ಗುಜರಾತ್‌ನ ಸೂರತ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 05th, 04:30 pm

ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್, ಉಪಮುಖ್ಯಮಂತ್ರಿ ಭಾಯಿ ಹರ್ಷ ಸಾಂಘ್ವಿ, ಗುಜರಾತ್ ಬಿಜೆಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜಿ, ಇಲ್ಲಿ ಉಪಸ್ಥಿತರಿರುವ ಇತರೆ ಸಚಿವರೆ, ಜನಪ್ರತಿನಿಧಿಗಳೆ ಮತ್ತು ಸೂರತ್‌ನ ನನ್ನ ಆತ್ಮೀಯ ಸಹೋದರ ಸಹೋದರಿಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ಸೂರತ್ ನಲ್ಲಿ ₹18,800 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ, ಶಿಲಾನ್ಯಾಸ ನೆರವೇರಿಸಿದರು

June 05th, 04:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್ ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಗುಜರಾತ್ ನ ಜನತೆ ನೀಡುತ್ತಿರುವ ಅಚಲ ಬೆಂಬಲಕ್ಕಾಗಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಂತರ ನಾನು ಮೊದಲ ಬಾರಿಗೆ ಸೂರತ್ ಗೆ ಭೇಟಿ ನೀಡುತ್ತಿದ್ದೇನೆ. ಸೂರತ್ ನಿಂದ ನಾನು ಇಡೀ ಗುಜರಾತ್ ನ ಜನತೆಗೆ ನಮಸ್ಕರಿಸುತ್ತೇನೆ ಮತ್ತು ಅಭಿನಂದಿಸುತ್ತೇನೆ, ಎಂದು ಶ್ರೀ ಮೋದಿ ಹೇಳಿದರು.

ಗುಜರಾತ್‌ನ ಸನಂದ್‌ನಲ್ಲಿ ಕೇನ್ಸ್ ಸೆಮಿಕಾನ್ ಸ್ಥಾವರ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

March 31st, 01:05 pm

ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ರಾಜ್ಯದ ಉಪಮುಖ್ಯಮಂತ್ರಿ ಶ್ರೀ ಹರ್ಷ ಭಾಯಿ ಸಂಘವಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಅಶ್ವಿನಿ ವೈಷ್ಣವ್ ಜೀ, ರಾಜ್ಯ ಸಚಿವ ಸಹೋದರ ಅರ್ಜುನ್ ಮೋಧ್ವಾಡಿಯಾ ಜೀ, ಕೇನ್ಸ್ ಮತ್ತು ಆಲ್ಫಾ ಒಮೆಗಾ ಸೆಮಿಕಂಡಕ್ಟರ್‌ಗಳ ಪ್ರತಿನಿಧಿಗಳೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಗುಜರಾತಿನ ಸಾನಂದ್ ನಲ್ಲಿ ಕೇನ್ಸ್ ಸೆಮಿಕಾನ್ ಘಟಕ ಉದ್ಘಾಟನೆ

March 31st, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ಸಾನಂದ್ ನಲ್ಲಿ ಕೇನ್ಸ್ ಟೆಕ್ನಾಲಜಿ ಸೆಮಿಕಂಡಕ್ಟರ್ ಘಟಕವನ್ನು ಉದ್ಘಾಟಿಸುವ ಮೂಲಕ ಉತ್ಪಾದನಾ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಫೆಬ್ರವರಿ 28ರಂದು ಮೈಕ್ರಾನ್ ಘಟಕದ ಉತ್ಪಾದನಾ ಆರಂಭದ ವೇಳೆ ತಾವು ಸಾನಂದ್ ನಲ್ಲಿದ್ದುದ್ದನ್ನು ಸ್ಮರಿಸಿದ ಅವರು, ಸರಿಯಾಗಿ ಒಂದು ತಿಂಗಳ ನಂತರ ಕೇನ್ಸ್ ಸಂಸ್ಥೆಯ ಈ ಮೈಲಿಗಲ್ಲಿಗೆ ಸಾಕ್ಷಿಯಾಗಲು ಮರಳಿ ಬಂದಿರುವುದು ಭಾರತದ ಸೆಮಿಕಂಡಕ್ಟರ್ ಪಯಣದ ವೇಗಕ್ಕೆ ಹಿಡಿದ ಕನ್ನಡಿ ಎಂದು ಬಣ್ಣಿಸಿದರು. ಇದು ಕೇವಲ ಕಾಕತಾಳೀಯವಲ್ಲ; ಬದಲಾಗಿ ಭಾರತದ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯು ಎಂತಹ ಕ್ಷಿಪ್ರ ವೇಗದಲ್ಲಿ ವಿಕಸನಗೊಳ್ಳುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ, ಎಂದು ಶ್ರೀ ಮೋದಿ ಅವರು ಹರ್ಷ ವ್ಯಕ್ತಪಡಿಸಿದರು.

