From Gangotri to Gangasagar… the lotus is blooming everywhere: PM Modi from BJP HQ

May 04th, 07:01 pm

PM Modi addressed the karyakartas at the BJP HQ following resounding victories in West Bengal, Assam and Puducherry, calling the moment historic, emotional and a powerful affirmation of trust in democracy and performance-driven governance. Dressed in traditional Bengali attire with a dhoti, the Prime Minister’s appearance reflected a deep cultural connect and symbolised the significance of Bengal’s landmark mandate.

PM Modi addresses at the BJP HQ after sweeping victories across states

May 04th, 07:00 pm

PM Modi addressed the karyakartas at the BJP HQ following resounding victories in West Bengal, Assam and Puducherry, calling the moment historic, emotional and a powerful affirmation of trust in democracy and performance-driven governance. Dressed in traditional Bengali attire with a dhoti, the Prime Minister’s appearance reflected a deep cultural connect and symbolised the significance of Bengal’s landmark mandate.

Congress has always compromised the interests of Assam: PM Modi in Biswanath

April 01st, 11:45 am

PM Modi addressed a massive public rally in Biswanath, Assam. In his speech, the PM launched a sharp attack on Congress, accusing it of being ‘anti-development’ and the ‘root of corruption in independent India.’ Highlighting the BJP-NDA government’s actions, PM Modi said thousands of bighas of land have been freed from illegal encroachment, restoring Assam’s heritage and ecology. Reaffirming BJP’s commitment to Sabka Saath, Sabka Vikas, he urged voters to ensure a record turnout.

BJP-NDA blocked Congress’ ‘unfair’ communal violence bill in Parliament: PM Modi in Gogamukh, Assam

April 01st, 11:30 am

Campaigning for the upcoming Assembly elections, Prime Minister Narendra Modi addressed a massive public gathering in Gogamukh, marking his first rally in Assam after the announcement of polls. The event witnessed an overwhelming turnout, with enthusiastic participation from youth, women and local communities, signaling strong momentum for the BJP-led NDA.

PM Modi sets the tone for Assam polls with high-energy rallies in Gogamukh and Biswanath

April 01st, 11:00 am

Campaigning for the upcoming Assembly elections, Prime Minister Narendra Modi addressed massive public gatherings in Gogamukh and Biswanath, marking his first rallies in Assam after the announcement of polls. The events witnessed an overwhelming turnout, with enthusiastic participation from youth, women and local communities, signaling strong momentum for the BJP-led NDA.

ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಅವರ ಉತ್ತರ

February 05th, 05:35 pm

ವಂದನಾ ನಿರ್ಣಯಕ್ಕೆ ಬೆಂಬಲವಾಗಿ ಈ ಸದನದ ಮುಂದೆ ನನ್ನ ಭಾವನೆಗಳನ್ನು ಮಂಡಿಸುವುದು ನನ್ನ ಸೌಭಾಗ್ಯವೇ ಸರಿ.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ

February 05th, 05:00 pm

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುತ್ತಾ, ವಂದನಾ ನಿರ್ಣಯವನ್ನು ಬೆಂಬಲಿಸಿ ತಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಳೆದ ವರ್ಷದಲ್ಲಿ ಅಭಿವೃದ್ಧಿ ಹೊಂದಿದ ಭಾರತದತ್ತ ಸಾಗುವ ಪ್ರಯಾಣದಲ್ಲಿ ತ್ವರಿತ ಪ್ರಗತಿಯಾಗಿದ್ದು, ಪ್ರತಿಯೊಂದು ವಲಯದಲ್ಲಿ ಮತ್ತು ಸಮಾಜದ ಎಲ್ಲಾ ವರ್ಗಗಳಲ್ಲಿ ಪರಿವರ್ತನೆ ಗೋಚರಿಸುತ್ತಿದೆ, ರಾಷ್ಟ್ರವು ಸರಿಯಾದ ದಿಕ್ಕಿನಲ್ಲಿ ಹೆಚ್ಚಿನ ವೇಗದಲ್ಲಿ ಮುಂದುವರಿಯುತ್ತಿದೆ ಎಂದು ಹೇಳಿದರು. ರಾಷ್ಟ್ರಪತಿಗಳು ಈ ವಿಷಯಗಳನ್ನು ಸೂಕ್ಷ್ಮತೆ ಮತ್ತು ಸ್ಪಷ್ಟತೆಯೊಂದಿಗೆ ಪ್ರಸ್ತುತಪಡಿಸಿದ್ದಾರೆ ಎಂಬುದನ್ನೂ ಶ್ರೀ ಮೋದಿ ಉಲ್ಲೇಖಿಸಿದರು.

