ಪ್ರಧಾನಮಂತ್ರಿ ಅವರು ಸೆಪ್ಟೆಂಬರ್ 25 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ
September 24th, 06:25 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 25 ರಂದು ಉತ್ತರ ಪ್ರದೇಶ ಮತ್ತು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 9:30ರ ಸುಮಾರಿಗೆ ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ-2025” ಅನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ
May 25th, 11:30 am
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.ರಾಜಸ್ಥಾನದ ಬಿಕಾನೇರ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
May 22nd, 12:00 pm
ರಾಜಸ್ಥಾನ ರಾಜ್ಯಪಾಲರಾದ ಹರಿಭಾವು ಬಾಗ್ಡೆ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ ಶ್ರೀಮನ್ ಭಜನ್ ಲಾಲ್ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಅಶ್ವಿನಿ ವೈಷ್ಣವ್ ಜಿ, ಅರ್ಜುನ್ ರಾಮ್ ಮೇಘವಾಲ್ ಜಿ, ರಾಜಸ್ಥಾನದ ಉಪಮುಖ್ಯಮಂತ್ರಿ ದಿಯಾ ಕುಮಾರಿ ಜಿ, ಪ್ರೇಮ್ ಚಂದ್ ಜಿ, ರಾಜಸ್ಥಾನ ಸರ್ಕಾರದ ಸಚಿವರುಗಳೆ, ಸಂಸತ್ತಿನ ನನ್ನ ಸಹೋದ್ಯೋಗಿ ಮದನ್ ರಾಥೋಡ್ ಜಿ, ಇತರೆ ಸಂಸದರು ಮತ್ತು ಶಾಸಕರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ.ರಾಜಸ್ಥಾನದ ಬಿಕಾನೇರ್‌ನಲ್ಲಿ 26,000 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
May 22nd, 11:30 am
ರಾಜಸ್ಥಾನದ ಬಿಕಾನೇರ್‌ನಲ್ಲಿಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 26,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ನೆರವೇರಿಸಿ, ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ, ಕಾರ್ಯಕ್ರಮದಲ್ಲಿ ನೆರೆದಿದ್ದ ಬೃಹತ್ ಜನಸಮೂಹವನ್ನು ಸ್ವಾಗತಿಸಿ ಮಾತನಾಡಿದ ಅವರು, ಆನ್‌ಲೈನ್‌ನಲ್ಲಿ ಭಾಗವಹಿಸಿರುವ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಜನರನ್ನು ಶ್ಲಾಘಿಸಿದರು. ಹಲವಾರು ರಾಜ್ಯಪಾಲರು, ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು ಮತ್ತು ಇತರೆ ಸಾರ್ವಜನಿಕ ಪ್ರತಿನಿಧಿಗಳು ಇಲ್ಲಿ ಉಪಸ್ಥಿತರಿದ್ದು, ಜತೆಗೆ ದೇಶಾದ್ಯಂತ ಸಂಪರ್ಕ ಹೊಂದಿರುವ ಎಲ್ಲಾ ಗೌರವಾನ್ವಿತ ಗಣ್ಯರು ಮತ್ತು ನಾಗರಿಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.ಮೇ 22ರಂದು ರಾಜಸ್ಥಾನಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
May 20th, 01:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೇ 22ರಂದು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ಬಿಕಾನೇರ್ ಗೆ ಪ್ರಯಾಣಿಸಲಿದ್ದು, ಬೆಳಗ್ಗೆ 11 ಗಂಟೆಗೆ ದೇಶ್ನೋಕ್ ನ ಕರ್ಣಿ ಮಾತಾ ದೇವಸ್ಥಾನದಲ್ಲಿ ದರ್ಶನ ಪಡೆಯಲಿದ್ದಾರೆ.ಡಿಸೆಂಬರ್ 17 ರಂದು ರಾಜಸ್ಥಾನಕ್ಕೆ ಪ್ರಧಾನಮಂತ್ರಿ ಭೇಟಿ
December 16th, 03:19 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 17ರಂದು ರಾಜಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಅವರು ರಾಜಸ್ಥಾನ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆಯೋಜಿಸಿರುವ ‘ಏಕ ವರ್ಷ-ಪರಿಣಾಮ ಉತ್ಕರ್ಷ್’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಪ್ರಧಾನಿ ಅವರು ರಾಜಸ್ಥಾನದ ಜೈಪುರದಲ್ಲಿ ಸುಮಾರು 46,300 ಕೋಟಿ ರೂ. ಮೌಲ್ಯದ ಇಂಧನ, ರಸ್ತೆ, ರೈಲ್ವೆ ಮತ್ತು ನೀರಿಗೆ ಸಂಬಂಧಿಸಿದ 24 ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.Congress is so confident of its loss, it has entered the bye-bye mode: PM Modi