ಗುಜರಾತ್ ಮುಖ್ಯಮಂತ್ರಿ ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ್ದಾರೆ

December 19th, 10:41 pm

ಗುಜರಾತ್ ರಾಜ್ಯದ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಗುಜರಾತ್ ಮುಖ್ಯಮಂತ್ರಿ

September 04th, 03:30 pm

ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಗುಜರಾತ್ ಮುಖ್ಯಮಂತ್ರಿ

August 02nd, 07:09 pm

ಗುಜರಾತ್ ನ ಮುಖ್ಯಮಂತ್ರಿಗಳಾದ ಶ್ರೀ ಭೂಪೇಂದ್ರ ಪಟೇಲ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯನ್ನು ಭೇಟಿ ಮಾಡಿದ ಗುಜರಾತ್ ಮುಖ್ಯಮಂತ್ರಿ

April 21st, 04:40 pm

ಗುಜರಾತ್ ನ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಗುಜರಾತ್ ಮುಖ್ಯಮಂತ್ರಿ

December 11th, 02:55 pm

ಗುಜರಾತ್ ಮುಖ್ಯಮಂತ್ರಿಗಳಾದ ಭೂಪೇಂದ್ರ ಪಟೇಲ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಗುಜರಾತ್‌ನ ಅಮ್ರೇಲಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 28th, 04:00 pm

ವೇದಿಕೆಯಲ್ಲಿರುವ ಗುಜರಾತಿನ ಗೌರವಾನ್ವಿತ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯಿ ಪಟೇಲ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿ ಸಿ.ಆರ್. ಪಾಟೀಲ್ ಜಿ, ಗುಜರಾತ್‌ನ ನನ್ನ ಸಹೋದರ ಸಹೋದರಿಯರೆ ಮತ್ತು ವಿಶೇಷವಾಗಿ ಅಮ್ರೇಲಿಯ ನನ್ನ ಸಹೋದರ ಸಹೋದರಿಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿ 4,900 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು

October 28th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಅಮ್ರೇಲಿಯಲ್ಲಿಂದು 4,900 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಇಂದಿನ ಅಭಿವೃದ್ಧಿ ಯೋಜನೆಗಳು ರೈಲು, ರಸ್ತೆ, ಜಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳನ್ನು ಒಳಗೊಂಡಿವೆ. ರಾಜ್ಯದ ಅಮ್ರೇಲಿ, ಜಾಮ್‌ನಗರ, ಮೊರ್ಬಿ, ದೈವಭೂಮಿ ದ್ವಾರಕಾ, ಜುನಾಗಢ್, ಪೋರಬಂದರ್, ಕಚ್ ಮತ್ತು ಬೊಟಾಡ್ ಜಿಲ್ಲೆಗಳ ನಾಗರಿಕರಿಗೆ ಪ್ರಯೋಜನ ನೀಡುತ್ತವೆ.