ಅಸ್ಸಾಂನಲ್ಲಿ ಕಾಜಿರಂಗಾ ಎಲಿವೇಟೆಡ್ ಕಾರಿಡಾರ್ ಯೋಜನೆಯ ಭೂಮಿ ಪೂಜೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 18th, 11:30 am

ಇಂದು, ನನಗೆ ಮತ್ತೆ ಕಾಜಿರಂಗಕ್ಕೆ ಬರುವ ಸೌಭಾಗ್ಯ ಸಿಕ್ಕಿದೆ. ನನ್ನ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುವುದು ಸ್ವಾಭಾವಿಕವಾಗಿದೆ. ಎರಡು ವರ್ಷಗಳ ಹಿಂದೆ ಕಾಜಿರಂಗದಲ್ಲಿ ಕಳೆದ ಕ್ಷಣಗಳು ನನ್ನ ಜೀವನದ ವಿಶೇಷ ಅನುಭವಗಳಲ್ಲಿ ಒಂದಾಗಿದೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ತಂಗುವ ಅವಕಾಶ ನನಗೆ ಸಿಕ್ಕಿತು ಮತ್ತು ಮರುದಿನ ಬೆಳಿಗ್ಗೆ ಆನೆ ಸಫಾರಿ ಸಮಯದಲ್ಲಿ, ನಾನು ಈ ಪ್ರದೇಶದ ಸೌಂದರ್ಯವನ್ನು ಬಹಳ ಹತ್ತಿರದಿಂದ ಅನುಭವಿಸಿದೆ.

ಅಸ್ಸಾಂನ ಕಲಿಯಾಬೋರ್‌ನಲ್ಲಿ ₹6,950 ಕೋಟಿಗೂ ಅಧಿಕ ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಭೂಮಿ ಪೂಜೆ

January 18th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಕಲಿಯಾಬೋರ್‌ ನಲ್ಲಿ ₹6,950 ಕೋಟಿಗೂ ಅಧಿಕ ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್ ಯೋಜನೆಗೆ (NH-715 ರ ಕಲಿಯಾಬೋರ್-ನುಮಾಲಿಗಢ ವಿಭಾಗದ 4-ಲೇನ್ ರಸ್ತೆ) ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಬಂದು ತಮ್ಮನ್ನು ಆಶೀರ್ವದಿಸಿದ ಜನತೆಗೆ ಕೃತಜ್ಞತೆ ಸಲ್ಲಿಸಿದರು. ಕಾಜಿರಂಗಕ್ಕೆ ಮತ್ತೊಮ್ಮೆ ಭೇಟಿ ನೀಡಿದ್ದರಿಂದ ತಮ್ಮ ಹಳೆಯ ನೆನಪುಗಳು ಮರುಕಳಿಸಿವೆ ಎಂದು ಸ್ಮರಿಸಿದ ಅವರು, ಎರಡು ವರ್ಷಗಳ ಹಿಂದೆ ಕಾಜಿರಂಗದಲ್ಲಿ ಕಳೆದ ಕ್ಷಣಗಳು ತಮ್ಮ ಜೀವನದ ಅತ್ಯಂತ ವಿಶೇಷ ಅನುಭವಗಳಲ್ಲಿ ಒಂದಾಗಿವೆ ಎಂದು ಹೇಳಿದರು. ಪ್ರಧಾನಮಂತ್ರಿ ಶ್ರೀ ಮೋದಿಯವರು ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಕಳೆಯುವ ಅವಕಾಶ ಸಿಕ್ಕಿದ್ದನ್ನು ಮತ್ತು ಮರುದಿನ ಬೆಳಿಗ್ಗೆ ಆನೆ ಸವಾರಿಯ ಮೂಲಕ ಈ ಪ್ರದೇಶದ ಸೌಂದರ್ಯವನ್ನು ಹತ್ತಿರದಿಂದ ಅನುಭವಿಸಿದ್ದನ್ನು ವಿಶೇಷವಾಗಿ ಉಲ್ಲೇಖಿಸಿದರು