July 08th, 07:45 pm
Prime Minister Narendra Modi addressed a mega rally in Bikaner, Rajasthan. He began the rally be recalling the famous sweets and namkeen of Bikaner. He acknowledged that for him Bikaner is special as it is also known by the name ‘Choti Kashi’ and like Kashi, Bikaner also has its own history and antiquity.PM Modi addresses a public rally in Rajasthan’s Bikaner
July 08th, 05:52 pm
Prime Minister Narendra Modi addressed a mega rally in Bikaner, Rajasthan. He began the rally be recalling the famous sweets and namkeen of Bikaner. He acknowledged that for him Bikaner is special as it is also known by the name ‘Choti Kashi’ and like Kashi, Bikaner also has its own history and antiquity.ರಾಜಸ್ಥಾನದ ಬಿಕಾನೇರ್‌ನಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಲೋಕಾರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅನುವಾದ
July 08th, 05:00 pm
ಧೀರ ಯೋಧರ ಭೂಮಿ ರಾಜಸ್ಥಾನಕ್ಕೆ ನಾನು ತಲೆಬಾಗಿ ವಂದಿಸುತ್ತೇನೆ! ಈ ನೆಲವು ತನ್ನ ಅಭಿವೃದ್ಧಿಗೆ ಬದ್ಧರಾಗಿರುವ ವ್ಯಕ್ತಿಗಳಿಗಾಗಿ ಕುತೂಹಲದಿಂದ ಕಾಯುತ್ತಿದೆ. ಜೊತೆಗೆ, ಅವರಿಗಾಗಿ ಆಹ್ವಾನಗಳನ್ನು ಸಹ ಕಳುಹಿಸುತ್ತದೆ. ದೇಶದ ಪರವಾಗಿ, ಈ ದಿಟ್ಟ ನಾಡಿಗೆ ಅಭಿವೃದ್ಧಿಯ ಹೊಸ ಉಡುಗೊರೆಗಳನ್ನು ನೀಡಲು ನಾನು ನಿರಂತರವಾಗಿ ಶ್ರಮಿಸುತ್ತೇನೆ. ಇಂದು, ಬಿಕಾನೇರ್ ಮತ್ತು ರಾಜಸ್ಥಾನಕ್ಕಾಗಿ 24,000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಾಗಿದೆ. ಕೆಲವೇ ತಿಂಗಳುಗಳಲ್ಲಿ, ರಾಜಸ್ಥಾನವು ಆಧುನಿಕ ಆರು ಪಥದ ಎಕ್ಸ್‌ಪ್ರೆಸ್ ವೇಗಳನ್ನು ಪಡೆದುಕೊಂಡಿದೆ. ನಾನು ಫೆಬ್ರವರಿ ತಿಂಗಳಲ್ಲಿ ದೆಹಲಿ-ಮುಂಬೈ ಎಕ್ಸ್‌ಪ್ರೆಸ್ ಕಾರಿಡಾರ್‌ನ ದೆಹಲಿ-ದೌಸಾ-ಲಾಲ್ಸೋಟ್ ವಿಭಾಗವನ್ನು ಉದ್ಘಾಟಿಸಿದ್ದೆ. ಇಂದು, ʻಅಮೃತಸರ-ಜಾಮ್‌ನಗರ ಎಕ್ಸ್‌ಪ್ರೆಸ್ ವೇʼನ 500 ಕಿಲೋಮೀಟರ್ ವಿಭಾಗವನ್ನು ರಾಷ್ಟ್ರಕ್ಕೆ ಸಮರ್ಪಿಸುವ ಸುಯೋಗ ನಮಗೆ ಒದಗಿದೆ. ಒಂದು ರೀತಿಯಲ್ಲಿ, ರಾಜಸ್ಥಾನ್ ಏಕ್ಸ್‌ಪ್ರೆಸ್ ವೇಗಳ ವಿಚಾರದಲ್ಲಿ ದ್ವಿಶತಕವನ್ನು ಗಳಿಸಿದೆ.ರಾಜಸ್ಥಾನದ ಬಿಕಾನೇರ್ ನಲ್ಲಿ 24,300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು
July 08th, 04:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಬಿಕಾನೇರ್ ನಲ್ಲಿ 24,300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸುಮಾರು 11,125 ಕೋಟಿ ರೂಪಾಯಿ ವೆಚ್ಚದಲ್ಲಿ ಅಮೃತಸರ - ಜಾಮನಗರ ಆರ್ಥಿಕ ಕಾರಿಡಾರ್ ನ ಆರು-ಪಥದ ಗ್ರೀನ್ಫೀಲ್ಡ್ ಎಕ್ಸ್ಪ್ರೆಸ್ವೇ ವಿಭಾಗದ ಲೋಕಾರ್ಪಣೆ, ಸುಮಾರು 10,950 ಕೋಟಿ ರೂಪಾಯಿ ಮೌಲ್ಯದ ಹಸಿರು ಇಂಧನ ಕಾರಿಡಾರ್ಗಾಗಿ ಅಂತರ ರಾಜ್ಯ ಪ್ರಸರಣ ಮಾರ್ಗದ ಹಂತ-1, ಸುಮಾರು 1,340 ಕೋಟಿ ರೂಪಾಯಿ ವೆಚ್ಚದಲ್ಲಿ ಪವರ್ ಗ್ರಿಡ್ ಅಭಿವೃದ್ಧಿಪಡಿಸಲಿರುವ ಬಿಕಾನೇರ್ – ಭಿವಾಡಿ ಪ್ರಸರಣ ಮಾರ್ಗ ಮತ್ತು ಬಿಕಾನೇರ್ ನಲ್ಲಿ ಹೊಸ 30 ಹಾಸಿಗೆಗಳ ನೌಕರರ ರಾಜ್ಯ ವಿಮಾ ನಿಗಮ (ಇ ಎಸ್ ಐ ಸಿ) ಆಸ್ಪತ್ರೆ ಉದ್ಘಾಟನೆಯಾದ ಯೋಜನೆಗಳಲ್ಲಿ ಸೇರಿವೆ. ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ಬಿಕಾನೇರ್ ರೈಲು ನಿಲ್ದಾಣದ ಪುನರಾಭಿವೃದ್ಧಿ ಮತ್ತು 43 ಕಿಮೀ ಉದ್ದದ ಚುರು-ರತನಗಢ್ ವಿಭಾಗದ ಜೋಡಿ ರೈಲು ಮಾರ್ಗದ ಕಾಮಗಾರಿಗೆ ಪ್ರಧಾನಮಂತ್ರಿಯವರು ಶಂಕುಸ್ಥಾಪನೆ ನೆರವೇರಿಸಿದರು.