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಗುಜರಾತ್ ನ ಮುಖ್ಯಮಂತ್ರಿ

October 08th, 02:47 pm

ಗುಜರಾತ್ ನ ಮುಖ್ಯಮಂತ್ರಿಯವರಾದ ಶ್ರೀ ಭೂಪೇಂದ್ರ ಪಟೇಲ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಗುಜರಾತ್ ಸಿಎಂ

June 22nd, 08:29 pm

ಗುಜರಾತ್ ರಾಜ್ಯದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಗುಜರಾತ್‌ನ ಗಾಂಧಿನಗರದಲ್ಲಿ ಸ್ಪಂದನಾಶೀಲ(ವೈಬ್ರೆಂಟ್) ಗುಜರಾತ್ ಶೃಂಗಸಭೆ 2024 ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

January 10th, 10:30 am

2024ರ ಹೊಸ ವರ್ಷಕ್ಕೆ ನಾನು ನಿಮಗೆಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಭಾರತವು ಇತ್ತೀಚೆಗೆ ತನ್ನ 75ನೇ ಸ್ವಾತಂತ್ರ್ಯ ಅಮೃತ ವರ್ಷವನ್ನು ಆಚರಿಸಿದೆ. ನಮ್ಮ ರಾಷ್ಟ್ರದ ಸ್ವಾತಂತ್ರ್ಯದ ಶತಮಾನೋತ್ಸವದ ಸಂಭ್ರಮಾಚರಣೆಯ ಮೂಲಕ ಅಭಿವೃದ್ಧಿ ಹೊಂದಿದ ಸ್ಥಾನಮಾನ ಸಾಧಿಸುವ ಗುರಿಯೊಂದಿಗೆ ಮುಂದಿನ 25 ವರ್ಷಗಳ ಗುರಿಗಳತ್ತ ಶ್ರದ್ಧೆಯಿಂದ ಕೆಲಸ ಮಾಡುತ್ತಿದೆ. ಈ 25 ವರ್ಷಗಳ ಅಧಿಕಾರಾವಧಿಯು ಭಾರತಕ್ಕೆ 'ಅಮೃತ ಕಾಲ'ದ ಅವಧಿಯಾಗಿದೆ. ಇದು ತಾಜಾ ಆಕಾಂಕ್ಷೆಗಳು, ಹೊಸ ನಿರ್ಣಯಗಳು ಮತ್ತು ನಿರಂತರ ಸಾಧನೆಗಳ ಅವಧಿಯನ್ನು ಸೂಚಿಸುತ್ತದೆ. ಈ ಮೊದಲ ರೋಮಾಂಚಕ ಅಥವಾ ಸ್ಪಂದನಾಶೀಲ ಗುಜರಾತ್ ಜಾಗತಿಕ ಶೃಂಗಸಭೆಯು 'ಅಮೃತ ಕಾಲ'ದ ಸಮಯದಲ್ಲಿ ನಡೆದಿರುವುದು ಅಪಾರ ಮಹತ್ವ ಹೊಂದಿದೆ. ಈ ಶೃಂಗಸಭೆಯಲ್ಲಿ ನಮ್ಮೊಂದಿಗೆ ಸೇರಿಕೊಂಡಿರುವ 100ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾರತದ ಅಭಿವೃದ್ಧಿ ಪಯಣದಲ್ಲಿ ಅಮೂಲ್ಯ ಮಿತ್ರರಾಗಿದ್ದಾರೆ. ನಾನು ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ ಮತ್ತು ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

​​​​​​​ 10ನೇ ಆವೃತ್ತಿಯ ವೈಬ್ರೆಂಟ್ ಗ್ಲೋಬಲ್ ಶೃಂಗಸಭೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

January 10th, 09:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಾಂಧಿನಗರದ ಮಹಾತ್ಮಮಂದಿರದಲ್ಲಿಂದು 10ನೇ ಆವೃತ್ತಿಯ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯನ್ನು ಉದ್ಘಾಟಿಸಿದರು. ಶೃಂಗಸಭೆಯ ಈ ವರ್ಷದ ಘೋಷವಾಕ್ಯ “ಭವಿಷ್ಯಕ್ಕೆ ಹೆಬ್ಬಾಗಿಲು’’ ಎಂದಾಗಿದೆ ಮತ್ತು ಇದರಲ್ಲಿ 34 ಪಾಲುದಾರ ದೇಶಗಳು ಹಾಗೂ 16 ಪಾಲುದಾರ ಸಂಸ್ಥೆಗಳು ಭಾಗವಹಿಸಿವೆ. ಈಶಾನ್ಯ ರಾಜ್ಯಗಳಲ್ಲಿರುವ ಹೂಡಿಕೆ ಅವಕಾಶಗಳನ್ನು ಬಿಂಬಿಸಲು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವಾಲಯ ಈ ಶೃಂಗಸಭೆಯನ್ನು ವೇದಿಕೆಯನ್ನಾಗಿ ಬಳಸಿಕೊಳ್ಳುತ್ತಿದೆ.