ಗುವಾಹತಿಯಲ್ಲಿ “ಬಾಗುರೂಂಬಾ ದೊಹೊ” ಸಾಂಪ್ರದಾಯಿಕ ಬೋಡೊ ಸಾಂಸ್ಕೃತಿಕ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 17th, 06:30 pm

ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರೇ, ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರೇ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಸರ್ಬಾನಂದ ಸೋನೋವಾಲ್ ಅವರೇ, ಪಬಿತ್ರ ಮಾರ್ಗರಿಟಾ ಅವರೇ, ಅಸ್ಸಾಂ ವಿಧಾನಸಭೆ ಸ್ಪೀಕರ್ ಶ್ರೀ ಬಿಸ್ವಾಜಿತ್ ಡೈಮರಿ ಅವರೇ, ಬೋಡೊಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಅವರೇ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಗೌರವಾನ್ವಿತ ನಾಗರಿಕ ಸಹೋದರ ಸಹೋದರಿಯರೆ ಮತ್ತು ಅಸ್ಸಾಂನ ನನ್ನ ಸಹೋದರ ಸಹೋದರಿಯರೆ,

ಅಸ್ಸಾಂನ ಗುವಾಹಟಿಯಲ್ಲಿ ನಡೆದ "ಬಾಗುರೂಂಬಾ ದೊಹೊ," ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು

