಾನ್ ಋಷಿಗಳು, ಆಚಾರ್ಯರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆಯನ್ನು ಅವರು ಗುರುತಿಸಿದರು, ಭಾರತದ ಜ್ಞಾನ, ಸಂಪ್ರದಾಯಗಳು ಮತ್ತು ವೈಜ್ಞಾನಿಕ ಪರಂಪರೆಯನ್ನು ಒತ್ತಿ ಹೇಳಿದರು. ಜ್ಞಾನ ಭಾರತಂ ಮಿಷನ್ ಮೂಲಕ ಈ ಪರಂಪರೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು. ಈ ಕಾರ್ಯಾಚರಣೆಗಾಗಿ ಅವರು ಎಲ್ಲಾ ನಾಗರಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಇಡೀ ಜ್ಞಾನ ಭಾರತಂ ತಂಡ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ತಮ್ಮ ಶುಭಾಶಯಗಳನ್ನು ತಿಳಿಸಿದರು.