ಗುಜರಾತ್ ನ ಸೂರತ್ ಡೈಮಂಡ್ ವಾಣಿಜ್ಯ ಸಮುಚ್ಛಯದ (ಬೋರ್ಸ್) ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

December 17th, 12:00 pm

ಸೂರತ್ ತನ್ನದೇ ಆದ ಮಹತ್ವವನ್ನು ಹೊಂದಿದೆ. ಸೂರತ್ ನ ಇತಿಹಾಸದ ಪ್ರಸಿದ್ಧತೆ; ಅದರ ಹೆಚ್ಚುತ್ತಿರುವ ಪ್ರಸ್ತುತತೆ; ಮತ್ತು ಅದರ ಭವಿಷ್ಯದ ದೃಷ್ಟಿಕೋನ - ಅದುವೇ ಸೂರತ್ ನ ವಿಶೇಷತೆ! ಮತ್ತು ಅಂತಹ (ಅಭಿವೃದ್ಧಿ) ಕೆಲಸದಲ್ಲಿ ಯಾರೂ ಯಾವುದೇ ಉಪದ್ರಕಾರಿ ಕಲ್ಲನ್ನು ಹಾಕುವುದಿಲ್ಲ ಎಂಬುದು ನನ್ನ ನಂಬಿಕೆ. ಸೂರತ್ ನ ವ್ಯಕ್ತಿ ಪ್ರತಿ ಕ್ಷೇತ್ರದಲ್ಲೂ ಆತುರದಲ್ಲಿರಬಹುದು, ಆದರೆ ಅವನಿಗೆ ಆಹಾರದ ಅಂಗಡಿಯ ಹೊರಗೆ ಅರ್ಧ ಘಂಟೆಯವರೆಗೆ ಸರದಿಯಲ್ಲಿ ನಿಲ್ಲುವ ತಾಳ್ಮೆ ಇದೆ. ಉದಾಹರಣೆಗೆ, ಭಾರೀ ಮಳೆಯಾದರೂ ಮತ್ತು ಮೊಣಕಾಲು ಆಳದ ನೀರು ಇದ್ದರೂ ಪರವಾಗಿಲ್ಲ; ಪಕೋಡ ಸ್ಟಾಲ್ ನ ಹೊರಗೆ ಇನ್ನೂ ಸರತಿ ಸಾಲಾಗಿ ನಿಂತಿರುತ್ತಾನೆ. ಶರದ್ ಪೂರ್ಣಿಮಾ, ಚಂಡಿ ಪಾಡ್ವಾದಲ್ಲಿ, ಎಲ್ಲರೂ ಮೇಲ್ಛಾವಣಿಗೆ ಹೋಗುತ್ತಾರೆ, ತನ್ನ ಕುಟುಂಬದೊಂದಿಗೆ ಫುಟ್ಪಾತ್ನಲ್ಲಿ ಸರತಿ ಸಾಲಾಗಿ ಘರಿ (ಸಿಹಿ) ತಿನ್ನುತ್ತಾನೆ. ಮತ್ತು ಅವನು ಹತ್ತಿರದಲ್ಲಿ ಎಲ್ಲಿಯೂ ಸುತ್ತಾಡಲು ಹೋಗುವುದಿಲ್ಲ, ಆದರೆ ಪ್ರಪಂಚದ ಪ್ರತಿಯೊಂದು ಮೂಲೆ ಮತ್ತು ಮೂಲೆಯಲ್ಲಿ ಸಂಚರಿಸುತ್ತಾನೆ. ಸುಮಾರು 40-45 ವರ್ಷಗಳ ಹಿಂದೆ ಸೌರಾಷ್ಟ್ರದಿಂದ ಯಾರೋ ಸೂರತ್ ಗೆ ಭೇಟಿ ನೀಡಿದ್ದು ನನಗೆ ಇನ್ನೂ ನೆನಪಿದೆ. ಹಾಗಾದರೆ, ನಾನು ಸೌರಾಷ್ಟ್ರದ ಆ ಸ್ನೇಹಿತನನ್ನು ಕೇಳಿದೆ - ನೀವು ಸೂರತ್ ಅನ್ನು ಹೇಗೆ ಇಷ್ಟಪಡುತ್ತೀರಿ? ಸೂರತ್ ಮತ್ತು ಕಥಿಯಾವರ್ ನಡುವೆ ಸಾಕಷ್ಟು ವ್ಯತ್ಯಾಸವಿದೆ ಎಂದು ಅವರು ಹೇಳಿದರು. ಆದ್ದರಿಂದ, ನಾನು 40-45 ವರ್ಷಗಳ ಹಿಂದಿನ ಘಟನೆ ಬಗ್ಗೆ ಮಾತನಾಡುತ್ತಿದ್ದೇನೆ. ಕಾಠಿಯಾವರದಲ್ಲಿ ಮೋಟಾರು ಸೈಕಲ್ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದರೆ ಘೋರ ಜಗಳವಾಗುತ್ತದೆ ಎಂದು ಉದಾಹರಣೆ ನೀಡಿದರು. ಆದರೆ ಸೂರತ್ ನಲ್ಲಿ ಭಾಗಿಯಾದವರು ಹೇಳುತ್ತಿದ್ದರು, 'ಇದು ಎರಡೂ ಕಡೆಯವರ ತಪ್ಪು. ಹಾಗಾಗಿ ಈ ಸಮಸ್ಯೆಯನ್ನು ಈಗಲೇ ಕೈಬಿಡೋಣ'. ನಗರಗಳ ಸ್ವಭಾವದಲ್ಲಿ ಅಜಗಜಾಂತರ ವ್ಯತ್ಯಾಸವಿದೆ.