January 17th, 06:00 pm

ಗುವಾಹಟಿಯ ಸರುಸಜೈ ಕ್ರೀಡಾಂಗಣದಲ್ಲಿ ಬೋಡೋ ಸಮುದಾಯದ ಶ್ರೀಮಂತ ಪರಂಪರೆಯನ್ನು ಆಚರಿಸುವ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ ಬಾಗುರೂಂಬಾ ದೊಹೊ 2026 ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಸ್ಸಾಂನ ಸಂಸ್ಕೃತಿಯನ್ನು ವೀಕ್ಷಿಸುವುದು ಮತ್ತು ಬೋಡೋ ಸಮುದಾಯದ ಸಂಪ್ರದಾಯಗಳನ್ನು ಸೂಕ್ಷ್ಮವಾಗಿ ಗಮನಿಸುವುದು ತಮ್ಮ ಸೌಭಾಗ್ಯ ಎಂದು ಹೇಳಿದರು. ಈ ಹಿಂದಿನ ಯಾವುದೇ ಪ್ರಧಾನಮಂತ್ರಿಗಳು, ಅಸ್ಸಾಂಗೆ ತಾವು ಭೇಟಿ ನೀಡಿದಷ್ಟು ಬಾರಿ ಭೇಟಿ ನೀಡಲಿಲ್ಲ ಎಂದು ಹೇಳಿದ ಶ್ರೀ ಮೋದಿ ಅವರು, ಅಸ್ಸಾಂನ ಕಲೆ ಮತ್ತು ಸಂಸ್ಕೃತಿ ದೊಡ್ಡ ವೇದಿಕೆಯನ್ನು ಪಡೆಯಬೇಕು ಮತ್ತು ಭವ್ಯ ಆಚರಣೆಗಳ ಮೂಲಕ ರಾಷ್ಟ್ರ ಮತ್ತು ಪ್ರಪಂಚದಾದ್ಯಂತ ಮನ್ನಣೆ ಪಡೆಯಬೇಕು ಎಂಬ ತಮ್ಮ ನಿರಂತರ ಆಶಯವನ್ನು ಒತ್ತಿ ಹೇಳಿದರು. ದೊಡ್ಡ ಪ್ರಮಾಣದ ಬಿಹು ಉತ್ಸವಗಳು, ಜುಮೋಯಿರ್ ಬಿನೋಂದಿನಿಯ ಅಭಿವ್ಯಕ್ತಿ, ಒಂದೂವರೆ ವರ್ಷಗಳ ಹಿಂದೆ ನವದೆಹಲಿಯಲ್ಲಿ ನಡೆದ ಭವ್ಯ ಬೋಡೋ ಮಹೋತ್ಸವ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಈ ದಿಕ್ಕಿನಲ್ಲಿ ನಿರಂತರ ಪ್ರಯತ್ನಗಳು ನಡೆದಿವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಅಸ್ಸಾಂನ ಕಲೆ ಮತ್ತು ಸಂಸ್ಕೃತಿಯ ವಿಶಿಷ್ಟತೆ , ವೈವಿಧ್ಯತೆಗಳ ಆನಂದವನ್ನು ಅನುಭವಿಸುವ ಅವಕಾಶವನ್ನು ತಾವು ಎಂದಿಗೂ ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಮತ್ತೊಮ್ಮೆ, ಬಾಗುರುಂಬಾ ಉತ್ಸವವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು, ಇದು ಅನನ್ಯ ಬೋಡೋ ಗುರುತಿನ ವೈವಿಧ್ಯಮಯ ಆಚರಣೆ ಮತ್ತು ಅಸ್ಸಾಂನ ಪರಂಪರೆಗೆ ಗೌರವ ತುಂಬುತ್ತದೆ ಎಂದು ಅವರು ಬಣ್ಣಿಸಿದರು. ಈ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ, ವಿಶೇಷವಾಗಿ ಕಲಾವಿದರಿಗೆ ಶ್ರೀ ಮೋದಿ ಅವರು ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ವ್ಯಕ್ತಪಡಿಸಿದರು.

ಅಸ್ಸಾಂನ ನಮ್ರಪ್‌ನಲ್ಲಿ ಯೂರಿಯಾ ಉತ್ಪಾದನಾ ಸ್ಥಾವರದ ಭೂಮಿಪೂಜೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 21st, 04:25 pm

ಸೌಲುಂಗ್ ಸುಕಫಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ವೀರರ ಈ ಭೂಮಿ, ಭಿಂಬರ್ ದೇವೂರಿ, ಹುತಾತ್ಮ ಕುಸಲ್ ಕುವರ್, ಮೋರನ್ ರಾಜಾ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಯೋಧ ಮಹಿಳೆ ಸತಿ ಸಾಧ್ನಿ ಅವರ ಈ ತಪೋಭೂಮಿ, ಉಜಾನಿ ಅಸ್ಸಾಂನ ಈ ಪುಣ್ಯ ಭೂಮಿಗೆ ನಾನು ಭಕ್ತಿಯಿಂದ ನಮಸ್ಕರಿಸುತ್ತೇನೆ.

ಅಸ್ಸಾಂನ ನಮ್ರೂಪ್‌ನಲ್ಲಿ ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 21st, 12:00 pm

