ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ವಾರಣಾಸಿಯಿಂದ ಚಾಲನೆ ನೀಡುವ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 08th, 08:39 am
ಉತ್ತರ ಪ್ರದೇಶದ ಉತ್ಸಾಹಭರಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ; ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮತ್ತು ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ದ ಬಲವಾದ ಅಡಿಪಾಯವನ್ನು ಹಾಕುತ್ತಿರುವ ಗಮನಾರ್ಹ ತಾಂತ್ರಿಕ ಪ್ರಗತಿಗೆ ಕಾರಣರಾದ ಶ್ರೀ ಅಶ್ವಿನಿ ವೈಷ್ಣವ್ ಜಿ; ಎರ್ನಾಕುಲಂನಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸೇರುತ್ತಿರುವ ಕೇರಳ ರಾಜ್ಯಪಾಲ ಶ್ರೀ ರಾಜೇಂದ್ರ ಅರ್ಲೇಕರ್ ಜಿ; ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳಾದ ಶ್ರೀ ಸುರೇಶ್ ಗೋಪಿ ಜಿ ಮತ್ತು ಶ್ರೀ ಜಾರ್ಜ್ ಕುರಿಯನ್ ಜಿ; ಕೇರಳದಲ್ಲಿ ಈ ಕಾರ್ಯಕ್ರಮದಲ್ಲಿ ಹಾಜರಿರುವ ಎಲ್ಲಾ ಇತರ ಸಚಿವರು ಮತ್ತು ಸಾರ್ವಜನಿಕ ಪ್ರತಿನಿಧಿಗಳು; ಫಿರೋಜ್ ಪುರದಿಂದ ಸಂಪರ್ಕ ಹೊಂದಿದ ಕೇಂದ್ರದ ನನ್ನ ಸಹೋದ್ಯೋಗಿ ಮತ್ತು ಪಂಜಾಬ್ ನಾಯಕ ಶ್ರೀ ರವನೀತ್ ಸಿಂಗ್ ಬಿಟ್ಟು ಜಿ; ಅಲ್ಲಿನ ಎಲ್ಲಾ ಸಾರ್ವಜನಿಕ ಪ್ರತಿನಿಧಿಗಳು; ಲಕ್ನೋದಿಂದ ಸಂಪರ್ಕ ಹೊಂದಿದ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಬ್ರಜೇಶ್ ಪಾಠಕ್ ಜಿ; ಇತರ ಗಣ್ಯ ಅತಿಥಿಗಳೇ; ಮತ್ತು ಕಾಶಿಯಲ್ಲಿರುವ ನನ್ನ ಕುಟುಂಬ ಸದಸ್ಯರುಗಳೇ!ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
November 08th, 08:15 am
ಭಾರತದ ಆಧುನಿಕ ರೈಲ್ವೆ ಮೂಲಸೌಕರ್ಯವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ, ಉತ್ತರ ಪ್ರದೇಶದ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ, ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಬಾಬಾ ವಿಶ್ವನಾಥನ ಪವಿತ್ರ ನಗರವಾದ ವಾರಣಾಸಿಯ ಎಲ್ಲಾ ಕುಟುಂಬಗಳಿಗೆ ತಮ್ಮ ಗೌರವಯುತ ಶುಭಾಶಯಗಳನ್ನು ಕೋರಿದರು. ದೇವ ದೀಪಾವಳಿಯ ಸಮಯದ ಅದ್ಭುತ ಆಚರಣೆಗಳ ಬಗ್ಗೆ ಅವರು ಮಾತನಾಡಿದರು ಮತ್ತು ಇಂದು ಕೂಡ ಒಂದು ಶುಭ ಸಂದರ್ಭವಾಗಿದೆ ಮತ್ತು ಈ ಅಭಿವೃದ್ಧಿಯ ಹಬ್ಬಕ್ಕೆ ಎಲ್ಲರಿಗೂ ಅವರು ಶುಭಾಶಯಗಳನ್ನು ತಿಳಿಸಿದರು.ಈ ವಾರ ಭಾರತದ ಬಗ್ಗೆ ವಿಶ್ವ
April 22nd, 12:27 pm
ರಾಜತಾಂತ್ರಿಕ ಫೋನ್ ಕರೆಗಳಿಂದ ಹಿಡಿದು ಹೊಸ ವೈಜ್ಞಾನಿಕ ಆವಿಷ್ಕಾರಗಳವರೆಗೆ, ಈ ವಾರ ಜಾಗತಿಕ ವೇದಿಕೆಯಲ್ಲಿ ಭಾರತದ ಉಪಸ್ಥಿತಿಯು ಸಹಯೋಗ, ನಾವೀನ್ಯತೆ ಮತ್ತು ಸಾಂಸ್ಕೃತಿಕ ಹೆಮ್ಮೆಯಿಂದ ಗುರುತಿಸಲ್ಪಟ್ಟಿದೆ.ಫೆಬ್ರವರಿ 22 ಮತ್ತು 23 ರಂದು ಗುಜರಾತ್ ಮತ್ತು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
February 21st, 11:41 am
ಫೆಬ್ರವರಿ 22 ರ ಬೆಳಿಗ್ಗೆ 10:45ಕ್ಕೆ ಪ್ರಧಾನಮಂತ್ರಿಯವರು ಅಹ್ಮದಾಬಾದ್ ನಲ್ಲಿ ಗುಜರಾತ್ ಸಹಕಾರ ಹಾಲು ಮಾರುಕಟ್ಟೆ ಒಕ್ಕೂಟದ (ಜಿ.ಸಿ.ಎಂ.ಎಂ.ಎಫ್). ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ನಂತರ 12:45 ಕ್ಕೆ ಪ್ರಧಾನಮಂತ್ರಿಯವರು ಮಹೆಸನಾಗೆ ತಲುಪಲಿದ್ದು, ವಲಿನಾಥ್ ಮಹದೇವ್ ದೇವಾಲಯದಲ್ಲಿ ದರ್ಶನ ಪಡೆಯಲಿದ್ದಾರೆ ಮತ್ತು ಪೂಜೆ ಸಲ್ಲಿಸಲಿದ್ದಾರೆ. 1 ಗಂಟೆ ಸುಮಾರಿಗೆ ಮಹಸೆನಾದ ತರಭ್ ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ 13,500 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಸಂಜೆ 4:15 ಕ್ಕೆ ಪ್ರಧಾನಮಂತ್ರಿಯವರು ನವಸಾರಿಗೆ ತೆರಳಲಿದ್ದು, ಅಲ್ಲಿ 47,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬಹುಹಂತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ, ಶಿಲಾನ್ಯಾಸ ನೆರವೇರಿಸುವರು ಮತ್ತು ದೇಶಕ್ಕೆ ಸಮರ್ಪಿಸುವರು. ಸಂಜೆ 6:15 ಕ್ಕೆ ಪ್ರಧಾನಮಂತ್ರಿಯವರು ಕಕ್ರಾಪರ್ ಪರಮಾಣು ವಿದ್ಯುತ್ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.