​​​​​​​ಸೂರತ್ ವಜ್ರದ ಮಾರುಕಟ್ಟೆ ಉದ್ಘಾಟಿಸಿದ ಪ್ರಧಾನಿ

December 17th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಸೂರತ್‌ನಲ್ಲಿ ʻಸೂರತ್ ವಜ್ರ ಮಾರುಕಟ್ಟೆʼಯನ್ನು (ಸೂರತ್‌ ಡೈಮಂಡ್‌ ಬೋರ್ಸ್‌) ಉದ್ಘಾಟಿಸಿದರು. ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಮಂತ್ರಿಯವರು ʻಪಂಚತತ್ವʼ ಉದ್ಯಾನಕ್ಕೂ ಭೇಟಿ ನೀಡಿ, ʻಸೂರತ್ ಡೈಮಂಡ್ ಬೋರ್ಸ್ʼ ಮತ್ತು ʻಸ್ಪೈನ್-4ʼರ ಹಸಿರು ಕಟ್ಟಡವನ್ನು ವೀಕ್ಷಿಸಿದರು. ಸಂದರ್ಶಕರ ಕಿರುಪುಸ್ತಕಕ್ಕೂ ಅವರು ಸಹಿ ಹಾಕಿದರು. ಇದಕ್ಕೂ ಮುನ್ನ ಪ್ರಧಾನಮಂತ್ರಿಯವರು ಸೂರತ್ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದ್ದರು.

ಪ್ರಧಾನಿಯವರನ್ನು ಭೇಟಿಯಾದ ಗುಜರಾತ್ ಮುಖ್ಯಮಂತ್ರಿ

September 01st, 07:59 pm

ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಭೂಪೇಂದ್ರಭಾಯಿ ಪಟೇಲ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

December 12th, 04:36 pm

ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಭೂಪೇಂದ್ರಭಾಯಿ ಪಟೇಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

Gujarat has given the nation the practice of elections based on development: PM Modi in Jambusar

November 21st, 12:31 pm

In his second rally for the day at Jambusar, PM Modi enlightened people on how Gujarat has given the nation the practice of elections based on development and doing away with elections that only talked about corruption and scams. PM Modi further highlighted that Gujarat is able to give true benefits of schemes to the correct beneficiaries because of the double-engine government.