ಅಸ್ಸಾಂನ ದಿಬ್ರುಗಢದ ನಮ್ರೂಪ್‌ನಲ್ಲಿ ಇಂದು ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚೌಲುಂಗ್ ಸುಖಪಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ಮಹಾನ್ ವೀರರ ಭೂಮಿ ಎಂದು ಹೇಳಿದರು. ಭಿಂಬರ್ ದೇವೂರಿ, ಶಹೀದ್ ಕುಶಾಲ್ ಕುನ್ವರ್, ಮೋರನ್ ರಾಜ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಧೀರ ಸತಿ ಸಾಧನಿ ಅವರ ಕೊಡುಗೆಗಳನ್ನು ಅವರು ಎತ್ತಿ ತೋರಿಸಿದರು. ಶೌರ್ಯ ಮತ್ತು ತ್ಯಾಗದ ಈ ಮಹಾನ್ ಭೂಮಿಯಾದ ಉಜಾನಿ ಅಸ್ಸಾಂನ ಪವಿತ್ರ ಮಣ್ಣಿಗೆ ನಾನು ಶಿರಬಾಗಿ ನಮಸ್ಕರಿಸುತ್ತೇನೆ ಎಂದು ಪ್ರಧಾನಮಂತ್ರಿ ಹೇಳಿದರು.

ಅಸ್ಸಾಂನ ಗುವಾಹತಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 20th, 03:20 pm

ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳೆ, ನಮ್ಮ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಜಿ, ರಾಮ್ ಮೋಹನ್ ನಾಯ್ಡು ಜಿ, ಮುರಳೀಧರ್ ಮೊಹೋಲ್ ಜಿ, ಪಬಿತ್ರ ಮಾರ್ಗರಿಟಾ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಇತರ ಗಣ್ಯರೆ, ಸಹೋದರ ಸಹೋದರಿಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿರುವ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು

December 20th, 03:10 pm

ಅಸ್ಸಾಂನ ಸಂಪರ್ಕ, ಆರ್ಥಿಕ ವಿಸ್ತರಣೆ ಮತ್ತು ಜಾಗತಿಕ ತೊಡಗಿಸಿಕೊಳ್ಳುವಿಕೆಯಲ್ಲಿ ಪರಿವರ್ತನಾತ್ಮಕ ಹೆಜ್ಜೆ ಗುರುತನ್ನು ಮೂಡಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದಿನ ದಿನ ಅಸ್ಸಾಂ ಮತ್ತು ಈಶಾನ್ಯದ ಅಭಿವೃದ್ಧಿ ಹಾಗು ಪ್ರಗತಿಯ ಹಬ್ಬವಾಗಿದೆ ಎಂದು ಹೇಳಿದರು. ಪ್ರಗತಿಯ ಬೆಳಕು ಜನರನ್ನು ತಲುಪಿದಾಗ, ಜೀವನದ ಪ್ರತಿಯೊಂದು ಹಾದಿಯೂ ಹೊಸ ಎತ್ತರವನ್ನು ಮುಟ್ಟಲು ಪ್ರಾರಂಭಿಸುತ್ತದೆ ಎಂದು ಅವರು ತಿಳಿಸಿದರು. ಅಸ್ಸಾಂ ನೆಲದೊಂದಿಗಿನ ತಮ್ಮ ಆಳವಾದ ಬಾಂಧವ್ಯ, ಅದರ ಜನರ ಪ್ರೀತಿ ಮತ್ತು ವಾತ್ಸಲ್ಯ, ಮತ್ತು ವಿಶೇಷವಾಗಿ ಅಸ್ಸಾಂ ಮತ್ತು ಈಶಾನ್ಯದ ತಾಯಂದಿರು ಮತ್ತು ಸಹೋದರಿಯರ ಹೃದಯಸ್ಪರ್ಶಿ ಭಾವನೆ ಮತ್ತು ಆತ್ಮೀಯತೆ ನಿರಂತರವಾಗಿ ತಮ್ಮನ್ನು ಪ್ರೇರೇಪಿಸುತ್ತದೆ ಮತ್ತು ಪ್ರದೇಶದ ಅಭಿವೃದ್ಧಿಗಾಗಿ ಸಾಮೂಹಿಕ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಇಂದು ಮತ್ತೊಮ್ಮೆ ಅಸ್ಸಾಂನ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯವನ್ನು ಸೇರಿಸಲಾಗುತ್ತಿದೆ ಎಂದು ಅವರು ತಿಳಿಸಿದರು ದರು. ಭಾರತ ರತ್ನ ಭೂಪೇನ್ ಹಜಾರಿಕಾ ಅವರ ಸಾಲುಗಳನ್ನು ಉಲ್ಲೇಖಿಸಿದ, ಶ್ರೀ ಮೋದಿ ಅವರು ಇದರರ್ಥ ಪ್ರಬಲ ಬ್ರಹ್ಮಪುತ್ರ ನದಿಯ ದಡಗಳು ಬೆಳಗುತ್ತವೆ, ಕತ್ತಲೆಯ ಪ್ರತಿಯೊಂದು ಗೋಡೆ ಮುರಿಯುತ್ತದೆ ಮತ್ತು ಖಂಡಿತವಾಗಿಯೂ ಇದು ಸಂಭವಿಸುತ್ತದೆ ಯಾಕೆಂದರೆ ಇದು ರಾಷ್ಟ್ರದ ದೃಢ ನಿರ್ಧಾರವಾಗಿದೆ ಮತ್ತು ಕೈಗೊಂಡ ಪ್ರತಿಜ್ಞೆಯಾಗಿದೆ.

ಸ್ವದೇಶಿ ಉತ್ಪನ್ನಗಳು, ವೋಕಲ್ ಫಾರ್ ಲೋಕಲ್ : ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿಯವರ ಹಬ್ಬದ ಕರೆ.

September 28th, 11:00 am

ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಭಗತ್ ಸಿಂಗ್ ಮತ್ತು ಲತಾ ಮಂಗೇಶ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ಸಲ್ಲಿಸಿದರು. ಭಾರತೀಯ ಸಂಸ್ಕೃತಿ, ಮಹಿಳಾ ಸಬಲೀಕರಣ, ದೇಶಾದ್ಯಂತ ಆಚರಿಸಲಾಗುವ ವಿವಿಧ ಹಬ್ಬಗಳು, ಆರ್‌ಎಸ್‌ಎಸ್‌ನ 100 ವರ್ಷಗಳ ಪಯಣ, ಸ್ವಚ್ಛತೆ ಮತ್ತು ಖಾದಿ ಮಾರಾಟದಲ್ಲಿನ ಏರಿಕೆಯಂತಹ ಪ್ರಮುಖ ವಿಷಯಗಳ ಬಗ್ಗೆಯೂ ಅವರು ಮಾತನಾಡಿದರು. ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡುವ ಮಾರ್ಗವು ಸ್ವದೇಶಿತ್ವವನ್ನು ಅಳವಡಿಸಿಕೊಳ್ಳುವುದರಲ್ಲಿದೆ ಎಂದು ಪ್ರಧಾನಿ ಪುನರುಚ್ಚರಿಸಿದರು.

ಅಸ್ಸಾಂನ ದರ್ರಾಂಗ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 14th, 11:30 am

ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ಅಸ್ಸಾಂ ಸರ್ಕಾರದ ಎಲ್ಲಾ ಸಚಿವರು, ಸಂಸತ್ ಸದಸ್ಯರು ಮತ್ತು ಶಾಸಕರು, ಇಲ್ಲಿರುವ ಸಾರ್ವಜನಿಕ ಪ್ರತಿನಿಧಿಗಳೆ, ನಿರಂತರ ಮಳೆಯ ನಡುವೆಯೂ ನಮ್ಮನ್ನು ಆಶೀರ್ವದಿಸಲು ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ – ನಿಮ್ಮೆಲ್ಲರಿಗೂ ಹೃತ್ಪೂರ್ವಕ ನಮಸ್ಕಾರ.

ಅಸ್ಸಾಂನ ದರ್ರಾಂಗ್‌ನಲ್ಲಿ ಸುಮಾರು 6,500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ

September 14th, 11:00 am

ಆಪರೇಷನ್ ಸಿಂದೂರ್ ಯಶಸ್ಸಿನ ನಂತರ, ನಿನ್ನೆ ಮೊದಲ ಬಾರಿಗೆ ಅಸ್ಸಾಂಗೆ ಭೇಟಿ ನೀಡಿದ್ದಾಗಿ ಪ್ರಧಾನಮಂತ್ರಿ ಅವರು ಹೇಳಿದರು. ಕಾರ್ಯಾಚರಣೆಯ ಅದ್ಭುತ ಯಶಸ್ಸಿಗೆ ಮಾತೆ ಕಾಮಾಕ್ಯಳ ಆಶೀರ್ವಾದ ಕಾರಣ. ಆಕೆಯ ಪವಿತ್ರ ಭೂಮಿಯಲ್ಲಿ ಕಾಲಿಟ್ಟಾಗ ಆಳವಾದ ಆಧ್ಯಾತ್ಮಿಕ ತೃಪ್ತಿ ತಂದಿತು. ಅಸ್ಸಾಂನಲ್ಲಿ ಆಚರಿಸಲಾಗುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಶುಭಾಶಯಗಳನ್ನು ಸಲ್ಲಿಸಿದರು. ಕೆಂಪುಕೋಟೆಯ ಮೇಲೆ ಮಾಡಿದ ಭಾಷಣವನ್ನು ಪುನರುಚ್ಚರಿಸಿದ ಶ್ರೀ ಮೋದಿ, ಭಾರತದ ಭದ್ರತಾ ಕಾರ್ಯತಂತ್ರದಲ್ಲಿ 'ಸುದರ್ಶನ-ಚಕ್ರ'ದ ಕಲ್ಪನೆಯನ್ನು ತಾವು ಪ್ರಸ್ತುತಪಡಿಸಿದೆವು. ಮಂಗಲ್ಡೋಯ್ ತಾಣವು ಸಂಸ್ಕೃತಿ, ಐತಿಹಾಸಿಕ ಹೆಮ್ಮೆ ಮತ್ತು ಭವಿಷ್ಯದ ಭರವಸೆಯ ಸಂಗಮ ಸ್ಥಳ. ಈ ಪ್ರದೇಶವು ಅಸ್ಸಾಂನ ಗುರುತಿನ ಕೇಂದ್ರದ ಸಂಕೇತವಾಗಿದೆ. ಸ್ಫೂರ್ತಿ ಮತ್ತು ಶೌರ್ಯದಿಂದ ತುಂಬಿರುವ ಈ ಭೂಮಿಯಲ್ಲಿ, ಜನರನ್ನು ಭೇಟಿ ಮಾಡಲು ಮತ್ತು ಅವರೊಂದಿಗೆ ಮಾತುಕತೆ ನಡೆಸಲು ಅವಕಾಶ ಸಿಕ್ಕಿದ್ದು ತಮ್ಮ ಅದೃಷ್ಟ ಎಂದು ಪ್ರಧಾನಮಂತ್ರಿ ಹೇಳಿದರು.

ಅಸ್ಸಾಂನ ಗುವಾಹಟಿಯಲ್ಲಿ ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರ 100ನೇ ಜನ್ಮ ವಾರ್ಷಿಕೋತ್ಸವ ಆಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 13th, 08:57 pm

ಅಸ್ಸಾಂ ರಾಜ್ಯಪಾಲರಾದ ಗೌರವಾನ್ವಿತ ಶ್ರೀ ಲಕ್ಷ್ಮಣ ಪ್ರಸಾದ್ ಆಚಾರ್ಯ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಯುವ ಮುಖ್ಯಮಂತ್ರಿ ಶ್ರೀ ಪೇಮಾ ಖಂಡು ಜಿ, ನನ್ನ ಸಂಪುಟ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಭೂಪೇನ್ ಹಜಾರಿಕಾ ಜಿ ಅವರ ಸಹೋದರ, ಶ್ರೀಮತಿ ಹಜಾರಿಕಾ ಜಿ, ಭೂಪೇನ್ ಹಜಾರಿಕಾ ಜಿ ಅವರ ಸಹೋದರಿ ಶ್ರೀಮತಿ ಕವಿತಾ ಬರುವಾ ಜಿ, ಭೂಪೇನ್ ದಾ ಅವರ ಪುತ್ರ ಶ್ರೀ ತೇಜ್ ಹಜಾರಿಕಾ ಜಿ - ತೇಜ್, ನಾನು ನಿಮ್ಮನ್ನು 'ಕೆಮ್ ಚೋ!' ಎಂದು ಸ್ವಾಗತಿಸುತ್ತೇನೆ. ಇಲ್ಲಿ ಉಪಸ್ಥಿತರಿರುವ ಇತರೆ ಗಣ್ಯರೆ ಮತ್ತು ಅಸ್ಸಾಂನ ನನ್ನ ಸಹೋದರ ಸಹೋದರಿಯರೆ!

ಅಸ್ಸಾಂನ ಗುವಾಹಟಿಯಲ್ಲಿ ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರ 100 ನೇ ಜನ್ಮ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

September 13th, 05:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ಗುವಾಹಟಿಯಲ್ಲಿ ಭಾರತ ರತ್ನ ಡಾ. ಭೂಪೇನ್ ಹಜಾರಿಕಾ ಅವರ 100 ನೇ ಜನ್ಮ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಅದ್ಭುತ ದಿನ ಮತ್ತು ಈ ಕ್ಷಣ ನಿಜಕ್ಕೂ ಅಮೂಲ್ಯವಾದುದು ಎಂದು ಹೇಳಿದರು. ತಾವು ಕಂಡ ಪ್ರದರ್ಶನಗಳು, ಉತ್ಸಾಹ ಮತ್ತು ಗಮನಿಸಿದ ಸಮನ್ವಯವು ಅತ್ಯಂತ ಹೃದಯಸ್ಪರ್ಶಿಯಾಗಿತ್ತು ಎಂದು ಅವರು ತಿಳಿಸಿದರು. ಕಾರ್ಯಕ್ರಮದ ಉದ್ದಕ್ಕೂ ಪ್ರತಿಧ್ವನಿಸಿದ ಭೂಪೇನ್ ದಾ ಅವರ ಸಂಗೀತದ ಲಯವನ್ನು ಅವರು ಎತ್ತಿ ತೋರಿಸಿದರು. ಭೂಪೇನ್ ಹಜಾರಿಕಾ ಅವರನ್ನು ಉಲ್ಲೇಖಿಸುತ್ತಾ, ಪ್ರಧಾನಿಯವರು ತಮ್ಮ ಹಾಡಿನ ಕೆಲವು ಪದಗಳು ತಮ್ಮ ಮನಸ್ಸಿನಲ್ಲಿ ಪ್ರತಿಧ್ವನಿಸುತ್ತಲೇ ಇದ್ದವು. ಭೂಪೇನ್ ಅವರ ಸಂಗೀತದ ಅಲೆಗಳು ಎಲ್ಲೆಡೆ, ಅನಂತವಾಗಿ ಹರಿಯುತ್ತಿರಬೇಕೆಂದು ತಮ್ಮ ಹೃದಯವು ಬಯಸುತ್ತದೆ ಎಂದು ಅವರು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಕಲಾವಿದರಿಗೆ ಪ್ರಧಾನಿಯವರು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು. ಅಸ್ಸಾಂನ ಉತ್ಸಾಹವು ಇಲ್ಲಿನ ಪ್ರತಿಯೊಂದು ಕಾರ್ಯಕ್ರಮವು ಹೊಸ ದಾಖಲೆಯನ್ನು ಸ್ಥಾಪಿಸುತ್ತದೆ ಎಂದು ಅವರು ಹೇಳಿದರು, ಇಂದಿನ ಪ್ರದರ್ಶನಗಳು ಅಸಾಧಾರಣ ಸಿದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಅವರು ಗಮನಿಸಿದರು. ಅವರು ಎಲ್ಲಾ ಪ್ರದರ್ಶಕರನ್ನು ಅಭಿನಂದಿಸಿದರು ಮತ್ತು ಶ್ಲಾಘಿಸಿದರು.